Home
ಸುದ್ದಿಜಾಲ

ಭಾರತದಲ್ಲಿ ವಿವೋ X80 ಸರಣಿ ಸ್ಮಾರ್ಟ್‌ಫೋನ್‌ ಬಿಡುಗಡೆ! ಬೆಲೆ ಎಷ್ಟು?

ಭಾರತದ ಸ್ಮಾರ್ಟ್‌ಫೋನ್‌ ಮಾರುಕಟ್ಟೆಯಲ್ಲಿ ವಿವೋ ಕಂಪೆನಿ ವಿಶೇಷ ಸ್ಥಾನವನ್ನು ಪಡೆದುಕೊಂಡಿದೆ. ಬಿನ್ನ ಮಾದರಿಯ ಫೋನ್‌ಗಳಿಂದ ತನ್ನ ಸ್ಥಾನವನ್ನು ಭದ್ರಪಡಿಸಿಕೊಂಡಿದೆ. ಸದ್ಯ ಇದೀಗ ಭಾರತದಲ್ಲಿ ಹೊಸ ವಿವೋ X80ಪ್ರೊ ಮತ್ತು ವಿವೋ X80 ಸ್ಮಾರ್ಟ್‌ಫೋನ್‌ ಲಾಂಚ್‌ ಮಾಡಿದೆ. ಇದರಲ್ಲಿ ವಿವೋ X80 ಸ್ಮಾರ್ಟ್‌ಫೋನ್‌ ಮೀಡಿಯಾ ಟೆಕ್ ಡೈಮೆನ್ಸಿಟಿ 9000 SoC ಪ್ರೊಸೆಸರ್‌ ಹೊಂದಿದೆ. ಆದರೆ ವಿವೋ X80 ಪ್ರೊ ಸ್ಮಾರ್ಟ್‌ಫೋನ್‌ ಸ್ನಾಪ್‌ಡ್ರಾಗನ್‌ 8 Gen 1 SoC ಪ್ರೊಸೆಸರ್‌ ಬಲವನ್ನು ಪಡೆದಿದೆ.

ವಿವೋ

ಹೌದು, ವಿವೋ ಕಂಪೆನಿ ಭಾರತದಲ್ಲಿ ವಿವೋ X80 ಸ್ಮಾರ್ಟ್‌ಫೋನ್‌ ಸರಣಿ ಪರಿಚಯಿಸಿದೆ. ಈ ಸರಣಿಯ ಎರಡು ಸ್ಮಾರ್ಟ್‌ಫೋನ್‌ಗಳು ಸುಧಾರಿತ ಇಮೇಜಿಂಗ್ ವ್ಯವಸ್ಥೆಯನ್ನು ಹೊಂದಿದ್ದು, ಇದನ್ನು ಝೈಸ್ ಸಹ-ಇಂಜಿನಿಯರಿಂಗ್ ಮಾಡಲಾಗಿದೆ. ಇದಲ್ಲದೆ ಲೋ ಲೈಟ್‌ ಫೋಟೋಗ್ರಫಿ ಮತ್ತು ವೀಡಿಯೋಗ್ರಫಿಗಾಗಿ AI ವೀಡಿಯೊ ವರ್ಧನೆಯನ್ನು ಸೇರಿಸುವ ವಿವೋ V1+ ಇಮೇಜಿಂಗ್ ಚಿಪ್ ಅನ್ನು ಕೂಡ ಹೊಂದಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್‌ಗಳು ಒಳಗೊಂಡಿರುವ ವಿಶೇಷತೆ ಏನು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತಿವಿ ಓದಿರಿ.

