ವಿವೋ ಸಂಸ್ಥೆಯ ಈ ಫೋನ್‌ ಈಗ ಅಗ್ಗದ ಬೆಲೆಗೆ ಲಭ್ಯ!..ಭಾರೀ ಬೆಲೆ ಇಳಿಕೆ!

|

ವಿವೋ ಕಂಪೆನಿ ಭಿನ್ನ ಪ್ರೈಸ್‌ ಟ್ಯಾಗ್‌ನಲ್ಲಿ ಫೋನ್‌ಗಳನ್ನು ಪರಿಚಯಿಸಿ ಸೈ ಎನಿಸಿಕೊಂಡಿದೆ. ಅವುಗಳಲ್ಲಿ ಎಂಟ್ರಿ ಲೆವೆಲ್‌ ಮಾದರಿಯಲ್ಲಿ ಬಿಡುಗಡೆ ಆಗಿದ್ದ ವಿವೋ Y01 ಸ್ಮಾರ್ಟ್‌ಫೋನ್‌ ತನ್ನ ವರ್ಗದಲ್ಲೇ ಉತ್ತಮ ಫೀಚರ್ಸ್‌ನಿಂದ ಗಮನ ಸೆಳೆದಿತ್ತು. ಈ ಫೋನ್ ಇದೀಗ ಭರ್ಜರಿ ಬೆಲೆ ಇಳಿಕೆ ಪಡೆದಿದ್ದು, ಇದೀಗ ಗ್ರಾಹಕರು ಫೋನಿನತ್ತ ಮತ್ತೆ ತಿರುಗಿ ನೋಡುವಂತೆ ಆಗಿದೆ. ಇನ್ನು ಈ ಫೋನ್ ಮೀಡಿಯಾ ಟೆಕ್‌ ಹಿಲಿಯೋ G96 4G SoC ಪ್ರೊಸೆಸರ್‌ ನಲ್ಲಿ ಕಾರ್ಯ ನಿರ್ವಹಿಸುತ್ತದೆ.

ವಿವೋ Y01

ಹೌದು, ಜನಪ್ರಿಯ ಇ ಕಾಮರ್ಸ್‌ ಪ್ಲಾಟ್‌ಫಾರ್ಮ್‌ ಅಮೆಜಾನ್ ನಲ್ಲಿ ವಿವೋ ಕಂಪೆನಿಯ ವಿವೋ Y01 ಸ್ಮಾರ್ಟ್‌ಫೋನ್‌ 2 GB RAM + 32 GB ವೇರಿಯಂಟ್‌ ಬೆಲೆಯಲ್ಲಿ ಈಗ 38% ರಿಯಾಯಿತಿ ಪಡೆದಿದ್ದು, 7,999 ರೂ. ಬೆಲೆಯಲ್ಲಿ ಕಾಣಿಸಿಕೊಂಡಿದೆ. ಈ ಪೋನಿನ ದರವು 12,999 ರೂ. ಆಗಿತ್ತು. ಹಾಗೆಯೇ ಕೆಲವು ಆಯ್ದ ಬ್ಯಾಂಕ್‌ಗಳಿಂದ ರಿಯಾಯಿತಿ ಹಾಗೂ ಇಎಮ್‌ಐ ಸೌಲಭ್ಯದ ಆಯ್ಕೆಗಳು ಸಹ ಗ್ರಾಹಕರಿಗೆ ಲಭ್ಯವಾಗಲಿವೆ. ಇನ್ನು ಈ ಫೋನ್ ಎಲಿಗಂಟ್ ಬ್ಲ್ಯಾಕ್ ಮತ್ತು ಸಫೈರ್ ಬ್ಲೂ ಕಲರ್‌ ಆಯ್ಕೆ ಪಡೆದಿದೆ. ಹಾಗಾದರೇವಿವೋ Y01 ಸ್ಮಾರ್ಟ್‌ಫೋನಿನ ಇತರೆ ಫೀಚರ್ಸ್‌ಗಳೆನು ಎಂಬುದನ್ನು ಮುಂದೆ ನೋಡೋಣ ಬನ್ನಿರಿ.

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ

ವಿವೋ Y01 ಸ್ಮಾರ್ಟ್‌ಫೋನ್‌ 6.51 ಇಂಚಿನ HD + ಡಿಸ್‌ಪ್ಲೇ ಯನ್ನು ಹೊಂದಿದೆ. ಈ ಡಿಸ್‌ಪ್ಲೇ 720 x 1600 ಪಿಕ್ಸೆಲ್ ರೆಸಲ್ಯೂಶನ್ ಸಾಮರ್ಥ್ಯವನ್ನು ಹೊಂದಿದೆ. ಇನ್ನು ಈ ಡಿಸ್‌ಪ್ಲೇ ಐ ಪ್ರೊಟೆಕ್ಷನ್ ಮೋಡ್‌ ಅನ್ನು ಹೊಂದಿದೆ. ಈ ಸ್ಮಾರ್ಟ್‌ಫೋನ್‌ ಸ್ಕ್ರೀನ್‌ 8.28 ಮಿಮೀ ಥಿಕ್‌ನೆಸ್‌ ಹೊಂದಿರುವ ಪ್ಲಾಸ್ಟಿಕ್‌ನಿಂದ ಸುತ್ತುವರಿಯಲ್ಪಟ್ಟಿದೆ. ಜೊತೆಗೆ ಫೇಸ್ ವೇಕ್ ಅನ್ನು ಹೊಂದಿದೆ.

