ವಿವೋ Y02s ಸ್ಮಾರ್ಟ್‌ಫೋನ್‌ ಬಿಡುಗಡೆ! ವಿಶೇಷತೆ ಏನು?

|

ವಿವೋ ಕಂಪೆನಿಯ ಸ್ಮಾರ್ಟ್‌ಫೋನ್‌ಗಳಿಗೆ ಟೆಕ್‌ ಮಾರುಕಟ್ಟೆಯಲ್ಲಿ ವಿಶೇಷ ಸ್ಥಾನವಿದೆ. ಕ್ಯಾಮೆರಾ ಕೇಂದ್ರಿತ ಫೀಚರ್ಸ್ ಸ್ಮಾರ್ಟ್‌ಫೋನ್‌ಗಳ ಮೂಲಕ ಗ್ರಾಹಕರ ನೆಚ್ಚಿನ ಆಯ್ಕೆ ಎನಿಸಿಕೊಂಡಿದೆ. ಸದ್ಯ ಇದೀಗ ತನ್ನ ಹೊಸ ವಿವೋ Y02s ಸ್ಮಾರ್ಟ್‌ಫೋನ್‌ ಜಾಗತಿಕ ಮಾರುಕಟ್ಟೆಯಲ್ಲಿ ಅಧಿಕೃತವಾಗಿದೆ. ಈ ಸ್ಮಾರ್ಟ್‌ಫೋನ್‌ 6.51-ಇಂಚಿನ ಹಾಲೋ ಫುಲ್‌ ವ್ಯೂ ಡಿಸ್‌ಪ್ಲೇ ಹೊಂದಿದೆ. ಜೊತೆಗೆ ಈ ಸ್ಮಾರ್ಟ್‌ಫೋನ್‌ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿದೆ.

ವಿವೋ

ಹೌದು, ವಿವೋ ಕಂಪೆನಿ ತನ್ನ ಹೊಸ ವಿವೋ Y02s ಸ್ಮಾರ್ಟ್‌ಫೋನ್‌ ಬಿಡುಗಡೆ ಮಾಡಿದೆ. ಈ ಸ್ಮಾರ್ಟ್‌ಫೋನ್‌ ಮೀಡಿಯಾಟೆಕ್‌ ಹಿಲಿಯೋ P35 SoC ಪ್ರೊಸೆಸರ್‌ ಅನ್ನು ಒಳಗೊಂಡಿದೆ. ಇದು ಸಿಂಗಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿದೆ. ಈ ಫೋನ್‌ ಮಲ್ಟಿ-ಟರ್ಬೊ 5.5 ಫೀಚರ್ಸ್‌ ಅನ್ನು ಕೂಡ ಒಳಗೊಂಡಿದೆ. ಈ ಸ್ಮಾರ್ಟ್‌ಫೋನ್‌ ಫ್ಲೋರೈಟ್ ಕಪ್ಪು ಮತ್ತು ವೈಬ್ರೆಂಟ್ ಬ್ಲೂ ಕಲರ್‌ ಆಯ್ಕೆಗಳಲ್ಲಿ ಬರಲಿದೆ. ಹಾಗಾದ್ರೆ ವಿವೋ Y02s ಸ್ಮಾರ್ಟ್‌ಫೋನ್‌ ಫೀಚರ್ಸ್‌ ವಿಶೇಷತೆ ಏನು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತಿವಿ ಓದಿರಿ.

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ

ವಿವೋ Y02s ಸ್ಮಾರ್ಟ್‌ಫೋನ್‌ 6.51 ಇಂಚಿನ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇ ಹೊಂದಿದೆ. ಈ ಡಿಸ್‌ಪ್ಲೇ 720x1,600 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯವನ್ನು ಹೊಂದಿದೆ. ಇದು ಹಾಲೋ ಫುಲ್‌ ವ್ಯೂ ಐಪಿಎಸ್‌ ಎಲ್‌ಸಿಡಿ ಡಿಸ್‌ಪ್ಲೇ ಆಗಿದೆ. ಇನ್ನು ಡಿಸ್‌ಪ್ಲೇ ಐ ಪ್ರೊಟೆಕ್ಷನ್ ಮೋಡ್ ಅನ್ನು ಹೊಂದಿದ್ದು, 20: 9 ಡಿಸ್‌ಪ್ಲೇ ರಚನೆಯ ಅನುಪಾತವನ್ನು ಪಡೆದುಕೊಂಡಿದೆ.

ಪ್ರೊಸೆಸರ್‌ ಬಲ ಯಾವುದು?

ಪ್ರೊಸೆಸರ್‌ ಬಲ ಯಾವುದು?

ವಿವೋ Y02s ಸ್ಮಾರ್ಟ್‌ಫೋನ್‌ ಮೀಡಿಯಾಟೆಕ್‌ ಹಿಲಿಯೋ P35 SoC ಪ್ರೊಸೆಸರ್‌ ಬಲವನ್ನು ಪಡೆದುಕೊಂಡಿದೆ. ಇದು ಆಂಡ್ರಾಯ್ಡ್‌ 12 ಆಧಾರಿತ ಫನ್‌ಟಚ್‌ OS 12ನಲ್ಲಿ ಕಾರ್ಯನಿರ್ವಹಿಸಲಿದೆ. ಹಾಗೆಯೇ 3GB RAM ಮತ್ತು 32GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯವನ್ನು ಹೊಂದಿದೆ. ಇದಲ್ಲದೆ ಮೈಕ್ರೋ ಎಸ್‌ಡಿ ಕಾರ್ಡ್‌ ಮೂಲಕ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಬಹುದಾಗಿದೆ. ಇದು ಮಲ್ಟಿ-ಟರ್ಬೊ 5.5 ಫೀಚರ್ಸ್‌ ಅನ್ನು ಹೊಂದಿದ್ದು ತೊದಲುವಿಕೆ ಮತ್ತು ಆಟಗಳಲ್ಲಿ ವಿಳಂಬವನ್ನು ಕಡಿಮೆ ಮಾಡಲು ಬರುತ್ತದೆ.

