Just In
Don't Miss
- News
ಪಶ್ಚಿಮ ಬಂಗಾಳದ ನಾದಿಯಾದಲ್ಲಿ ಬಿಜೆಪಿ ಮುಖಂಡನ ಮೇಲೆ ಗುಂಡಿನ ದಾಳಿ
- Finance
ಮಾರ್ಚ್ 08ರಂದು ದೇಶದ ಪ್ರಮುಖ ನಗರಗಳ ಪೆಟ್ರೋಲ್-ಡೀಸೆಲ್ ದರ
- Lifestyle
ದಿನ ಭವಿಷ್ಯ: ನಿಮ್ಮ ರಾಶಿ ಸೋಮವಾರ ಹೇಗಿರಲಿದೆ ನೋಡಿ
- Movies
ಬಿಗ್ಬಾಸ್: ಒಂದು ವಾರದಲ್ಲಿ ಪ್ರಶಾಂತ್ ಸಂಬರ್ಗಿ ಬದಲಾಯಿಸಿರುವ ಬಟ್ಟೆ ಎಷ್ಟು ಗೊತ್ತೆ?
- Sports
ಆತನಲ್ಲಿ ನನಗಿಂತಲೂ ಹೆಚ್ಚಿನ ಸ್ವಾಭಾವಿಕ ಸಾಮರ್ಥ್ಯವಿದೆ: ರವಿಶಾಸ್ತ್ರಿ
- Automobiles
ಅನಾವರಣವಾಯ್ತು ಫೋಕ್ಸ್ವ್ಯಾಗನ್ ಗಾಲ್ಫ್ ಜಿಟಿಐ ಕ್ಲಬ್ಸ್ಪೋರ್ಟ್ 45 ಕಾರು
- Education
Mandya District Court Recruitment 2021: 10 ಶೀಘ್ರಲಿಪಿಗಾರ ಹುದ್ದೆಗಳಿಗೆ ಅರ್ಜಿ ಆಹ್ವಾನ
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ವಿವೋ X60 ಪ್ರೊ ಪ್ಲಸ್ ಸ್ಮಾರ್ಟ್‌ಫೋನ್ ಲಾಂಚ್!..ಬೆಲೆ ಎಷ್ಟು?..ಫೀಚರ್ಸ್ ಏನು?
ವಿವೋ ಮೊಬೈಲ್ ಕಂಪೆನಿಯು ತನ್ನ X ಸರಣಿಯಲ್ಲಿ ಇದೀಗ ವಿವೋ X60 ಪ್ರೊ ಪ್ಲಸ್ ಸ್ಮಾರ್ಟ್‌ಫೋನ್ ಅನ್ನು ಬಿಡುಗಡೆ ಮಾಡಿದೆ. ಈ ಸ್ಮಾರ್ಟ್‌ಫೋನ್ ಫ್ಲ್ಯಾಗ್‌ಶಿಪ್ ಮಾದರಿಯ ಸ್ಮಾರ್ಟ್‌ಫೋನ್‌ಗಳನ್ನು ಒಳಗೊಂಡಿದೆ. ಅಧಿಕ RAM, ವೇಗದ ಪ್ರೊಸೆಸರ್ ಸಾಮರ್ಥ್ಯ ಮತ್ತು ಕ್ಯಾಮೆರಾ ಫೀಚರ್ಸ್‌ಗಳಿಂದ ಗಮನ ಸೆಳೆದಿವೆ. ಹಾಗೆಯೇ ಸ್ನ್ಯಾಪ್‌ಡ್ರಾಗನ್ 888 5G SoC ಪ್ರಮುಖ ಆಕರ್ಷಣೆ ಎನಿಸಿದೆ.

ಹೌದು, ವಿವೋ ಸಂಸ್ಥೆಯು ನೂತನವಾಗಿ ವಿವೋ X60 ಪ್ರೊ ಪ್ಲಸ್ ಸ್ಮಾರ್ಟ್‌ಫೋನ್ ಅನ್ನು ಚೀನಾದಲ್ಲಿ ಅನಾವರಣ ಮಾಡಿದೆ. ಮುಖ್ಯ ಕ್ಯಾಮೆರಾವು 50ಎಂಪಿ ಸೆನ್ಸಾರ್‌ನಲ್ಲಿದ್ದು, ಸೆಲ್ಫಿ ಕ್ಯಾಮೆರಾವು 32ಎಂಪಿ ಆಗಿದೆ. ಹಾಗೆಯೇ 4200mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಅನ್ನು ಒಳಗೊಂಡಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್ ಬೆಲೆ ಎಷ್ಟು ಮತ್ತು ಯಾವೆಲ್ಲಾ ಫೀಚರ್ಸ್ ಹೊಂದಿದೆ ಎಂಬುದನ್ನು ಮುಂದಿನ ಸ್ಲೈಡರ್‌ಗಳಲ್ಲಿ ಓದಿರಿ.

ಡಿಸ್‌ಪ್ಲೇ ರಚನೆ
ವಿವೋ X60 ಪ್ರೊ ಪ್ಲಸ್ ಸ್ಮಾರ್ಟ್‌ಫೋನ್ 1080x2376 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯ ಹೊಂದಿರುವ 6.56 ಇಂಚಿನ ಪೂರ್ಣ ಹೆಚ್‌ಡಿ ಪ್ಲಸ್ ಡಿಸ್‌ಪ್ಲೇಯನ್ನ ಹೊಂದಿದೆ. ಡಿಸ್‌ಪ್ಲೇಯು ಇನ್ನು ಡಿಸ್‌ಪ್ಲೇಯು 90Hz ರಿಫ್ರೆಶ್ ರೇಟ್ ಅನ್ನು ಹೊಂದಿದ್ದು, 120Hz ರೀಫ್ರೇಶ್ ರೇಟ್ ಒಳಗೊಂಡಿದೆ. ಹಾಗೆಯೇ HDR 10+ ಸಪೋರ್ಟ್ ಸಹ ಪಡೆದುಕೊಂಡಿದೆ.

