ವಿವೋದಿಂದ ಹೊಸ ಎಂಟ್ರಿ ಲೆವೆಲ್‌ ಸ್ಮಾರ್ಟ್‌ಫೋನ್‌ ಲಾಂಚ್‌!..5,000mAh ಬ್ಯಾಟರಿ ಸಾಮರ್ಥ್ಯ!

|

ಮೊಬೈಲ್‌ ಮಾರುಕಟ್ಟೆಯಲ್ಲಿ ವಿವೋ ಕಂಪೆನಿಯ ಫೋನ್‌ಗಳಿಗೆ ಸಿಕ್ಕಾಪಟ್ಟೆ ಕ್ರೇಜ್‌ ಇದೆ. ವಿವೋ ಫೋನ್‌ಗಳಲ್ಲಿರುವ ಆಕರ್ಷಕ ಕ್ಯಾಮೆರಾ ಫೀಚರ್ಸ್‌ ಎಲ್ಲರ ಗಮನಸೆಳೆದಿದೆ. ಇದಕ್ಕೆ ತಕ್ಕಂತೆ ವಿವೋ ಕಂಪೆನಿ ಕೂಡ ತನ್ನ ಸ್ಮಾರ್ಟ್‌ಫೋನ್‌ಗಳಲ್ಲಿ ಕ್ಯಾಮೆರಾ ಫೀಚರ್ಸ್‌ಗಳಲ್ಲಿ ಹೊಸತನವನ್ನು ಪರಿಚಯಿಸುತ್ತಲೇ ಬಂದಿದೆ. ಸದ್ಯ ಇದೀಗ ವಿವೋ ಕಂಪೆನಿ ಹೊಸ ವಿವೋ Y01A ಸ್ಮಾರ್ಟ್‌ಫೋನ್‌ ಬಿಡುಗಡೆ ಮಾಡಿದೆ. ಈ ಸ್ಮಾರ್ಟ್‌ಫೋನ್‌ ರಿಯರ್‌ ಪ್ಯಾನಲ್‌ ಸ್ಕ್ವಾರಿಶ್ ಕ್ಯಾಮೆರಾ ಮಾಡ್ಯೂಲ್ ಹೊಂದಿರುವುದು ಪ್ರಮುಖ ಹೈಲೈಟ್‌ ಆಗಿದೆ.

ವಿವೋ

ಹೌದು, ವಿವೋ ಕಂಪೆನಿ ಹೊಸ ವಿವೋ Y01A ಸ್ಮಾರ್ಟ್‌ಫೋನ್‌ ಬಿಡುಗಡೆ ಮಾಡಿದೆ. ಇದು 6.51 ಇಂಚಿನ ಐಪಿಎಸ್‌ ಎಲ್‌ಸಿಡಿ ಡಿಸ್‌ಪ್ಲೇಯನ್ನು ಒಳಗೊಂಡಿದೆ. ಈ ಫೋನ್‌ ಮೀಡಿಯಾಟೆಕ್‌ ಹಿಲಿಯೋ P35 ಚಿಪ್‌ಸೆಟ್‌ನಲ್ಲಿ ಕಾರ್ಯನಿರ್ವಹಿಸಲಿದೆ. ವಿವೋ Y01A ಸ್ಮಾರ್ಟ್‌ಫೋನ್‌ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 10W ವೇಗದ ಚಾರ್ಜಿಂಗ್‌ ಅನ್ನು ಬೆಂಬಲಿಸಲಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್‌ ಯಾವೆಲ್ಲಾ ಫೀಚರ್ಸ್‌ಗಳನ್ನು ಒಳಗೊಂಡಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತಿವಿ ಓದಿರಿ.

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ

ವಿವೋ Y01A ಸ್ಮಾರ್ಟ್‌ಫೋನ್‌ 6.51 ಇಂಚಿನ ಹೆಚ್‌ಡಿ ಪ್ಲಸ್‌ IPS LCD ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ 720 x 1600 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್ ಸಾಮರ್ಥ್ಯವನ್ನು ಪಡೆದಿದೆ. ಇನ್ನು ಡಿಸ್‌ಪ್ಲೇ 20:9 ರಚನೆಯ ಅನುಪಾತವನ್ನು ಪಡೆದುಕೊಂಡಿದೆ. ಡಿಸ್‌ಪ್ಲೇ ಹೆಚ್ಚಿನ ರಿಫ್ರೆಶ್‌ ರೇಟ್‌ ಬೆಂಬಲಿಸುವುದಿಲ್ಲ, ಬದಲಿಗೆ ಪ್ರಮಾಣಿತ 60Hz ಸ್ಕ್ರೀನ್‌ ಅನ್ನು ನೀಡಲಿದೆ. ಇದಲ್ಲದೆ ಫೇಸ್ ಅನ್‌ಲಾಕ್ ಫೀಚರ್ಸ್‌ ಅನ್ನು ಒಳಗೊಂಡಿದೆ.

ಪ್ರೊಸೆಸರ್‌ ಬಲ ಏನು?

ಪ್ರೊಸೆಸರ್‌ ಬಲ ಏನು?

