ಎಂಟ್ರಿ ಕೊಡಲು ಸಜ್ಜಾಗಿದೆ ವಿವೋ X90 ಪ್ರೊ ಫೋನ್‌!..ಅಚ್ಚರಿಯ ಫಾಸ್ಟ್‌ ಚಾರ್ಜಿಂಗ್‌!

|

ವಿವೋ ಕಂಪನಿಯು ಈಗಾಲೇ ತನ್ನ X ಸರಣಿಯಲ್ಲಿ ವಿವೋ X80 ಪ್ರೊ ಸ್ಮಾರ್ಟ್‌ಫೋನ್‌ ಪರಿಚಯಿಸಿ ಫ್ಲ್ಯಾಗ್‌ಶಿಫ್‌ ವಲಯದಲ್ಲಿ ಗಮನ ಸೆಳೆದಿದೆ. ಅದರ ಮುಂದುವರಿದ ಭಾಗವಾಗಿ ಇದೀಗ ವಿವೋ X90 ಸರಣಿ ಬಿಡುಗಡೆ ಮಾಡಲು ಸಕಲ ರೀತಿ ಸಜ್ಜಾಗಿದೆ. ಅಂದಹಾಗೇ ನೂತನವಾಗಿ ಬರಲಿರುವ ವಿವೋ X90 ಸ್ಮಾರ್ಟ್‌ಫೋನ್‌ ಸರಣಿಯ ಫೋನ್‌ಗಳ ಫೀಚರ್ಸ್‌ಗಳ ಬಗ್ಗೆ ಗ್ರಾಹಕರಲ್ಲಿ ಭಾರೀ ಕುತೂಹಲ ಮೂಡಿದ್ದು, ಕೆಲವು ಲೀಕ್ ಮಾಹಿತಿಗಳು ಆ ಕುತೂಹಲವನ್ನು ಇಮ್ಮಡಿಗೊಳಿಸಿವೆ.

ವಿವೋ

ಹೌದು, ವಿವೋ ಸಂಸ್ಥೆಯು ನೂತನವಾಗಿ ವಿವೋ X90 ಸರಣಿಯನ್ನು ಪರಿಚಯಿಸಲು ತಯಾರಾಗಿದೆ. ಇನ್ನು ಈ ಸರಣಿಯಲ್ಲಿ ವಿವೋ X90 ಪ್ರೊ ಫೋನಿನ ಕೆಲವು ಫೀಚರ್ಸ್‌ಗಳು ಲೀಕ್‌ ಆಗಿದ್ದು, ಬಳಕೆದಾರರ ಗಮನ ಸೆಳೆದಿದೆ. ಈ ಫೋನ್ ಕ್ವಾಲ್ಕಮ್‌ ಸ್ನ್ಯಾಪ್‌ಡ್ರಾಗನ್ 8 ಜೆನ್‌ 2 ಪ್ರೊಸೆಸರ್‌ ಅನ್ನು ಒಳಗೊಂಡಿರಲಿದೆ. ಜೊತೆಗೆ 5,000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಅನ್ನು ಹೊಂದಿರಲಿದೆ ಎಂದು ಲೀಕ್ ಮಾಹಿತಿಯಿಂದ ತಿಳಿದು ಬಂದಿದೆ.

ಇಂಚಿನ

ಈ ಸ್ಮಾರ್ಟ್‌ಫೋನ್‌ 6.5 ಇಂಚಿನ ಸ್ಕ್ರೀನ್‌ ಹೊಂದಿರಲಿದ್ದು, ಸೂಪರ್‌ AMOLED ಡಿಸ್‌ಪ್ಲೇಯನ್ನು ಒಳಗೊಂಡಿರಲಿದೆ. ಇದು ಸ್ನ್ಯಾಪ್‌ಡ್ರಾಗನ್ 8 ಜೆನ್‌ 2 ಪ್ರೊಸೆಸರ್‌ ಜೊತೆಗೆ ಆಂಡ್ರಾಯ್ಡ್ 12 ಓಎಸ್‌ ನಲ್ಲಿ ಕಾರ್ಯ ನಿರ್ವಹಿಸಲಿದೆ ಎನ್ನಲಾಗಿದೆ. ಹಾಗೆಯೇ ಆರಂಭಿಕ 8 GB + 128GB ಸ್ಟೋರೇಜ್‌ವ ವೇರಿಯಂಟ್‌ ಆಯ್ಕೆಯಲ್ಲಿ ಎಂಟ್ರಿ ಕೊಡುವ ಸಾಧ್ಯತೆಗಳು ಇವೆ.

