Home
ಸುದ್ದಿಜಾಲ

ಭಾರತದಲ್ಲಿ ಬಿಡುಗಡೆಗೂ ಮುನ್ನವೇ ಬಹಿರಂಗವಾಯ್ತು ವಿವೋ X90 ಸರಣಿ ಬೆಲೆ ವಿವರ!

ಜನಪ್ರಿಯ ಸ್ಮಾರ್ಟ್‌ಫೋನ್‌ ತಯಾರಕ ವಿವೋ ಕಂಪೆನಿ ಭಾರತದಲ್ಲಿ ಹೊಸ ವಿವೋ X90 ಸರಣಿ ಪರಿಚಯಿಸಲು ಸಿದ್ಧತೆ ನಡೆಸಿದೆ. ಈಗಾಗಲೇ ಈ ಸ್ಮಾರ್ಟ್‌ಫೋನ್‌ ಸರಣಿ ಏಪ್ರಿಲ್ 26ಕ್ಕೆ ಬಿಡುಗಡೆಯಾಗಲಿದೆ ಎಂದು ಅಧಿಕೃತವಾಗಿದೆ. ಆದರೆ ಇದೀಗ ಬಿಡುಗಡೆಗೂ ಮುನ್ನವೇ ಭಾರತದಲ್ಲಿ ಈ ಸರಣಿ ಸ್ಮಾರ್ಟ್‌ಫೋನ್‌ ಬೆಲೆ ವಿವರ ಬಹಿರಂಗವಾಗಿದೆ.

ಹೌದು, ವಿವೋ X90 ಸರಣಿಯ ಸ್ಟೋರೇಜ್‌ ವೇರಿಯೆಂಟ್‌ ಹಾಗೂ ಬೆಲೆ ವಿವರಗಳು ಭಾರತದಲ್ಲಿ ಬಹಿರಂಗವಾಗಿದೆ. ಅದರಂತೆ ಈ ಸರಣಿಯಲ್ಲಿ ವಿವೋ X90 ಮತ್ತು ವಿವೋ X90 ಪ್ರೊ ಸ್ಮಾರ್ಟ್‌ಫೋನ್‌ಗಳು ಬರಲಿವೆ. ಹಾಗಾದ್ರೆ ಈ ಸರಣಿ ಸ್ಮಾರ್ಟ್‌ಫೋನ್‌ಗಳ ಬೆಲೆ ಹಾಗೂ ಸ್ಟೋರೇಜ್‌ ವಿವರ ಹೇಗಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಭಾರತದಲ್ಲಿ ಬಿಡುಗಡೆಗೂ ಮುನ್ನವೇ ಬಹಿರಂಗವಾಯ್ತು ವಿವೋ X90 ಸರಣಿ ಬೆಲೆ ವಿವರ!

ವಿವೋ X90 ಸರಣಿಯ ಬೆಲೆ ವಿವರಗಳು!

ಆನ್‌ಲೈನ್‌ನಲ್ಲಿ ಬಹಿರಂಗವಾಗಿರುವ ಮಾಹಿತಿಯ ಪ್ರಕಾರ ವಿವೋ X90 ಸ್ಮಾರ್ಟ್‌ಫೋನ್‌ ಎರಡು RAM ಮತ್ತು ಸ್ಟೋರೇಜ್ ರೂಪಾಂತರದ ಆಯ್ಕೆಗಳಲ್ಲಿ ಬಿಡುಗಡೆಯಾಗಲಿದೆ. ಇದರಲ್ಲಿ 8GB RAM + 128GB ಆಯ್ಕೆಯು 59,999ರೂ. ಬೆಲೆಯಲ್ಲಿ ಬರಲಿದೆ. ಹಾಗೆಯೇ 12GB RAM + 256GB ಸ್ಟೋರೇಜ್‌ ಆಯ್ಕೆಯು 63,999ರೂ. ಬೆಲೆಯಲ್ಲಿ ಬರಲಿದೆ ಎಂದು ವರದಿಯಾಗಿದೆ. ಇನ್ನು ವಿವೋ X90 ಪ್ರೊ ಸ್ಮಾರ್ಟ್‌ಫೋನ್‌ ಏಕೈಕ 12GB + 256GB ಸ್ಟೋರೇಜ್‌ ಆಯ್ಕೆಗೆ 84,999 ರೂ. ಬೆಲೆಯಲ್ಲಿ ಬರಲಿದೆ.

ವಿವೋ X90 ಸರಣಿ ಫೀಚರ್ಸ್‌ ನಿರೀಕ್ಷೆ ಏನು?

ವಿವೋ X90 ಮತ್ತು ವಿವೋ X90 ಪ್ರೊ ಸ್ಮಾರ್ಟ್‌ಫೋನ್‌ಗಳು 6.78 ಇಂಚಿನ OLED ಡಿಸ್‌ಪ್ಲೇಯನ್ನು ಹೊಂದಿರಲಿದೆ. ಇದು 120Hz ರಿಫ್ರೆಶ್‌ ರೇಟ್‌ ಬೆಂಬಲಿಸಲಿದ್ದು, 1,300 ನೀಟ್ಸ್‌ ಗರಿಷ್ಠ ಬ್ರೈಟ್‌ನೆಸ್‌ ಅನ್ನು ಹೊಂದಿರಲಿದೆ. ಜೊತೆಗೆ HDR10+ ಬೆಂಬಲವನ್ನು ಹೊಂದಿದೆ ಎನ್ನಲಾಗಿದೆ. ಇದರೊಂದಿಗೆ ಸ್ಮಾರ್ಟ್‌ಫೋನ್‌ IP64 ಮತ್ತು IP68-ಪ್ರಮಾಣೀಕೃತ ವಾಟರ್‌ ಪ್ರೂಫ್‌ ವ್ಯವಸ್ಥೆಯನ್ನು ಪಡೆದುಕೊಂಡಿರಲಿವೆ.

