ವಿವೋ X60T ಸ್ಮಾರ್ಟ್‌ಫೋನ್ ಲಾಂಚ್! ವಿಶೇಷತೆ ಏನು?
ಜನಪ್ರಿಯ ಸ್ಮಾರ್ಟ್‌ಫೋನ್ ತಯಾರಕ ವಿವೋ ತನ್ನ ವೈವಿಧ್ಯಮಯ ಸ್ಮಾರ್ಟ್‌ಫೋನ್‌ಗಳಿಗೆ ಸೈ ಎನಿಸಿಕೊಂಡಿದೆ. ಸದ್ಯ ಇದೀಗ ಹೊಸ ವಿವೊ X60T ಸ್ಮಾರ್ಟ್‌ಫೋನ್ ಅನ್ನು ಬಿಡುಗಡೆ ಮಾಡಿದೆ. ಇದು ಕಳೆದ ತಿಂಗಳು ಜಾಗತಿಕವಾಗಿ ಬಿಡುಗಡೆ ಆಗಿದ್ದ, ವಿವೋ X60 ಸರಣಿಯ ಸ್ಮಾರ್ಟ್‌ಫೋನ್‌ಗಳಿಗೆ ಇದು ಹೊಸ ಎಂಟ್ರಿ ಆಗಿದೆ. ಇನ್ನು ವಿವೊ X60T ಸ್ಮಾರ್ಟ್‌ಫೋನ್ ಮೀಡಿಯಾಟೆಕ್ ಡೈಮೆನ್ಸಿಟಿ 1100SoC ಪ್ರೊಸೆಸರ್ ಅನ್ನು ಹೊಂದಿದೆ.

ಹೌದು, ವಿವೋ ಕಂಪೆನಿ ವಿವೋ X60T ಸ್ಮಾರ್ಟ್‌ಫೋನ್ ಚೀನಾದಲ್ಲಿ ಲಾಂಚ್ ಆಗಿದೆ. ಇದು 6.56 ಇಂಚಿನ ಫುಲ್ ಹೆಚ್‌ಡಿ ಪ್ಲಸ್ ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನು ಈ ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಹೊಂದಿದ್ದು, ಇದರಲ್ಲಿ ಮುಖ್ಯ ಕ್ಯಾಮೆರಾ 48 ಮೆಗಾಪಿಕ್ಸೆಲ್ ಸೆನ್ಸಾರ್ ಅನ್ನು ಪಡೆದುಕೊಂಡಿದೆ. ಇನ್ನುಳಿದಂತೆ ವಿವೋ X60T ಸ್ಮಾರ್ಟ್‌ಫೋನ್ ವಿಶೇಷತೆ ಏನು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಡಿಸ್‌ಪ್ಲೇ ವಿಶೇಷ
ವಿವೋ X60T ಸ್ಮಾರ್ಟ್‌ಫೋನ್ 1,080x2,376 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.56-ಇಂಚಿನ ಫುಲ್-ಹೆಚ್‌ಡಿ+ ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ 19.8: 9 ರಚನೆಯ ಅನುಪಾತವನ್ನು ಹೊಂದಿದ್ದು, ಹೆಚ್‌ಡಿಆರ್ 10 + ಬೆಂಬಲವನ್ನು ಪಡೆದುಕೊಂಡಿದೆ. ಇದು 6000000: 1 ಕಾಂಟ್ರಾಸ್ಟ್ ಅನುಪಾತ, 92.76% ಸ್ಕ್ರೀನ್-ಟು-ಬಾಡಿ ಅನುಪಾತ, 100% ಡಿಸಿಐ-ಪಿ 3 ಬಣ್ಣದ ಹರವು ಹೊಂದಿರುವ ಪಂಚ್ ಹೋಲ್ ಅಮೋಲೆಡ್ ಡಿಸ್‌ಪ್ಲೇ ಇದಾಗಿದೆ.

ಪ್ರೊಸೆಸರ್
ಇದು ಮೀಡಿಯಾಟೆಕ್ ಡೈಮೆನ್ಸಿಟಿ 1100 ಆಕ್ಟಾ-ಕೋರ್ SoC ಪ್ರೊಸೆಸರ್ ಅನ್ನು ಹೊಂದಿದ್ದು, ಆಂಡ್ರಾಯ್ಡ್ 11 ಸಾಫ್ಟ್‌ವೇರ್ ಆಧಾರಿತ ಒರಿಜಿನೋಸ್ 1.0 ಬೆಂಬಲದೊಂದಿಗೆ ಕಾರ್ಯನಿರ್ವಹಿಸುತ್ತದೆ. ಹಾಗೆಯೇ 8GB RAM ಮತ್ತು 128GB ಇಂಟರ್ ಸ್ಟೋರೇಜ್ ಸಾಮರ್ಥ್ಯವನ್ನು ಪಡೆದುಕೊಂಡಿದೆ.

