Just In
- 16 hrs ago
ಒಪ್ಪೋ ಕಂಪೆನಿಯ ಈ ಸ್ಮಾರ್ಟ್‌ಫೋನ್ ಮೇಲೆ ಭಾರಿ ನಿರೀಕ್ಷೆ? ಲಾಂಚ್ ಯಾವಾಗ?
- 18 hrs ago
ಫ್ಲಿಪ್ಕಾರ್ಟ್ನಲ್ಲಿ ಐಫೋನ್ 14 ಪ್ಲಸ್ ಬೆಲೆಯಲ್ಲಿ ಭಾರಿ ಕಡಿತ! ಇದಕ್ಕಿಂತ ಒಳ್ಳೆ ಟೈಂ ಸಿಗೋದಿಲ್ಲ!
- 18 hrs ago
ರಾಷ್ಟ್ರಮಟ್ಟದಲ್ಲಿ ಮೆಚ್ಚುಗೆ ಗಳಿಸಿದ ಬೆಂಗಳೂರಿನ 8 ವರ್ಷದ ಆಂಡ್ರಾಯ್ಡ್ ಆಪ್ ಡೆವಲಪರ್!
- 20 hrs ago
ಭಾರತದಲ್ಲಿ ಹೊಸ ಸಂಚಲನ ಸೃಷ್ಟಿಸಿದ ಫೈರ್ಬೋಲ್ಟ್ ಕಂಪೆನಿ!..ಪ್ರತಿಸ್ಫರ್ಧಿಗಳು ಕಂಗಾಲು!
Don't Miss
- News
Bharat Jodo Yatra: ಭಾರತ್ ಜೋಡೋ ಯಾತ್ರೆಯ ಸಮಾರೋಪದಲ್ಲಿ 9 ಪಕ್ಷಗಳು ಗೈರು, 12 ಪಕ್ಷಗಳು ಹಾಜರು
- Sports
ಆರ್ಸಿಬಿ ತನ್ನ ಆಟಗಾರರನ್ನು ನಂಬಲ್ಲ ಎಂದ ಕ್ರಿಸ್ ಗೇಲ್: ತಿರುಗಿಬಿದ್ದ ಅಭಿಮಾನಿಗಳು ಕೊಟ್ಟ ಉತ್ತರವೇನು?
- Automobiles
'ಮಹೀಂದ್ರಾ ಸ್ಕಾರ್ಪಿಯೊ ಎನ್' ಈ ರೂಪಾಂತರಗಳಿಗೆ ಬರೋಬ್ಬರಿ 2 ವರ್ಷ ಕಾಯಬೇಕು..
- Movies
Breaking: ಕನ್ನಡ ಚಲನಚಿತ್ರರಂಗದ ಹಿರಿಯ ನಟ ಮನ್ದೀಪ್ ರಾಯ್ ನಿಧನ
- Lifestyle
Horoscope Today 29 Jan 2023: ಭಾನುವಾರ: ದ್ವಾದಶ ರಾಶಿಗಳ ರಾಶಿಫಲ ಹೇಗಿದೆ?
- Finance
ಅಭ್ಯರ್ಥಿಯ ಸಂದರ್ಶನ ಮಾಡುತ್ತಿದ್ದಾಗಲೇ ಗೂಗಲ್ ಎಚ್ಆರ್ ವಜಾ!
- Education
KVS Recruitment 2022 : ಕೇಂದ್ರೀಯ ವಿದ್ಯಾಲಯ ಸಂಗತನ್ ದಲ್ಲಿ 13404 ಹುದ್ದೆಗಳ ನೇಮಕಾತಿ
- Travel
ಯಾವುದೇ ಚಿಂತೆ ಇಲ್ಲದೆ ಸುಖಕರ ಪ್ರಯಾಣ ಅನುಭವಿಸಲು ಇಲ್ಲಿದೆ ಸಲಹೆಗಳು
ವಿವೋ X80 ಲೈಟ್ 5G ಬಿಡುಗಡೆ! ಟ್ರಿಪಲ್ ರಿಯರ್ ಕ್ಯಾಮೆರಾ!
ಜಾಗತಿಕ ಮಾರುಕಟ್ಟೆಯಲ್ಲಿ ವಿವೋ ಕಂಪೆನಿಯ ಸ್ಮಾರ್ಟ್‌ಫೋನ್‌ಗಳಿಗೆ ಭಾರಿ ಬೇಡಿಕೆ ಇದೆ. ಅದಕ್ಕೆ ತಕ್ಕಂತೆ ವಿವೋ ಕಂಪೆನಿ ಕೂಡ ನಾನಾ ಮಾದರಿಯ ಸ್ಮಾರ್ಟ್‌ಫೋನ್‌ಗಳನ್ನು ಪರಿಚಯಿಸುತ್ತಾ ಬಂದಿದೆ. ವಿವೋ ಕಂಪೆನಿಯ ಸ್ಮಾರ್ಟ್‌ಫೋನ್ ಕ್ಯಾಮೆರಾ ಕೇಂದ್ರಿತ ಫೀಚರ್ಸ್‌ಗಳಿಗೆ ಹೆಸರುವಾಸಿಯಾಗಿರುವುದರಿಂದ ಯುವ ಜನರ ನೆಚ್ಚಿನ ಆಯ್ಕೆಗಳಲ್ಲಿ ಒಂದಾಗಿದೆ. ಸದ್ಯ ವಿವೋ ಕಂಪೆನಿ ಇದೀಗ ತನ್ನ ಹೊಸ ವಿವೋ X80 ಲೈಟ್ 5G ಸ್ಮಾರ್ಟ್‌ಫೋನ್ ಪರಿಚಯಿಸಿದೆ. ಈ ಸ್ಮಾರ್ಟ್‌ಫೋನ್ 90Hz ರಿಫ್ರೆಶ್ ರೇಟ್ ಅನ್ನು ಬೆಂಬಲಿಸಲಿದೆ.

