ವಿವೋದ ಈ ದೈತ್ಯ ಫೋನಿನ ಡಿಸ್ಕೌಂಟ್ ಬೆಲೆ ಕೇಳಿದ್ರೆ, ನೀವು ಅಚ್ಚರಿ ಆಗ್ತೀರಾ!
ದೇಶಿಯ ಮೊಬೈಲ್ ಕ್ಷೇತ್ರದಲ್ಲಿ ವಿವೋ ಸಂಸ್ಥೆಯು ಈಗಾಗಲೇ ಗ್ರಾಹಕರನ್ನು ಆಕರ್ಷಿಸಿದೆ. ವಿವೋ ಸಂಸ್ಥೆಯ ಬಜೆಟ್ ಫೋನ್‌ಗಳಂತೆ, ಹೈ ಎಂಡ್ ಮಾದರಿಯ ಫೋನ್‌ಗಳು ಮಾರುಕಟ್ಟೆಯಲ್ಲಿ ಸದ್ದು ಮಾಡಿವೆ. ಆ ಪೈಕಿ ಸಂಸ್ಥೆಯ ವಿವೋ X90 ಪ್ರೊ ಸ್ಮಾರ್ಟ್‌ಫೋನ್ ಸಹ ಒಂದಾಗಿದ್ದು, ಸದ್ಯ ಈ ಫೋನ್ ಫ್ಲಿಪ್‌ಕಾರ್ಟ್ ತಾಣದಲ್ಲಿ ಸಖತ್ ರಿಯಾಯಿತಿ ಪಡೆದಿದೆ.
ಹೌದು, ಜನಪ್ರಿಯ ಫ್ಲಿಪ್‌ಕಾರ್ಟ್ ಪ್ಲಾಟ್‌ಫಾರ್ಮ್ ನಲ್ಲಿ ವಿವೋ X90 ಪ್ರೊ ಫೋನ್ ಶೇ. 24% ರಷ್ಟು ಆಕರ್ಷಕ ಡಿಸ್ಕೌಂಟ್ ಹೊಂದಿದ್ದು, ಈ ಫೋನಿನ 12GB RAM + 256 GB ವೇರಿಯಂಟ್ 69,799ರೂ. ಗಳ ಪ್ರೈಸ್ ಟ್ಯಾಗ್ ಬೆಲೆಯಲ್ಲಿ ಖರೀದಿಗೆ ಲಭ್ಯ ಇದೆ. ಇದಲ್ಲದೇ ಗ್ರಾಹಕರಿಗೆ ಆಯ್ದ ಬ್ಯಾಂಕ್ ಕೊಡುಗೆ, ಎಕ್ಸ್‌ಚೇಂಜ್ ಕೊಡುಗೆ ಹಾಗೂ ಇತರೆ ಆಫರ್‌ಗಳು ಕೂಡಾ ಸಿಗಲಿವೆ.

ಅಂದಹಾಗೆ ಈ ಮೊಬೈಲ್ ಮೀಡಿಯಾ ಟೆಕ್ ಡೈಮೆನ್ಸಿಟಿ 9200 ಚಿಪ್‌ಸೆಟ್ ಪ್ರೊಸೆಸರ್ ಸಾಮರ್ಥ್ಯ ಪಡೆದಿದ್ದು, ಜೊತೆಗೆ 4870mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಪಡೆದುಕೊಂಡಿದೆ. ಇನ್ನು ಇದರ ಪ್ರಾಥಮಿಕ ಕ್ಯಾಮೆರಾವು 50 ಮೆಗಾ ಪಿಕ್ಸಲ್ ಸೆನ್ಸಾರ್ ಆಗಿದೆ.
ಹಾಗೆಯೇ ಮುಂಭಾದಲ್ಲಿ ಸೆಲ್ಫಿ ಕ್ಯಾಮೆರಾವು 32 ಮೆಗಾ ಪಿಕ್ಸಲ್ ಸೆನ್ಸಾರ್ ಸಾಮರ್ಥ್ಯದಲ್ಲಿ ಇದೆ. ಈ ಫೋನ್ 120W ಸಾಮರ್ಥ್ಯದ ಫ್ಲಾಶ್ ಚಾರ್ಜ್ ಸಪೋರ್ಟ್ ಪಡೆದಿರುವ ಜೊತೆಗೆ ಇದು IP64 ಸೌಲಭ್ಯ ಸಹ ಪಡೆದುಕೊಂಡಿದೆ. ಇನ್ನುಳಿದಂತೆ ವಿವೋ X90 ಪ್ರೊ ಮೊಬೈಲ್‌ನ ಇತರೆ ಫೀಚರ್ಸ್ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ವಿವೋ X90 ಪ್ರೊ ಫೋನಿನ ಫೀಚರ್ಸ್ ಹೀಗಿವೆ
ವಿವೋ X90 ಪ್ರೊ ಫೋನ್ 6.78 ಇಂಚಿನ ಅಲ್ಟ್ರಾ ವಿಷನ್ AMOLED ಡಿಸ್‌ಪ್ಲೇ ಅನ್ನು ಪಡೆದಿದ್ದು, ಇದು 120Hz ರಿಫ್ರೆಶ್ ರೇಟ್ ಅನ್ನು ಒಳಗೊಂಡಿದೆ. ಸ್ಕ್ರೀನ್ ಕರ್ವ್ ಮಾದರಿಯ ರಚನೆಯನ್ನು ಒಳಗೊಂಡಿದ್ದು, ಹೋಲ್-ಪಂಚ್ ಕಟೌಟ್ ವಿನ್ಯಾಸ ಪಡೆದುಕೊಂಡಿದೆ.
