ಬಹು ನಿರೀಕ್ಷಿತ ವಿವೋ X90 ಸರಣಿ ಲಾಂಚ್‌! ಸ್ಟೈಲಿಶ್‌ ಲುಕ್‌, ಜಬರ್ದಸ್ತ್‌ ಫೀಚರ್ಸ್‌!

|

ವಿವೋ ಕಂಪೆನಿಯ ಬಹು ನಿರೀಕ್ಷಿತ ಸ್ಮಾರ್ಟ್‌ಫೋನ್‌ ವಿವೋ X90 ಸರಣಿ ಅಂತಿಮವಾಗಿ ಬಿಡುಗಡೆಯಾಗಿದೆ. ಪ್ರಾರಂಭದಿಂದಲೂ ಸಾಕಷ್ಟು ನಿರೀಕ್ಷೆ ಹುಟ್ಟುಹಾಕಿದ್ದ ವಿವೋ X90 ಸರಣಿ ಹಲವು ಆಕರ್ಷಕ ಫೀಚರ್ಸ್‌ಗಳ ಮೂಲಕ ಟೆಕ್‌ ವಲಯದಲ್ಲಿ ಸಂಚಲನ ಸೃಷ್ಟಿಸಿದೆ. ಇನ್ನು ವಿವೋ X90 ಸರಣಿಯಲ್ಲಿ ವಿವೋ X90, ವಿವೋ X90 ಪ್ರೊ, ವಿವೋ X90 ಪ್ಲಸ್‌ ಸ್ಮಾರ್ಟ್‌ಫೋನ್‌ಗಳನ್ನು ಪರಿಚಯಿಸಲಾಗಿದೆ. ಇದರಲ್ಲಿ ವಿವೋ X90 ಮತ್ತು ವಿವೋ X90 ಪ್ರೊ ಫೋನ್‌ಗಳು ಒಂದೇ ಮಾದರಿಯ ಪ್ರೊಸೆಸರ್‌ ವೇಗವನ್ನು ಪಡೆದುಕೊಂಡಿವೆ.

ಸ್ಮಾರ್ಟ್‌ಫೋನ್‌

ಹೌದು, ಸ್ಮಾರ್ಟ್‌ಫೋನ್‌ ಮಾರುಕಟ್ಟೆಗೆ ವಿವೋ X90 ಸರಣಿ ಎಂಟ್ರಿ ನೀಡಿದೆ. ನಿರೀಕ್ಷೆಗೆ ತಕ್ಕಂತೆ ಸ್ಮಾರ್ಟ್‌ಫೋನ್‌ ಪ್ರಿಯರಿಗೆ ಹಲವು ಅಚ್ಚರಿಯ ಫೀಚರ್ಸ್‌ಗಳನ್ನು ಹೊತ್ತು ತಂದಿದೆ. ಸ್ಟೈಲಿಶ್‌ ಲುಕ್‌, ಆಕರ್ಷಕ ಪ್ಯಾನಲ್‌, ಅದ್ದೂರಿ ಕ್ಯಾಮೆರಾ ಸೆಟ್‌ಅಪ್‌ ಮೂಲಕ ಗಮನಸೆಳೆದಿವೆ. ಈ ಸರಣಿಯ ಎಲ್ಲಾ ಮೂರು ಮಾದರಿಗಳು ಇಮೇಜ್ ಪ್ರೊಸೆಸಿಂಗ್ ಅನ್ನು ನಿರ್ವಹಿಸಲು Vivo V2 ಚಿಪ್ ಅನ್ನು ಪ್ಯಾಕ್ ಮಾಡುತ್ತವೆ. ಹಾಗಾದ್ರೆ ವಿವೋ X90 ಸರಣಿಯ ಫೋನ್‌ಗಳ ವಿಶೇಷತೆ ಏನು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತಿವಿ ಓದಿರಿ.

ವಿವೋ X90 ಸ್ಮಾರ್ಟ್‌ಫೋನ್‌

ವಿವೋ X90 ಸ್ಮಾರ್ಟ್‌ಫೋನ್‌

ವಿವೋ X90 ಸ್ಮಾರ್ಟ್‌ಫೋನ್‌ 6.78 ಇಂಚಿನ ಅಮೋಲೆಡ್‌ ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ 93.53% ಸ್ಕ್ರೀನ್‌ ಟು ಬಾಡಿ ಅನುಪಾತವನ್ನು ಹೊಂದಿದೆ. ಇದು ಆಕ್ಟಾ-ಕೋರ್ 4nm ಮೀಡಿಯಾ ಟೆಕ್ ಡೈಮೆನ್ಸಿಟಿ 9200 SoC ಪ್ರೊಸೆಸರ್‌ ವೇಗವನ್ನು ಪಡೆದುಕೊಂಡಿದ್ದು, ಆಂಡ್ರಾಯ್ಡ್‌ 13 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 12GB RAM ಮತ್ತು 512GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯವನ್ನ ಒಳಗೊಂಡಿದೆ.

