ಟೆಕ್ ವಲಯಕ್ಕೆ ಎಂಟ್ರಿ ಕೊಟ್ಟ ವಿವೋ Y03 ಫೋನ್: ಫೀಚರ್ಸ್ ಹೇಗಿದೆ
ಟೆಕ್ ವಲಯದಲ್ಲಿ ಸಾಕಷ್ಟು ನಿರೀಕ್ಷೆ ಹುಟ್ಟುಹಾಕಿದ್ದ ವಿವೋ Y03 ಸ್ಮಾರ್ಟ್‌ಫೋನ್ ಇದೀಗ ಅಧಿಕೃತವಾಗಿ ಬಿಡುಗಡೆ ಆಗಿದೆ. ಈ ಸ್ಮಾರ್ಟ್‌ಫೋನ್ ಇತ್ತೀಚಿಗೆ ಬಿಡುಗಡೆ ಆಗಿದ್ದ ಬಜೆಟ್ ಸ್ಮಾರ್ಟ್‌ಫೋನ್ Vivo Y02 ನ ಉತ್ತರಾಧಿಕಾರಿಯಾಗಿದೆ. ಸದ್ಯ ಬಿಡುಗಡೆ ಆಗಿರುವ ವಿವೋ Y03 ಸ್ಮಾರ್ಟ್‌ಫೋನ್ ಡ್ಯುಯಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ.
ಹೌದು, ವಿವೋ Y03 ಸ್ಮಾರ್ಟ್‌ಫೋನ್ ಮಾರುಕಟ್ಟೆಗೆ ಎಂಟ್ರಿ ನೀಡಿದೆ. ಇದು ಮೀಡಿಯಾ ಟೆಕ್ ಹೆಲಿಯೊ G85 SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಈ ಸ್ಮಾರ್ಟ್‌ಫೋನ್ ವಿಸ್ತೃತ RAM ಫೀಚರ್ಸ್ ಅನ್ನು ಹೊಂದಿದ್ದು, RAM ಅನ್ನು ವಾಸ್ತವಿಕವಾಗಿ 4GB ವರೆಗೆ ವಿಸ್ತರಿಸಲು ಅನುವು ಮಾಡಿಕೊಡುತ್ತದೆ. ಹಾಗಾದ್ರೆ ಈ ಸ್ಮಾರ್ಟ್‌ಫೋನ್ ಯಾವೆಲ್ಲಾ ಫೀಚರ್ಸ್ ಒಳಗೊಂಡಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ವಿವೋ Y03 ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ
ವಿವೋ Y03 ಸ್ಮಾರ್ಟ್‌ಫೋನ್ 6.56 ಇಂಚಿನ ಫುಲ್ ಹೆಚ್‌ಡಿ ಪ್ಲಸ್ ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇಯು 1612×720 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ ಆಯ್ಕೆಯನ್ನು ಹೊಂದಿದೆ. ಇನ್ನು ಡಿಸ್‌ಪ್ಲೇಯು 90Hz ರಿಫ್ರೆಶ್ ರೇಟ್ ಅನ್ನು ನೀಡಲಿದ್ದು, ವಾಟರ್‌ಡ್ರಾಪ್ ನಾಚ್ ಅನ್ನು ಹೊಂದಿದೆ. ಈ ಡಿಸ್‌ಪ್ಲೇಯು 269 PPI ಪಿಕ್ಸೆಲ್ ಸಾಂದ್ರತೆಯನ್ನು ಒಳಗೊಂಡಿದ್ದು, 70% NTSC ಪಡೆದಿದೆ.
ವಿವೋ Y03 ಪ್ರೊಸೆಸರ್ ಯಾವುದು?