ಸ್ಮಾರ್ಟ್‌ಫೋನ್

ಬರಲಿರುವ ವಿವೋ X90 ಪ್ರೊ ಸ್ಮಾರ್ಟ್‌ಫೋನ್ (Vivo X90 Pro) ಮತ್ತೊಂದು ಹೈಲೈಟ್‌ ಎಂದರೆ, ಇದು 1 ಇಂಚಿನ ಕ್ಯಾಮೆರಾ ಸೆನ್ಸಾರ್ ಅನ್ನು ಒಳಗೊಂಡಿರುತ್ತದೆ ಎಂದು ಹೇಳಲಾಗುತ್ತದೆ. ಆದಾಗ್ಯೂ, ಅದಕ್ಕೂ ಸೂಕ್ತ ವಿವರಗಳು ಇನ್ನು ಲಭ್ಯವಿಲ್ಲ. ಇದು ಸೋನಿ IMX989 ಲೆನ್ಸ್‌ ಹೊಂದಿರಲಿದ್ದು, ಪೆರಿಸ್ಕೋಪ್ ಜೂಮ್ ಕ್ಯಾಮೆರಾವನ್ನು ಒಳಗೊಂಡಿರುತ್ತದೆ ಎನ್ನಲಾಗಿದೆ. ಹಾಗೆಯೇ ವಿವೋ X90 ಪ್ರೊ ಸ್ಮಾರ್ಟ್‌ಫೋನ್ 5,000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಜೊತೆಗೆ 100W ಸಾಮರ್ಥ್ಯದ ಫಾಸ್ಟ್‌ ಚಾರ್ಜಿಂಗ್ ಸೌಲಭ್ಯವನ್ನು ಒಳಗೊಂಡಿರಲಿದೆ ಎಂದು ಹೇಳಲಾಗುತ್ತಿದೆ.

ವರ್ಷದ

ಇನ್ನು ಈ ಪ್ರೀಮಿಯಂ ಫ್ಲ್ಯಾಗ್‌ಶಿಪ್ ಫೋನ್‌ ಈ ವರ್ಷದ ಕೊನೆಯಲ್ಲಿ ಅಥವಾ 2023 ರ ಆರಂಭದಲ್ಲಿ ಚೀನಾದಲ್ಲಿ ಮೊದಲು ಬಿಡುಗಡೆ ಆಗಲಿದೆ ಎಂದು ಹೇಳಲಾಗುತ್ತಿದೆ. ಅದಾಗ ಬಳಿಕ ಭಾರತೀಯ ಮಾರುಕಟ್ಟೆಗೆ ಎಂಟ್ರಿ ನೀಡುವ ಸಾಧ್ಯತೆಗಳಿವೆ ಎನ್ನಲಾಗಿದೆ.

ವಿವೋ X80 ಪ್ರೊ ಸ್ಮಾರ್ಟ್‌ಫೋನ್‌

ವಿವೋ X80 ಪ್ರೊ ಸ್ಮಾರ್ಟ್‌ಫೋನ್‌

ಈ ಫೋನ್ 1,440 x 3,200 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್ ಸಾಮರ್ಥ್ಯದ 6.78 ಇಂಚಿನ AMOLED ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ 120Hz ರಿಫ್ರೆಶ್ ರೇಟ್‌ ಅನ್ನು ಹೊಂದಿದೆ. ಇದು ಸ್ನಾಪ್‌ಡ್ರಾಗನ್‌ 8 Gen 1 SoC ಪ್ರೊಸೆಸರ್‌ ಬಲವನ್ನು ಹೊಂದಿದ್ದು, ಆಂಡ್ರಾಯ್ಡ್‌ 12 ಆಧಾರಿತ Origin OS ನಲ್ಲಿ ಕಾರ್ಯ ನಿರ್ವಹಿಸುತ್ತದೆ. ಇನ್ನು ಈ ಸ್ಮಾರ್ಟ್‌ಫೋನ್‌ ಕ್ವಾಡ್‌ ರಿಯರ್‌ ಕ್ಯಾಮೆರಾ ಸೆಟಪ್‌ ಅನ್ನು ಹೊಂದಿದೆ.

ನಾಲ್ಕನೇ

ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾ ಪಿಕ್ಸೆಲ್ ಸ್ಯಾಮ್‌ಸಂಗ್‌ ಐಸೋಸೆಲ್‌ GNV ಸೆನ್ಸಾರ್‌ ಹೊಂದಿದೆ. ಎರಡನೇ ಕ್ಯಾಮೆರಾ 48 ಮೆಗಾ ಪಿಕ್ಸೆಲ್ ಅಲ್ಟ್ರಾ-ವೈಡ್ ಸೋನಿ IMX598 ಸೆನ್ಸಾರ್‌, ಮೂರನೇ ಕ್ಯಾಮೆರಾ 12 ಮೆಗಾ ಪಿಕ್ಸೆಲ್ ಸೋನಿ IMX663 ಸೆನ್ಸಾರ್‌ ಮತ್ತು ನಾಲ್ಕನೇ ಕ್ಯಾಮೆರಾ 8 ಮೆಗಾ ಸೆನ್ಸಾರ್ ಹೊಂದಿದೆ. ಇದಲ್ಲದೆ 32 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾ ಹೊಂದಿದೆ. ಜೊತೆಗೆ 4,700mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 80W ಫ್ಲ್ಯಾಶ್ ಚಾರ್ಜ್ ವೈರ್ಡ್ ಫಾಸ್ಟ್ ಚಾರ್ಜಿಂಗ್ ಮತ್ತು 50W ವೈರ್‌ಲೆಸ್ ಚಾರ್ಜಿಂಗ್ ಬೆಂಬಲಿಸಲಿದೆ.

Best Mobiles in India

English summary
Vivo X90 Pro specifications, Launch timeline tipped: Details.

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X