ಬಹು ನಿರೀಕ್ಷಿತ ವಿವೋ X90 ಸರಣಿ ಲಾಂಚ್‌ ಡೇಟ್‌ ಬಹಿರಂಗ! ಜಬರ್ದಸ್ತ್‌ ಫೀಚರ್ಸ್‌ ನಿರೀಕ್ಷೆ!

|

ಜನಪ್ರಿಯ ಸ್ಮಾರ್ಟ್‌ಫೋನ್‌ ತಯಾರಕ ಕಂಪೆನಿಗಳಲ್ಲಿ ವಿವೋ ಕೂಡ ಒಂದಾಗಿದೆ. ವಿವೋ ಕಂಪೆನಿಯ ಸ್ಮಾರ್ಟ್‌ಫೋನ್‌ಗಳಿಗೆ ಮಾರುಕಟ್ಟೆಯಲ್ಲಿ ಭಾರಿ ಬೇಡಿಕೆಯಿದೆ. ಸ್ಟೈಲಿಶ್‌ ಲುಕ್‌ ಹಾಗೂ ಆಕರ್ಷಕ ಕ್ಯಾಮೆರಾ ಫೀಚರ್ಸ್‌ಗಳ ಕಾರಣಕ್ಕೆ ವಿವೋ ಕಂಪೆನಿ ಫೋನ್‌ಗಳು ಹೆಸರುವಾಸಿಯಾಗಿವೆ. ಸದ್ಯ ಇದೀಗ ವಿವೋ ಕಂಪೆನಿ ತನ್ನ ಬಹು ನಿರೀಕ್ಷಿತ ವಿವೋ X90 ಸರಣಿ ಬಿಡುಗಡೆಗೆ ತಯಾರಿ ನಡೆಸಿದೆ. ಈ ಸ್ಮಾರ್ಟ್‌ಫೋನ್‌ ಸರಣಿ ಬಿಡುಗಡೆ ದಿನಾಂಕವನ್ನು ವಿವೋ ಕಂಪೆನಿ ಇದೀಗ ಅಧಿಕೃತಗೊಳಿಸಿದೆ.

ಕಂಪೆನಿಯ

ಹೌದು, ವಿವೋ ಕಂಪೆನಿಯ ವಿವೋ X90 ಸರಣಿ ಇದೇ ನವೆಂಬರ್‌ 22ಕ್ಕೆ ಅಧಿಕೃತವಾಗಿ ಬಿಡುಗಡೆಯಾಗಲಿದೆ. ಇದೇ ಸಂದರ್ಭದಲ್ಲಿ ಈ ಸ್ಮಾರ್ಟ್‌ಫೋನ್‌ RAM ಮತ್ತು ಸ್ಟೋರೇಜ್‌ ಆಯ್ಕೆಗಳು ಬಹಿರಂಗಗೊಳಿಸಲಾಗಿದೆ. ಇದಲ್ಲದೆ ಈ ಸರಣಿಯ ಸ್ಮಾರ್ಟ್‌ಫೋನ್‌ಗಳ ಫೀಚರ್ಸ್‌ ಕೂಡ ಬಹಿರಂಗವಾಗಿದೆ. ಹಾಗಾದ್ರೆ ವಿವೋ X90 ಸರಣಿ ಸ್ಮಾರ್ಟ್‌ಫೋನ್‌ ಸ್ಟೋರೇಜ್‌ ಆಯ್ಕೆಗಳು ಹೇಗಿರಲಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ವಿವೋ X90 ಸರಣಿ ಲಾಂಚ್‌ ಡೇಟ್‌ ಫಿಕ್ಸ್‌!

ವಿವೋ X90 ಸರಣಿ ಲಾಂಚ್‌ ಡೇಟ್‌ ಫಿಕ್ಸ್‌!

