Home
ಸುದ್ದಿಜಾಲ

ವಿವೋ X90 ಪ್ರೊ ಪ್ಲಸ್‌ ಫೋನ್‌ ಪರಿಚಯಿಸಲು ವಿವೋ ತಯಾರಿ! ಫೀಚರ್ಸ್‌ ಏನಿರಬಹುದು?

ಮೊಬೈಲ್‌ ಮಾರುಕಟ್ಟೆಯಲ್ಲಿ ವಿವೋ ಕಂಪೆನಿ ಜನಪ್ರಿಯ ಬ್ರ್ಯಾಂಡ್‌ಗಳಲ್ಲಿ ಒಂದೆನಿಸಿಕೊಂಡಿದೆ. ತನ್ನ ಭಿನ್ನ ಶ್ರೇಣಿಯ ಸ್ಮಾರ್ಟ್‌ಫೋನ್‌ಗಳ ಮೂಲಕ ಸ್ಮಾರ್ಟ್‌ಫೋನ್‌ ಪ್ರಿಯರ ಗಮನಸೆಳೆದಿದೆ. ಮುಂದುವರೆದಂತೆ ಇದೀಗ ಹೊಸ ವಿವೋ X90 ಪ್ರೊ ಪ್ಲಸ್‌ ಸ್ಮಾರ್ಟ್‌ಫೋನ್‌ ಪರಿಚಯಿಸಲು ತಯಾರಿ ನಡೆಸಿದೆ. ಈ ಸ್ಮಾರ್ಟ್‌ಫೋನ್‌ 2023ರ ಪ್ರಾರಂಭದಲ್ಲಿ ಮಾರುಕಟ್ಟೆಗೆ ಎಂಟ್ರಿ ನೀಡಲಿದೆ ಎಂದು ವರದಿಯಾಗಿದೆ. ಈ ಸ್ಮಾರ್ಟ್‌ಫೋನ್‌ ಮೀಡಿಯಾಟೆಕ್‌ ಡೈಮೆನ್ಸಿಟಿ 9200 ಚಿಪ್‌ಸೆಟ್‌ ಪ್ರೊಸೆಸರ್‌ ಹೊಂದಿರಲಿದೆ ಎಂದು ಅಂದಾಜಿಸಲಾಗಿದೆ.

ವಿವೋ

ಹೌದು, ವಿವೋ ಕಂಪೆನಿ ವಿವೋ X90 ಪ್ರೊ ಪ್ಲಸ್‌ ಸ್ಮಾರ್ಟ್‌ಫೋನ್‌ ಪರಿಚಯಿಸಲು ಸಿದ್ಧತೆ ನಡೆಸಿದೆ. ಈ ಸ್ಮಾರ್ಟ್‌ಫೋನ್‌ ಇದೇ ನವೆಂಬರ್‌ ಇಲ್ಲವೇ 2023ರ ಆರಂಭದಲ್ಲಿ ಬಿಡುಗಡೆಯಾಗುವ ಸಾಧ್ಯತೆಯಿದೆ. ಇನ್ನು ವಿವೋ X90 ಪ್ರೊ ಪ್ಲಸ್‌ ಸ್ಮಾರ್ಟ್‌ಫೋನ್‌ 100W ವೇಗದ ಚಾರ್ಜಿಂಗ್‌ ಬೆಂಬಲಿಸುವ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿರಲಿದೆ ಎನ್ನಲಾಗಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್‌ ಯಾವೆಲ್ಲಾ ಫೀಚರ್ಸ್‌ ಒಳಗೊಂಡಿರಲಿದೆ ಎಂದು ನಿರೀಕ್ಷಿಸಲಾಗಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತಿವಿ ಓದಿರಿ.

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ ಹೇಗಿದೆ?

ವಿವೋ X90 ಪ್ರೊ ಪ್ಲಸ್‌ ಸ್ಮಾರ್ಟ್‌ಫೋನ್‌ 6.78 ಇಂಚಿನ ಹೆಚ್‌ಡಿ ಪ್ಲಸ್‌ ಅಮೋಲೆಡ್‌ ಡಿಸ್‌ಪ್ಲೇಯನ್ನು ಹೊಂದಿರಲಿದೆ. ಇದು 1440 x 3200 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯವನ್ನು ಹೊಂದಿದೆ. ಇನ್ನು ಡಿಸ್‌ಪ್ಲೇ ರಚನೆಯ ಅನುಪಾತ 20:9 ಆಗಿದ್ದು, 144Hz ರಿಫ್ರೆಶ್‌ ರೇಟ್‌ ಬೆಂಬಲಿಸಲಿದೆ. ಈ ಡಿಸ್‌ಪ್ಲೇ 1500 ನಿಟ್ಸ್‌ ಗರಿಷ್ಠ ಬ್ರೈಟ್‌ನೆಸ್‌ ಅನ್ನು ನೀಡಲಿದ್ದು, 518 ಪಿಪಿಐ ಪಿಕ್ಸೆಲ್‌ ಸಾಂದ್ರತೆಯನ್ನು ಹೊಂದಿರಲಿದೆ.

ಪ್ರೊಸೆಸರ್‌ ಯಾವುದು?

ಪ್ರೊಸೆಸರ್‌ ಯಾವುದು?