ಹೌದು, ವಿವೋ ಕಂಪೆನಿ ಹೊಸ ವಿವೋ X80 ಲೈಟ್ 5G ಸ್ಮಾರ್ಟ್‌ಫೋನ್ ಲಾಂಚ್ ಮಾಡಿದೆ. ಇದು ಮೀಡಿಯಾ ಟೆಕ್ ಡೈಮೆನ್ಸಿಟಿ 900 SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಈ ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾಪಿಕ್ಸೆಲ್ ಸೆನ್ಸಾರ್ ಅನ್ನು ಪಡೆದಿದೆ. ಜೊತೆಗೆ 4,500mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್ ಯಾವೆಲ್ಲಾ ಫೀಚರ್ಸ್‌ಗಳನ್ನು ಒಳಗೊಂಡಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತಿವಿ ಓದಿರಿ.

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ
ವಿವೋ X80 ಲೈಟ್ 5G ಸ್ಮಾರ್ಟ್‌ಫೋನ್ 6.44 ಇಂಚಿನ ಅಮೋಲೆಡ್ ಡಿಸ್‌ಪ್ಲೇ ಹೊಂದಿದೆ. ಈ ಡಿಸ್‌ಪ್ಲೇ 1,080x2,404 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯವನ್ನು ಪಡೆದಿದೆ. ಇದು 90Hz ರಿಫ್ರೆಶ್ ರೇಟ್ ಬಲವನ್ನು ಹೊಂದಿದ್ದು, 1,300ನಿಟ್ಸ್ ಗರಿಷ್ಠ ಬ್ರೈಟ್‌ನೆಸ್ ಅನ್ನು ಬೆಂಬಲಿಸಲಿದೆ. ಅಲ್ಲದೆ 100% DCI-P3 ಬಣ್ಣದ ಹರವು ಕವರೇಜ್, 103% NTSC ಕವರೇಜ್ ಮತ್ತು HDR10+ ಬೆಂಬಲವನ್ನು ಹೊಂದಿದೆ.