ವಿವೋ ತನ್ನ ಮುಂಬರುವ ಸ್ಮಾರ್ಟ್‌ಫೋನ್ ವಿವೋ X90 ಸರಣಿ ಬಿಡುಗಡೆ ದಿನಾಂಕವನ್ನು ಅಧಿಕೃತಗೊಳಿಸಿದೆ. ಈ ಮೂಲಕ ಸಾಕಷ್ಟು ನಿರೀಕ್ಷೆ ಹುಟ್ಟುಹಾಕಿರುವ ಸ್ಮಾರ್ಟ್‌ಫೋನ್‌ ಸರಣಿಯು ಮಾರುಕಟ್ಟೆಗೆ ಎಂಟ್ರಿ ಕೊಡುವ ಸಮಯ ಬಂದಿದೆ. ಇದೇ ಸಮಯದಲ್ಲಿ ಈ ಸ್ಮಾರ್ಟ್‌ಫೋನ್‌ ಸರಣಿಯ ಸ್ಟೊರೇಜ್‌ ಆಯ್ಕೆಗಳು ಕೂಡ ಬಹಿರಂಗವಾಗಿದೆ. ಇನ್ನು ವಿವೋ X90 ಸರಣಿಯು ವಿವೋ X80 ಸರಣಿಯ ಉತ್ತರಾಧಿಕಾರಿಯಾಗಿದೆ. ಈ ಸರಣಿಯಲ್ಲಿ ವಿವೋ X90, ವಿವೋ X90 ಪ್ರೊ ಮತ್ತು ವಿವೋ X90 ಪ್ರೊ+ ಫೋನ್‌ಗಳು ಬರಲಿವೆ ಎಂದು ನಿರೀಕ್ಷಿಸಲಾಗಿದೆ.

ವಿವೋ X90 ಸರಣಿಯ ಸ್ಟೊರೇಜ್‌ ಆಯ್ಕೆಗಳು

ವಿವೋ X90 ಸರಣಿಯ ಸ್ಟೊರೇಜ್‌ ಆಯ್ಕೆಗಳು

ಆನ್‌ಲೈನ್‌ನಲ್ಲಿ ಬಹಿರಂಗವಾಗಿರುವ ಮಾಹಿತಿಯ ಪ್ರಕಾರ ವಿವೋ X90 ಸರಣಿ ಸ್ಮಾರ್ಟ್‌ಫೋನ್‌ಗಳಲ್ಲಿ ವಿವೋ X90 ಸ್ಮಾರ್ಟ್‌ಫೋನ್‌ 8GB RAM + 128GB, 8GB RAM + 256GB, 12GB RAM + 256GB, 12GB RAM + 512GB, ಸ್ಟೋರೇಜ್‌ ಆಯ್ಕೆಯಗಳಲ್ಲಿ ಬರಲಿದೆ ಎನ್ನಲಾಗಿದೆ. ಈ ಸ್ಮಾರ್ಟ್‌ಫೋನ್‌ ಕೆಂಪು, ಐಸ್ ನೀಲಿ ಮತ್ತು ಕಪ್ಪು ಬಣ್ಣದ ಆಯ್ಕೆಗಳಲ್ಲಿ ಲಭ್ಯವಾಗುವ ನಿರೀಕ್ಷೆಯಿದೆ.

ವಿವೋ X90 ಪ್ರೊ

ವಿವೋ X90 ಪ್ರೊ

ವಿವೋ X90 ಪ್ರೊ ಸ್ಮಾರ್ಟ್‌ಫೋನ್‌ ಮೂರು ರೀತಿಯ ಸ್ಟೋರೇಜ್‌ ಆಯ್ಕೆಗಳಲ್ಲಿ ದೊರೆಯಲಿದೆ. ಇದರಲ್ಲಿ 8GB RAM + 256GB, 12GB RAM + 256GB, 12GB RAM + 512GB ಇಂಟರ್‌ ಸ್ಟೋರೇಜ್‌ ಆಯ್ಕೆಗಳಲ್ಲಿ ಬರಲಿದೆ ಎಂದು ಅಂದಾಜಿಸಲಾಗಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಕಪ್ಪು ಮತ್ತು ಕೆಂಪು ಬಣ್ಣದ ಆಯ್ಕೆಗಳಲ್ಲಿ ಲಭ್ಯವಾಗಲಿದೆ.