ಭಾರತದಲ್ಲಿ ಬಿಡುಗಡೆಗೂ ಮುನ್ನವೇ ಬಹಿರಂಗವಾಯ್ತು ವಿವೋ X90 ಸರಣಿ ಬೆಲೆ ವಿವರ!

ವಿವೋ X90 ಸರಣಿ ಪ್ರೊಸೆಸರ್‌ ಮತ್ತು ಬ್ಯಾಟರಿ ಬ್ಯಾಕ್‌ಅಪ್‌

ವಿವೋ X90 ಮತ್ತು ವಿವೋ X90 ಪ್ರೊ ಸ್ಮಾರ್ಟ್‌ಫೋನ್‌ ಡೈಮೆನ್ಸಿಟಿ 9200 ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಇನ್ನು ವಿವೋ X90 ಸ್ಮಾರ್ಟ್‌ಫೋನ್‌ 4,810mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಆದರೆ ವಿವೋ X90 ಪ್ರೊ ಸ್ಮಾರ್ಟ್‌ಫೋನ್‌ 4,870mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಈ ಎರಡೂ ಸ್ಮಾರ್ಟ್‌ಫೋನ್‌ಗಳು 120W ವೇಗದ ಚಾರ್ಜಿಂಗ್ ಬೆಂಬಲಿಸಲಿವೆ. ಇದರಲ್ಲಿ ವಿವೋ X90 ಪ್ರೊ ಸ್ಮಾರ್ಟ್‌ಫೋನ್‌ 50W ವೈರ್‌ಲೆಸ್ ಚಾರ್ಜಿಂಗ್‌ಗೆ ಸಹ ಹೊಂದಿಕೊಳ್ಳುತ್ತದೆ.

ವಿವೋ X90 ಸರಣಿ ಕ್ಯಾಮೆರಾ ಸೆಟ್‌ಅಪ್‌ ಏನಿರಬಹುದು?

ವಿವೋ X90 ಮತ್ತು ವಿವೋ X90 ಪ್ರೊ ಸ್ಮಾರ್ಟ್‌ಫೋನ್‌ಗಳು ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಪಡೆದುಕೊಂಡಿದೆ. ಇದರಲ್ಲಿ ವಿವೋ X90 ಸ್ಮಾರ್ಟ್‌ಫೋನ್‌ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್‌ ಸೆನ್ಸಾರ್‌, ಎರಡನೇ ಕ್ಯಾಮೆರಾ 12MP ಅಲ್ಟ್ರಾ-ವೈಡ್ ಲೆನ್ಸ್‌ ಮತ್ತು ಮೂರನೇ ಕ್ಯಾಮೆರಾ 12MP ಟೆಲಿಫೋಟೋ ಲೆನ್ಸ್ ಅನ್ನು ಒಳಗೊಂಡಿದೆ. ಆದರೆ ವಿವೋ X90 ಪ್ರೊ ಸ್ಮಾರ್ಟ್‌ಫೋನ್‌ ಮುಖ್ಯ ಕ್ಯಾಮೆರಾ 50MP ಸೆನ್ಸಾರ್‌, ಎರಡನೇ ಕ್ಯಾಮೆರಾ 50MP ಪೋರ್ಟ್ರೇಟ್ ಲೆನ್ಸ್‌ ಮತ್ತು ಮೂರನೇ ಕ್ಯಾಮೆರಾ 12MP ಅಲ್ಟ್ರಾ-ವೈಡ್ ಲೆನ್ಸ್‌ ಅನ್ನು ಪಡೆದಿರಲಿದೆ.

ಭಾರತದಲ್ಲಿ ಬಿಡುಗಡೆಗೂ ಮುನ್ನವೇ ಬಹಿರಂಗವಾಯ್ತು ವಿವೋ X90 ಸರಣಿ ಬೆಲೆ ವಿವರ!

ಇನ್ನು ಇದೇ ಸಂದರ್ಭದಲ್ಲಿ ವಿವೋ ಕಂಪೆನಿಯ ವಿವೋ V23e 5G ಸ್ಮಾರ್ಟ್‌ಫೋನ್‌ ರಿಲಯನ್ಸ್‌ ಡಿಜಿಟಲ್‌ ಆನ್‌ಲೈನ್‌ ತಾಣದಲ್ಲಿ ಈಗ 14% ರಷ್ಟು ಡಿಸ್ಕೌಂಟ್‌ ಬೆಲೆಯಲ್ಲಿ ಕಾಣಿಸಿಕೊಂಡಿದೆ. ಈ ಸ್ಮಾರ್ಟ್‌ಫೋನ್ 128GB ಸ್ಟೋರೇಜ್‌ನ ವೇರಿಯಂಟ್‌ 28,990ರೂ. ಗಳ ಬೆಲೆಯನ್ನು ಹೊಂದಿದ್ದು, ಈಗ ಗ್ರಾಹಕರು 24,999ರೂ. ಗಳ ರಿಯಾಯಿತಿ ಪ್ರೈಸ್‌ ಟ್ಯಾಗ್‌ನಲ್ಲಿ ಖರೀದಿ ಮಾಡಬಹುದಾಗಿದೆ.

Best Mobiles in India

English summary
Vivo X90 series Price Leaked Ahead Of Launch In India: details in kannada
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+