ಕಡಿಮೆ ಬೆಲೆಗೆ ಹೊಸ ವಿವೋ ಮೊಬೈಲ್ ಬೇಕಿದ್ರೆ, ಈ ಆಫರ್ ಬೆಸ್ಟ್!
ಇ ಕಾಮರ್ಸ್ ಪ್ಲಾಟ್‌ಫಾರ್ಮ್ ದಿಗ್ಗಜ ಅಮೆಜಾನ್‌ನಲ್ಲಿ ಸ್ಮಾರ್ಟ್‌ಫೋನ್‌ಗಳಿಗೆ ಏನಾದರೊಂದು ಡಿಸ್ಕೌಂಟ್ ಲಭ್ಯ ಇರುತ್ತದೆ. ಹೀಗಾಗಿ ಮೊಬೈಲ್ ಖರೀದಿಸುವ ಬಹುತೇಕ ಗ್ರಾಹಕರು ಈ ಅಮೆಜಾನ್‌ನಲ್ಲಿ ತಾಣದ ಮೂಲಕ ಖರೀದಿ ಮಾಡಲು ಮನಸ್ಸು ಮಾಡುತ್ತಾರೆ. ಸದ್ಯ ವಿವೋ ಸಂಸ್ಥೆಯ ವಿವೋ Y02t ಮೊಬೈಲ್ ಸಖತ್ ಡಿಸ್ಕೌಂಟ್ ಪ್ರೈಸ್‌ಟ್ಯಾಗ್‌ನಲ್ಲಿ ಕಾಣಿಸಿಕೊಂಡಿದೆ.
ಹೌದು, ಫ್ಲಿಪ್‌ಕಾರ್ಟ್ ಪ್ಲಾಟ್‌ಫಾರ್ಮ್ ನಲ್ಲಿ ವಿವೋ Y02t ಫೋನ್ ಶೇ. 47% ರಷ್ಟು ನೇರ ಡಿಸ್ಕೌಂಟ್ ಒಳಗೊಂಡಿದೆ. ಈ ಫೋನಿನ 4GB RAM + 64 GB ವೇರಿಯಂಟ್‌ನ ಫೋನ್ ಅನ್ನು ಗ್ರಾಹಕರು 8,499 ರೂ. ಗಳ ಕೊಡುಗೆಯ ಬೆಲೆಯಲ್ಲಿ ಖರೀದಿಗೆ ಮಾಡಬಹುದಾಗಿದೆ. ಅಲ್ಲದೇ ಅಮೆಜಾನ್‌ನಲ್ಲಿ ಲಭ್ಯ ಇರುವ ಎಕ್ಸ್‌ಚೆಂಜ್ ಕೊಡುಗೆ, ಬ್ಯಾಂಕ್ ಆಫರ್ ಹಾಗೂ ಇತರೆ ರಿಯಾಯಿತಿ ಪಡೆದುಕೊಂಡರೆ ಈ ಫೋನ್ ಇನ್ನಷ್ಟು ರಿಯಾಯಿತಿಗೆ ಲಭ್ಯ.

ಅಂದಹಾಗೆ ಈ ಫೋನ್ ಮೀಡಿಯಾ ಟೆಕ್ MT6765 ಹಿಲಿಯೊ P35 SoC ಪ್ರೊಸೆಸರ್ ಸೌಲಭ್ಯ ಪಡೆದಿದ್ದು, ಹಾಗೆಯೇ 5000 mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಒಳಗೊಂಡಿದೆ. ಇದರ ಪ್ರಾಥಮಿಕ ಕ್ಯಾಮೆರಾ 64 ಮೆಗಾ ಪಿಕ್ಸೆಲ್ ಸೆನ್ಸರ್ ಸೌಲಭ್ಯದಲ್ಲಿ ಇದೆ. ಇದರೊಂದಿಗೆ 5 ಮೆಗಾ ಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾ ಸಹ ಇದೆ. ಇನ್ನುಳಿದಂತೆ ವಿವೋ Y02t ಮೊಬೈಲ್‌ನ ಇತರೆ ಫೀಚರ್ಸ್ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.