ವಿವೋ X90 ಪ್ರೊ+

ವಿವೋ X90 ಪ್ರೊ+

ವಿವೋ X90 ಪ್ರೊ+ ಸ್ಮಾರ್ಟ್‌ಫೋನ್‌ ಎರಡು ಸ್ಟೋರೇಜ್‌ ಕಾನ್ಫಿಗರೇಶನ್‌ಗಳಲ್ಲಿ ಬರಲಿದೆ ಎಂದು ಹೇಳಲಾಗಿದೆ. ಇದರಲ್ಲಿ 12GB RAM + 256GB, 12GB RAM + 512GB ಇನ್‌ಬಿಲ್ಟ್‌ ಸ್ಟೋರೇಜ್‌ ಆಯ್ಕೆಗಳಲ್ಲಿ ಬರಲಿದೆ ಎಂದು ಅಂದಾಜಿಸಲಾಗಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಕಪ್ಪು ಮತ್ತು ಕೆಂಪು ಬಣ್ಣದ ಆಯ್ಕೆಗಳಲ್ಲಿ ಲಭ್ಯವಾಗಲಿದೆ.

ಏನೆಲ್ಲಾ ಫೀಚರ್ಸ್‌ ನಿರೀಕ್ಷಿಸಲಾಗಿದೆ?

ಏನೆಲ್ಲಾ ಫೀಚರ್ಸ್‌ ನಿರೀಕ್ಷಿಸಲಾಗಿದೆ?

ವಿವೋ X90 ಸರಣಿಯ ಸ್ಮಾರ್ಟ್‌ಫೋನ್‌ಗಳು ವಿವೋ ಕಂಪೆನಿಯ ಪ್ರಮುಖ ಸ್ಮಾರ್ಟ್‌ಫೋನ್‌ ಸರಣಿ ಎನಿಸಿಕೊಂಡಿದೆ. ಈ ಸರಣಿಯ ವಿವೋ X90 ಮತ್ತು X90 ಪ್ರೊ ಸ್ಮಾರ್ಟ್‌ಫೋನ್‌ಗಳ ಫೀಚರ್ಸ್‌ಗಳ ಮೇಲೆ ಸಾಕಷ್ಟು ನಿರೀಕ್ಷೆ ಇಡಲಾಗಿದೆ. ಈ ಸ್ಮಾರ್ಟ್‌ಫೋನ್‌ಗಳು 120Hz ರಿಫ್ರೆಶ್ ರೇಟ್‌ ಬೆಂಬಲಿಸುವ ಅಮೋಲೆಡ್‌ ಡಿಸ್‌ಪ್ಲೇಯನ್ನು ಹೊಂದಿರುವ ನಿರೀಕ್ಷೆಯಿದೆ. ಇದಲ್ಲದೆ ಮೀಡಿಯಾಟೆಕ್‌ ಡೈಮೆನ್ಸಿಟಿ 9200 SoC ಪ್ರೊಸೆಸರ್‌ ವೇಗವನ್ನು ಪಡೆದಿರಲಿದೆ ಎಂದು ಅಂದಾಜಿಸಲಾಗಿದೆ.

ಸ್ಮಾರ್ಟ್‌ಫೋನ್‌ಗಳು

ಇನ್ನು ಈ ಸ್ಮಾರ್ಟ್‌ಫೋನ್‌ಗಳು ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿರಲಿದೆ ಎನ್ನಲಾಗಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್‌ ಸೆನ್ಸಾರ್‌ ಇರಲಿದೆ. ಜೊತೆಗೆ 120W ವೇಗದ ಚಾರ್ಜಿಂಗ್ ಬೆಂಬಲಿಸುವ 4,700mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿರಲಿದೆ ಎಂದು ಅಂದಾಜಿಸಲಾಗಿದೆ. ಇನ್ನುಳಿದಂತೆ ವಿವೋ X90 ಪ್ರೊ+ ಸ್ಮಾರ್ಟ್‌ಫೋನ್‌ ಫೀಚರ್ಸ್‌ಗಳ ಮೇಲೆ ಕೂಡ ಸಾಕಷ್ಟು ನಿರೀಕ್ಷೆಯನ್ನು ಇಡಲಾಗಿದೆ. ಇದೆಲ್ಲದಕ್ಕೂ ಉತ್ತರ ಇದೇ ನವೆಂಬರ್‌ 22ರಂದು ಸಿಗಲಿದೆ.

Best Mobiles in India

English summary
Vivo X90 series will officially launch November 22

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X