ವಿವೋ ಸಂಸ್ಥೆಯ ಈ ಫೋನ್ ಮೀಡಿಯಾ ಟೆಕ್ ಡೈಮೆನ್ಸಿಟಿ 9200 ಚಿಪ್‌ಸೆಟ್ ಪ್ರೊಸೆಸರ್ ಪವರ್‌ನಲ್ಲಿ ಕಾರ್ಯ ಮಾಡಲಿದೆ. ಹಾಗೆಯೇ ಈ ಮೊಬೈಲ್ ಆಂಡ್ರಾಯ್ಡ್ 13 ಓಎಸ್ ಸಪೋರ್ಟ್ ಅನ್ನು ಪಡೆದಿದ್ದು, 12GB RAM + 256GB ಸ್ಟೋರೇಜ್ ವೇರಿಯಂಟ್ ಆಯ್ಕೆಯನ್ನು ಒಳಗೊಂಡಿದೆ.
ವಿವೋ ಕಂಪನಿಯ ಈ ಫೋನ್ ಮೂರು ಕ್ಯಾಮೆರಾ ರಚನೆಯನ್ನು ಪಡೆದಿದ್ದು, ಮುಖ್ಯ ಕ್ಯಾಮೆರಾವು 50 ಮೆಗಾ ಪಿಕ್ಸಲ್ ಸೆನ್ಸಾರ್ ಆಗಿದೆ. ದ್ವಿತೀಯ ಕ್ಯಾಮೆರಾವು 12 ಮೆಗಾ ಪಿಕ್ಸಲ್ ಸೆನ್ಸಾರ್‌ನಲ್ಲಿದ್ದು, ತೃತೀಯ ಕ್ಯಾಮೆರಾವು 50 ಮೆಗಾ ಪಿಕ್ಸಲ್ ಸೆನ್ಸಾರ್ ಸಾಮರ್ಥ್ಯವನ್ನು ಹೊಂದಿದೆ. ಇನ್ನು ಸೆಲ್ಫಿ ಕ್ಯಾಮೆರಾವು 32 ಮೆಗಾ ಪಿಕ್ಸಲ್ ಸೆನ್ಸಾರ್ ಸಾಮರ್ಥ್ಯವನ್ನು ಒಳಗೊಂಡಿದೆ.
ವಿವೋ X90 ಪ್ರೊ ಮೊಬೈಲ್ 4870 mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಸೌಲಭ್ಯ ಅನ್ನು ಒಳಗೊಂಡಿದ್ದು, ಇದರೊಂದಿಗೆ 120W ಸಾಮರ್ಥ್ಯದ ಫ್ಲಾಶ್ ಚಾರ್ಜ್ ಸೌಲಭ್ಯವನ್ನು ಪಡೆದಿದೆ. ಇದರೊಂದಿಗೆ 50W ಸಾಮರ್ಥ್ಯದಲ್ಲಿ ವಾಯರ್‌ಲೆಸ್ ಚಾರ್ಜಿಂಗ್ ಸಪೋರ್ಟ್ ಆಯ್ಕೆ ಪಡೆದಿಕೊಂಡಿದೆ. ಇದರ ಜೊತೆಗೆ ಈ ಫೋನ್ IP64 ಸೌಲಭ್ಯ ಸಹ ಪಡೆದುಕೊಂಡಿದೆ.
ಹಾಗೆಯೇ ಭಾರತದಲ್ಲಿ ಈ ಫೋನ್ 12 GB RAM + 256 GB ಸ್ಟೋರೇಜ್ ವೇರಿಯಂಟ್ ಆಯ್ಕೆಯನ್ನು ಪಡೆದುಕೊಂಡಿದೆ. ಅಲ್ಲದೇ ಈ ಫೋನ್ ರೆಡ್, ಬ್ಲೂ ಹಾಗೂ ಬ್ಲ್ಯಾಕ್ ಕಲರ್ ಆಯ್ಕೆ ಖರೀದಿಗೆ ಸಿಗಲಿದೆ.


Click it and Unblock the Notifications








