Home
ಸುದ್ದಿಜಾಲ

Vivo: ವಿವೋದ ಈ ಸ್ಮಾರ್ಟ್‌ಫೋನ್‌ ಮೇಲೆ 34% ಡಿಸ್ಕೌಂಟ್‌!..256GB ಸ್ಟೋರೇಜ್‌ ಆಯ್ಕೆ!

ಮೊಬೈಲ್‌ ಮಾರುಕಟ್ಟೆಯಲ್ಲಿ ಭಾರಿ ಡಿಮ್ಯಾಂಡ್‌ ಪಡೆದುಕೊಂಡಿರುವ ವಿವೋ Y100A 5G ಸ್ಮಾರ್ಟ್‌ಪೋನ್‌ ಇದೀಗ ಬಿಗ್‌ ಡಿಸ್ಕೌಂಟ್‌ನಲ್ಲಿ ಲಭ್ಯವಿದೆ. ಈ ಸ್ಮಾರ್ಟ್‌ಫೋನ್‌ ಮೇಲಿನ ಗ್ರಾಹಕರ ವ್ಯಮೋಹ ಇನ್ನು ಕಡಿಮೆ ಅಗಿಲ್ಲ, ಆದರೆ ಅಮೆಜಾನ್‌ನಲ್ಲಿ ಇದು ಪಡೆದುಕೊಂಡಿರುವ ಡಿಸ್ಕೌಂಟ್‌ ನೋಡಿ ಎಲ್ಲರ ಕಣ್ಣು ಹುಬ್ಬೇರುವಂತೆ ಮಾಡಿದೆ.

ಹೌದು, Vivo Y100A 5G ಸ್ಮಾರ್ಟ್‌ಫೋನ್‌ ಅಮೆಜಾನ್‌ನಲ್ಲಿ ಬರೋಬ್ಬರಿ 34% ಡಿಸ್ಕೌಂಟ್‌ ಪಡೆದುಕೊಂಡಿದೆ. ಇದರಿಂದ ವಿಭಿನ್ನ ಕ್ಯಾಮೆರಾ ಫೀಚರ್ಸ್‌ಗಳಿಂದ ಸದ್ದು ಮಾಡುತ್ತಿರುವ 5G ಸ್ಮಾರ್ಟ್‌ಫೋನ್‌ ಅನ್ನು ಅತಿ ಕಡಿಮೆ ಬೆಲೆಗೆ ಖರೀದಿಸಬಹುದಾಗಿದೆ. ಇನ್ನು ಈ ಸ್ಮಾರ್ಟ್‌ಫೋನ್‌ 256GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯದಲ್ಲಿದೆ ಅನ್ನೋದು ವಿಶೇಷ. ಹಾಗಾದ್ರೆ ಡಿಸ್ಕೌಂಟ್‌ ಪಡೆದುಕೊಂಡ ನಂತರ ಈ ಫೋನ್‌ ಬೆಲೆ ಎಷ್ಟಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

Vivo: ವಿವೋದ ಈ ಸ್ಮಾರ್ಟ್‌ಫೋನ್‌ ಮೇಲೆ 34% ಡಿಸ್ಕೌಂಟ್‌!256GB ಸ್ಟೋರೇಜ್‌ ಆಯ್ಕೆ

ವಿವೋ Y100A 5G ಡಿಸ್ಕೌಂಟ್‌ ನಂತರದ ಬೆಲೆ ಎಷ್ಟು?
ವಿವೋ Y100A 5G ಸ್ಮಾರ್ಟ್‌ಫೋನ್‌ನ 8GB RAM ಮತ್ತು 256GB ಇಂಟರ್‌ ಸ್ಟೋರೇಜ್‌ ಆಯ್ಕೆಯು ಅಮೆಜಾನ್‌ ತಾಣದಲ್ಲಿ 31,999ರೂ ಬೆಲೆಗೆ ಪಟ್ಟಿ ಮಾಡಲಾಗಿದೆ. ಆದರೆ ಅಮೆಜಾನ್‌ ಗ್ರೇಟ್‌ ರಿಪಬ್ಲಿಕ್‌ ಡೇ ಸೇಲ್‌ನಲ್ಲಿ 34% ಪಡೆದುಕೊಂಡಿರುವುದರಿಂದ ಸ್ಮಾರ್ಟ್‌ಪೋನ್‌ ಅನ್ನು ಕೇವಲ 20,993ರೂ ಬೆಲೆಗೆ ಮಾರಾಟವಾಗುತ್ತಿದೆ. ಇದರೊಂದಿಗೆ ಸ್ಮಾರ್ಟ್‌ಫೋನ್‌ ಮೇಲೆ ವಿವಿಧ ಬ್ಯಾಂಕ್‌ ಕಾರ್ಡ್‌ಗಳ ಅಫರ್‌ ಕೂಡ ಲಭ್ಯವಾಗುತ್ತಿದೆ.

