Vivo: ವಿವೋ ಕಂಪೆನಿಯ ಈ ಸ್ಮಾರ್ಟ್‌ಫೋನ್‌ಗೆ 38% ಡಿಸ್ಕೌಂಟ್! ಇಂದೇ ಖರೀದಿಸಿ!
ವಿವೋ ಕಂಪೆನಿಯ ಸ್ಮಾರ್ಟ್‌ಫೋನ್‌ಗಳಿಗೆ ಭಾರಿ ಡಿಮ್ಯಾಂಡ್ ಇದೆ. ಸೆಲ್ಫಿ ಪ್ರಿಯರಿಗಂತೂ ವಿವೋ ಮೇಲಿನ ವ್ಯಾಮೋಹ ಕಡಿಮೆ ಆಗುವುದೇ ಇಲ್ಲ. ತನ್ನ ಕ್ಯಾಮೆರಾ ಫೀಚರ್ಸ್‌ಗಳಿಂದಲೇ ಗಮನಸೆಳೆಯುವ ವಿವೋ ಸ್ಮಾರ್ಟ್‌ಫೋನ್‌ಗಳಲ್ಲಿ ವಿವೋ Y02t ಫೋನ್ ಕೂಡ ಒಂದಾಗಿದೆ. ಸದ್ಯ ಈ ಸ್ಮಾರ್ಟ್‌ಫೋನ್ ಅಮೆಜಾನ್ ತಾಣದಲ್ಲಿ 38% ಡಿಸ್ಕೌಂಟ್ ಪಡೆದುಕೊಂಡಿದೆ.
ಹೌದು, ವಿವೋ Y02t ಸ್ಮಾರ್ಟ್‌ಫೋನ್ ಅಮೆಜಾನ್‌ನಲ್ಲಿ ಭರ್ಜರಿ ಡಿಸ್ಕೌಂಟ್ ಪಡೆದುಕೊಂಡಿದೆ. ಈ ಮೂಲಕ ವಿವೋ ಸ್ಮಾರ್ಟ್‌ಫೋನ್ ಖರೀದಿಸಬೇಕೆಂದು ಕೊಂಡವರಿಗೆ ಗುಡ್‌ನ್ಯೂಸ್ ನೀಡಿದೆ. ಇನ್ನು ಈ ಸ್ಮಾರ್ಟ್‌ಫೋನ್ ಬ್ಯಾಂಕ್ ಆಫರ್‌ಗಳನ್ನು ಕೂಡ ಪಡೆದಿದೆ. ಇದರಿಂದ ಸ್ಮಾರ್ಟ್‌ಫೋನ್ ಬೆಲೆಯಲ್ಲಿ ಭಾರಿ ಇಳಿಕೆಯಾಗಿದೆ. ಹಾಗಾದ್ರೆ ವಿವೋ Y02t ಸ್ಮಾರ್ಟ್‌ಫೋನ್ ಬೆಲೆಯಲ್ಲಿ ಎಷ್ಟು ಕಡಿತವಾಗಿದೆ? ಇದರ ಮೇಲೆ ಏನೆಲ್ಲಾ ಆಫರ್ ಲಭ್ಯವಿದೆ? ಇನ್ನು ಫೋನ್ ಫೀಚರ್ಸ್ ಹೇಗಿದೆ? ಇದೆಲ್ಲದರ ಫುಲ್ ಡಿಟೇಲ್ಸ್ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ವಿವೋ Y02t ಭರ್ಜರಿ ಡಿಸ್ಕೌಂಟ್!
ವಿವೋ Y02t ಸ್ಮಾರ್ಟ್‌ಫೋನ್ 15,999ರೂ. ಮೂಲಬೆಲೆಯನ್ನು ಹೊಂದಿದೆ. ಸದ್ಯ ಈ ಸ್ಮಾರ್ಟ್‌ಫೋನ್ ಅಮೆಜಾನ್‌ನಲ್ಲಿ 38% ಡಿಸ್ಕೌಂಟ್ ಪಡೆದುಕೊಂಡಿದೆ. ಇದರಿಂದ ಸ್ಮಾರ್ಟ್‌ಫೋನ್ 9,999ರೂ.ಬೆಲೆಯಲ್ಲಿ ಖರೀದಿಗೆ ಲಭ್ಯವಿದೆ. ಇದರೊಂದಿಗೆ ನೋ ಕಾಸ್ಟ್ ಇಎಂಐ ಹಾಗೂ ವಿವಿಧ ಬ್ಯಾಂಕ್ ಆಫರ್‌ಗಳು ಕೂಡ ಲಭ್ಯವಿದೆ. ಈ ಮೂಲಕ ಡಿಸ್ಕೌಂಟ್‌ನಲ್ಲಿ ಸ್ಮಾರ್ಟ್‌ಫೋನ್ ಖರೀದಿಸಬೇಕೆಂದುಕೊಂಡವರಿಗೆ ಇದುವೇ ಬೆಸ್ಟ್ ಟೈಂ ಎನಿಸಿಕೊಂಡಿದೆ.