ಕ್ಯಾಮೆರಾ ವಿನ್ಯಾಸ
ವಿವೋ X60T ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 48 ಮೆಗಾಪಿಕ್ಸೆಲ್ ಸೆನ್ಸಾರ್, ಎರಡನೇ ಕ್ಯಾಮೆರಾ 13 ಮೆಗಾಪಿಕ್ಸೆಲ್ ಸೆನ್ಸಾರ್ ಅಲ್ಟ್ರಾ-ವೈಡ್ ಆಂಗಲ್ 20 ಡಿಗ್ರಿಗಳಷ್ಟು ವ್ಯೂವ್ ಫಿಲ್ಡ್ ಮತ್ತು ಮೂರನೇ ಕ್ಯಾಮೆರಾ 13 ಮೆಗಾಪಿಕ್ಸೆಲ್ ತೃತೀಯ ಇಮೇಜ್ ಸೆನ್ಸಾರ್ ಅನ್ನು ಹೊಂದಿದೆ. ಇದಲ್ಲದೆ 32 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಸಹ ಒಳಗೊಂಡಿದೆ. ಇನ್ನು ಈ ಕ್ಯಾಮೆರಾ ಫೀಚರ್ಸ್‌ಗಳಲ್ಲಿ Zeiss ಆಪ್ಟಿಕ್ಸ್ ಮತ್ತು ಟ್ಯೂನಿಂಗ್ ಅನ್ನು ಒಳಗೊಂಡಿರುತ್ತವೆ.

ಬ್ಯಾಟರಿ ಮತ್ತು ಇತರೆ
ವಿವೋ X60T ಸ್ಮಾರ್ಟ್‌ಫೋನ್ 4,300mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 33W ಫಾಸ್ಟ್ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಯುಎಸ್‌ಬಿ ಟೈಪ್-ಸಿ, ವೈ-ಫೈ 6, ಬ್ಲೂಟೂತ್ ವಿ 5.2, ಯುಎಸ್‌ಬಿ ಒಟಿಜಿಯನ್ನು ಬೆಂಬಲಿಸಲಿದೆ. ಜೊತೆಗೆ ಫಿಂಗರ್‌ಪ್ರಿಂಟ್ ಸೆನ್ಸಾರ್ ಅನ್ನು ಸಹ ಒಳಗೊಂಡಿದೆ. ಇದಲ್ಲದೆ ಅಕ್ಸೆಲೆರೊಮೀಟರ್, ಆಂಬಿಯೆಂಟ್ ಲೈಟ್ ಸೆನ್ಸಾರ್, ದಿಕ್ಸೂಚಿ, ಗೈರೊಸ್ಕೋಪ್ ಮತ್ತು color temperature sensor ನಂತಹ ಎಲ್ಲಾ ಅಗತ್ಯ ಸೆನ್ಸಾರ್‌ಗಳನ್ನು ಸಹ ಹೊಂದಿದೆ. ಆದರೆ ಇದರಲ್ಲಿ 3.5ಎಂಎಂ ಹೆಡ್ಫೋನ್ ಜ್ಯಾಕ್ ಮತ್ತು ಮೈಕ್ರೊ ಎಸ್ಡಿ ಕಾರ್ಡ್ ಸ್ಲಾಟ್ ಅನ್ನು ನೀಡಲಾಗಿಲ್ಲ.

ಬೆಲೆ ಮತ್ತು ಲಭ್ಯತೆ
ಇನ್ನು ವಿವೋ X60T ಸ್ಮಾರ್ಟ್‌ಫೋನ್ ಚೀನಾದಲ್ಲಿ ಸಿಎನ್‌ವೈ 3,498 (ಸುಮಾರು ರೂ. 39,000) ಬೆಲೆಯನ್ನು ಹೊಂದಿದೆ. ಈ ಸ್ಮಾರ್ಟ್‌ಫೋನ್ ಶಿಮ್ಮರ್ ಬ್ಲೂ ಮತ್ತು ಮಿಡ್ನೈಟ್ ಬ್ಲ್ಯಾಕ್ ಕಲರ್ ಆಯ್ಕೆಗಳಲ್ಲಿ ಬರುತ್ತದೆ. ಚೀನೀ ಮಾರುಕಟ್ಟೆಯಲ್ಲಿ ಆಫ್‌ಲೈನ್ ಮಳಿಗೆಗಳಲ್ಲಿ ಲಭ್ಯವಾಗಲಿದೆ.


Click it and Unblock the Notifications