ಡಿಸ್‌ಪ್ಲೇ ಡಿಸೈನ್
ವಿವೋ Y02t ಮೊಬೈಲ್ 6.51 ಇಂಚಿನ ಫುಲ್ ಹೆಚ್‌ಡಿ ಪ್ಲಸ್ ಡಿಸ್‌ಪ್ಲೇ ಅನ್ನು ಒಳಗೊಂಡಿದ್ದು, ಇನ್ನು ಡಿಸ್‌ಪ್ಲೇ 1600 × 720 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯ ಅನ್ನು ಪಡೆದುಕೊಂಡಿದೆ. ಈ ಡಿಸ್‌ಪ್ಲೇ 82.5% ಸ್ಕ್ರೀನ್ ಟು ಬಾಡಿ ಅನುಪಾತ ಅನ್ನು ಹೊಂದಿದ್ದು, ಇದರ ಜೊತೆಗೆ ಈ ಫೋನಿನ ಡಿಸ್‌ಪ್ಲೇಯು 20:9 ರಚನೆಯ ಅನುಪಾತವನ್ನು ಪಡೆದುಕೊಂಡಿದೆ.
ಪ್ರೊಸೆಸರ್ ಕಾರ್ಯ
ವಿವೋ ಸಂಸ್ಥೆಯ ಈ ಫೋನ್ ಮೀಡಿಯಾ ಟೆಕ್ MT6765 ಹಿಲಿಯೊ P35 SoC ಪ್ರೊಸೆಸರ್ ಪವರ್ ಅನ್ನು ಹೊಂದಿದೆ. ಇದು ಆಂಡ್ರಾಯ್ಡ್ 13 ಓಎಸ್ ಸಪೋರ್ಟ್ ನಲ್ಲಿ ಕಾರ್ಯ ನಿರ್ವಹಿಸಲಿದೆ. ಹಾಗೆಯೇ 4GB RAM ಮತ್ತು 64 GB ಆಂತರೀಕ ಸ್ಟೋರೇಜ್ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಇದಲ್ಲದೆ (ಎಸ್‌ಡಿ ಕಾರ್ಡ್) ಮೆಮೊರಿ ಕಾರ್ಡ್ ಸಪೋರ್ಟ್ ನೊಂದಿಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸುವುದಕ್ಕೆ ಅವಕಾಶವನ್ನು ಕೂಡ ನೀಡಿದೆ.
ಕ್ಯಾಮೆರಾ ಸೆನ್ಸಾರ್ ಮಾಹಿತಿ
ಹಾಗೆಯೇ ವಿವೋ Y02t ಮೊಬೈಲ್ 8 ಮೆಗಾ ಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸಿಂಗಲ್ ರಿಯರ್ ಕ್ಯಾಮೆರಾ ರಚನೆ ಅನ್ನು ಪಡೆದಿದೆ. ಇದಲ್ಲದೆ 5 ಮೆಗಾ ಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಇದು ಒಳಗೊಂಡಿದೆ. ಇದರೊಂದಿಗೆ ಈ ಫೋನಿನ ಕ್ಯಾಮೆರಾ ಫೀಚರ್ಸ್ ಗಳಲ್ಲಿ ಫೇಸ್ ಬ್ಯೂಟಿ, ಫೋಟೋ, ವಿಡಿಯೋ, ಟೈಮ್ ಲ್ಯಾಪ್ಸ್ ಆಯ್ಕೆಗಳು ಕೂಡಾ ಲಭ್ಯ ಇವೆ.
ಬ್ಯಾಟರಿ ಸೌಲಭ್ಯದ ಮಾಹಿತಿ
ಅಲ್ಲದೇ ಅಗ್ಗದ ಬೆಲೆಯ ಈ ವಿವೋ Y02t ಮೊಬೈಲ್ 5000 mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಸೌಲಭ್ಯ ಪಡೆದುಕೊಂಡಿದ್ದು, ಈ ಫೋನ್ 10W ಫಾಸ್ಟ್ ಚಾರ್ಜಿಂಗ್ ಸೌಲಭ್ಯವನ್ನು ಸಪೋರ್ಟ್ ಮಾಡಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಈ ಫೋನ್ ಹಾಟ್‌ಸ್ಪಾಟ್, ಬ್ಲೂಟೂತ್, ಯುಎಸ್‌ಬಿ ಸಿ ಪೋರ್ಟ್, ಹೆಡ್‌ಫೋನ್ ಜ್ಯಾಕ್ ಸೌಲಭ್ಯಗಳನ್ನು ಕಾಣಬಹುದಾಗಿದೆ.


Click it and Unblock the Notifications