ಪ್ರೊಸೆಸರ್ ಯಾವುದು?
ಇದು ಮೀಡಿಯಾ ಟೆಕ್ ಡೈಮೆನ್ಸಿಟಿ 900 SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್ 12-ಆಧಾರಿತ Funtouch OS 12 ನಲ್ಲಿ ರನ್ ಆಗಲಿದೆ. ಹಾಗೆಯೇ 8GB RAM ಮತ್ತು 256GB ಇಂಟರ್ ಸ್ಟೋರೇಜ್ ಸಾಮರ್ಥ್ಯವನ್ನು ಹೊಂದಿದೆ. ಇದಲ್ಲದೆ 8GB "ವಿಸ್ತರಿತ" RAM ಅನ್ನು ಅನ್ನು ಪಡೆದಿದೆ. ಜೊತೆಗೆ ಮೈಕ್ರೊ SD ಕಾರ್ಡ್ ಮೂಲಕ ಸಂಗ್ರಹ ಸಾಮರ್ಥ್ಯವನ್ನು 1TB ವರೆಗೆ ವಿಸ್ತರಿಸಬಹುದಾಗಿದೆ.

ಕ್ಯಾಮೆರಾ ಸೆಟ್‌ಅಪ್ ಎಷ್ಟಿದೆ?
ವಿವೋ X80 ಲೈಟ್ 5G ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾಪಿಕ್ಸೆಲ್ ಸೆನ್ಸಾರ್, ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ವೈಡ್-ಆಂಗಲ್ ಲೆನ್ಸ್ ಮತ್ತು ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಮ್ಯಾಕ್ರೋ ಲೆನ್ಸ್ ಅನ್ನು ಹೊಂದಿದೆ. ಇದಲ್ಲದೆ 50 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಪಡೆದಿದೆ.

ಬ್ಯಾಟರಿ ಮತ್ತು ಇತರೆ
ವಿವೋ X80 ಲೈಟ್ 5G ಸ್ಮಾರ್ಟ್‌ಫೋನ್ 4,500mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 44W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 4G LTE, ಡ್ಯುಯಲ್-ಬ್ಯಾಂಡ್ Wi-Fi, ಬ್ಲೂಟೂತ್ v5.2, OTG, NFC ಮತ್ತು GPS ಬೆಂಬಲವನ್ನು ಹೊಂದಿದೆ. ಇದು ಅಕ್ಸೆಲೆರೊಮೀಟರ್, ಆಂಬಿಯೆಂಟ್ ಲೈಟ್ ಸೆನ್ಸಾರ್ ಅನ್ನು ಒಳಗೊಂಡಿದೆ. ಜೊತೆಗೆ ಫಿಂಗರ್‌ಪ್ರಿಂಟ್ ಸ್ಕ್ಯಾನರ್ ಅನ್ನು ಕೂಡ ಬೆಂಬಲಿಸಲಿದೆ.

ಬೆಲೆ ಮತ್ತು ಲಭ್ಯತೆ
ವಿವೋ X80 ಲೈಟ್ 5G ಸ್ಮಾರ್ಟ್‌ಫೋನ್ ಪ್ರಸ್ತುತ ಜೆಕ್ ರಿಪಬ್ಲಿಕ್‌ನಲ್ಲಿ ಮಾತ್ರ ಲಭ್ಯವಿದೆ. ಇದರ ಬೆಲೆ CZK 9,999 (ಅಂದಾಜು 32,100ರೂ) ಆಗಿದೆ. ಇನ್ನು ಈ ಫೋನ್ ಡೈಮಂಡ್ ಬ್ಲಾಕ್ ಮತ್ತು ಸನ್‌ರೈಸ್ ಗೋಲ್ಡ್ ಬಣ್ಣದ ಆಯ್ಕೆಗಳಲ್ಲಿ ಬರುತ್ತದೆ.
-
54,999
-
36,599
-
39,999
-
38,990
-
1,29,900
-
79,990
-
38,900
-
18,999
-
19,300
-
69,999
-
79,900
-
1,09,999
-
1,19,900
-
21,999
-
1,29,900
-
12,999
-
44,999
-
15,999
-
7,332
-
17,091
-
29,999
-
7,999
-
8,999
-
45,835
-
77,935
-
48,030
-
29,616
-
57,999
-
12,670
-
79,470