ಇಂದು ವಿವೋ X60, ವಿವೋ X60 ಪ್ರೊ, ವಿವೋ X60 ಪ್ರೊ ಪ್ಲಸ್ ಫೋನ್‌ಗಳ ಫಸ್ಟ್ ಸೇಲ್!
ಜನಪ್ರಿಯ ವಿವೋ ಕಂಪನಿಯು ಈಗಾಗಲೇ ದೇಶಿಯ ಮಾರುಕಟ್ಟೆಯಲ್ಲಿ ತನ್ನದೇ ವಿಶೇಷ ಗುರುತನ್ನು ಮೂಡಿಸಿದೆ. ಕಂಪನಿಯು ಇತ್ತೀಚಿಗೆ ಹೊಸದಾಗಿ ಆಕರ್ಷಕ ಫೀಚರ್ಸ್‌ಗಳಿಂದ ಗ್ರಾಹಕರನ್ನು ಸೆಳೆದಿದೆ. ಈ ಸರಣಿಯು ವಿವೋ X60, ವಿವೋ X60 ಪ್ರೊ, ವಿವೋ X60 ಪ್ರೊ ಪ್ಲಸ್ ಮಾಡೆಲ್‌ಗಳನ್ನು ಒಳಗೊಂಡಿದೆ. ಈ ಮೂರು ಮಾಡೆಲ್ ಫೋನ್‌ಗಳ ಫಸ್ಟ್ ಸೇಲ್ ಭಾರತದಲ್ಲಿ ಇಂದು (ಏಪ್ರಿಲ್.2) ಮಧ್ಯಾಹ್ನ ಪ್ರಾರಂಭವಾಗಲಿದೆ.

ಹೌದು, ವಿವೋ ಕಂಪನಿಯ ವಿವೋ X60, ವಿವೋ X60 ಪ್ರೊ, ವಿವೋ X60 ಪ್ರೊ ಪ್ಲಸ್ ಸ್ಮಾರ್ಟ್‌ಫೋನ್‌ಗಳ ಫಸ್ಟ್ ಸೇಲ್ ಇಂದು ನಡೆಯಲಿದೆ. ಪ್ರಮುಖ ಇ-ಕಾಮರ್ಸ್ ತಾಣಗಳಾದ ಅಮೆಜಾನ್, ಫ್ಲಿಪ್‌ಕಾರ್ಟ್, ಅಧಿಕೃತ ವಿವೋ ವೆಬ್‌ಸೈಟ್ ಹಾಗೂ ಇತರೆ ಲೀಡಿಂಗ್ ಆನ್‌ಲೈನ್ ತಾಣಗಳಲ್ಲಿ ಮಧ್ಯಾಹ್ನ ಮಾರಾಟ ಶುರುವಾಗಲಿದೆ. ಈ ಫೋನ್‌ಗಳು ಭಿನ್ನ ಪ್ರೊಸೆಸರ್ ಸಾಮರ್ಥ್ಯವನ್ನು ಪಡೆದಿವೆ. ಹಾಗೆಯೇ ಭಿನ್ನ ಕ್ಯಾಮೆರಾ ಸೆನ್ಸಾರ್ ರಚನೆಯನ್ನು ಹೊಂದಿದೆ. ಇನ್ನುಳಿದಂತೆ ಈ ಫೋನ್‌ಗಳ ಫೀಚರ್ಸ್‌ಗಳು ಹೇಗಿವೆ ಹಾಗೂ ಬೆಲೆ ಎಷ್ಟು ಎಂಬದನ್ನು ಮುಂದೆ ನೋಡೋಣ ಬನ್ನಿರಿ.
ವಿವೋ X60- ಡಿಸ್‌ಪ್ಲೇ ಹಾಗೂ ಪ್ರೊಸೆಸರ್
ವಿವೋ X60 ಫೋನ್ 1,080x2,376 ಪಿಕ್ಸಲ್ ರೆಸಲ್ಯೂಶನ್ ಸಾಮರ್ಥ್ಯದೊಂದಿಗೆ 6.56 ಇಂಚಿನ ಪೂರ್ಣ ಹೆಚ್‌ಡಿ ಪ್ಲಸ್ AMOLED ಡಿಸ್‌ಪ್ಲೇ ಹೊಂದಿದೆ. ಡಿಸ್‌ಪ್ಲೇಯ ಅನುಪಾತವು 19.8:9 ಆಗಿದ್ದು, 120Hz ರೀಫ್ರೇಶ್ ರೇಟ್ ಪಡೆದಿದೆ. ಕ್ವಾಲ್ಕಮ್ ಸ್ನ್ಯಾಪ್‌ಡ್ರಾಗನ್ 870 SoC ಪ್ರೊಸೆಸರ್ ಹೊಂದಿದ್ದು, 12GB RAM + 256GB ಆಯ್ಕೆಯನ್ನು ಒಳಗೊಂಡಿದೆ.

