Home
ಸುದ್ದಿಜಾಲ

ವಿವೋ X90 ಪ್ರೊ+ ಸ್ಮಾರ್ಟ್‌ಫೋನ್‌ ಫೀಚರ್ಸ್‌ ಬಹಿರಂಗ!

ಸ್ಮಾರ್ಟ್‌ಫೋನ್‌ ಪ್ರಿಯರು ಹೆಚ್ಚು ಲೈಕ್‌ ಮಾಡುವ ಸ್ಮಾರ್ಟ್‌ಫೋನ್‌ ಬ್ರ್ಯಾಂಡ್‌ಗಳಲ್ಲಿ ವಿವೋ ಕೂಡ ಒಂದಾಗಿದೆ. ವಿವೋ ಕಂಪೆನಿಯ ಸ್ಮಾರ್ಟ್‌ಫೋನ್‌ಗಳು ತಮ್ಮ ಕ್ಯಾಮೆರಾ ಕೇಂದ್ರಿತ ಫೀಚರ್ಸ್‌ಗಳಿಂದ ಹೆಚ್ಚು ಗಮನಸೆಳೆಯುತ್ತವೆ. ಅದಕ್ಕೆ ತಕ್ಕಂತೆ ವಿವೋ ಕಂಪೆನಿ ತನ್ನ ಸ್ಮಾರ್ಟ್‌ಫೋನ್‌ಗಳಲ್ಲಿ ಆಕರ್ಷಕ ಕ್ಯಾಮೆರಾ ಫೀಚರ್ಸ್‌ಗಳನ್ನು ಪರಿಚಯಿಸುತ್ತಾ ಬಂದಿದೆ. ಸದ್ಯ ಇದೀಗ ಹೊಸ ವಿವೋ X90 ಸರಣಿಯ ಸ್ಮಾರ್ಟ್‌ಫೋನ್‌ ಪರಿಚಯಿಸಲು ತಯಾರಿ ನಡೆಸಿದೆ ಎಂದು ವರದಿಯಾಗಿದೆ.

ವಿವೋ X90 ಸ್ಮಾರ್ಟ್‌ಫೋನ್‌

ಹೌದು, ವಿವೋ ಕಂಪೆನಿ ಹೊಸ ವಿವೋ X90 ಸ್ಮಾರ್ಟ್‌ಫೋನ್‌ ಸರಣಿ ಪರಿಚಯಿಸಲು ಸಿದ್ಧತೆ ನಡೆಸಿದೆ. ಇನ್ನು ಈ ಸರಣಿಯಲ್ಲಿ ವಿವೋ X90, ವಿವೋ X90 ಪ್ರೊ ಮತ್ತು ವಿವೋ X90 ಪ್ರೊ + ಸ್ಮಾರ್ಟ್‌ಫೋನ್‌ಗಳು ಬರಲಿವೆ ಎನ್ನಲಾಗಿದೆ. ಇದರಲ್ಲಿ ಈ ಸರಣಿಯ ಟಾಪ್-ಆಫ್-ಲೈನ್ ವಿವೋ X90 ಪ್ರೊ+ ಸ್ಮಾರ್ಟ್‌ಫೋನ್‌ ಫೀಚರ್ಸ್‌ ಬಹಿರಂಗವಾಗಿದೆ. ಹಾಗಾದ್ರೆ ವಿವೋ X90 ಪ್ರೊ ಪ್ಲಸ್‌ ಸ್ಮಾರ್ಟ್‌ಫೋನ್‌ ಯಾವೆಲ್ಲಾ ಫೀಚರ್ಸ್‌ ಹೊಂದಿರಲಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತಿವಿ ಓದಿರಿ.

ಡಿಸ್‌ಪ್ಲೇ ರಚನೆ ಮತ್ತು ವಿಶೇ‍ಷ

ಡಿಸ್‌ಪ್ಲೇ ರಚನೆ ಮತ್ತು ವಿಶೇ‍ಷ

ವಿವೋ X90 ಪ್ರೊ+ ಸ್ಮಾರ್ಟ್‌ಫೋನ್‌ 6.78 ಇಂಚಿನ ಸ್ಯಾಮ್‌ಸಂಗ್‌ E6 ಅಮೊಲೆಡ್‌ ಡಿಸ್‌ಪ್ಲೇಯನ್ನು ಹೊಂದಿರಲಿದೆ. ಇದು 1440 x 3200 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯವನ್ನು ಪಡೆದಿರುವ ಸಾಧ್ಯತೆಯಿದೆ. ಇನ್ನು ಡಿಸ್‌ಪ್ಲೇ 120Hz ರಿಫ್ರೆಶ್ ರೇಟ್‌ ಬೆಂಬಲಿಸಲಿದೆ. ಇದಲ್ಲಿ ಈ ಸ್ಮಾರ್ಟ್‌ಫೋನ್‌ ಡಿಸ್‌ಪ್ಲೇ ಐ ಪ್ರೊಟೆಕ್ಷನ್‌ಗಾಗಿ 1440Hz ಹೈ-ಫ್ರೀಕ್ವೆನ್ಸಿ ಡಿಮ್ಮಿಂಗ್ ಚಿಪ್ ಅನ್ನು ಒಳಗೊಂಡಿರುವ ಸಾಧ್ಯತೆಯಿದೆ.

