Home
ಸುದ್ದಿಜಾಲ

ಆಕರ್ಷಕ ಕ್ಯಾಮೆರಾ ಸೆಟ್‌ಅಪ್‌ನೊಂದಿಗೆ ಎಂಟ್ರಿ ಕೊಟ್ಟ ವಿವೋ Y100 5G! ಬೆಲೆ ಎಷ್ಟು?

ಭಾರತದ ಮಾರುಕಟ್ಟೆಯಲ್ಲಿ ವಿವೋ ಕಂಪೆನಿಯ ಸ್ಮಾರ್ಟ್‌ಫೋನ್‌ಗಳಿಗೆ ಭಾರಿ ಬೇಡಿಕೆಯಿದೆ. ತನ್ನ ಕ್ಯಾಮೆರಾ ಕೇಂದ್ರಿತ ಫಿಚರ್ಸ್‌ಗಳಿಂದ ವಿವೋ ಕಂಪೆನಿಯ ಫೋನ್‌ಗಳು ಹೆಚ್ಚಿನ ಜನಪ್ರಿಯತೆ ಪಡೆದುಕೊಂಡಿವೆ. ಇಷ್ಟು ದಿನ ಸೈಲೆಂಟ್‌ ಆಗಿದ್ದ ವಿವೋ ಇದೀಗ ಮತ್ತೊಮ್ಮೆ ಭಾರತದಲ್ಲಿ ಅಬ್ಬರಿಸುವುದಕ್ಕೆ ಮುಂದಾಗಿದೆ. ಅದರಂತೆ ಭಾರತದಲ್ಲಿ ತನ್ನ Y ಸರಣಿಯಲ್ಲಿ ಹೊಸ ವಿವೋ Y100 5G ಸ್ಮಾರ್ಟ್‌ಫೋನ್‌ ಅನ್ನು ಬಿಡುಗಡೆ ಮಾಡಿದೆ. ಈ ಸ್ಮಾರ್ಟ್‌ಫೋನ್‌ ಮೀಡಿಯಾ ಟೆಕ್ ಡೈಮೆನ್ಸಿಟಿ 900 SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ.

ಆಕರ್ಷಕ ಕ್ಯಾಮೆರಾ ಸೆಟ್‌ಅಪ್‌ನೊಂದಿಗೆ ಎಂಟ್ರಿ ಕೊಟ್ಟ ವಿವೋ Y100 5G! ಬೆಲೆ ಎಷ್ಟು

ಹೌದು, ವಿವೋ ಕಂಪೆನಿ ಭಾರತದಲ್ಲಿ ಹೊಸ ವಿವೋ Y100 5G ಸ್ಮಾರ್ಟ್‌ಫೋನ್‌ ಲಾಂಚ್‌ ಮಾಡಿದೆ. ಈ ಸ್ಮಾರ್ಟ್‌ಫೋನ್‌ ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾಪಿಕ್ಸೆಲ್‌ ಸೆನ್ಸಾರ್‌ ಸಾಮರ್ಥ್ಯವನ್ನು ಪಡೆದಿದೆ. ಜೊತೆಗೆ 4,500mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿದೆ. ಇದು 44W ವೇಗದ ಚಾರ್ಜಿಂಗ್‌ ಬೆಂಬಲಿಸಲಿದೆ. ಹಾಗಾದ್ರೆ ವಿವೋ Y100 5G ಸ್ಮಾರ್ಟ್‌ಫೋನ್‌ ಯಾವೆಲ್ಲಾ ಫೀಚರ್ಸ್‌ ಒಳಗೊಂಡಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತಿವಿ ಓದಿರಿ.

ವಿವೋ Y100 5G ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ

ವಿವೋ Y100 5G ಸ್ಮಾರ್ಟ್‌ಫೋನ್‌ 6.38 ಇಂಚಿನ ಅಮೋಲೆಡ್‌ ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ 1080 x 2400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಇದು 90Hz ರಿಫ್ರೆಶ್ ರೇಟ್‌ ಮತ್ತು 360Hz ಟಚ್ ಸ್ಯಾಂಪ್ಲಿಂಗ್ ರೇಟ್‌ ಅನ್ನು ಬೆಂಬಲಿಸಲಿದೆ. ಇನ್ನು ಡಿಸ್‌ಪ್ಲೇ HDR10+ ಪ್ರಮಾಣೀಕರಣವನ್ನು ಹೊಂದಿದ್ದು,1300 ನಿಟ್ಸ್‌ ಗರಿಷ್ಠ ಬ್ರೈಟ್‌ನೆಸ್‌ ಅನ್ನು ಒಳಗೊಂಡಿದೆ.

ಆಕರ್ಷಕ ಕ್ಯಾಮೆರಾ ಸೆಟ್‌ಅಪ್‌ನೊಂದಿಗೆ ಎಂಟ್ರಿ ಕೊಟ್ಟ ವಿವೋ Y100 5G! ಬೆಲೆ ಎಷ್ಟು

ವಿವೋ Y100 5G ಪ್ರೊಸೆಸರ್‌ ಯಾವುದು?