ವಿವೋ X80 ಪ್ರೊ

ವಿವೋ X80 ಪ್ರೊ

ವಿವೋ X80 ಪ್ರೊ ಸ್ಮಾರ್ಟ್‌ಫೋನ್‌ 1,440x3,200 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್ ಸಾಮರ್ಥ್ಯದ 6.78-ಇಂಚಿನ AMOLED ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ 120Hz ರಿಫ್ರೆಶ್ ರೇಟ್‌ ಅನ್ನು ಹೊಂದಿದೆ. ಇದು ಸ್ನಾಪ್‌ಡ್ರಾಗನ್‌ 8 Gen 1 SoC ಪ್ರೊಸೆಸರ್‌ ಬಲವನ್ನು ಹೊಂದಿದ್ದು, ಆಂಡ್ರಾಯ್ಡ್‌ 12 ಆಧಾರಿತ OriginOS ನಲ್ಲಿ ಕಾರ್ಯನಿರ್ವಹಿಸುತ್ತದೆ. ಇನ್ನು ಈ ಸ್ಮಾರ್ಟ್‌ಫೋನ್‌ ಕ್ವಾಡ್‌ ರಿಯರ್‌ ಕ್ಯಾಮೆರಾ ಸೆಟಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸ್ಯಾಮ್‌ಸಂಗ್‌ ಐಸೋಸೆಲ್‌ GNV ಸೆನ್ಸಾರ್‌ ಹೊಂದಿದೆ. ಎರಡನೇ ಕ್ಯಾಮೆರಾ 48 ಮೆಗಾಪಿಕ್ಸೆಲ್ ಅಲ್ಟ್ರಾ-ವೈಡ್ ಸೋನಿ IMX598 ಸೆನ್ಸಾರ್‌, ಮೂರನೇ ಕ್ಯಾಮೆರಾ 12 ಮೆಗಾಪಿಕ್ಸೆಲ್ ಸೋನಿ IMX663 ಸೆನ್ಸಾರ್‌ ಮತ್ತು ನಾಲ್ಕನೇ ಕ್ಯಾಮೆರಾ 8 ಮೆಗಾ ಸೆನ್ಸಾರ್ ಹೊಂದಿದೆ. ಇದಲ್ಲದೆ 32 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾ ಹೊಂದಿದೆ. ಜೊತೆಗೆ 4,700mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 80W ಫ್ಲ್ಯಾಶ್ ಚಾರ್ಜ್ ವೈರ್ಡ್ ಫಾಸ್ಟ್ ಚಾರ್ಜಿಂಗ್ ಮತ್ತು 50W ವೈರ್‌ಲೆಸ್ ಚಾರ್ಜಿಂಗ್ ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ Wi-Fi 6, ಬ್ಲೂಟೂತ್ v5.2, NFC, ಮತ್ತು ಇನ್ಫ್ರಾರೆಡ್ (IR) ಬ್ಲಾಸ್ಟರ್ ವೈರ್‌ಲೆಸ್ ಆಯ್ಕೆಗಳನ್ನು ಒಳಗೊಂಡಿದೆ.

