Home
ಸುದ್ದಿಜಾಲ

ಭಾರತದಲ್ಲಿ ಧೂಳೆಬ್ಬಿಸಿದ ವಿವೋ X90 ಪ್ರೊ! ಎಂಟ್ರಿಯಲ್ಲೇ ಭಾರಿ ಸಂಚಲನ!

ಜನಪ್ರಿಯ ವಿವೋ ಕಂಪೆನಿ ತನ್ನ ಬಹುನಿರೀಕ್ಷಿತ ವಿವೋ X90 ಸರಣಿಯನ್ನು ಭಾರತದಲ್ಲಿ ಪರಿಚಯಿಸಿದೆ. ಈಗಾಗಲೇ ಗ್ಲೋಬಲ್‌ ಮಾರುಕಟ್ಟೆಯಲ್ಲಿ ಸಿಕ್ಕಾಪಟ್ಟೆ ಸೌಂಡ್‌ ಮಾಡಿರುವ ಈ ಸರಣಿಯಲ್ಲಿ ವಿವೋ X90 ಮತ್ತು ವಿವೋ X90 ಪ್ರೊ ಮಾಡೆಲ್‌ಗಳನ್ನು ಅನಾವರಣಗೊಳಿಸಲಾಗಿದೆ. ಇದರಲ್ಲಿ ವಿವೋ X90 ಪ್ರೊ ಫೋನ್‌ ತನ್ನ ಹೈಟೆಕ್‌ ಫೀಚರ್ಸ್‌ಗಳಿಂದ ಗಮನಸೆಳೆದಿದೆ.

ಹೌದು, ಭಾರತದ ಮರುಕಟ್ಟೆಗೆ ವಿವೋ X90 ಸರಣಿ ಎಂಟ್ರಿ ನೀಡಿದೆ. ಈ ಸರಣಿಯಲ್ಲಿ ವಿವೋ X90 ಪ್ರೊ ಸ್ಮಾರ್ಟ್‌ಫೋನ್‌ Zeiss-ಬ್ರಾಂಡ್ ಟ್ರಿಪಲ್ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಹೊಂದಿದೆ. ಜೊತೆಗೆ 120W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಹಾಗಾದ್ರೆ ಈ ಸ್ಮಾರ್ಟ್‌ಫೋನ್‌ ಯಾವೆಲ್ಲಾ ಫೀಚರ್ಸ್‌ ಒಳಗೊಂಡಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಭಾರತದಲ್ಲಿ ಧೂಳೆಬ್ಬಿಸಿದ ವಿವೋ X90 ಪ್ರೊ! ಎಂಟ್ರಿಯಲ್ಲೇ ಭಾರಿ ಸಂಚಲನ!

ವಿವೋ X90 ಪ್ರೊ ಡಿಸ್‌ಪ್ಲೇ ವಿನ್ಯಾಸ ಹೇಗಿದೆ?

ವಿವೋ X90 ಪ್ರೊ ಸ್ಮಾರ್ಟ್‌ಫೋನ್‌ 6.78 ಇಂಚಿನ ಅಮೋಲೆಡ್‌ 3D ಕರ್ವ್ ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ 1,260x 2,800 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಇದು 120Hz ರಿಫ್ರೆಶ್‌ ರೇಟ್‌ ಅನ್ನು ಬೆಂಬಲಿಸಲಿದ್ದು, DCI-P3 ಬಣ್ಣದ ಹರವು 100 ಪ್ರತಿಶತ ಕವರೇಜ್ ನೀಡಲು ರೇಟ್ ಮಾಡಲಾಗಿದೆ. ಇನ್ನು ಡಿಸ್‌ಪ್ಲೇ 3 ಹಂತದ ಐ (ಕಣ್ಣು) ಪ್ರೊಟೆಕ್ಷನ್‌ ಅನ್ನು ನೀಡಲಿದೆ.

ಭಾರತದಲ್ಲಿ ಧೂಳೆಬ್ಬಿಸಿದ ವಿವೋ X90 ಪ್ರೊ! ಎಂಟ್ರಿಯಲ್ಲೇ ಭಾರಿ ಸಂಚಲನ!

ವಿವೋ X90 ಪ್ರೊ ಪ್ರೊಸೆಸರ್‌ ಯಾವುದು?

ವಿವೋ X90 ಪ್ರೊ ಸ್ಮಾರ್ಟ್‌ಫೋನ್‌ ಆಕ್ಟಾ-ಕೋರ್ 4nm ಮೀಡಿಯಾ ಟೆಕ್ ಡೈಮೆನ್ಸಿಟಿ 9200 SoC ಪ್ರೊಸೆಸರ್‌ ವೇಗವನ್ನು ಹೊಂದಿದೆ. ಇದು ಆಂಡ್ರಾಯ್ಡ್‌ 13 ಆಧಾರಿತ FunTouch OS ನಲ್ಲಿ ಕಾರ್ಯನಿರ್ವಹಿಸಲಿದೆ. ಹಾಗೆಯೇ 12GB RAM ಮತ್ತು 256GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯವನ್ನು ಒಳಗೊಂಡಿದೆ. ಆದರೆ ಈ ಸ್ಮಾರ್ಟ್‌ಫೋನ್‌ನಲ್ಲಿ ಮೆಮೊರಿ ಕಾರ್ಡ್‌ ಮೂಲಕ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸುವುದಕ್ಕೆ ಅವಕಾಶ ನೀಡಿಲ್ಲ.