ವಿವೋ Y100 5G ಸ್ಮಾರ್ಟ್‌ಫೋನ್‌ ಆಕ್ಟಾ-ಕೋರ್ ಮೀಡಿಯಾ ಟೆಕ್ ಡೈಮೆನ್ಸಿಟಿ 900 SoC ಪ್ರೊಸೆಸರ್‌ ವೇಗವನ್ನು ಹೊಂದಿದೆ. ಇದು ಆಂಡ್ರಾಯ್ಡ್‌ 13 ಆಧಾರಿತ ಫನ್‌ಟಚ್‌ OS 13 ನಲ್ಲಿ ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 8GB RAM + 128GB ಇಂಟರ್‌ ಸ್ಟೋರೇಜ್‌ ಅನ್ನು ಬೆಂಬಲಿಸಲಿದೆ. ಇದಲ್ಲದೆ ವಿಸ್ತರಿಸಬಹುದಾದ RAM ಫೀಚರ್ಸ್‌ ಅನ್ನು ಕೂಡ ಒಳಗೊಂಡಿದೆ. ಇದರೊಂದಿಗೆ ಮೆಮೊರಿ ಕಾರ್ಡ್‌ ಮೂಲಕ 1 TB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಬಹುದಾಗಿದೆ.

ವಿವೋ Y100 5G ಕ್ಯಾಮೆರಾ ಸೆಟ್‌ಅಪ್‌ ಎಷ್ಟಿದೆ?

ವಿವೋ Y100 5G ಸ್ಮಾರ್ಟ್‌ಫೋನ್‌ ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾಪಿಕ್ಸೆಲ್ ಸೆನ್ಸಾರ್‌ ಅನ್ನು ಹೊಂದಿದೆ. ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಸೆನ್ಸಾರ್‌ ಮತ್ತು ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಸೆನ್ಸಾರ್‌ ಅನ್ನು ಹೊಂದಿದೆ. ಇದಲ್ಲದೆ 16 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿದೆ.

ಆಕರ್ಷಕ ಕ್ಯಾಮೆರಾ ಸೆಟ್‌ಅಪ್‌ನೊಂದಿಗೆ ಎಂಟ್ರಿ ಕೊಟ್ಟ ವಿವೋ Y100 5G! ಬೆಲೆ ಎಷ್ಟು

ವಿವೋ Y100 5G ಬ್ಯಾಟರಿ ಬ್ಯಾಕ್‌ಅಪ್‌ ಏನಿದೆ?

ವಿವೋ Y100 5G ಸ್ಮಾರ್ಟ್‌ಫೋನ್‌ 44W ವೇಗದ ಚಾರ್ಜಿಂಗ್‌ ಬೆಂಬಲಿಸುವ 4,500mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಡ್ಯುಯಲ್ ಸಿಮ್, 5G, ಡ್ಯುಯಲ್-ಬ್ಯಾಂಡ್ ವೈಫೈ, ಬ್ಲೂಟೂತ್ 5.2, ಯುಎಸ್‌ಬಿ ಟೈಪ್-ಸಿ, ಜಿಪಿಎಸ್ ಮತ್ತು ಒಟಿಜಿಯನ್ನು ಬೆಂಬಲಿಸಲಿದೆ. ಜೊತೆಗೆ ಹೈ-ರೆಸ್ ಆಡಿಯೊ ಪ್ರಮಾಣೀಕರಣದೊಂದಿಗೆ 3.5mm ಆಡಿಯೊ ಜ್ಯಾಕ್ ಅನ್ನು ಬೆಂಬಲಿಸುತ್ತದೆ.

ಭಾರತದಲ್ಲಿ ವಿವೋ Y100 5G ಬೆಲೆ ಮತ್ತು ಲಭ್ಯತೆ

ವಿವೋ Y100 5G ಸ್ಮಾರ್ಟ್‌ಫೋನ್‌ ಭಾರತದಲ್ಲಿ 8GB + 128GB ಸ್ಟೋರೇಜ್‌ ಆಯ್ಕೆಯು 24,999ರೂ. ಬೆಲೆಯಲ್ಲಿ ಲಭ್ಯವಾಗಲಿದೆ. ಈ ಫೋನ್‌ ಪೆಸಿಫಿಕ್ ಬ್ಲೂ ಮತ್ತು ಟ್ವಿಲೈಟ್ ಗೋಲ್ಡ್ ಬಣ್ಣದ ಆಯ್ಕೆಯಲ್ಲಿ ದೊರೆಯಲಿದೆ. ಈ ಸ್ಮಾರ್ಟ್‌ಫೋನ್‌ ಅಮೆಜಾನ್‌, ಫ್ಲಿಪ್‌ಕಾರ್ಟ್‌, ವಿವೋ ಇಂಡಿಯಾ ಇ-ಸ್ಟೋರ್‌ ಹಾಗೂ ರಿಟೇಲ್‌ ಸ್ಟೋರ್‌ಗಳಲ್ಲಿ ಖರೀದಿಸಬಹುದಾಗಿದೆ.

Best Mobiles in India

English summary
Vivo Y100 features a 6.38-inch AMOLED display with a 90Hz refresh rate, and 360Hz touch sampling rate.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+