ವಿವೋ X80 ಸ್ಮಾರ್ಟ್‌ಫೋನ್‌

ವಿವೋ X80 ಸ್ಮಾರ್ಟ್‌ಫೋನ್‌

ವಿವೋ X80 ಸ್ಮಾರ್ಟ್‌ಫೋನ್‌ 1,080x2,400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್ ಸಾಮರ್ಥ್ಯದ 6.78-ಇಂಚಿನ ಹೆಚ್‌ಡಿ ಡಿಸ್‌ಪ್ಲೇ ಹೊಂದಿದೆ. ಈ ಡಿಸ್‌ಪ್ಲೇ 20:9 ರಚನೆಯ ಅನುಪಾತ ಮತ್ತು 120Hz ವರೆಗೆ ರಿಫ್ರೆಶ್ ರೇಟ್‌ ಅನ್ನು ಒಳಗೊಂಡಿದೆ. ಇದು ಮೀಡಿಯಾಟೆಕ್‌ ಡೈಮೆನ್ಸಿಟಿ 9000 SoC ಪ್ರೊಸೆಸರ್‌ ಬಲವನ್ನು ಹೊಂದಿದ್ದು, ಆಂಡ್ರಾಯ್ಡ್‌ 12 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಈ ಸ್ಮಾರ್ಟ್‌ಫೋನ್‌ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೋನಿ IMX866 RGBW ಸೆನ್ಸಾರ್‌ ಹೊಂದಿದೆ. ಎರಡನೇ ಕ್ಯಾಮೆರಾ 12 ಮೆಗಾಪಿಕ್ಸೆಲ್ ಅಲ್ಟ್ರಾ-ವೈಡ್ ಸೆನ್ಸಾರ್‌ ಮತ್ತು ಮೂರನೇ ಕ್ಯಾಮೆರಾ 12 ಮೆಗಾಪಿಕ್ಸೆಲ್ ಪೋರ್ಟ್ರೇಟ್ ಸೆನ್ಸಾರ್‌ ಅನ್ನು ಹೊಂದಿದೆ. ಇದಲ್ಲದೆ ಈ ಸ್ಮಾರ್ಟ್‌ಫೋನ್ 32 ಮೆಗಾಪಿಕ್ಸೆಲ್ ಸೆಲ್ಫಿ ಕ್ಯಾಮೆರಾ ಹೊಂದಿದೆ. ಜೊತೆಗೆ 4,500mAh ಬ್ಯಾಟರಿ ಸಾಮರ್ಥ್ಯವನ್ನು ಹೊಂದಿದ್ದು, 80W ಫ್ಲ್ಯಾಶ್ ಚಾರ್ಜ್ ವೇಗದ ಚಾರ್ಜಿಂಗ್ ತಂತ್ರಜ್ಞಾನವನ್ನು ಬೆಂಬಲಿಸಲಿದೆ.

ಬೆಲೆ ಮತ್ತು ಲಭ್ಯತೆ

ಬೆಲೆ ಮತ್ತು ಲಭ್ಯತೆ

ವಿವೋ X80 ಪ್ರೊ ಸ್ಮಾರ್ಟ್‌ಫೋನ್‌ 12GB RAM + 256GB ಸ್ಟೋರೇಜ್ ರೂಪಾಂತರಕ್ಕೆ 79,999ರೂ.ಬೆಲೆಯನ್ನು ಹೊಂದಿದೆ. ಹಾಗೆಯೇ ವಿವೋ X80 ಸ್ಮಾರ್ಟ್‌ಫೋನ್‌ 8GB RAM + 128GB ಸ್ಟೋರೇಜ್ ಮಾದರಿಗೆ 54,999ರೂ. ಮತ್ತು 12GB RAM + 256GB ಮಾದರಿಗೆ 59,999ರೂ.ಬೆಲೆ ಹೊಂದಿದೆ. ಇದರಲ್ಲಿ ವಿವೋ X80ಪ್ರೊ ಸ್ಮಾರ್ಟ್‌ಫೋನ್‌ ಕಾಸ್ಮಿಕ್ ಕಪ್ಪು ಬಣ್ಣದಲ್ಲಿ ಲಭ್ಯವಿರುತ್ತದೆ. ಆದರೆ ವಿವೋ X80 ಕಾಸ್ಮಿಕ್ ಕಪ್ಪು ಮತ್ತು ಅರ್ಬನ್ ಬ್ಲೂ ಬಣ್ಣದಲ್ಲಿ ಬರಲಿದೆ. ಈ ಎರಡೂ ಸ್ಮಾರ್ಟ್‌ಫೋನ್‌ಗಳು ಇದೇ ಮೇ 25 ರಿಂದ ಫ್ಲಿಪ್‌ಕಾರ್ಟ್, ವಿವೋ ಇಂಡಿಯಾ ಆನ್‌ಲೈನ್ ಸ್ಟೋರ್ ಮತ್ತು ಭಾರತದಾದ್ಯಂತ ಚಿಲ್ಲರೆ ಅಂಗಡಿಗಳ ಮೂಲಕ ಲಭ್ಯವಿರುತ್ತವೆ.

Best Mobiles in India

English summary
Vivo X80 Pro and Vivo X80 Launched in India: Price, Specifications
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+