Home
ಸುದ್ದಿಜಾಲ

ಬಹುನಿರೀಕ್ಷಿತ ವಿವೋ X70 ಸ್ಮಾರ್ಟ್‌ಫೋನ್‌ ಸರಣಿ ಬಿಡುಗಡೆ! ಬೆಲೆ ಎಷ್ಟು?

ವಿವೋ ಕಂಪೆನಿ ತನ್ನ ಭಿನ್ನ ಮಾದರಿಯ ಸ್ಮಾರ್ಟ್‌ಫೋನ್‌ಗಳಿಗಾಗಿ ಪ್ರಖ್ಯಾತಿಯನ್ನು ಪಡೆದಿದೆ. ಈಗಾಗಲೇ ಹಲವು ವೈವಿಧ್ಯಮಯ ಸ್ಮಾರ್ಟ್‌ಫೋನ್‌ ಪರಿಚಯಿಸಿ ಸ್ಮಾರ್ಟ್‌ಫೋನ್‌ ಪ್ರಿಯರ ನೆಚ್ಚಿನ ಬ್ರಾಂಡ್‌ ಎನಿಸಿಕೊಂಡಿದೆ. ಸದ್ಯ ಇದೀಗ ತನ್ನ ಬಹುನಿರೀಕ್ಷಿತ ವಿವೋ X70 ಸರಣಿಯನ್ನು ಭಾರತದಲ್ಲಿ ಲಾಂಚ್‌ ಮಾಡಿದೆ. ಇದರಲ್ಲಿ ವಿವೋ X70 ಪ್ರೊ ಮತ್ತು ವಿವೋ X70 ಪ್ರೊ ಪ್ಲಸ್ ಸ್ಮಾರ್ಟ್‌ಫೋನ್‌ಗಳು ಸೇರಿವೆ. ಈ ಎರಡೂ ಸ್ಮಾರ್ಟ್‌ಫೋನ್‌ಗಳು ಕ್ವಾಡ್‌ ರಿಯರ್‌ ಕ್ಯಾಮೆರಾ ಸೆಟಪ್‌ ಅನ್ನು ಹೊಂದಿವೆ.

ಸ್ಮಾರ್ಟ್‌ಫೋನ್‌

ಹೌದು, ವಿವೋ ಕಂಪೆನಿ ಭಾರತದಲ್ಲಿ ಹೊಸ ವಿವೋ X70ಪ್ರೊ ಸ್ಮಾರ್ಟ್‌ಫೋನ್‌ ಸರಣಿ ಪರಿಚಯಿಸಿದೆ. ಇದರಲ್ಲಿ ವಿವೋ X70 ಪ್ರೊ ಸ್ಮಾರ್ಟ್‌ಫೋನ್‌ ಮೀಡಿಯಾ ಟೆಕ್ ಡೈಮೆನ್ಸಿಟಿ 1200 SoC ಪ್ರೊಸೆಸರ್‌ ಬಲವನ್ನು ಪಡೆದುಕೊಂಡಿದೆ. ಆದರೆ ವಿವೋ X70 ಪ್ರೊ ಪ್ಲಸ್ ಫೋನ್‌ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 888+ ಪ್ರೊಸೆಸರ್‌ ಸಾಮರ್ಥ್ಯವನ್ನು ಒಳಗೊಂಡಿದೆ. ಇನ್ನುಳಿದಂತೆ ಈ ಎರಡು ಸ್ಮಾರ್ಟ್‌ಫೋನ್‌ಗಳು ಯಾವೆಲ್ಲಾ ವಿಶೇಷತೆ ಹೊಂದಿವೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತಿವಿ ಓದಿರಿ.

ವಿವೋ X70ಪ್ರೊ ಸ್ಮಾರ್ಟ್‌ಫೋನ್‌

ವಿವೋ X70ಪ್ರೊ ಸ್ಮಾರ್ಟ್‌ಫೋನ್‌

ವಿವೋ X70ಪ್ರೊ ಸ್ಮಾರ್ಟ್‌ಫೋನ್‌ 6.56 ಇಂಚಿನ ಫುಲ್ ಹೆಚ್‌ಡಿ ಪ್ಲಸ್‌ AMOLED ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ 120Hz ರಿಫ್ರೆಶ್ ರೇಟ್‌ ಹೊಂದಿದ್ದು, HDR10 ಬೆಂಬಲವನ್ನು ಹೊಂದಿದೆ. ಇದು ಮೀಡಿಯಾ ಟೆಕ್ ಡೈಮೆನ್ಸಿಟಿ 1200 SoC ಪ್ರೊಸೆಸರ್‌ ಬೆಂಬಲವನ್ನು ಪಡೆದುಕೊಂಡಿದೆ. ಹಾಗೆಯೇ ಈ ಫೋನ್‌ 8GB RAM ಮತ್ತು 128GB ಇಂಟರ್‌ ಸ್ಟೋರೇಜ್ ಅನ್ನು ಹೊಂದಿದೆ. ಇದು ಕ್ವಾಡ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದ್ದು, ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೋನಿ IMX766V ಅಲ್ಟ್ರಾ-ಸೆನ್ಸಿಂಗ್ ಗಿಂಬಲ್ ಕ್ಯಾಮೆರಾವನ್ನು ಒಳಗೊಂಡಿದೆ. ಎರಡು ಮತ್ತು ಮೂರನೇ ಕ್ಯಾಮೆರಾ 12 ಮೆಗಾಪಿಕ್ಸೆಲ್ ಸೆನ್ಸರ್‌ ಹೊಂದಿದೆ. ಮೂರನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಪೆರಿಸ್ಕೋಪ್ ಲೆನ್ಸ್ ಹೊಂದಿದೆ. ಇನ್ನು ಈ ಸ್ಮಾರ್ಟ್‌ಫೋನ್‌ 4,450mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 44W ಫ್ಲ್ಯಾಶ್ ಚಾರ್ಜ್ ಫಾಸ್ಟ್ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ.