ಪ್ರೊಸೆಸರ್‌ ಸಾಮರ್ಥ್ಯ ಎಷ್ಟಿದೆ?

ಪ್ರೊಸೆಸರ್‌ ಸಾಮರ್ಥ್ಯ ಎಷ್ಟಿದೆ?

ವಿವೋ Y01 ಸ್ಮಾರ್ಟ್‌ಫೋನ್‌ ಮೀಡಿಯಾ ಟೆಕ್‌ ಹಿಲಿಯೋ P35 ಪ್ರೊಸೆಸರ್ ಬಲವನ್ನು ಹೊಂದಿದ್ದು, ಮಲ್ಟಿ ಟರ್ಬೊ 3.0 ನಿಂದ ನಡೆಸಲಾಗುತ್ತಿದೆ. ಇದು ಆಂಡ್ರಾಯ್ಡ್‌ 11 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 2 GB RAM ಮತ್ತು 32 GB ಇಂಟರ್‌ ಸ್ಟೋರೇಜ್‌ ಬಲವನ್ನು ಒಳಗೊಂಡಿದೆ. ಇದಲ್ಲದೆ ಮೈಕ್ರೋ SD ಕಾರ್ಡ್ ಬೆಂಬಲದೊಂದಿಗೆ 1 TB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಬಹುದಾಗಿದೆ.

ಸಿಂಗಲ್‌ ರಿಯರ್‌ ಕ್ಯಾಮೆರಾ ರಚನೆ

ಸಿಂಗಲ್‌ ರಿಯರ್‌ ಕ್ಯಾಮೆರಾ ರಚನೆ

ವಿವೋ Y01 ಸ್ಮಾರ್ಟ್‌ಫೋನ್‌ 8 ಮೆಗಾ ಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸಿಂಗಲ್‌ ರಿಯರ್‌ ಕ್ಯಾಮೆರಾ ಸೆಟಪ್‌ ಅನ್ನು ಹೊಂದಿದೆ. ಇದಲ್ಲದೆ 5 ಮೆಗಾ ಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿದೆ. ಇದು ಮುಖದ ಸೌಂದರ್ಯಕ್ಕೆ ಸಮಯ ನಷ್ಟದಂತಹ ವೈಶಿಷ್ಟ್ಯಗಳನ್ನು ಬೆಂಬಲಿಸುತ್ತದೆ. ಬೇಸಿಕ್ ಎಡಿಟಿಂಗ್ ಆಯ್ಕೆಗಳು ಸಹ ಇವೆ.

ಬ್ಯಾಟರಿ ಮತ್ತು ಇತರೆ ಸೌಲಭ್ಯಗಳು

ಬ್ಯಾಟರಿ ಮತ್ತು ಇತರೆ ಸೌಲಭ್ಯಗಳು

ವಿವೋ Y01 ಸ್ಮಾರ್ಟ್‌ಫೋನ್‌ 5000 mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದಕ್ಕೆ ಪೂರಕವಾಗಿ ಉತ್ತಮ ಚಾರ್ಜಿಂಗ್ ಸೌಲಭ್ಯ ಸಹ ನೀಡಿದೆ. ಇದು ಯಾವುದೇ ಗ್ಲಿಚ್ ಇಲ್ಲದೆ ಗಂಟೆಗಳ ಬಳಕೆಯನ್ನು ನೀಡುತ್ತದೆ ಎಂದು ಕಂಪನಿ ಹೇಳಿಕೊಂಡಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಹಾಟ್‌ಸ್ಪಾಟ್‌, ಬ್ಲೂಟೂತ್‌, ವೈಫೈ ಅನ್ನು ಬೆಂಬಲಿಸಲಿದೆ.

ಮೆಮೊರಿ ಹಾಗೂ ಕಲರ್ ಆಯ್ಕೆ

ಮೆಮೊರಿ ಹಾಗೂ ಕಲರ್ ಆಯ್ಕೆ

ವಿವೋ Y01 ಸ್ಮಾರ್ಟ್‌ಫೋನ್‌ 2 GB RAM ಮತ್ತು 32 GB ಇಂಟರ್‌ ಸ್ಟೋರೇಜ್‌ ಆಯ್ಕೆಯಲ್ಲಿ ದೊರೆಯಲಿದೆ. ಇದು ಎಲಿಗಂಟ್ ಬ್ಲ್ಯಾಕ್ ಮತ್ತು ಸಫೈರ್ ಬ್ಲೂ ಕಲರ್‌ ಆಯ್ಕೆಗಳಲ್ಲಿ ಲಭ್ಯವಾಗಲಿದೆ.

Best Mobiles in India

English summary
Vivo y01 smartphone available at big discount price on amazon.

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X