ವಿವೋ Y01A ಸ್ಮಾರ್ಟ್‌ಫೋನ್‌ ಮೀಡಿಯಾಟೆಕ್‌ ಹಿಲಿಯೋ P35 SoC ಪ್ರೊಸೆಸರ್‌ ವೇಗವನ್ನು ಪಡೆದಿದೆ. ಇದು ಆಂಡ್ರಾಯ್ಡ್‌ 11(ಗೋ ಎಡಿಷನ್‌) ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 2GB RAM ಮತ್ತು 32GB ಇಂಟರ್‌ ಸ್ಟೋರೇಜ್‌ ಅನ್ನು ಒಳಗೊಂಡಿದೆ. ಇದಲ್ಲದೆ ಮೈಕ್ರೊ ಎಸ್‌ಡಿ ಕಾರ್ಡ್ ಬಳಸಿಕೊಂಡು ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸುವುದಕ್ಕೆ ಕೂಡ ಅವಕಾಶವನ್ನು ನೀಡಲಾಗಿದೆ.

ಕ್ಯಾಮೆರಾ ಸೆಟ್‌ಅಪ್ ಏನಿದೆ?

ಕ್ಯಾಮೆರಾ ಸೆಟ್‌ಅಪ್ ಏನಿದೆ?

ವಿವೋ Y01A ಸ್ಮಾರ್ಟ್‌ಫೋನ್‌ ಹಿಂಭಾಗದಲ್ಲಿ ಸ್ಕ್ವಾರಿಶ್ ಕ್ಯಾಮೆರಾ ಮಾಡ್ಯೂಲ್ ಅನ್ನು ಹೊಂದಿದೆ. ಇದು 8 ಮೆಗಾಪಿಕ್ಸೆಲ್ ಸೆನ್ಸಾರ್‌ ಸಿಂಗಲ್‌ ರಿಯರ್‌ ಕ್ಯಾಮೆರಾ ಹೊಂದಿದೆ. ಜೊತೆಗೆ LED ಫ್ಲ್ಯಾಷ್ ಅನ್ನು ಹೊಂದಿದೆ. ಇದಲ್ಲದೆ 5 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿದೆ.

ಬ್ಯಾಟರಿ ಮತ್ತು ಇತರೆ

ಬ್ಯಾಟರಿ ಮತ್ತು ಇತರೆ

ವಿವೋ Y01A ಸ್ಮಾರ್ಟ್‌ಫೋನ್‌ 5,000mAh ಸಾಮರ್ಥ್ಯದ ಬ್ಯಾಟರಿ ಹೊಂದಿದೆ. ಇದು ಮೈಕ್ರೋ ಯುಎಸ್‌ಬಿ ಪೋರ್ಟ್ ಮೂಲಕ 10W ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 4G VoLTE, ಡ್ಯುಯಲ್-ಬ್ಯಾಂಡ್ Wi-Fi, ಬ್ಲೂಟೂತ್ 5.0, GPS ಮತ್ತು 3.5mm ಆಡಿಯೊ ಜ್ಯಾಕ್‌ ಬೆಂಬಲಿಸಲಿದೆ. ಇದಲ್ಲದೆ ಆಕ್ಸಿಲೆರೋಮೀಟರ್‌, ಪ್ರಾಕ್ಸಿಮಿಟಿ ಸೆನ್ಸಾರ್‌ ಅನ್ನು ಒಳಗೊಂಡಿದೆ.

ಬೆಲೆ ಮತ್ತು ಲಭ್ಯತೆ

ಬೆಲೆ ಮತ್ತು ಲಭ್ಯತೆ

ವಿವೋ Y01A ಸ್ಮಾರ್ಟ್‌ಫೋನ್‌ ಪ್ರಸ್ತುತ ಥೈಲ್ಯಾಂಡ್‌ನಲ್ಲಿ ಮಾತ್ರ ಬಿಡುಗಡೆಯಾಗಿದೆ. ಆದರಿಂದ ಈ ಸ್ಮಾರ್ಟ್‌ಫೋನ್‌ ಬೆಲೆ ಥೈಲ್ಯಾಂಡ್‌ನಲ್ಲಿ THB 3,999 (ಅಂದಾಜು 9,104ರೂ.)ಹೊಂದಿದೆ. ಇದು ಸಪೈರ್‌ ಬ್ಲೂ ಮತ್ತು ಎಲೆಗಂಟ್‌ ಬ್ಲ್ಯಾಕ್‌ ಕಲರ್‌ ಆಯ್ಕೆಗಳಲ್ಲಿ ಖರೀದಿಸಬಹುದಾಗಿದೆ. Y01A ಅನ್ನು ಈ ವರ್ಷದ ಜೂನ್‌ನಲ್ಲಿ BIS ಪ್ರಾಧಿಕಾರವು ಪ್ರಮಾಣೀಕರಿಸಿರುವುದರಿಂದ, ಅದನ್ನು ಸ್ವೀಕರಿಸುವ ದೇಶಗಳಲ್ಲಿ ಭಾರತವೂ ಒಂದಾಗಿರಬಹುದು. ಆದರಿಂದ ಈ ಸ್ಮಾರ್ಟ್‌ಫೋನ್‌ ಭಾರತದಲ್ಲಿ ಕೂಡ ಶೀಘ್ರದಲ್ಲೇ ಬಿಡುಗಡೆಯಾಗುವ ಸಾಧ್ಯತೆಯಿದೆ.

Best Mobiles in India

English summary
Vivo Y01A Smartphone with 5,000mAh Battery Launched

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X