ವಿವೋ X70 ಸ್ಮಾರ್ಟ್‌ಫೋನ್‌ ಸರಣಿ ಲಾಂಚ್‌ ಡೇಟ್‌ ಫಿಕ್ಸ್‌! ವಿಶೇಷತೆ ಏನು?

|

ಟೆಕ್‌ ವಲಯದಲ್ಲಿ ವಿವೋ ಕಂಪೆನಿ ತನ್ನ ಭಿನ್ನ ಮಾದರಿಯ ಸ್ಮಾರ್ಟ್‌ಫೋನ್‌ಗಳಿಗೆ ಹೆಸರುವಾಸಿಯಾಗಿದೆ. ಈಗಾಗಲೇ ಹಲವು ಆಕರ್ಷಕ ಸ್ಮಾರ್ಟ್‌ಫೋನ್‌ಗಳನ್ನು ಪರಿಚಯಿಸಿ ಸೈ ಎನಿಸಿಕೊಂಡಿದೆ. ಇದೀಗ ತನ್ನ ಹೊಸ ವಿವೋ X70 ಸರಣಿಯನ್ನು ಬಿಡುಗಡೆ ಮಾಡಲು ಸಿದ್ಧತೆ ನಡೆಸಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಸೆಪ್ಟೆಂಬರ್ 9 ರಂದು ಬಿಡುಗಡೆ ಆಗೋದು ಪಕ್ಕಾ ಆಗಿದೆ. ಈ ಸರಣಿಯು ಸಾಮಾನ್ಯ ವಿವೋ X70 ಹಾಗೂ ವಿವೋ X70 ಪ್ರೊ ಮತ್ತು ವಿವೋ X70 ಪ್ರೊ+ಅನ್ನು ಹೊಂದಿರುವ ಸಾದ್ಯತೆ ಇದೆ.

ವಿವೋ

ಹೌದು, ವಿವೋ ಕಂಪೆನಿ ತನ್ನ ಹೊಸ ವಿವೋ X70 ಸ್ಮಾರ್ಟ್‌ಫೋನ್‌ ಸರಣಿ ಬಿಡುಗಡೆಗೆ ಡೇಟ್‌ ಫಿಕ್ಸ್‌ ಮಾಡಿದೆ. ಇದರಲ್ಲಿ ಈಗಾಗಲೇ ವಿವೋ X70 ಪ್ರೊ+ ಸ್ಮಾರ್ಟ್‌ಫೋನ್‌ನ ಕೆಲವು ಚಿತ್ರಗಳನ್ನು ಬಿಡುಗಡೆ ಮಾಡಿದೆ. ಇದರಲ್ಲಿ ಅದರ ಜೀಸ್ ಆಪ್ಟಿಕ್ಸ್ ಮತ್ತು ಲೆದರ್ ಫಿನಿಶ್ ಅನ್ನು ಹಿಂಭಾಗದಲ್ಲಿ ಪ್ರದರ್ಶಿಸುತ್ತದೆ. ಹಾಗೆಯೇ ವಿವೋ X70 ಪ್ರೊ+ ಬಾಗಿದ ಡಿಸ್ಪ್ಲೇ ಮತ್ತು ಕನಿಷ್ಠ ಕಪ್ಪು ಮತ್ತು ಕಿತ್ತಳೆ ಬಣ್ಣದ ಆಯ್ಕೆಗಳನ್ನು ಹೊಂದಿರುವ ಸಾಧ್ಯತೆ ಇದೆ. ಹಾಗಾದ್ರೆ ವಿವೋ X70ಪ್ರೊ+ ಸ್ಮಾರ್ಟ್‌ಫೋನ್‌ ವಿಶೇಷತೆ ಏನು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತಿವಿ ಓದಿರಿ.

ವಿವೋ

ವಿವೋ X70 ಸ್ಮಾರ್ಟ್‌ಫೋನ್‌ 6.56-ಇಂಚಿನ ಡಿಸ್ಪ್ಲೇ ಹೊಂದಿರಲಿದೆ. ಇದು 120Hz ರಿಫ್ರೆಶ್ ರೇಟ್‌ ಹೊಂದಿದೆ. ಇದು MediaTek Dimensity 1200 ಪ್ರೊಸೆಸರ್ ಅನ್ನು ಪ್ಯಾಕ್ ಮಾಡಬಹುದು. ಭವಿಷ್ಯದ ರೂಪಾಂತರವು ಸ್ಯಾಮ್‌ಸಂಗ್ ಎಕ್ಸಿನೋಸ್ 1080 ಚಿಪ್‌ಸೆಟ್ ಅನ್ನು ಸ್ವೀಕರಿಸಬಹುದು ಎನ್ನಲಾಗಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಟ್ರಿಪಲ್‌ ರಿಯರ್‌ ಕ್ಯಾಮೆರ ಸೆಟಪ್‌ ಹೊಂದಿರಲಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 40 ಮೆಗಾಪಿಕ್ಸೆಲ್ ಸೆನ್ಸಾರ್‌, ಎರಡನೇ ಕ್ಯಾಮೆರಾ 12 ಮೆಗಾಪಿಕ್ಸೆಲ್ ಸೆನ್ಸಾರ್‌ ಮತ್ತು ಮೂರನೇ ಕ್ಯಾಮೆರಾ 13 ಮೆಗಾಪಿಕ್ಸೆಲ್ ಸೆನ್ಸಾರ್‌ ಹೊಂದಿರಲಿದೆ ಎಂದು ಹೇಳಲಾಗಿದೆ. ಇದು 4,400mAh ಬ್ಯಾಟರಿಯನ್ನು 44W ಫಾಸ್ಟ್ ಚಾರ್ಜಿಂಗ್ ಬೆಂಬಲದೊಂದಿಗೆ ಹೊಂದಿರುವ ಸಾಧ್ಯತೆ ಇದೆ.