ವಿವೋ X70 ಪ್ರೊ ಪ್ಲಸ್ ಸ್ಮಾರ್ಟ್‌ಫೋನ್‌

ವಿವೋ X70 ಪ್ರೊ ಪ್ಲಸ್ ಸ್ಮಾರ್ಟ್‌ಫೋನ್‌

ವಿವೋ X70 ಪ್ರೊ+ ಸ್ಮಾರ್ಟ್‌ಫೋನ್‌ 6.78-ಇಂಚಿನ ಅಲ್ಟ್ರಾ-HD AMOLED ಡಿಸ್‌ಪ್ಲೇ ಹೊಂದಿದೆ. ಇದು ಸ್ನಾಪ್‌ಡ್ರಾಗನ್ 888+ SoC ಪ್ರೊಸೆಸರ್‌ ಹೊಂದಿದೆ. ಹಾಗೆಯೇ 12GB RAM ಮತ್ತು 256GB ಇಂಟರ್‌ ಸ್ಟೋರೇಜ್‌ ಅನ್ನು ಹೊಂದಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಕ್ವಾಡ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್, ಎರಡನೇ ಕ್ಯಾಮೆರಾ 48 ಮೆಗಾಪಿಕ್ಸೆಲ್ ಸೋನಿ IMX598 ಅಲ್ಟ್ರಾ ವೈಡ್ ಆಂಗಲ್ ಸೆನ್ಸರ್ , ಮೂರನೇ ಕ್ಯಾಮೆರಾ 12 ಮೆಗಾಪಿಕ್ಸೆಲ್ ಸೆನ್ಸಾರ್‌ ಮತ್ತು ನಾಲ್ಕನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಪೆರಿಸ್ಕೋಪ್ ಸೆನ್ಸರ್ ಅನ್ನು ಹೊಂದಿದೆ. ಜೊತೆಗೆ ಈ ಸ್ಮಾರ್ಟ್‌ಫೋನ್‌ 4,500mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 55W ಫ್ಲ್ಯಾಶ್ ಚಾರ್ಜ್ ವೇಗದ ಚಾರ್ಜಿಂಗ್ ಬೆಂಬಲಿಸಲಿದೆ.

ಬೆಲೆ ಮತ್ತು ಲಭ್ಯತೆ

ಬೆಲೆ ಮತ್ತು ಲಭ್ಯತೆ

ಭಾರತದಲ್ಲಿ ವಿವೋ X70 ಪ್ರೊ ಸ್ಮಾರ್ಟ್‌ಫೋನ್‌ 8GB+256GB ಸ್ಟೋರೇಜ್ ರೂಪಾಂತರಕ್ಕೆ 49,990ರೂ. ಮತ್ತು 12GB+256GB ಸ್ಟೋರೇಜ್ ರೂಪಾಂತರಕ್ಕೆ 52,990ರೂ ಬೆಲೆ ಹೊಂದಿದೆ. ಇನ್ನು ವಿವೋ X70 ಪ್ರೊ ಪ್ಲಸ್‌ 12GB+256GB ಸ್ಟೋರೇಜ್ ರೂಪಾಂತರಕ್ಕೆ 79,990ರೂ. ಬಲೆ ಹೊಂದಿದೆ. ಇನ್ನು ಈ ಎರಡು ಸ್ಮಾರ್ಟ್‌ಫೋನ್‌ಗಳು ಫ್ಲಿಪ್‌ಕಾರ್ಟ್, ರಿಲಯನ್ಸ್ ಡಿಜಿಟಲ್, ಕ್ರೋಮಾ, ವಿಜಯ್ ಸೇಲ್ಸ್ ಮತ್ತು ಇತರ ಮಾರಾಟ ಪಾಲುದಾರರಲ್ಲಿ ಲಭ್ಯವಿರುತ್ತದೆ. ಪ್ರೊ ಮಾದರಿಯು ಅಕ್ಟೋಬರ್ 7 ರಂದು ಮಾರಾಟವಾಗಲಿದ್ದು, ಪ್ರೊ ಪ್ಲಸ್ ಅಕ್ಟೋಬರ್ 12 ರಿಂದ ಲಭ್ಯವಿರುತ್ತದೆ. ಇನ್ನು ಲಾಂಚ್‌ ಆಫರ್‌ನಲ್ಲಿ ಹೊಸ ಫ್ರೀ-ಬುಕಿಂಗ್ ಆಫರ್‌ 10% ಕ್ಯಾಶ್‌ಬ್ಯಾಕ್ ದೊರೆಯಲಿದೆ. ಇನ್ನು ಸೇಲ್ ಆಫರ್ ನಲ್ಲಿ 5,000 ರೂ.ವರೆಗಿನ ಕ್ಯಾಶ್ ಬ್ಯಾಕ್ ಕೂಡ ದೊರೆಯಲಿದೆ. ಜೊತೆಗೆ ಒನ್-ಟೈಮ್ ಸ್ಕ್ರೀನ್ ರಿಪ್ಲೇಸ್ಮೆಂಟ್ ಅನ್ನು ಸಹ ಪಡೆದುಕೊಳ್ಳಬಹುದಾಗಿದೆ.

Best Mobiles in India

English summary
The Vivo X70 Pro is available at a price of Rs 49,990 for 8GB+256GB storage variant and Rs 52,990 for 12GB+256GB storage variant.to know more visit to kannada.gizbot.com
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+