ವಿವೋ Y100A 5G ಫೀಚರ್ಸ್‌ ಹೇಗಿದೆ?
ವಿವೋ Y100A 5G ಸ್ಮಾರ್ಟ್‌ಫೋನ್‌ 6.38 ಇಂಚಿನ ಅಮೋಲೆಡ್‌ ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ 1080 x 2400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಇದು 90Hz ರಿಫ್ರೆಶ್ ರೇಟ್‌ ಮತ್ತು 360Hz ಟಚ್ ಸ್ಯಾಂಪ್ಲಿಂಗ್ ರೇಟ್‌ ಅನ್ನು ಬೆಂಬಲಿಸಲಿದೆ. ಇನ್ನು ಡಿಸ್‌ಪ್ಲೇ HDR10+ ಪ್ರಮಾಣೀಕರಣವನ್ನು ಹೊಂದಿದ್ದು, 1300 ನಿಟ್ಸ್‌ ಗರಿಷ್ಠ ಬ್ರೈಟ್‌ನೆಸ್‌ ಅನ್ನು ಒಳಗೊಂಡಿದೆ.

Vivo: ವಿವೋದ ಈ ಸ್ಮಾರ್ಟ್‌ಫೋನ್‌ ಮೇಲೆ 34% ಡಿಸ್ಕೌಂಟ್‌!256GB ಸ್ಟೋರೇಜ್‌ ಆಯ್ಕೆ

ವಿವೋ Y100A 5G ಪ್ರೊಸೆಸರ್‌ ಬಲವೇನು?
ಈ ಸ್ಮಾರ್ಟ್‌ಫೋನ್‌ ಆಕ್ಟಾ-ಕೋರ್ ಸ್ನ್ಯಾಪ್‌ಡ್ರಾಗನ್ 695 SoC ಪ್ರೊಸೆಸರ್‌ ವೇಗವನ್ನು ಹೊಂದಿದೆ. ಇದು ಆಂಡ್ರಾಯ್ಡ್‌ 13 ಆಧಾರಿತ ಫನ್‌ಟಚ್‌ OS 13 ನಲ್ಲಿ ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 8GB RAM + 128GB ಇಂಟರ್‌ ಸ್ಟೋರೇಜ್‌ ಅನ್ನು ಬೆಂಬಲಿಸಲಿದೆ. ಇದಲ್ಲದೆ ವಿಸ್ತರಿಸಬಹುದಾದ RAM ಫೀಚರ್ಸ್‌ ಅನ್ನು ಕೂಡ ಒಳಗೊಂಡಿದೆ. ಇದರೊಂದಿಗೆ ಮೆಮೊರಿ ಕಾರ್ಡ್‌ ಮೂಲಕ 1 TB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಬಹುದಾಗಿದೆ.

Vivo: ವಿವೋದ ಈ ಸ್ಮಾರ್ಟ್‌ಫೋನ್‌ ಮೇಲೆ 34% ಡಿಸ್ಕೌಂಟ್‌!256GB ಸ್ಟೋರೇಜ್‌ ಆಯ್ಕೆ

ವಿವೋ Y100A 5G ಕ್ಯಾಮೆರಾ ಸೆನ್ಸಾರ್‌ ಎಷ್ಟಿದೆ?
ಈ ಸ್ಮಾರ್ಟ್‌ಫೋನ್‌ ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾ ಪಿಕ್ಸೆಲ್ ಸೆನ್ಸಾರ್‌ ಅನ್ನು ಹೊಂದಿದೆ. ಎರಡನೇ ಕ್ಯಾಮೆರಾ 2 ಮೆಗಾ ಪಿಕ್ಸೆಲ್ ಸೆನ್ಸಾರ್‌ ಮತ್ತು ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಸೆನ್ಸಾರ್‌ ಅನ್ನು ಹೊಂದಿದೆ. ಇದಲ್ಲದೆ 16 ಮೆಗಾ ಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿದೆ.

Vivo: ವಿವೋದ ಈ ಸ್ಮಾರ್ಟ್‌ಫೋನ್‌ ಮೇಲೆ 34% ಡಿಸ್ಕೌಂಟ್‌!256GB ಸ್ಟೋರೇಜ್‌ ಆಯ್ಕೆ

ವಿವೋ Y100A 5G ಬ್ಯಾಟರಿ ಬ್ಯಾಕ್‌ಅಪ್‌ ಏನಿದೆ?
ಸ್ಮಾರ್ಟ್‌ಫೋನ್‌ 44W ವೇಗದ ಚಾರ್ಜಿಂಗ್‌ ಬೆಂಬಲಿಸುವ 4,500mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಡ್ಯುಯಲ್ ಸಿಮ್, 5G, ಡ್ಯುಯಲ್-ಬ್ಯಾಂಡ್ ವೈಫೈ, ಬ್ಲೂಟೂತ್ 5.2, ಯುಎಸ್‌ಬಿ ಟೈಪ್-ಸಿ, ಜಿಪಿಎಸ್ ಮತ್ತು ಒಟಿಜಿಯನ್ನು ಬೆಂಬಲಿಸಲಿದೆ. ಜೊತೆಗೆ ಹೈ-ರೆಸ್ ಆಡಿಯೊ ಪ್ರಮಾಣೀಕರಣದೊಂದಿಗೆ 3.5mm ಆಡಿಯೊ ಜ್ಯಾಕ್ ಅನ್ನು ಬೆಂಬಲಿಸುತ್ತದೆ.

Best Mobiles in India

English summary
Vivo Y100A 5G Samrtphone Get 34% Discount in Amazon Great Republic Day sale
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+