Just In
Don't Miss
- Finance
ಅತೀ ಕಡಿಮೆ ಬಡ್ಡಿದರದಲ್ಲಿ ವೈಯಕ್ತಿಕ ಸಾಲ ನೀಡುತ್ತೆ ಈ ಬ್ಯಾಂಕುಗಳು!
- Sports
1983ರ ವಿಶ್ವಕಪ್ ವಿಜಯೋತ್ಸವಕ್ಕೆ 39 ವರ್ಷಗಳು: ಇಡೀ ದೇಶಕ್ಕೆ ಸ್ಫೂರ್ತಿ ನೀಡಿದ್ದ ಕಪಿಲ್ ದೇವ್ ತಂಡ!
- News
ಬಾಗಲಕೋಟೆ ಸರ್ಕಾರಿ ಆಸ್ಪತ್ರೆಗೆ ಮುಡಿಗೆ 'ಲಕ್ಷ್ಯ' ಪ್ರಶಸ್ತಿ ಗರಿ
- Movies
ಹಿಟ್ಲರ್ ಕಲ್ಯಾಣ: ತನ್ನ ತಾಯಿಗೆ ಪಾಠ ಕಲಿಸುತ್ತಾಳ ಲೀಲಾ?
- Education
BIMS Belagavi Recruitment 2022 : 10 ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ
- Automobiles
ಹೇಗಿವೆ ಗೊತ್ತಾ ರಾಯಲ್ ಎನ್ಫೀಲ್ಡ್ ಕಸ್ಟಮೈಸ್ಡ್ ಬೈಕ್ಗಳು: ಅಭಿಮಾನಿಗಳಿಗಾಗಿ 4 ಮಾದರಿಗಳ ಪ್ರದರ್ಶನ
- Lifestyle
ಪುರುಷರಲ್ಲಿ ಲೈಂಗಿಕ ಶಕ್ತಿಯ ಸಮಸ್ಯೆಗೆ ಈ ಹಣ್ಣುಗಳೇ ಪವರ್ಫುಲ್ ಮದ್ದು
- Travel
ನಿಮ್ಮ ಮುಂದಿನ ಪ್ರವಾಸದ ಪಟ್ಟಿಯಲ್ಲಿ ಕರ್ನಾಟಕದ ಬಾದಾಮಿ ಯಾಕಿರಬೇಕು? ಇಲ್ಲಿದೆ ಕಾರಣ!
ಅಗ್ಗದ ಬೆಲೆಯಲ್ಲಿ ಭಾರತಕ್ಕೆ ಎಂಟ್ರಿ ಕೊಟ್ಟ ವಿವೋ Y01 ಸ್ಮಾರ್ಟ್ಫೋನ್!
ಭಾರತದ ಮಾರುಕಟ್ಟೆಯಲ್ಲಿ ವಿವೋ ಕಂಪೆನಿ ಹೊಸ ವಿವೋ Y01 ಸ್ಮಾರ್ಟ್ಫೋನ್ ಲಾಂಚ್ ಮಾಡಿದೆ. ಈ ಸ್ಮಾರ್ಟ್ಫೋನ್ ಬಜೆಟ್ ಬೆಲೆಯಲ್ಲಿ ಲಭ್ಯವಾಗಲಿದೆ. ಇದು ವಾಟರ್-ಡ್ರಾಪ್ ನಾಚ್ ಡಿಸ್ಪ್ಲೇ ವಿನ್ಯಾಸವನ್ನು ಒಳಗೊಂಡಿದೆ. ಈ ಫೋನ್ ಸಿಂಗಲ್ ರಿಯರ್ ಕ್ಯಾಮೆರಾವನ್ನು ಹೊಂದಿದ್ದು, ಸೆಲ್ಫಿ ಕ್ಯಾಮೆರಾವನ್ನು ಕೂಡ ಪಡೆದುಕೊಂಡಿದೆ. ಈ ಫೋನ್ ಮೀಡಿಯಾ ಟೆಕ್ ಹಿಲಿಯೋ P35 ಪ್ರೊಸೆಸರ್ ಬಲವನ್ನು ಹೊಂದಿದೆ. ಜೊತೆಗೆ 5000 mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿದೆ.