ಪ್ರೊಸೆಸರ್‌ ಬಲವೇನು?

ಪ್ರೊಸೆಸರ್‌ ಬಲವೇನು?

ವಿವೋ X90 ಪ್ರೊ+ ಸ್ಮಾರ್ಟ್‌ಫೋನ್‌ ಕ್ವಾಲ್ಕಾಮ್‌ ಸ್ನಾಪ್‌ಡ್ರಾಗನ್‌ 8 Gen 2 SoC ಪ್ರೊಸೆಸರ್‌ ವೇಗವನ್ನು ಹೊಂದಿರಲಿದೆ. ಇದು ಆಂಡ್ರಾಯ್ಡ್‌ 12 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 8GB RAM ಮತ್ತು 256GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯವನ್ನು ಹೊಂದಿರಲಿದೆ ಎಂದು ಅಂದಾಜಿಸಲಾಗಿದೆ.

ಕ್ಯಾಮೆರಾ ಸೆಟ್‌ಅಪ್‌ ಏನಿದೆ?

ಕ್ಯಾಮೆರಾ ಸೆಟ್‌ಅಪ್‌ ಏನಿದೆ?

ಇನ್ನು ಈ ಸ್ಮಾರ್ಟ್‌ಫೋನ್‌ ಕ್ವಾಡ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಒಳಗೊಂಡಿರುವ ಸಾಧ್ಯತೆಯಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೋನಿ IMX989V ಸೆನ್ಸಾರ್‌, ಎರಡನೇ ಕ್ಯಾಮೆರಾ 48 ಮೆಗಾಪಿಕ್ಸೆಲ್ ಸೋನಿ IMX598 ಅಲ್ಟ್ರಾ-ವೈಡ್ ಶೂಟರ್, ಮೂರನೇ ಕ್ಯಾಮೆರಾ 50 ಮೆಗಾಪಿಕ್ಸೆಲ್ IMX578 ಸೆನ್ಸಾರ್‌ ಮತ್ತು ನಾಲ್ಕನೇ ಕ್ಯಾಮೆರಾ 64 ಮೆಗಾಪಿಕ್ಸೆಲ್ ಓಮ್ನಿವಿಷನ್ OV64A ಪೆರಿಸ್ಕೋಪ್ ಲೆನ್ಸ್ ಅನ್ನು ಹೊಂದಿದೆ.

ಬ್ಯಾಟರಿ ಮತ್ತು ಇತರೆ ಫೀಚರ್ಸ್

ಬ್ಯಾಟರಿ ಮತ್ತು ಇತರೆ ಫೀಚರ್ಸ್

ವಿವೋ X90 ಪ್ರೊ+ ಸ್ಮಾರ್ಟ್‌ಫೋನ್‌ 80W ವೈರ್ಡ್ ಫಾಸ್ಟ್ ಚಾರ್ಜಿಂಗ್ ಮತ್ತು 50W ವೈರ್‌ಲೆಸ್ ಚಾರ್ಜಿಂಗ್‌ ಬೆಂಬಲಿಸುವ 4,700mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಹಾಟ್‌ಸ್ಪಾಟ್‌, ಬ್ಲೂಟೂತ್‌, ವೈಫೈ ಅನ್ನು ಬೆಂಬಲಿಸಲಿದೆ.

ಬೆಲೆ ಮತ್ತು ಲಭ್ಯತೆ

ಬೆಲೆ ಮತ್ತು ಲಭ್ಯತೆ

ಇನ್ನು ಈ ಸ್ಮಾರ್ಟ್‌ಫೋನ್‌ ಯಾವ ಬೆಲೆಯಲ್ಲಿ ಬರಲಿದೆ ಅನ್ನೊದು ಇನ್ನು ಬಹಿರಂಗವಾಗಿಲ್ಲ. ಇದು ಯಾವೆಲ್ಲಾ ಕಲರ್‌ ಆಯ್ಕೆಗಳಲ್ಲಿ ಬರಲಿದೆ ಎನ್ನುವ ವಿಚಾರ ಇನ್ನು ಬಹಿರಂಗವಾಗಿಲ್ಲ.

ವಿವೋ

ಇದಲ್ಲದೆ ವಿವೋ ಕಂಪೆನಿ ಇತ್ತೀಚಿಗೆ ಭಾರತದಲ್ಲಿ ಹೊಸ ವಿವೋ Y16 ಸ್ಮಾರ್ಟ್‌ಫೋನ್‌ ಲಾಂಚ್‌ ಮಾಡಿದೆ. ಈ ಸ್ಮಾರ್ಟ್‌ಫೋನ್‌ 6.51ಇಂಚಿನ IPS LCD HD+ ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ 720x1,600 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯವನ್ನು ಪಡೆದಿದೆ.ಇದು ಮೀಡಿಯಾಟೆಕ್‌ ಹೆಲಿಯೋ P35 SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಆಂಡ್ರಾಯ್ಡ್‌ 12 ಬೆಂಬಲದೊಂದಿಗೆ ರನ್‌ ಆಗಲಿದೆ.5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ.

Best Mobiles in India

English summary
Vivo X90 series of flagship smartphones could be in the works and may debut later this year in December.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+