ವಿವೋ ಫೋನ್ ಖರೀದಿಸುವ ಗ್ರಾಹಕರಿಗೆ ಸಿಹಿಸುದ್ದಿ!.. ಗ್ರಾಹಕರು ಫುಲ್ ಖುಷ್!
ವಿವೋ ಕಂಪೆನಿ ಜನಪ್ರಿಯ ಫೋನ್‌ಗಳಲ್ಲಿ ಒಂದಾದ ವಿವೋ Y100 5G ಸ್ಮಾರ್ಟ್‌ಫೋನ್ ಆಕರ್ಷಕ ಫೀಚರ್ಸ್‌ಗಳಿಂದ ಗ್ರಾಹಕರನ್ನು ಸೆಳೆದಿದೆ. ಇದೀಗ ಈ ಮೊಬೈಲ್ ಬೆಲೆಯಲ್ಲಿ ಸಖತ್ ಇಳಿಕೆ ಕಡಿದೆ. ಈ ಮೊಬೈಲ್ ಟ್ರಿಪಲ್ ರಿಯರ್ ಕ್ಯಾಮೆರಾ ರಚನೆ ಹೊಂದಿದ್ದು, ಮುಖ್ಯ ಕ್ಯಾಮೆರಾವು 64 ಮೆಗಾ ಪಿಕ್ಸಲ್ ಸೆನ್ಸಾರ್ ಸಾಮರ್ಥ್ಯ ಪಡೆದಿದೆ.
ಹೌದು, ವಿವೋ ಸ್ಮಾರ್ಟ್‌ಫೋನ್ ಕಂಪೆನಿ ತನ್ನ ವಿವೋ Y100 5G ಮೊಬೈಲ್ ಬೆಲೆಯಲ್ಲಿ ಈಗ 2,000ರೂ. ಗಳ ದರ ಇಳಿಕೆ ಮಾಡಿದೆ. ಕಳೆದ ಮೇ ತಿಂಗಲಿನಲ್ಲಿ 1,000ರೂ. ಇಳಿಕೆ ಮಾಡಿತ್ತು. ಅಂದಹಾಗೆ ಈ ಫೋನ್ ಮೀಡಿಯಾ ಟೆಕ್ ಡೈಮೆನ್ಸಿಟಿ 900 SoC ಪ್ರೊಸೆಸರ್ ಪವರ್‌ನಲ್ಲಿ ಕೆಲಸ ಮಾಡಲಿದೆ.

ಇನ್ನು ಈ ಫೋನ್ 8GB RAM + 128GB ಆಂತರೀಕ ಸ್ಟೋರೇಜ್ ಆಯ್ಕೆ ಪಡೆದಿದ್ದು, ಇದು 4,500mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಕೂಡಾ ಪಡೆದಿದೆ. ಅಲ್ಲದೇ ಇದು ಪೆಸಿಫಿಕ್ ಬ್ಲೂ ಮತ್ತು ಟ್ವಿಲೈಟ್ ಗೋಲ್ಡ್ ಬಣ್ಣದ ಆಯ್ಕೆಯಲ್ಲಿ ಖರೀದಿಗೆ ಲಭ್ಯ. ಹಾಗಾದರೆ ವಿವೋ Y100 5G ಫೋನಿನ ಇತರೆ ಫೀಚರ್ಸ್ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.
ವಿವೋ Y100 5G ಡಿಸ್‌ಪ್ಲೇ ರಚನೆ ಹೀಗಿದೆ :
ವಿವೋ Y100 5G ಮೊಬೈಲ್ 6.38 ಇಂಚಿನ ಅಮೋಲೆಡ್ ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ 1080 x 2400 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯ ವನ್ನು ಪಡೆದುಕೊಂಡಿದೆ. ಇದು 90Hz ರಿಫ್ರೆಶ್ ರೇಟ್ ಮತ್ತು 360Hz ಟಚ್ ಸ್ಯಾಂಪ್ಲಿಂಗ್ ರೇಟ್ ಅನ್ನು ಬೆಂಬಲಿಸಲಿದೆ. ಇನ್ನು ಡಿಸ್‌ಪ್ಲೇ HDR10+ ಪ್ರಮಾಣೀಕರಣವನ್ನು ಹೊಂದಿದ್ದು,1300 ನಿಟ್ಸ್ ಗರಿಷ್ಠ ಬ್ರೈಟ್‌ನೆಸ್ ಅನ್ನು ಒಳಗೊಂಡಿದೆ.