ವಿವೋ X60- ಕ್ಯಾಮೆರಾ ಹಾಗೂ ಬ್ಯಾಟರಿ
ವಿವೋ X60 ಫೋನ್ ಟ್ರಿಪಲ್ ಕ್ಯಾಮೆರಾ ರಚನೆಯನ್ನು ಪಡೆದಿದ್ದು, ಮುಖ್ಯ ಕ್ಯಾಮೆರಾವು 48ಎಂಪಿ ಸೆನ್ಸಾರ್‌ನಲ್ಲಿದೆ. ಸೆಕೆಂಡರಿ ಹಾಗೂ ತೃತೀಯ ಕ್ಯಾಮೆರಾಗಳು ಕ್ರಮವಾಗಿ 13ಎಂಪಿ ಸೆನ್ಸಾರ್ ಸಾಮರ್ಥ್ಯವನ್ನು ಪಡೆದಿವೆ. ಇನ್ನು ಸೆಲ್ಫಿ ಕ್ಯಾಮೆರಾವು 32ಎಂಪಿ ಸೆನ್ಸಾರ್ ಸಾಮರ್ಥ್ಯವನ್ನು ಒಳಗೊಂಡಿದೆ. ಹಾಗೆಯೇ ವಿವೋ X60 ಫೋನ್ 4,300mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಅನ್ನು ಪಡೆದುಕೊಂಡಿದೆ.
ವಿವೋ X60 ಪ್ರೊ- ಡಿಸ್‌ಪ್ಲೇ ಹಾಗೂ ಪ್ರೊಸೆಸರ್
ವಿವೋ X60 ಪ್ರೊ ಫೋನ್ 1,080x2,376 ಪಿಕ್ಸಲ್ ರೆಸಲ್ಯೂಶನ್ ಸಾಮರ್ಥ್ಯದೊಂದಿಗೆ 6.56 ಇಂಚಿನ ಪೂರ್ಣ ಹೆಚ್‌ಡಿ ಪ್ಲಸ್ AMOLED ಡಿಸ್‌ಪ್ಲೇ ಹೊಂದಿದೆ. ಈ ಫೋನ್ ಕ್ವಾಲ್ಕಮ್ ಸ್ನ್ಯಾಪ್‌ಡ್ರಾಗನ್ 870 SoC ಪ್ರೊಸೆಸರ್ ಹೊಂದಿದ್ದು, ಹಾಗೆಯೇ 12GB RAM ಆಯ್ಕೆಯನ್ನು ಒಳಗೊಂಡಿದೆ. ಈ ಪೋನ್ 256GB ಆಂತರೀಕ ಸ್ಟೋರೇಜ್ ಆಯ್ಕೆಯನ್ನು ಒಳಗೊಂಡಿದೆ.