ಹೌದು, ವಿವೋ ಕಂಪೆನಿ ಭಾರತದಲ್ಲಿ ಹೊಸ ವಿವೋ Y01 ಸ್ಮಾರ್ಟ್ಫೋನ್ ಬಿಡುಗಡೆ ಮಾಡಿದೆ. ಈ ಸ್ಮಾರ್ಟ್ಫೋನ್ ಐ ಪ್ರೊಟೆಕ್ಷನ್ ಮೋಡ್ ಒಳಗೊಂಡಿರುವ ಡಿಸ್ಪ್ಲೇಯನ್ನು ಹೊಂದಿದೆ. ಈ ಫೋನ್ 8,999ರೂ. ಬೆಲೆಯಲ್ಲಿ ದೊರೆಯಲಿದೆ. ಇದು ಎಲಿಗಂಟ್ ಬ್ಲ್ಯಾಕ್ ಮತ್ತು ಸಫೈರ್ ಬ್ಲೂ ಕಲರ್ ಆಯ್ಕೆಗಳಲ್ಲಿ ಬರಲಿದ್ದು, ವಿವೋ ಇಂಡಿಯಾ ಇ-ಸ್ಟೋರ್ನಲ್ಲಿ ಮತ್ತು ಎಲ್ಲಾ ಪಾಲುದಾರ ಚಿಲ್ಲರೆ ಅಂಗಡಿಗಳಲ್ಲಿ ಲಭ್ಯವಾಗಲಿದೆ. ಇನ್ನುಳಿದಂತೆ ಈ ಸ್ಮಾರ್ಟ್ಫೋನ್ ವಿಶೇಷತೆ ಏನು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತಿವಿ ಓದಿರಿ.

ಡಿಸ್ಪ್ಲೇ ರಚನೆ ಮತ್ತು ವಿನ್ಯಾಸ
ವಿವೋ Y01 ಸ್ಮಾರ್ಟ್ಫೋನ್ 6.51 ಇಂಚಿನ HD+ ಡಿಸ್ಪ್ಲೇಯನ್ನು ಹೊಂದಿದೆ. ಈ ಡಿಸ್ಪ್ಲೇ 720x1600 ಪಿಕ್ಸೆಲ್ ರೆಸಲ್ಯೂಶನ್ ಸಾಮರ್ಥ್ಯವನ್ನು ಹೊಂದಿದೆ. ಇನ್ನು ಈ ಡಿಸ್ಪ್ಲೇ ಐ ಪ್ರೊಟೆಕ್ಷನ್ ಮೋಡ್ ಅನ್ನು ಹೊಂದಿದೆ. ಈ ಸ್ಮಾರ್ಟ್ಫೋನ್ ಸ್ಕ್ರೀನ್ 8.28 ಮಿಮೀ ಥಿಕ್ನೆಸ್ ಹೊಂದಿರುವ ಪ್ಲಾಸ್ಟಿಕ್ನಿಂದ ಸುತ್ತುವರಿಯಲ್ಪಟ್ಟಿದೆ. ಜೊತೆಗೆ ಫೇಸ್ ವೇಕ್ ಅನ್ನು ಹೊಂದಿದೆ.

ಪ್ರೊಸೆಸರ್ ಸಾಮರ್ಥ್ಯ
ವಿವೋ Y01 ಸ್ಮಾರ್ಟ್ಫೋನ್ ಮೀಡಿಯಾಟೆಕ್ ಹಿಲಿಯೋ P35 ಪ್ರೊಸೆಸರ್ ಬಲವನ್ನು ಹೊಂದಿದ್ದು, ಮಲ್ಟಿ-ಟರ್ಬೊ 3.0 ನಿಂದ ನಡೆಸಲಾಗುತ್ತಿದೆ. ಇದು ಆಂಡ್ರಾಯ್ಡ್ 11 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 2GB RAM ಮತ್ತು 32GB ಇಂಟರ್ ಸ್ಟೋರೇಜ್ ಬಲವನ್ನು ಒಳಗೊಂಡಿದೆ. ಇದಲ್ಲದೆ ಮೈಕ್ರೋ SD ಕಾರ್ಡ್ ಬೆಂಬಲದೊಂದಿಗೆ 1TBವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಬಹುದಾಗಿದೆ.

ಕ್ಯಾಮೆರಾ ವಿಶೇಷ
ವಿವೋ Y01 ಸ್ಮಾರ್ಟ್ಫೋನ್ 8 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸಿಂಗಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದಲ್ಲದೆ 5 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿದೆ. ಇದು ಮುಖದ ಸೌಂದರ್ಯಕ್ಕೆ ಸಮಯ-ನಷ್ಟದಂತಹ ವೈಶಿಷ್ಟ್ಯಗಳನ್ನು ಬೆಂಬಲಿಸುತ್ತದೆ.

ಬ್ಯಾಟರಿ ಮತ್ತು ಇತರೆ
ಈ ಸ್ಮಾರ್ಟ್ಫೋನ್ 5000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು ಯಾವುದೇ ಗ್ಲಿಚ್ ಇಲ್ಲದೆ ಗಂಟೆಗಳ ಬಳಕೆಯನ್ನು ನೀಡುತ್ತದೆ ಎಂದು ಕಂಪನಿ ಹೇಳಿಕೊಂಡಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಹಾಟ್ಸ್ಪಾಟ್, ಬ್ಲೂಟೂತ್, ವೈಫೈ ಅನ್ನು ಬೆಂಬಲಿಸಲಿದೆ.

ಬೆಲೆ ಮತ್ತು ಲಭ್ಯತೆ
ವಿವೋ Y01 ಸ್ಮಾರ್ಟ್ಫೋನ್ ಭಾರತದಲ್ಲಿ 8,999ರೂ. ಬೆಲೆಯಲ್ಲಿ ದೊರೆಯಲಿದೆ. ಇದು ಎಲಿಗಂಟ್ ಬ್ಲ್ಯಾಕ್ ಮತ್ತು ಸಫೈರ್ ಬ್ಲೂ ಕಲರ್ ಆಯ್ಕೆಗಳಲ್ಲಿ ಲಭ್ಯವಾಗಲಿದೆ.

ಇನ್ನು ವಿವೋ ಕಂಪೆನಿ ಇತ್ತೀಚಿಗೆ ಭಾರತದಲ್ಲಿ ವಿವೋ Y15c ಸ್ಮಾರ್ಟ್ಫೋನ್ ಬಿಡುಗಡೆ ಮಾಡಿದೆ. ಈ ಸ್ಮಾರ್ಟ್ಫೋನ್ 6.55 ಇಂಚಿನ ಹೆಚ್ಡಿ ಪ್ಲಸ್ ಡಿಸ್ಪ್ಲೇ ಹೊಂದಿದೆ. ಇದು ಮಿಡಿಯಾಟೆಕ್ ಹಿಲಿಯೋ P35 SoC ಪ್ರೊಸೆಸರ್ ಬಲವನ್ನು ಪಡೆದುಕೊಂಡಿದೆ. ಹಾಗೆಯೇ 3GB RAM ಮತ್ತು 32 GB ಹಾಗೂ 64GB ಇಂಟರ್ ಸ್ಟೋರೇಜ್ ಸಾಮರ್ಥ್ಯವನ್ನು ಹೊಂದಿದೆ. ಇದಲ್ಲದೆ ಮೈಕ್ರೋ SD ಕಾರ್ಡ್ ಬೆಂಬಲದೊಂದಿಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಬಹುದಾಗಿದೆ. ಈ ಸ್ಮಾರ್ಟ್ಫೋನ್ ಡ್ಯುಯಲ್ ರಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 13ಮೆಗಾಪಿಕ್ಸೆಲ್ ಸೆನ್ಸಾರ್ F/2.2 ಲೆನ್ಸ್ ಅನ್ನು ಹೊಂದಿದೆ.
-
54,535
-
1,19,900
-
54,999
-
86,999
-
49,975
-
49,990
-
20,999
-
1,04,999
-
44,999
-
64,999
-
20,699
-
49,999
-
11,499
-
54,999
-
7,999
-
8,980
-
17,091
-
10,999
-
34,999
-
39,600
-
25,750
-
33,590
-
27,760
-
44,425
-
13,780
-
1,25,000
-
45,990
-
1,35,000
-
82,999
-
17,999