ವಿವೋ Y100 5G ಪ್ರೊಸೆಸರ್ ಕಾರ್ಯವೈಖರಿ ಹೇಗೆ :
ವಿವೋ Y100 5G ಮೊಬೈಲ್ ಆಕ್ಟಾ ಕೋರ್ ಮೀಡಿಯಾ ಟೆಕ್ ಡೈಮೆನ್ಸಿಟಿ 900 SoC ಪ್ರೊಸೆಸರ್ ವೇಗವನ್ನು ಹೊಂದಿದೆ. ಇದು ಆಂಡ್ರಾಯ್ಡ್ 13 ಆಧಾರಿತ ಫನ್‌ಟಚ್ OS 13 ನಲ್ಲಿ ಬೆಂಬಲದೊಂದಿಗೆ ಕೆಲಸ ನಿರ್ವಹಿಸಲಿದೆ. ಹಾಗೆಯೇ 8GB RAM + 128GB ಇಂಟರ್ ಸ್ಟೋರೇಜ್ ಅನ್ನು ಸಫೋರ್ಟ್ ಮಾಡಲಿದೆ. ಇದಲ್ಲದೆ ವಿಸ್ತರಿಸಬಹುದಾದ RAM ಫೀಚರ್ಸ್ ಅನ್ನು ಕೂಡ ಒಳಗೊಂಡಿದೆ.
ವಿವೋ Y100 5G ಕ್ಯಾಮೆರಾ ರಚನೆ ಮಾಹಿತಿ :
ವಿವೋ Y100 5G ಮೊಬೈಲ್ ಟ್ರಿಪಲ್ ರಿಯರ್ ಕ್ಯಾಮೆರಾ ರಚನೆ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾ ಪಿಕ್ಸೆಲ್ ಸೆನ್ಸಾರ್ ಅನ್ನು ಹೊಂದಿದೆ. ದ್ವೀತೀಯ ಕ್ಯಾಮೆರಾ 2 ಮೆಗಾಪಿಕ್ಸೆಲ್ ಸೆನ್ಸಾರ್ ಮತ್ತು ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಸೆನ್ಸಾರ್ ಅನ್ನು ಹೊಂದಿದೆ. ಇದಲ್ಲದೆ 16 ಮೆಗಾ ಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿದೆ.
ವಿವೋ Y100 5G ಬ್ಯಾಟರಿ ಬ್ಯಾಕ್‌ಅಪ್ ಏನಿದೆ?
ವಿವೋ Y100 5G ಮೊಬೈಲ್ 44W ವೇಗದ ಚಾರ್ಜಿಂಗ್ 4,500mAh ಸಾಮರ್ಥ್ಯದ ಬ್ಯಾಟರಿ ಅನ್ನು ಹೊಂದಿದೆ. ಇನ್ನು ಕನೆಕ್ಟಿವಿಟಿ ಸೌಲಭ್ಯಗಳಲ್ಲಿ ಡ್ಯುಯಲ್ ಸಿಮ್, 5G, ಡ್ಯುಯಲ್-ಬ್ಯಾಂಡ್ ವೈಫೈ, ಬ್ಲೂಟೂತ್ 5.2, ಯುಎಸ್‌ಬಿ ಟೈಪ್-ಸಿ, ಜಿಪಿಎಸ್ ಮತ್ತು ಒಟಿಜಿಯನ್ನು ಬೆಂಬಲಿಸಲಿದೆ. ಜೊತೆಗೆ ಹೈ-ರೆಸ್ ಆಡಿಯೊ ಪ್ರಮಾಣೀಕರಣದೊಂದಿಗೆ 3.5mm ಆಡಿಯೊ ಜ್ಯಾಕ್ ಅನ್ನು ಸಪೋರ್ಟ್ ಮಾಡುತ್ತದೆ.
ಭಾರತದಲ್ಲಿ ವಿವೋ Y100 5G ಕಲರ್ ಹಾಗೂ ಲಭ್ಯತೆ :
ವಿವೋ Y100 5G ಮೊಬೈಲ್ ಭಾರತದಲ್ಲಿ 8GB + 128GB ಸ್ಟೋರೇಜ್ ಆಯ್ಕೆಯು 21,999ರೂ. ಬೆಲೆಯಲ್ಲಿ ಖರೀದಿಗೆ ಲಭ್ಯ ಆಗಲಿದೆ. ಈ ಫೋನ್ ಪೆಸಿಫಿಕ್ ಬ್ಲೂ ಮತ್ತು ಟ್ವಿಲೈಟ್ ಗೋಲ್ಡ್ ಬಣ್ಣದ ಆಯ್ಕೆಯಲ್ಲಿ ಲಭ್ಯ.


Click it and Unblock the Notifications