ವಿವೋ X90 ಪ್ರೊ ಪ್ಲಸ್‌ ಸ್ಮಾರ್ಟ್‌ಫೋನ್‌ ಮೀಡಿಯಾಟೆಕ್‌ ಡೈಮೆನ್ಸಿಟಿ 9200 ಚಿಪ್‌ಸೆಟ್‌ ಪ್ರೊಸೆಸರ್‌ ವೇಗವನ್ನು ಹೊಂದಿದ್ದು, ಆಂಡ್ರಾಯ್ಡ್‌ 13 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ ಈ ಫೋನ್‌ 12GB RAM ಮತ್ತು 512GB ವರೆಗೆ ಇಂಟರ್‌ ಸ್ಟೋರೇಜ್‌ ಸಾಮರ್ಥ್ಯವನ್ನು ನೀಡಬಹುದು ಎನ್ನಲಾಗಿದೆ. ಇದಲ್ಲದೆ ಈ ಸ್ಮಾರ್ಟ್‌ಫೋನ್‌ ಮೆಮೊರಿ ಕಾರ್ಡ್‌ ಮೂಲಕ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸುವುದಕ್ಕೆ ಅವಕಾಶ ನೀಡುವ ಸಾಧ್ಯತೆಯಿದೆ.

ಕ್ಯಾಮೆರಾ ಸೆಟ್‌ಅಪ್‌ ಏನಿರಲಿದೆ?

ಕ್ಯಾಮೆರಾ ಸೆಟ್‌ಅಪ್‌ ಏನಿರಲಿದೆ?

ಈ ಸ್ಮಾರ್ಟ್‌ಫೋನ್‌ ಹಿಂಬದಿಯಲ್ಲಿ ಎಷ್ಟು ಕ್ಯಾಮೆರಾ ಹೊಂದಿರಲಿದೆ ಅನ್ನೊದು ತಿಳಿದು ಬಂದಿಲ್ಲ. ಆದರೆ ಇದರ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್‌ ಸೆನ್ಸಾರ್‌ ಅನ್ನು ಹೊಂದಿರಲಿದೆ. ಇದು 5x ಆಪ್ಟಿಕಲ್ ಜೂಮ್ ಅನ್ನು ನೀಡುವ 64MP ಟೆಲಿಫೋಟೋ ಲೆನ್ಸ್‌ನಿಂದ ಬೆಂಬಲಿತವಾಗಿದೆ ಎನ್ನಲಾಗಿದೆ. ಇದಲ್ಲದೆ 32 ಮೆಗಾಪಿಕ್ಸೆಲ್‌ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿರುವ ನಿರೀಕ್ಷೆಯಿದೆ.

ಬ್ಯಾಟರಿ ಮತ್ತು ಇತರೆ ಫೀಚರ್ಸ್‌ ಗಳೇನು?

ಬ್ಯಾಟರಿ ಮತ್ತು ಇತರೆ ಫೀಚರ್ಸ್‌ ಗಳೇನು?

ವಿವೋ X90 ಪ್ರೊ ಪ್ಲಸ್‌ ಸ್ಮಾರ್ಟ್‌ಫೋನ್‌ 100W ಅಥವಾ 120W ವೇಗದ ಚಾರ್ಜಿಂಗ್‌ಗೆ ಬೆಂಬಲ ನೀಡುವ 5,000mAh ಬ್ಯಾಟರಿ ಸಾಮರ್ಥ್ಯವನ್ನು ಪಡೆದುಕೊಳ್ಳುವ ಸಾಧ್ಯತೆಯಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಹಾಟ್‌ಸ್ಪಾಟ್‌, ವೈಫೈ, ಬ್ಲೂಟೂತ್‌ ಯುಎಸ್‌ಬಿ ಪೋರ್ಟ್‌, ಹೆಡ್‌ಫೋನ್‌ ಜ್ಯಾಕ್‌ ಅನ್ನು ಬೆಂಬಲಿಸಲಿದೆ ಎಂದು ಹೇಳಲಾಗಿದೆ.

ಲಭ್ಯತೆ ಯಾವಾಗ?

ಲಭ್ಯತೆ ಯಾವಾಗ?

ಈ ಸ್ಮಾರ್ಟ್‌ಫೋನ್‌ ಬೆಲೆ ಎಷ್ಟಿರಲಿದೆ ಅನ್ನೊದು ಬಹಿರಂಗವಾಗಿಲ್ಲ. ಇದು ಈ ವರ್ಷದ ನವೆಂಬರ್‌ನಲ್ಲಿ ಅಥವಾ 2023 ರ ಆರಂಭದಲ್ಲಿ ಬಿಡುಗಡೆಯಾಗುವ ನಿರೀಕ್ಷೆಯಿದೆ. ವಿವೋ X90 ಪ್ರೊ ಪ್ಲಸ್‌ ಮೊದಲಿಗೆ ಚೀನಾದಲ್ಲಿ ಬಿಡುಗಡೆಯಾಗಲಿದೆ. ನಂತರ ಈ ಸ್ಮಾರ್ಟ್‌ಫೋನ್‌ ಭಾರತದಲ್ಲಿ ಲಾಂಚ್‌ ಆಗಲಿದೆ ಎಂದು ವರದಿಯಾಗಿದೆ. ಇನ್ನು ಈ ಫೋನ್‌ ಯಾವೆಲ್ಲಾ ಕಲರ್‌ ಆಯ್ಕೆಗಳಲ್ಲಿ ಬರಬಹುದು ಎನ್ನುವ ವಿಚಾರ ಇನ್ನು ಬಹಿರಂಗವಾಗಿಲ್ಲ.

Best Mobiles in India

English summary
Vivo X90 Pro Plus specifications leaked ahead of launch
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+