ವಿವೋ Y02t ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ
ವಿವೋ Y02t ಸ್ಮಾರ್ಟ್‌ಫೋನ್ 6.51 ಇಂಚಿನ ಫುಲ್ ಹೆಚ್‌ಡಿ ಪ್ಲಸ್ ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನು ಡಿಸ್‌ಪ್ಲೇ 1600 × 720 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಈ ಡಿಸ್‌ಪ್ಲೇ 82.5% ಸ್ಕ್ರೀನ್-ಟು-ಬಾಡಿ ಅನುಪಾತವನ್ನು ಒಳಗೊಂಡಿದೆ. ಜೊತೆಗೆ 20:9 ರಚನೆಯ ಅನುಪಾತವನ್ನು ಹೊಂದಿದೆ.
ವಿವೋ Y02t ಪ್ರೊಸೆಸರ್ ಯಾವುದು?
ವಿವೋ Y02t ಸ್ಮಾರ್ಟ್‌ಫೋನ್ ಮೀಡಿಯಾಟೆಕ್ MT6765 ಹಿಲಿಯೊ P35 SoC ಪ್ರೊಸೆಸರ್ ವೇಗವನ್ನು ಹೊಂದಿದೆ. ಇದು ಆಂಡ್ರಾಯ್ಡ್ 13 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 4GB RAM ಮತ್ತು 64GB ಇಂಟರ್ ಸ್ಟೋರೇಜ್ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಇದಲ್ಲದೆ ಮೆಮೊರಿ ಕಾರ್ಡ್ ಬೆಂಬಲದೊಂದಿಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸುವುದಕ್ಕೆ ಅವಕಾಶವನ್ನು ಕೂಡ ನೀಡಿದೆ.
ವಿವೋ Y02t ಕ್ಯಾಮೆರಾ ಸೆಟ್‌ಅಪ್
ವಿವೋ Y02t ಸ್ಮಾರ್ಟ್‌ಫೋನ್ 8 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸಿಂಗಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಹೊಂದಿದೆ. ಇದಲ್ಲದೆ 5 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿದೆ. ಇನ್ನು ಕ್ಯಾಮೆರಾ ಫೀಚರ್ಸ್‌ಗಳಲ್ಲಿ ಫೇಸ್ ಬ್ಯೂಟಿ, ಫೋಟೋ, ವಿಡಿಯೋ, ಟೈಮ್-ಲ್ಯಾಪ್ಸ್ ಅನ್ನು ಪಡೆದುಕೊಂಡಿದೆ.
ವಿವೋ Y02t ಬ್ಯಾಟರಿ ಮತ್ತು ಇತರೆ
ವಿವೋ Y02t ಸ್ಮಾರ್ಟ್‌ಫೋನ್ 5000 mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿದೆ. ಇದು 10W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಹಾಟ್‌ಸ್ಪಾಟ್, ಬ್ಲೂಟೂತ್, ಯುಎಸ್‌ಬಿ ಸಿ ಪೋರ್ಟ್, ಹೆಡ್‌ಫೋನ್ ಜ್ಯಾಕ್ ಅನ್ನು ಹೊಂದಿದೆ.
ಇದಲ್ಲದೆ ವಿವೋ ಕಂಪೆನಿ ಇತ್ತೀಚಿಗೆ ವಿವೋ Y27 ಸ್ಮಾರ್ಟ್‌ಫೋನ್ ಅನ್ನು ಲಾಂಚ್ ಮಾಡಿದೆ. ಈ ಸ್ಮಾರ್ಟ್‌ಫೋನ್ 6.5 ಇಂಚಿನ ಫುಲ್ ಹೆಚ್‌ಡಿ ಪ್ಲಸ್ ಡಿಸ್‌ಪ್ಲೇ ಅನ್ನು ಹೊಂದಿದ್ದು, 1600 x 720 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯವನ್ನು ಪಡೆದಿದೆ. ಇದು ಮೀಡಿಯಾ ಟೆಕ್ ಹೆಲಿಯೊ G85 SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ.


Click it and Unblock the Notifications








