Just In
Don't Miss
- News
ಟರ್ಕಿಯಲ್ಲಿ 7.8 ತೀವ್ರತೆಯ ಪ್ರಬಲ ಭೂಕಂಪ: ಅಧಿಕ ಸಾವುನೋವುಗಳ ಭೀತಿ!
- Automobiles
ಭಾರತದಲ್ಲಿ ಹೆಚ್ಚು ಪವರ್ಫುಲ್ ಆಗಿರುವ ಕಮ್ಮಿ ಬೆಲೆಯ ಕಾರುಗಳು: ಟಾಟಾದಿಂದ ಮಹೀಂದ್ರಾವರೆಗೆ...
- Movies
'ಘೋಷ್ಟ್' ಶಿವಣ್ಣನ ಜೊತೆ ವಿಜಯ್ ಸೇತುಪತಿ? ಆ ಭೇಟಿಯ ಸೀಕ್ರೆಟ್ ರಿವೀಲ್ ಆಯ್ತು!
- Sports
WIPL 2023: ಮಹಿಳಾ ಐಪಿಎಲ್ಗಾಗಿ ತನ್ನ ಕೋಚಿಂಗ್ ಬಳಗ ಪ್ರಕಟಿಸಿದ ಮುಂಬೈ ಇಂಡಿಯನ್ಸ್
- Lifestyle
Horoscope Today 6 Feb 2023: ಸೋಮವಾರ : ದ್ವಾದಶ ರಾಶಿಗಳ ರಾಶಿಫಲ ಹೇಗಿದೆ?
- Finance
ಆಧಾರ್ ಕಾರ್ಡ್ ಸಂಖ್ಯೆಯಿಂದ ನಿಮ್ಮ ಬ್ಯಾಂಕ್ ಬ್ಯಾಲೆನ್ಸ್ ಪರಿಶೀಲಿಸಿ, ಹೇಗೆ ಇಲ್ಲಿ ತಿಳಿಯಿರಿ
- Education
KVS Recruitment 2022 : ಕೇಂದ್ರೀಯ ವಿದ್ಯಾಲಯ ಸಂಗತನ್ ದಲ್ಲಿ 13404 ಹುದ್ದೆಗಳ ನೇಮಕಾತಿ
- Travel
ಯಾವುದೇ ಚಿಂತೆ ಇಲ್ಲದೆ ಸುಖಕರ ಪ್ರಯಾಣ ಅನುಭವಿಸಲು ಇಲ್ಲಿದೆ ಸಲಹೆಗಳು
ಭಾರತದಲ್ಲಿ ವಿವೋ Y02 ಫೋನ್ ಲಾಂಚ್!..ಅಚ್ಚರಿಯ ಬೆಲೆ, ಬೊಂಬಾಟ್ ಫೀಚರ್ಸ್!
ವಿವೋ ಕಂಪೆನಿಯು ಇತ್ತೀಚಿಗಷ್ಟೆ ಇಂಡೋನೇಷ್ಯಾದಲ್ಲಿ ಬಿಡುಗಡೆ ಮಾಡಿರುವ ನೂತನ ವಿವೋ Y02 (Vivo Y02) ಸ್ಮಾರ್ಟ್‌ಫೋನ್ ಎಂಟ್ರಿ ಲೆವೆಲ್ ಮಾದರಿಯಲ್ಲಿ ಗಮನ ಸೆಳೆದಿದೆ. ಸಂಸ್ಥೆಯು ಸದ್ದಿಲ್ಲದೆ ಇದೀಗ ಈ ಫೋನ್ ಅನ್ನು ಭಾರತದಲ್ಲಿ ಬಿಡುಗಡೆ ಮಾಡಿದೆ. ಅಂದಹಾಗೆ ವಿವೋ Y02 ಫೋನ್ 3GB RAM + 32GB ಸ್ಟೋರೇಜ್ ವೇರಿಯಂಟ್ ಆಯ್ಕೆ ಪಡೆದಿದ್ದು, ಎಸ್‌ಡಿ ಕಾರ್ಡ್ ಮೂಲಕ ಮೆಮೊರಿ ವಿಸ್ತರಿಸುವ ಆಯ್ಕೆ ಪಡೆದಿದೆ.

ಹೌದು, ವಿವೋ ಕಂಪನಿಯು ತನ್ನ ನೂತನ ವಿವೋ Y02 (Vivo Y02) ಫೋನ್ ಅನ್ನು ಭಾರತದಲ್ಲಿ ಬಿಡುಗಡೆ ಮಾಡಿದೆ. ಎಂಟ್ರಿ ಲೆವೆಲ್ ಮಾದರಿಯಲ್ಲಿ ಕಾಣಿಸಿಕೊಂಡಿರುವ ಈ ಫೋನ್ ಭಾರತದಲ್ಲಿ 8,999ರೂ. ಗಳ ಪ್ರೈಸ್ ಟ್ಯಾಗ್ ಅನ್ನು ಪಡೆದಿದೆ. ಇನ್ನು ಈ ಫೋನ್ ಮೀಡಿಯಾ ಟೆಕ್ ಹಿಲಿಯೋ P22 ಪ್ರೊಸೆಸರ್ ಹೊಂದಿದ್ದು, 5000 mAh ಬ್ಯಾಟರಿ ಬ್ಯಾಕ್‌ಅಪ್ ಅನ್ನು ಒಳಗೊಂಡಿದೆ.