ವಿವೋ X60 ಪ್ರೊ- ಕ್ಯಾಮೆರಾ ಹಾಗೂ ಬ್ಯಾಟರಿ
ವಿವೋ X60 ಪ್ರೊ ಫೋನ್ ಟ್ರಿಪಲ್ ಕ್ಯಾಮೆರಾ ರಚನೆಯನ್ನು ಪಡೆದಿದ್ದು, ಮುಖ್ಯ ಕ್ಯಾಮೆರಾವು 48 ಎಂಪಿ ಸೆನ್ಸಾರ್‌ನಲ್ಲಿದೆ. ಸೆಕೆಂಡರಿ ಮತ್ತು ತೃತೀಯ ಕ್ಯಾಮೆರಾಗಳು ಕ್ರಮವಾಗಿ 13 ಎಂಪಿ ಸೆನ್ಸಾರ್ ಸಾಮರ್ಥ್ಯವನ್ನು ಪಡೆದಿವೆ. ಇನ್ನು ಸೆಲ್ಫಿ ಕ್ಯಾಮೆರಾವು 32 ಎಂಪಿ ಸೆನ್ಸಾರ್ ಸಾಮರ್ಥ್ಯವನ್ನು ಒಳಗೊಂಡಿದೆ. ಹಾಗೆಯೇ ಈ ಸ್ಮಾರ್ಟ್‌ಫೋನ್ 4,200mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಅನ್ನು ಪಡೆದಿದ್ದು, 33Wನ ಫಾಸ್ಟ್ ಚಾರ್ಜಿಂಗ್ ಸೌಲಭ್ಯವನ್ನು ಹೊಂದಿದೆ.
ವಿವೋ X60 ಪ್ರೊ ಪ್ಲಸ್
ವಿವೋ X60 ಪ್ರೊ ಫೋನ್ 1,080x2,376 ಪಿಕ್ಸಲ್ ರೆಸಲ್ಯೂಶನ್ ಸಾಮರ್ಥ್ಯದೊಂದಿಗೆ 6.56 ಇಂಚಿನ ಪೂರ್ಣ ಹೆಚ್‌ಡಿ ಪ್ಲಸ್ AMOLED ಡಿಸ್‌ಪ್ಲೇ ಹೊಂದಿದೆ. ಈ ಫೋನ್ ಕ್ವಾಲ್ಕಮ್ ಸ್ನ್ಯಾಪ್‌ಡ್ರಾಗನ್ 888 SoC ಪ್ರೊಸೆಸರ್ ಹೊಂದಿದ್ದು, ಹಾಗೆಯೇ 12GB RAM ಆಯ್ಕೆಯನ್ನು ಒಳಗೊಂಡಿದೆ. ಈ ಪೋನ್ 256GB ಆಂತರೀಕ ಸ್ಟೋರೇಜ್ ಆಯ್ಕೆಯನ್ನು ಒಳಗೊಂಡಿದೆ. ವಿವೋ X60 ಪ್ರೊ ಫೋನ್ ಕ್ವಾಡ್ ಕ್ಯಾಮೆರಾ ರಚನೆಯನ್ನು ಪಡೆದಿದ್ದು, ಮುಖ್ಯ ಕ್ಯಾಮೆರಾವು 50 ಎಂಪಿ ಸೆನ್ಸಾರ್‌ನಲ್ಲಿದೆ. ಉಳಿದ ಕ್ಯಾಮೆರಾಗಳು 48ಎಂಪಿ+32ಎಂಪಿ+8ಎಂಪಿ ಸೆನ್ಸಾರ್ ಬಲದಲ್ಲಿವೆ. ಇನ್ನು ಸೆಲ್ಫಿ ಕ್ಯಾಮೆರಾವು 32ಎಂಪಿ ಸೆನ್ಸಾರ್ ಸಾಮರ್ಥ್ಯವನ್ನು ಒಳಗೊಂಡಿದೆ. ಹಾಗೆಯೇ ಈ ಸ್ಮಾರ್ಟ್‌ಫೋನ್ 4,200mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಅನ್ನು ಪಡೆದಿದ್ದು, 55W ನ ಫಾಸ್ಟ್ ಚಾರ್ಜಿಂಗ್ ಸೌಲಭ್ಯವನ್ನು ಹೊಂದಿದೆ.

ಬೆಲೆ ಎಷ್ಟು?..ಆಫರ್ ಏನು?
ವಿವೋ X60 8GB + 128GB ವೇರಿಯಂಟ್ ಫೋನಿನ ಬೆಲೆಯು ಭಾರತದಲ್ಲಿ 37,990ರೂ. ಆಗಿದೆ. ಇನ್ನು 12GB + 256GB ವೇರಿಯಂಟ್ ದರವು 41,990ರೂ. ಆಗಿದೆ. ಅದೇ ರೀತಿ ವಿವೋ X60 ಪ್ರೊ ಫೋನ್ 12GB + 256GB ವೇರಿಯಂಟ್ ಬೆಲೆಯು 49,990ರೂ. ಆಗಿದೆ. ಹಾಗೆಯೇ ವಿವೋ X60 ಪ್ರೊ ಪ್ಲಸ್ 12GB + 256GB ವೇರಿಯಂಟ್ ಬೆಲೆಯು 69,990ರೂ. ಆಗಿದೆ.


Click it and Unblock the Notifications