ದೇಶಿಯ ಮಾರುಕಟ್ಟೆಗೆ ಎಂಟ್ರಿ ಕೊಡಲಿದೆ ವಿವೋ Y100; ಖರೀದಿಗೆ ಕ್ಯೂ ಖಚಿತ!
ಮೊಬೈಲ್ ಮಾರುಕಟ್ಟೆಯಲ್ಲಿ ವಿವೋ ಸಂಸ್ಥೆಯು ಈಗಾಗಲೇ ಗ್ರಾಹಕರ ಗಮನ ಸೆಳೆದಿದೆ. ಇದೀಗ ವಿವೋ ಸಂಸ್ಥೆಯು ನೂತನವಾಗಿ ವಿವೋ Y100 (Vivo Y100) ಫೋನ್ ಬಿಡುಗಡೆ ಮಾಡಲು ಸಜ್ಜಾಗಿದೆ. ಈ ಫೋನಿನ ಫೀಚರ್ಸ್ ಬಗ್ಗೆ ಹಾಗೂ ಫೋನಿನ ಬೆಲೆಯ ಬಗ್ಗೆ ಕೆಲವು ಮಾಹಿತಿಗಳು ಲೀಕ್ ಆಗಿದ್ದು, ಫೋನ್ ಪ್ರಿಯರಲ್ಲಿ ಭಾರೀ ಕುತೂಹಲ ಮೂಡಿಸಿದೆ.

ಹೌದು, ವಿವೋ ಸಂಸ್ಥೆಯು ಇದೀಗ Y ಸರಣಿಯಲ್ಲಿ ಹೊಸದಾಗಿ ಮತ್ತೊಂದು ಮೊಬೈಲ್ ಅನ್ನು ಲಾಂಚ್ ಮಾಡಲು ಸಜ್ಜಾಗಿದ್ದು, ಅದುವೇ ವಿವೋ Y100 (Vivo Y100) ಫೋನ್ ಆಗಿದೆ. ಈ ಫೋನ್ ಇದೇ ಫೆಬ್ರುವರಿ ತಿಂಗಳಿನಲ್ಲಿ ಭಾರತೀಯ ಮಾರುಕಟ್ಟೆಗೆ ಎಂಟ್ರಿ ನೀಡುವುದು ಬಹುತೇಕ ಖಚಿತ ಆಗಿದ್ದು, ಇದರ ಬೆಲೆಯು ಮೀಡ್ ರೇಂಜ್‌ನಲ್ಲಿ ಇರುವ ಬಗ್ಗೆ ಲೀಕ್ ಮಾಹಿತಿಗಳಿಂದ ತಿಳಿದು ಬಂದಿದೆ.
ವಿವೋ Y100 ಫೋನ್: ಬೆಲೆ ಎಷ್ಟು ಗೊತ್ತಾ?
ಬರಲಿರುವ ನೂತನ ವಿವೋ Y100 ಫೋನ್ 6GB RAM + 128GB ಸ್ಟೋರೇಜ್ ವೇರಿಯಂಟ್ ಆಯ್ಕೆ ಪಡೆದಿರಲಿದ್ದು, ಈ ವೇರಿಯಂಟ್‌ನ ಬೆಲೆಯು 27,000ರೂ. ಗಳ ಪ್ರೈಸ್ ಟ್ಯಾಗ್ ಹೊಂದಿರಲಿದೆ ಎನ್ನಲಾಗಿದೆ. ಇನ್ನು ಈ ಫೋನ್ ಮೀಡಿಯಾ ಟೆಕ್ Dimensity 900 SoC ಪ್ರೊಸೆಸರ್ ಹೊಂದಿರುವುದು ಬಹುತೇಕ ಖಚಿತ ಎನ್ನಲಾಗಿದೆ. ಹಾಗಾದರೆ ಇನ್ನುಳಿದಂತೆ ಯಾವೆಲ್ಲಾ ಫೀಚರ್ಸ್‌ಗಳನ್ನು ಒಳಗೊಂಡಿರಲಿದೆ ಎಂಬುದನ್ನು ಮುಂದೆ ತಿಳಿಯೋಣ ಬನ್ನಿರಿ.