ಕ್ಯಾಮೆರಾ ಸೆಟ್‌ಅಪ್‌ ಎಷ್ಟಿದೆ?

ಕ್ಯಾಮೆರಾ ಸೆಟ್‌ಅಪ್‌ ಎಷ್ಟಿದೆ?

ವಿವೋ Y02s ಸ್ಮಾರ್ಟ್‌ಫೋನ್‌ 8 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸಿಂಗಲ್‌ ರಿಯರ್‌ ಕ್ಯಾಮೆರಾವನ್ನು ಹೊಂದಿದೆ. ಇದು LED ಫ್ಲ್ಯಾಷ್‌ನೊಂದಿಗೆ ಜೋಡಿಸಲ್ಪಟ್ಟಿದೆ. ಇದಲ್ಲದೆ 5 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿದೆ.

ಬ್ಯಾಟರಿ ಮತ್ತು ಇತರೆ

ಬ್ಯಾಟರಿ ಮತ್ತು ಇತರೆ

ವಿವೋ Y02s ಸ್ಮಾರ್ಟ್‌ಫೋನ್‌ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 10W ವೇಗದ ಚಾರ್ಜಿಂಗ್‌ ಅನ್ನು ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 4G LTE, ವೈಫೈ, ಬ್ಲೂಟೂತ್ v5.0, GPS/ A-GPS ಮತ್ತು USB ಟೈಪ್-C ಪೋರ್ಟ್ ಅನ್ನು ಒಳಗೊಂಡಿದೆ.

ಬೆಲೆ ಮತ್ತು ಲಭ್ಯತೆ

ಬೆಲೆ ಮತ್ತು ಲಭ್ಯತೆ

ವಿವೋ Y02s ಸ್ಮಾರ್ಟ್‌ಫೋನ್‌ ಫಿಲಿಪೈನ್ಸ್‌ನಲ್ಲಿ ಬಿಡುಗಡೆಯಾಗಿದೆ. ಸದ್ಯ ಇದರ 3GB RAM + 32GB ಸ್ಟೋರೇಜ್ ಕಾನ್ಫಿಗರೇಶನ್‌ ಬೆಲೆ PHP 6,499 (ಸುಮಾರು 9,250ರೂ) ಗೆ ನಿಗದಿಪಡಿಸಲಾಗಿದೆ. ಇದು ದಕ್ಷಿಣ ಏಷ್ಯಾದ ದೇಶದಲ್ಲಿ ಫ್ಲೋರೈಟ್ ಕಪ್ಪು ಮತ್ತು ವೈಬ್ರೆಂಟ್ ಬ್ಲೂ ಕಲರ್‌ ಆಯ್ಕೆಗಳಲ್ಲಿ ಬರಲಿದೆ. ಈ ಸ್ಮಾರ್ಟ್‌ಫೋನ್‌ ಭಾರತದಲ್ಲಿ ಯಾವಾಗ ಬಿಡುಗಡೆಯಾಗಲಿದೆ ಎಂಬುದರ ಮಾಹಿತಿ ಇನ್ನು ಬಹಿರಂಗವಾಗಿಲ್ಲ.

ವಿವೋ

ಇದಲ್ಲದೆ ವಿವೋ ಕಂಪೆನಿ ಇತ್ತೀಚಿಗೆ ಭಾರತದಲ್ಲಿ ವಿವೋ V25 ಸರಣಿಯನ್ನು ಅನಾವರಣ ಮಾಡಿದೆ. ಇದರಲ್ಲಿ ವಿವೋ V25 ಪ್ರೊ ಸ್ಮಾರ್ಟ್‌ಫೋನ್‌ ತನ್ನ ಆಕರ್ಷಕ ಫೀಚರ್ಸ್‌ಗಳಿಂದ ಗಮನಸೆಳೆದಿದೆ. ಇನ್ನು ವಿವೋ V25 ಪ್ರೊ ಸ್ಮಾರ್ಟ್‌ಫೋನ್‌ 6.56-ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಅಮೋಲೆಡ್‌ ಡಿಸ್‌ಪ್ಲೇಯನ್ನು ಹೊಂದಿದೆ. ಇದು ಮೀಡಿಯಾಟೆಕ್‌ ಡೈಮೆನ್ಸಿಟಿ 1300 SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಇದು ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಒಳಗೊಂಡಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾಪಿಕ್ಸೆಲ್ ಸೆನ್ಸಾರ್‌ ಬಲವನ್ನು ಪಡೆದುಕೊಂಡಿದೆ. ಜೊತೆಗೆ 4,830mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ.

Best Mobiles in India

English summary
Vivo Y02s comes with Multi-Turbo 5.5 feature to optimise performance and reduce stuttering as well as lag in games.

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X