ಸ್ಮಾರ್ಟ್‌ಫೋನ್‌

ಇನ್ನು ಈ ಸ್ಮಾರ್ಟ್‌ಫೋನ್‌ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50MP, ಎರಡನೇ ಕ್ಯಾಮೆರಾ 12MP 50mm ಪೋಟ್ರೇಟ್ ಕ್ಯಾಮರಾ ಮತ್ತು ಮೂರನೇ ಕ್ಯಾಮೆರಾ 12MP ಅಲ್ಟ್ರಾ-ವೈಡ್-ಆಂಗಲ್ ಕ್ಯಾಮೆರಾವನ್ನು ಹೊಂದಿದೆ. ಇದಲ್ಲದೆ 32MP ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿದೆ. ಜೊತೆಗೆ 4,810mAh ಬ್ಯಾಟರಿಯನ್ನು ಹೊಂದಿದ್ದು, 120W ವೇಗದ ಚಾರ್ಜಿಂಗ್ ಬೆಂಬಲಿಸಲಿದೆ. ಇದು ಸಿಂಗಲ್‌ ಚಾರ್ಜ್‌ನಲ್ಲಿ 22.2 ದಿನಗಳ ಸ್ಟ್ಯಾಂಡ್‌ಬೈ ಸಮಯವನ್ನು ನೀಡುತ್ತದೆ ಎನ್ನಲಾಗಿದೆ. ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, Wi-Fi 6, ಬ್ಲೂಟೂತ್ v5.3, NFC, GPS ಮತ್ತು USB ಟೈಪ್-C ಪೋರ್ಟ್ ಸೇರಿವೆ.

ವಿವೋ X90 ಪ್ರೊ ಸ್ಮಾರ್ಟ್‌ಫೋನ್‌

ವಿವೋ X90 ಪ್ರೊ ಸ್ಮಾರ್ಟ್‌ಫೋನ್‌

ವಿವೋ X90 ಪ್ರೊ ಸ್ಮಾರ್ಟ್‌ಫೋನ್‌ ಕೂಡ 6.78 ಇಂಚಿನ ಅಮೋಲೆಡ್‌ ಡಿಸ್‌ಪ್ಲೇಯನ್ನು ಹೊಂದಿದೆ. ಇದು ಆಕ್ಟಾ-ಕೋರ್ 4nm ಮೀಡಿಯಾ ಟೆಕ್ ಡೈಮೆನ್ಸಿಟಿ 9200 SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಹಾಗೆಯೇ 12GB RAM ಮತ್ತು 512GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯವನ್ನು ಪಡೆದಿದೆ. ಇನ್ನು ಫೋನ್‌ ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಪಡೆದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ Zeiss 1-ಇಂಚಿನ ಮುಖ್ಯ ಸೆನ್ಸಾರ್‌ ಹೊಂದಿದೆ. ಎರಡನೇ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್‌ ಮತ್ತು 12 ಮೆಗಾಪಿಕ್ಸೆಲ್ ಅಲ್ಟ್ರಾ ವೈಡ್- ಲೆನ್ಸ್‌ ಸೆನ್ಸಾರ್‌ ಪಡೆದಿದೆ. ಇದಲ್ಲದೆ 32 ಮೆಗಾಪಿಕ್ಸೆಲ್ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ.

ಸ್ಮಾರ್ಟ್‌ಫೋನ್‌

ವಿವೋ X90 ಪ್ರೊ ಸ್ಮಾರ್ಟ್‌ಫೋನ್‌ 4,870mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 120W ವೇಗದ ಚಾರ್ಜಿಂಗ್ ಬೆಂಬಲ ಮತ್ತು 50W ವೈರ್‌ಲೆಸ್ ಚಾರ್ಜಿಂಗ್ ಬೆಂಬಲಿಸಲಿದೆ. ಇದರ ವೇಗದ ಚಾರ್ಜಿಂಗ್ ತಂತ್ರಜ್ಞಾನವು ಕೇವಲ ಎಂಟು ನಿಮಿಷಗಳಲ್ಲಿ ಶೂನ್ಯದಿಂದ 50% ಬ್ಯಾಟರಿಯನ್ನು ಚಾರ್ಜ್‌ ಮಾಡಲಿದೆ ಎನ್ನಲಾಗಿದೆ. ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, Wi-Fi 6, ಬ್ಲೂಟೂತ್ v5.3, NFC, GPS ಮತ್ತು USB ಟೈಪ್-C ಪೋರ್ಟ್ ಸೇರಿವೆ.