ವಿವೋ Y100 ಫೋನ್: ಪ್ರೊಸೆಸರ್ ಮಾಹಿತಿ
ವಿವೋ Y100 ಫೋನ್ ಮೀಡಿಯಾ ಟೆಕ್ ಡೈಮೆನ್ಸಿಟಿ 900 SoC ಪ್ರೊಸೆಸರ್ ಅನ್ನು ಒಳಗೊಂಡಿರುವುದು ಬಹುತೇಕ ಖಚಿತ ಆಗಿದೆ. ಈ ಚಿಪ್‌ಸೆಟ್ 2.4GHz ಗರಿಷ್ಠ ವೇಗ ಪಡೆದಿರುವ ಸಾಧ್ಯತೆ ಇವೆ ಎನ್ನಲಾಗಿದೆ. ಇದರೊಂದಿಗೆ ಆಂಡ್ರಾಯ್ಡ್ 13 (Android 13) ಓಎಸ್ ಜೊತೆಗೆ Funtouch OS 13 ಸಪೋರ್ಟ್ ಸಹ ಇರಲಿದೆ ಎಂದು ಹೇಳಲಾಗ್ತಿದೆ. ಇನ್ನು ಇದಕ್ಕೆ ಪೂರಕವಾಗಿ 8GB RAM ವೇರಿಯಂಟ್ ಆಯ್ಕೆ ಪಡೆದಿರಲಿದೆ.
ವಿವೋ Y100 ಫೋನ್: ಕ್ಯಾಮೆರಾ ಫೀಚರ್ಸ್
ಕೆಲವು ಲೀಕ್ ಮಾಹಿತಿ ಪ್ರಕಾರ ವಿವೋ Y100 ಫೋನ್ 6 ಇಂಚಿನ ಪೂರ್ಣ ಹೆಚ್‌ಡಿ ಪ್ಲಸ್ ಡಿಸ್‌ಪ್ಲೇ ಅನ್ನು ಒಳಗೊಂಡಿರಲಿದೆ. ಹಾಗೆಯೇ ಈ ಡಿಸ್‌ಪ್ಲೇಯ ಪ್ರತಿ ಇಂಚಿನ ಸಾಂದ್ರತೆಯು 440 ಪಿಕ್ಸೆಲ್ ಆಗಿರಲಿದೆ ಎಂದು ಹೇಳಲಾಗ್ತಿದೆ. ವಿವೋ Y100 ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಪಡೆದಿರಲಿದ್ದು, 64 ಮೆಗಾ ಪಿಕ್ಸೆಲ್ ಸೆನ್ಸಾರ್‌ನ ಮುಖ್ಯ ಕ್ಯಾಮೆರಾ ಒಳಗೊಂಡಿರಲಿದೆ. ಹಾಗೆಯೇ 8 ಮೆಗಾ ಪಿಕ್ಸೆಲ್ ಸೆಕೆಂಡರಿ ಕ್ಯಾಮೆರಾ ಮತ್ತು 2 ಮೆಗಾ ಪಿಕ್ಸೆಲ್ ತೃತೀಯ ಲೆನ್ಸ್ ಅನ್ನು ಒಳಗೊಂಡಿರಲಿದೆ.

ವಿವೋ Y53t ಸ್ಮಾರ್ಟ್‌ಫೋನ್ ಫೀಚರ್ಸ್
ಇತ್ತೀಚಿಗೆ ಬಿಡುಗಡೆ ಆಗಿರುವ ವಿವೋ Y53t ಸ್ಮಾರ್ಟ್‌ಫೋನ್ ಅಧಿಕ ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.51 ಇಂಚಿನ ಫುಲ್ ಹೆಚ್‌ಡಿ+ ಡಿಸ್‌ಪ್ಲೇಯನ್ನ ಹೊಂದಿದೆ. ಅಲ್ಲದೆ ಈ ಡಿಸ್‌ಪ್ಲೇಯು ವಾಟರ್ ಡ್ರಾಪ್ ನಾಚ್ ವಿನ್ಯಾಸವನ್ನ ಹೊಂದಿದ್ದು, 1500:1 ಡಿಸ್‌ಪ್ಲೇ ಕಾಂಟ್ರಾಸ್ಟ್ ಅನುಪಾತವನ್ನ ಒಳಗೊಂಡಿದೆ. ಈ ಸ್ಮಾರ್ಟ್‌ಫೋನ್ ಮೀಡಿಯಾ ಟೆಕ್ ಡೈಮೆನ್ಸಿಟಿ 700 ಪ್ರೊಸೆಸರ್ ವೇಗವನ್ನು ಪಡೆದುಕೊಂಡಿದ್ದು, ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್ 13 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೇಯೇ ಈ ಸ್ಮಾರ್ಟ್‌ಫೋನ್ 4GB + 128GB ಮತ್ತು 6GB + 128GB ಸ್ಟೋರೇಜ್ ಆಂತರಿಕ ಸಂಗ್ರಹ ಸಾಮರ್ಥ್ಯದ ಆಯ್ಕೆಗಳನ್ನು ಒಳಗೊಂಡಿದೆ.
ವಿವೋ Y53t ಸ್ಮಾರ್ಟ್‌ಫೋನ್ ಡ್ಯುಯಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಹೊಂದಿದ್ದು, ಇದರಲ್ಲಿ ಮುಖ್ಯ ಕ್ಯಾಮೆರಾ 13 ಮೆಗಾ ಪಿಕ್ಸೆಲ್ ಸೆನ್ಸಾರ್, ಎರಡನೇ ಕ್ಯಾಮೆರಾವು 2 ಮೆಗಾ ಪಿಕ್ಸೆಲ್ ಸೆನ್ಸಾರ್ ಹೊಂದಿದೆ. ಇನ್ನು 5 ಮೆಗಾ ಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಸಹ ನೀಡಲಾಗಿದೆ. ಅಲ್ಲದೇ ಸ್ಮಾರ್ಟ್‌ಫೋನ್ 5,000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಅನ್ನು ಹೊಂದಿದ್ದು, 15W ಫಾಸ್ಟ್ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ.


Click it and Unblock the Notifications