ವಿವೋ Y03 ಸ್ಮಾರ್ಟ್‌ಫೋನ್ ಮೀಡಿಯಾ ಟೆಕ್ ಹೆಲಿಯೊ G85 SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಇದು ಆಂಡ್ರಾಯ್ಡ್ 14 ಆಧಾರಿತ ಫನ್‌ಟೌಚ್ OS 14 ನಲ್ಲಿ ರನ್ ಆಗಲಿದೆ. ಹಾಗೆಯೇ 4GB RAM ಮತ್ತು 64GB ಅಥವಾ 128GB ಇಂಟರ್ ಸ್ಟೋರೇಜ್ ಸಾಮರ್ಥ್ಯದಲ್ಲಿ ಬರಲಿದೆ. ಇದಲ್ಲದೆ ಮೆಮೊರಿ ಕಾರ್ಡ್ ಮೂಲಕ 1TB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಬಹುದಾಗಿದೆ. ಇದರೊಂದಿಗೆ ಈ ಫೋನ್ ವಿಸ್ತೃತ RAM ಫೀಚರ್ಸ್ ಅನ್ನು ಹೊಂದಿದ್ದು, RAM ಅನ್ನು ವಾಸ್ತವಿಕವಾಗಿ 4GB ವರೆಗೆ ವಿಸ್ತರಿಸಲು ಅನುವು ಮಾಡಿಕೊಡಲಿದೆ.

ವಿವೋ Y03 ಕ್ಯಾಮೆರಾ ಸೆಟಪ್ ಏನಿದೆ?
ವಿವೋ Y03 ಸ್ಮಾರ್ಟ್‌ಫೋನ್ ಡ್ಯುಯಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಒಳಗೊಂಡಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 13 ಮೆಗಾಪಿಕ್ಸೆಲ್ ಸೆನ್ಸಾರ್ ಮತ್ತು QVGA ಲೆನ್ಸ್ ಅನ್ನು ಹೊಂದಿದೆ. ಇದಲ್ಲದೆ ಕ್ಯಾಮರಾ ಸೆಟಪ್ ಪಕ್ಕದಲ್ಲಿ LED ಫ್ಲ್ಯಾಷ್ ಅನ್ನು ನೀಡಲಿದೆ. ಇದು 5 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ.
ವಿವೋ Y03 ಬ್ಯಾಟರಿ ಮತ್ತು ಇತರೆ
ವಿವೋ Y03 ಸ್ಮಾರ್ಟ್‌ಫೋನ್ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು USB-C ಪೋರ್ಟ್ ಮೂಲಕ 15W ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಡ್ಯುಯಲ್ ಸಿಮ್, 4G VoLTE, ಡ್ಯುಯಲ್-ಬ್ಯಾಂಡ್ ವೈ-ಫೈ, ಬ್ಲೂಟೂತ್ 5.0 ಮತ್ತು GPS ಸೇರಿವೆ. ಇದಲ್ಲದೆ ಧೂಳು ಮತ್ತು ಸ್ಪ್ಲಾಶ್ ಪ್ರತಿರೋಧಕ್ಕಾಗಿ IP54 ರೇಟಿಂಗ್ ಅನ್ನು ಸಹ ಹೊಂದಿದೆ.
ವಿವೋ Y03 ಬೆಲೆ ಮತ್ತು ಲಭ್ಯತೆ
Vivo Y03 ಸ್ಮಾರ್ಟ್‌ಫೋನ್ 4GB ಮತ್ತು 64GB ರೂಪಾಂತರದ ಆಯ್ಕೆಗೆ IDR 1,299,000 (ಅಂದಾಜು 6,929.97ರೂ) ಮತ್ತು 4GB ಮತ್ತು 128GB ರೂಪಾಂತರದ ಆಯ್ಕೆಗೆ IDR 1,499,000 (ಅಂದಾಜು 8,000ರೂ) ಬೆಲೆಯಲ್ಲಿ ಬರಲಿದೆ. ಇದನ್ನು ಹಸಿರು ಮತ್ತು ಕಪ್ಪು ಬಣ್ಣದ ಆಯ್ಕೆಗಳಲ್ಲಿ ಖರೀದಿಸಬಹುದಾಗಿದೆ. ಶೀಘ್ರದಲ್ಲೇ ಈ ಸ್ಮಾರ್ಟ್‌ಫೋನ್ ಅನ್ನು ಏಷ್ಯಾದ ಇತರ ಮಾರುಕಟ್ಟೆಗಳಲ್ಲಿ ಬಿಡುಗಡೆ ಮಾಡುವ ನಿರೀಕ್ಷೆಯಿದೆ.


Click it and Unblock the Notifications