ಇದರೊಂದಿಗೆ ವಿವೋ Y02 (Vivo Y02) ಸ್ಮಾರ್ಟ್‌ಫೋನ್ 5,000 mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 10W ವೇಗದ ಚಾರ್ಜಿಂಗ್ ಆಯ್ಕೆ ಪಡೆದಿದೆ. ಈ ಫೋನ್ ಆರ್ಚಿಡ್ ಬ್ಲೂ ಮತ್ತು ಕಾಸ್ಮಿಕ್ ಗ್ರೇ ಬಣ್ಣಗಳ ಆಯ್ಕೆಯನ್ನು ಒಳಗೊಂಡಿದೆ. ಇನ್ನುಳಿದಂತೆ ವಿವೋ Y02 (Vivo Y02) ಫೋನ್ ಇತರೆ ಯಾವೆಲ್ಲಾ ಫೀಚರ್ಸ್ ಗಳನ್ನು ಒಳಗೊಂಡಿದೆ ಎಂಬುದನ್ನು ಮುಂದೆ ತಿಳಿಯೋಣ ಬನ್ನಿರಿ.

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ
ವಿವೋ Y02 ಸ್ಮಾರ್ಟ್‌ಫೋನ್ 6.51 ಇಂಚಿನ ಫುಲ್ ಹೆಚ್‌ಡಿ ಪ್ಲಸ್ LCD ಡಿಸ್‌ಪ್ಲೇ ಯನ್ನು ಹೊಂದಿದೆ. ಇನ್ನು ಈ ಡಿಸ್‌ಪ್ಲೇ 720 × 1600 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯ ವನ್ನು ಪಡೆದುಕೊಂಡಿದೆ. ಈ ಡಿಸ್‌ಪ್ಲೇ 20:9 ಅನುಪಾತವನ್ನು ಹೊಂದಿದ್ದು, ತನ್ನ ವರ್ಗದಲ್ಲೇ ಉತ್ತಮ ರಿಫ್ರೆಶ್ ರೇಟ್ ಸಹ ಪಡೆದಿದೆ.

ಪ್ರೊಸೆಸರ್ ಕಾರ್ಯವೈಖರಿ ಏನು?
ವಿವೋ Y02 ಸ್ಮಾರ್ಟ್‌ಫೋನ್ ಮೀಡಿಯಾ ಟೆಕ್ ಹಿಲಿಯೋ P22 ಪ್ರೊಸೆಸರ್ ಬಲವನ್ನು ಪಡೆದುಕೊಂಡಿದೆ. ಇದು ಆಂಡ್ರಾಯ್ಡ್ 12 ಓಎಸ್ ನಲ್ಲಿ (ಗೋ ಎಡಿಷನ್) ಕಾರ್ಯ ನಿರ್ವಹಿಸುತ್ತದೆ. ಜೊತೆಗೆ ಈ ಫೋನ್ 2 GB ಮತ್ತು 3 GB RAM ಜೊತೆಗೆ 32 GB ಆಂತರೀಕ ಸ್ಟೋರೇಜ್ ವೇರಿಯಂಟ್ ಆಯ್ಕೆಗಳ ಪಡೆದಿದೆ.

ಕ್ಯಾಮೆರಾ ಸೆಟ್‌ಅಪ್ ಯಾವುದು?
ವಿವೋ Y02 ಸ್ಮಾರ್ಟ್‌ಫೋನ್ ಹಿಂಬದಿಯಲ್ಲಿ ಸಿಂಗಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಹೊಂದಿದ್ದು, ಅದು 8 ಮೆಗಾ ಪಿಕ್ಸಲ್ ಸೆನ್ಸಾರ್ ಸಾಮರ್ಥ್ಯದಲ್ಲಿದೆ. ಇದಲ್ಲದೆ ಮುಂಭಾಗದಲ್ಲಿ 5 ಮೆಗಾ ಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾ ವನ್ನು ಹೊಂದಿದೆ.

ಬ್ಯಾಟರಿ ಬ್ಯಾಕ್‌ಅಪ್ ಎಷ್ಟಿದೆ?
ವಿವೋ Y02 ಸ್ಮಾರ್ಟ್‌ಫೋನ್ 5,000 mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 10W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 4G LTE, Wi-Fi, ಬ್ಲೂಟೂತ್ v5.0, GPS, FM ರೇಡಿಯೋ ಮತ್ತು USB ಟೈಪ್ C ಪೋರ್ಟ್ ಸೇರಿವೆ.

ಬೆಲೆ ಮತ್ತು ಲಭ್ಯತೆ
ವಿವೋ Y02 ಫೋನ್ 2GB ಮತ್ತು 3 GB RAM ಜೊತೆಗೆ 32GB ಆಂತರೀಕ ಸ್ಟೋರೇಜ್ ವೇರಿಯಂಟ್ 8,999ರೂ. ಗಳ ಬೆಲೆಯನ್ನು ಹೊಂದಿದೆ. ಇನ್ನು ಈ ಫೋನ್ ಆರ್ಚಿಡ್ ಬ್ಲೂ ಮತ್ತು ಕಾಸ್ಮಿಕ್ ಗ್ರೇ ಬಣ್ಣಗಳ ಆಯ್ಕೆಯನ್ನು ಒಳಗೊಂಡಿದೆ.
-
54,999
-
36,599
-
39,999
-
38,990
-
1,29,900
-
79,990
-
38,900
-
18,999
-
19,300
-
69,999
-
79,900
-
1,09,999
-
1,19,900
-
21,999
-
1,29,900
-
12,999
-
44,999
-
15,999
-
7,332
-
17,091
-
29,999
-
7,999
-
8,999
-
45,835
-
77,935
-
48,030
-
29,616
-
57,999
-
12,670
-
79,470