ಭಾರತದಲ್ಲಿ ಧೂಳೆಬ್ಬಿಸಿದ ವಿವೋ X90 ಪ್ರೊ! ಎಂಟ್ರಿಯಲ್ಲೇ ಭಾರಿ ಸಂಚಲನ!

ವಿವೋ X90 ಪ್ರೊ ಕ್ಯಾಮೆರಾ ಸೆಟ್‌ಅಪ್‌

ವಿವೋ X90 ಪ್ರೊ ಸ್ಮಾರ್ಟ್‌ಫೋನ್‌ Zeiss-ಬ್ರಾಂಡ್ ಟ್ರಿಪಲ್ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಒಳಗೊಂಡಿದೆ. ಇದರಲ್ಲಿ ಪ್ರಮುಖ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೋನಿ IMX 989 1-ಇಂಚಿನ ಸೆನ್ಸಾರ್‌ ಹೊಂದಿದೆ. ಎರಡನೇ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೋನಿ IMX758 ಸೆನ್ಸಾರ್‌ ಮತ್ತು ಮೂರನೇ ಕ್ಯಾಮೆರಾ 12 ಮೆಗಾಪಿಕ್ಸೆಲ್ ಸೋನಿ IMX ಸೆಲ್ ಅನ್ನು ಒಳಗೊಂಡಿದೆ. ಇದಲ್ಲದೆ 32 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ.

ಭಾರತದಲ್ಲಿ ಧೂಳೆಬ್ಬಿಸಿದ ವಿವೋ X90 ಪ್ರೊ! ಎಂಟ್ರಿಯಲ್ಲೇ ಭಾರಿ ಸಂಚಲನ!

ವಿವೋ X90 ಪ್ರೊ ಬ್ಯಾಟರಿ ಹೇಗಿದೆ?

ವಿವೋ X90 ಪ್ರೊ ಸ್ಮಾರ್ಟ್‌ಫೋನ್‌ 4,870mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿದೆ. ಇದು 120W ವೇಗದ ಚಾರ್ಜಿಂಗ್ ಬೆಂಬಲಿಸಲಿದ್ದು, 50W ವಾಯರ್‌ಲೆಸ್ ಚಾರ್ಜಿಂಗ್ ಅನ್ನು ಕೂಡ ಬೆಂಬಲಿಸಲಿದೆ. ಇದರಿಂದಾಗಿ ಫೋನ್‌ ಕೇವಲ ಎಂಟು ನಿಮಿಷಗಳಲ್ಲಿ 0% ನಿಂದ 50% ನಷ್ಟು ಬ್ಯಾಟರಿಯನ್ನು ಚಾರ್ಜ್ ಮಾಡುತ್ತದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, Wi-Fi 6, ಬ್ಲೂಟೂತ್ v5.3, NFC, GPS ಮತ್ತು USB ಟೈಪ್-C ಪೋರ್ಟ್ ಅನ್ನು ಬೆಂಬಲಿಸಲಿದೆ. ಇದಲ್ಲದೆ ಆಕ್ಸಿಲೇರೋಮೀಟರ್‌, ಆಂಬಿಯೆಂಟ್‌ ಲೈಟ್‌ ಸೆನ್ಸಾರ್‌ ಅನ್ನು ಒಳಗೊಂಡಿದೆ.

ವಿವೋ X90 ಪ್ರೊ ಬೆಲೆ ಮತ್ತು ಲಭ್ಯತೆ ವಿವರ

ವಿವೋ X90 ಪ್ರೊ ಸ್ಮಾರ್ಟ್‌ಫೋನ್‌ ಬೇಸ್‌ ಮಾಡೆಲ್‌ 8GB RAM + 256GB ಸ್ಟೋರೇಜ್ ರೂಪಾಂತರದ ಆಯ್ಕೆಗೆ 59,999ರೂ. ಬೆಲೆ ಹೊಂದಿದೆ. ಇದರ 12GB RAM + 256GB ಸ್ಟೋರೇಜ್ ರೂಪಾಂತರದ ಆಯ್ಕೆಯು 63,999ರೂ.ಬೆಲೆಯನ್ನು ಪಡೆದುಕೊಂಡಿದೆ. ಈ ಸ್ಮಾರ್ಟ್‌ಫೋನ್‌ ಸಿಂಗಲ್ ಲೆಜೆಂಡರಿ ಬ್ಲ್ಯಾಕ್ ಶೇಡ್‌ ಕಲರ್‌ ಆಯ್ಕೆಯಲ್ಲಿ ಲಭ್ಯವಾಗಲಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಮೇ 5 ರಿಂದ ಮಾರಾಟಕ್ಕೆ ಬರಲಿದೆ. ಲಾಂಚ್‌ ಆಫರ್‌ನಲ್ಲಿ SBI, ICICI, HDFC ಮತ್ತು IDFC ಬ್ಯಾಂಕ್ ಕಾರ್ಡ್‌ ಮೂಲಕ ಖರೀದಿಸಿದರೆ ವಿಶೇಷ ರಿಯಾಯಿತಿ ದೊರೆಯಲಿದೆ.

Best Mobiles in India

English summary
Vivo X90 Pro With Triple Rear Cameras Launched in India: Price, Specifications details in kannada
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+