ವಿವೋ X90 ಪ್ರೊ + ಸ್ಮಾರ್ಟ್‌ಫೋನ್‌

ವಿವೋ X90 ಪ್ರೊ + ಸ್ಮಾರ್ಟ್‌ಫೋನ್‌

ವಿವೋ X90 ಪ್ರೊ + ಸ್ಮಾರ್ಟ್‌ಫೋನ್‌ 6.78-ಇಂಚಿನ 2K E6 ಅಮೋಲೆಡ್‌ ಡಿಸ್‌ಪ್ಲೇ ಹೊಂದಿದೆ. ಈ ಡಿಸ್‌ಪ್ಲೇ 120Hz ರಿಫ್ರೆಶ್‌ ರೇಟ್‌ ಬೆಂಬಲಿಸಲಿದೆ. ಇದು ಸ್ನಾಪ್‌ಡ್ರಾಗನ್ 8 Gen 2 SoC ವೇಗವನ್ನು ಹೊಂದಿದ್ದು, ಆಂಡ್ರಾಯ್ಡ್‌ 13 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 12GB RAM ಮತ್ತು 512GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯವನ್ನು ಪಡೆದಿದೆ. ಈ ಸ್ಮಾರ್ಟ್‌ಫೋನ್‌ ಕ್ವಾಡ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಒಳಗೊಂಡಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ Zeiss 1-ಇಂಚಿನ ಸೆನ್ಸಾರ್‌, 50 ಮೆಗಾಪಿಕ್ಸೆಲ್ ಸೋನಿ IMX758 ಸೆನ್ಸಾರ್‌ ಸಂವೇದಕ, f/2 ಜೊತೆಗೆ 48-ಮೆಗಾಪಿಕ್ಸೆಲ್ ಅಲ್ಟ್ರಾ-ವೈಡ್ ಲೆನ್ಸ್‌ ಹಾಗೂ 64-ಮೆಗಾಪಿಕ್ಸೆಲ್ ಪೆರಿಸ್ಕೋಪ್ ಟೆಲಿಫೋಟೋ ಲೆನ್ಸ್‌ ಸಾಮರ್ಥ್ಯದ ನಾಲ್ಕನೇ ಕ್ಯಾಮೆರಾ ಒಳಗೊಂಡಿದೆ. ಇದಲ್ಲದೆ 32 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ.

ಸ್ಮಾರ್ಟ್‌ಫೋನ್‌

ಈ ಸ್ಮಾರ್ಟ್‌ಫೋನ್‌ 4,700mAh ಬ್ಯಾಟರಿಯನ್ನು ಹೊಂದಿದ್ದು, 80W ವೇಗದ ಚಾರ್ಜಿಂಗ್ ಬೆಂಬಲವನ್ನು ಹೊಂದಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, Wi-Fi 6, ಬ್ಲೂಟೂತ್ v5.3, NFC, OTG, ಮತ್ತು USB ಟೈಪ್-C ಪೋರ್ಟ್ ಸೇರಿವೆ. ಇದಲ್ಲದೆ ಅಕ್ಸಿಲೆರೊಮೀಟರ್, ಆಂಬಿಯೆಂಟ್ ಲೈಟ್ ಸೆನ್ಸರ್, ಪ್ರಾಕ್ಸಿಮಿಟಿ ಸೆನ್ಸಾರ್‌, ಗೈರೊಸ್ಕೋಪ್, ಎಲೆಕ್ಟ್ರಾನಿಕ್ ದಿಕ್ಸೂಚಿ, ಲೇಸರ್ ಫೋಕಸ್ ಸೆನ್ಸಾರ್ ಅನ್ನು ಹೊಂದಿದೆ. ಇದು ಧೂಳು ಮತ್ತು ನೀರಿನ ಪ್ರತಿರೋಧಕ್ಕಾಗಿ IP68-ರೇಟೆಡ್ ನಿರ್ಮಾಣವನ್ನು ಹೊಂದಿದೆ.

ಬೆಲೆ ಮತ್ತು ಲಭ್ಯತೆ

ಬೆಲೆ ಮತ್ತು ಲಭ್ಯತೆ

ವಿವೋ X90 ಸ್ಮಾರ್ಟ್‌ಫೋನ್‌ ಆರಂಭಿಕ ಬೆಲೆ CNY 3,699 (ಸುಮಾರು 42,000ರೂ) ನಿಂದ ಪ್ರಾರಂಭವಾಗುತ್ತದೆ.
ವಿವೋ X90 ಪ್ರೊ ಸ್ಮಾರ್ಟ್‌ಫೋನ್‌ ಆರಂಭಿಕ ಬೆಲೆ CNY 4,999 (ಅಂದಾಜು 57,000ರೂ) ಆಗಿದೆ.
ವಿವೋ X90 ಪ್ರೊ+ ಸ್ಮಾರ್ಟ್‌ಫೋನ್‌ ಆರಂಭಿಕ ಬೆಲೆ CNY 6,499 (ಸುಮಾರು 74,000ರೂ) ಆಗಿದೆ.
ಈ ಸ್ಮಾರ್ಟ್‌ಫೋನ್‌ಗಳು ಪ್ರಸ್ತುತ ಚೀನಾದಲ್ಲಿ ಬಿಡುಗಡೆಯಾಗಿದ್ದು, ಮುಂದಿನ ದಿನಗಳಲ್ಲಿ ಜಾಗತಿಕವಾಗಿ ಬಿಡುಗಡೆಯಾಗುವ ಸಾದ್ಯತೆಯಿದೆ.

Best Mobiles in India

English summary
Vivo X90 Series With 32-Megapixel Selfie Camera Launched

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X