ಪ್ರೊಸೆಸರ್ ಕಾರ್ಯ
ವಿವೋ X60 ಪ್ರೊ ಪ್ಲಸ್ ಸ್ಮಾರ್ಟ್‌ಫೋನ್ ಕ್ವಾಲ್ಕಾಮ್ ಸ್ನ್ಯಾಪ್‌ಡ್ರಾಗನ್ 888 5G ಪ್ರೊಸೆಸರ್ ಹೊಂದಿದೆ. ಪೂರಕವಾಗಿ ಆಂಡ್ರಾಯ್ಡ್ 11 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. 8GB RAM + 128GB ಮತ್ತು 12GB RAM + 256GB ಆಂತರಿಕ ಸಂಗ್ರಹ ಸಾಮರ್ಥ್ಯ ಹೊಂದಿರುವ ಎರಡು ವೇರಿಯೆಂಟ್ ಆಯ್ಕೆಯನ್ನ ಹೊಂದಿದೆ. ಎಸ್‌ಡಿ ಕಾರ್ಡ್ ಮೂಲಕ ಮೆಮೊರಿ ವಿಸ್ತರಿಸುವ ಆಯ್ಕೆ ಇಲ್ಲ.

ಕ್ವಾಡ್ ಕ್ಯಾಮೆರಾ
ವಿವೋ X60 ಪ್ರೊ ಪ್ಲಸ್ ಸ್ಮಾರ್ಟ್‌ಫೋನ್ ಕ್ವಾಡ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಹೊಂದಿದ್ದು. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್ ಪಡೆದಿದೆ. ಎರಡನೇ ಕ್ಯಾಮೆರಾ 48 ಮೆಗಾಪಿಕ್ಸೆಲ್ ಲೆನ್ಸ್ ಹೊಂದಿದೆ. ಮೂರನೇ ಕ್ಯಾಮೆರಾ 32 ಮೆಗಾಪಿಕ್ಸೆಲ್ ಸೆನ್ಸಾರ್ ಮತ್ತು ನಾಲ್ಕನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಸೆನ್ಸಾರ್ ಹೊಂದಿದೆ. ಇನ್ನು ಸೆಲ್ಫಿ ಕ್ಯಾಮೆರಾ 32 ಮೆಗಾಪಿಕ್ಸೆಲ್ ಸೆನ್ಸಾರ್ ನೀಡಲಾಗಿದೆ.

ಬ್ಯಾಟರಿ ಮತ್ತು ಇತರೆ
ವಿವೋ X60 ಪ್ರೊ ಪ್ಲಸ್ ಸ್ಮಾರ್ಟ್‌ಫೋನ್ 4200mAh ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ಅಪ್ ಹೊಂದಿದ್ದು, ಇದು 55W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಬ್ಲೂಟೂತ್, ಹಾಟ್‌ಸ್ಪಾಟ್, ವೈಫೈ, ಡಿಸ್‌ಪ್ಲೇಯಲ್ಲಿ ಫಿಂಗರ್‌ಪ್ರಿಂಟ್ ಸೆನ್ಸಾರ್, ಜಿಪಿಎಸ್, 3.5mm ಆಡಿಯೊ ಜ್ಯಾಕ್‌ಗೆ ಬೆಂಬಲ ನೀಡಲಿದೆ.

ಬೆಲೆ ಎಷ್ಟು?
ಚೀನಾದಲ್ಲಿ ವಿವೊ ಎಕ್ಸ್ 60 ಪ್ರೊ + ಬೆಲೆ 8GB RAM ಮತ್ತು 128GB ಆಂತರಿಕ ಸಂಗ್ರಹದ ವೇರಿಯಂಟ್ ದರವು CNY 4,998(ಭಾರತದಲ್ಲಿ ಅಂದಾಜು 56,400 ರೂ.) ಆಗಿದೆ. ಅದೇ ರೀತಿ 12GB + 256GB ವೇರಿಯಂಟ್ ಬೆಲೆಯು CNY 5,998 (ಭಾರತದಲ್ಲಿ ಅಂದಾಜು 67,700ರೂ.) ಆಗಿದೆ. ಇನ್ನು ಈ ಫೋನ್ ಕ್ಲಾಸಿಕ್ ಆರೆಂಜ್ ಮತ್ತು ಡೀಪ್ ಸೀ ಬ್ಲೂ ಕಲರ್ ಆಯ್ಕೆಗಳಲ್ಲಿ ಲಭ್ಯವಿರುತ್ತದೆ. ಭಾರತದಲ್ಲಿ ಯಾವಾಗ ಲಾಂಚ್ ಎನ್ನುವ ಬಗ್ಗೆ ಮಾಹಿತಿ ಬಹಿರಂಗಪಡಿಸಿಲ್ಲ.
-
92,999
-
17,999
-
39,999
-
29,400
-
38,990
-
29,999
-
16,999
-
23,999
-
18,170
-
21,900
-
14,999
-
17,999
-
42,099
-
16,999
-
23,999
-
29,495
-
18,580
-
64,900
-
34,980
-
45,900
-
17,999
-
54,153
-
7,000
-
13,999
-
38,999
-
29,999
-
20,599
-
43,250
-
32,440
-
16,190