ಸ್ಮಾರ್ಟ್‌ಫೋನ್‌

ಇನ್ನು ವಿವೋ X70 ಪ್ರೊ ಸ್ಮಾರ್ಟ್‌ಫೋನ್‌ 1,080x2,376 ಪಿಕ್ಸೆಲ್‌ ಸ್ಕ್ರಿನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.5 ಡಿಸ್‌ಪ್ಲೇ ಹೊಂದಿದೆ. ಇದು 4,400mAh ಬ್ಯಾಟರಿ 44W ಫಾಸ್ಟ್ ಚಾರ್ಜಿಂಗ್ ಮತ್ತು ಸ್ಯಾಮ್‌ಸಂಗ್ ಎಕ್ಸಿನೋಸ್ 1080 ಪ್ರೊಸೆಸರ್ ಸೇರಿವೆ. ವಿವೋ ಎಕ್ಸ್ 70 ಪ್ರೊ ಕ್ವಾಡ್ ರಿಯರ್ ಕ್ಯಾಮೆರಾ ಸೆಟಪ್‌ನೊಂದಿಗೆ ಬರುತ್ತದೆ, ಇದರಲ್ಲಿ 50 ಮೆಗಾಪಿಕ್ಸೆಲ್ ಪ್ರಾಥಮಿಕ ಕ್ಯಾಮೆರಾ, 12 ಮೆಗಾಪಿಕ್ಸೆಲ್ ಸೆಕೆಂಡರಿ ಕ್ಯಾಮೆರಾ, 13 ಮೆಗಾಪಿಕ್ಸೆಲ್ ತೃತೀಯ ಸೆನ್ಸಾರ್ ಮತ್ತು 8 ಮೆಗಾಪಿಕ್ಸೆಲ್ ಪೆರಿಸ್ಕೋಪ್ ಕ್ಯಾಮೆರಾ 5x ಆಪ್ಟಿಕಲ್ ಜೂಮ್ ಇರುತ್ತದೆ. ಸಾಧನವು ಕಪ್ಪು, ಬಿಳಿ ಮತ್ತು ಅರೋರಾ ಬಣ್ಣಗಳಲ್ಲಿ ಬರಬಹುದು.

ವಿವೋ

ಇದಲ್ಲದೆ ವಿವೋ X70 ಪ್ರೊ+ ಸ್ಮಾರ್ಟ್‌ಫೋನ್‌ 1,080x2400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.7-ಇಂಚಿನ ಫುಲ್‌ ಹೆಚ್‌ಡಿ+ ಡಿಸ್‌ಪ್ಲೇ ಹೊಂದಿರಲಿದೆ ಎನ್ನಲಾಗಿದೆ. ಇದು ಆಕ್ಟಾ-ಕೋರ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 888 SoC ಪ್ರೊಸೆಸರ್‌ ಹೊಂದಿರಲಿದ್ದು, ಆಂಡ್ರಾಯ್ಡ್‌ 11 ಬೆಂಬಲದೊಂದಿಗೆ ಕಾರ್ಯನಿರ್ವಹಿಲಿದೆ. ಜೊತೆಗೆ 8GB RAM ಅನ್ನು ಹೊಂದಿರಲಿದೆ ಎಂದು ನಿರೀಕ್ಷಿಸಲಾಗಿದೆ.

ವಿವೋ X70

ಇನ್ನು ವಿವೋ X70 ಸರಣಿಯು ಭಾರತೀಯ ಮಾರುಕಟ್ಟೆಗೆ 70,000 ರೂ ಅಸುಪಾಸಿನ ಬೆಲೆಯೊಂದಿಗೆ ಬರುವ ಸಾದ್ಯತೆ ಇದೆ. ಹಾಗೆಯೇ ವಿವೋ X70 ಪ್ರೊ ಸ್ಮಾರ್ಟ್‌ಫೋನ್‌ ಬೆಲೆ ಸುಮಾರು 50,000ರೂ ಬೆಲೆ ಹೊಂದಿರಲಿದೆ ಎಂದು ಅಂದಾಜಿಸಲಾಗಿದೆ. ಇನ್ನು ಈ ಸ್ಮಾರ್ಟ್‌ಫೋನ್‌ಗಳು ಇದೇ ಸೆಪ್ಟೆಂಬರ್‌ 9ರಂದು ಮಾರುಕಟ್ಟೆಗೆ ಎಂಟ್ರಿ ನೀಡಲಿದೆ ಎಂದು ಹೇಳಲಾಗಿದೆ.

Most Read Articles
Best Mobiles in India

English summary
Vivo X70 series is set to launch on September 9, the company announced on Monday. The series is rumoured to have the regular Vivo X70 as well as Vivo X70 Pro and Vivo X70 Pro+.to know more visit to kannada.gizbot.com

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X