ವಿವೋದಿಂದ ಮತ್ತೆ ಹೊಸ ಫೋನ್ ಲಾಂಚ್!..ಕುತೂಹಲ ಮೂಡಿಸಿದ ಬೆಲೆ!
ವಿವೋ ಮೊಬೈಲ್ ಕಂಪೆನಿಯು ಭಾರತದ ಮಾರುಕಟ್ಟೆಯಲ್ಲಿ ಇತ್ತೀಚಿಗೆ ಹೊಸದಾಗಿ ವಿವೋ Y100 5G ಸ್ಮಾರ್ಟ್‌ಫೋನ್ ಅನ್ನು ಬಿಡುಗಡೆ ಮಾಡಿದ್ದು, ಮೀಡ್‌ರೇಂಜ್ ವಿಭಾಗದಲ್ಲಿ ಭಾರೀ ಸದ್ದು ಮಾಡುತ್ತಿದೆ. ಅದರ ಯಶಸ್ಸಿನ ಮುಂದುವರಿದ ಭಾಗವಾಗಿ ವಿವೋ ಸಂಸ್ಥೆಯು ಈಗ ಮತ್ತೇ ಹೊಸದಾಗಿ ವಿವೋ Y100A (Vivo Y100A) ಸ್ಮಾರ್ಟ್‌ಫೋನ್ ಅನ್ನು ಲಾಂಚ್ ಮಾಡಿದೆ. ಈ ಫೋನ್ ಸ್ನ್ಯಾಪ್‌ಡ್ರಾಗನ್ 695 SoC ಪ್ರೊಸೆಸರ್ ಸಾಮರ್ಥ್ಯ ಪಡೆದಿದೆ.
ಹೌದು, ವಿವೋ ಕಂಪೆನಿ ಭಾರತದಲ್ಲಿ ಹೊಸ ವಿವೋ Y100A 5G (Vivo Y100A) ಸ್ಮಾರ್ಟ್‌ಫೋನ್ ಬಿಡುಗಡೆ ಮಾಡಿದೆ. ಈ ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾ ಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯವನ್ನು ಪಡೆದಿದೆ. ಹಾಗೆಯೇ ಇದು 4,500mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿದೆ. ಹಾಗಾದರೇ ವಿವೋ Y100A 5G ಸ್ಮಾರ್ಟ್‌ಫೋನ್ ಇತರೆ ಯಾವೆಲ್ಲಾ ಫೀಚರ್ಸ್ ಒಳಗೊಂಡಿದೆ ಎನ್ನುವುದನ್ನು ಮುಂದೆ ತಿಳಿಯೋಣ ಬನ್ನಿರಿ.

ವಿವೋ Y100A 5G ಡಿಸ್‌ಪ್ಲೇ ರಚನೆ : ವಿವೋ Y100A 5G ಸ್ಮಾರ್ಟ್‌ಫೋನ್ 6.38 ಇಂಚಿನ ಅಮೋಲೆಡ್ ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ 1080 x 2400 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಇದು 90Hz ರಿಫ್ರೆಶ್ ರೇಟ್ ಮತ್ತು 360Hz ಟಚ್ ಸ್ಯಾಂಪ್ಲಿಂಗ್ ರೇಟ್ ಅನ್ನು ಬೆಂಬಲಿಸಲಿದೆ. ಇನ್ನು ಡಿಸ್‌ಪ್ಲೇ HDR10+ ಪ್ರಮಾಣೀಕರಣವನ್ನು ಹೊಂದಿದ್ದು, 1300 ನಿಟ್ಸ್ ಗರಿಷ್ಠ ಬ್ರೈಟ್‌ನೆಸ್ ಅನ್ನು ಒಳಗೊಂಡಿದೆ.

ವಿವೋ Y100A 5G ಪ್ರೊಸೆಸರ್ : ಈ ಸ್ಮಾರ್ಟ್‌ಫೋನ್ ಆಕ್ಟಾ-ಕೋರ್ ಸ್ನ್ಯಾಪ್‌ಡ್ರಾಗನ್ 695 SoC ಪ್ರೊಸೆಸರ್ ವೇಗವನ್ನು ಹೊಂದಿದೆ. ಇದು ಆಂಡ್ರಾಯ್ಡ್ 13 ಆಧಾರಿತ ಫನ್‌ಟಚ್ OS 13 ನಲ್ಲಿ ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 8GB RAM + 128GB ಇಂಟರ್ ಸ್ಟೋರೇಜ್ ಅನ್ನು ಬೆಂಬಲಿಸಲಿದೆ. ಇದಲ್ಲದೆ ವಿಸ್ತರಿಸಬಹುದಾದ RAM ಫೀಚರ್ಸ್ ಅನ್ನು ಕೂಡ ಒಳಗೊಂಡಿದೆ. ಇದರೊಂದಿಗೆ ಮೆಮೊರಿ ಕಾರ್ಡ್ ಮೂಲಕ 1 TB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಬಹುದಾಗಿದೆ.
ವಿವೋ Y100A 5G ಕ್ಯಾಮೆರಾ ಸೆನ್ಸಾರ್ : ಈ ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾ ಪಿಕ್ಸೆಲ್ ಸೆನ್ಸಾರ್ ಅನ್ನು ಹೊಂದಿದೆ. ಎರಡನೇ ಕ್ಯಾಮೆರಾ 2 ಮೆಗಾ ಪಿಕ್ಸೆಲ್ ಸೆನ್ಸಾರ್ ಮತ್ತು ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಸೆನ್ಸಾರ್ ಅನ್ನು ಹೊಂದಿದೆ. ಇದಲ್ಲದೆ 16 ಮೆಗಾ ಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿದೆ.

ವಿವೋ Y100A 5G ಬ್ಯಾಟರಿ ಬ್ಯಾಕ್‌ಅಪ್ : ಸ್ಮಾರ್ಟ್‌ಫೋನ್ 44W ವೇಗದ ಚಾರ್ಜಿಂಗ್ ಬೆಂಬಲಿಸುವ 4,500mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಡ್ಯುಯಲ್ ಸಿಮ್, 5G, ಡ್ಯುಯಲ್-ಬ್ಯಾಂಡ್ ವೈಫೈ, ಬ್ಲೂಟೂತ್ 5.2, ಯುಎಸ್‌ಬಿ ಟೈಪ್-ಸಿ, ಜಿಪಿಎಸ್ ಮತ್ತು ಒಟಿಜಿಯನ್ನು ಬೆಂಬಲಿಸಲಿದೆ. ಜೊತೆಗೆ ಹೈ-ರೆಸ್ ಆಡಿಯೊ ಪ್ರಮಾಣೀಕರಣದೊಂದಿಗೆ 3.5mm ಆಡಿಯೊ ಜ್ಯಾಕ್ ಅನ್ನು ಬೆಂಬಲಿಸುತ್ತದೆ.
ವಿವೋ Y100A 5G ಬೆಲೆ : ವಿವೋ Y100A 5G ಸ್ಮಾರ್ಟ್‌ಫೋನ್ ಭಾರತದಲ್ಲಿ 8GB + 128GB ಸ್ಟೋರೇಜ್ ಆಯ್ಕೆಯಲ್ಲಿ ಲಭ್ಯವಾಗಲಿದೆ. ಈ ಫೋನ್ ಮೆಟಲ್ ಬ್ಲ್ಯಾಕ್, ಟ್ವಿಲೈಟ್ ಗೋಲ್ಡ್ ಮತ್ತು ಪೆಸಿಫಿಕ್ ಬ್ಲೂ ಬಣ್ಣದ ಆಯ್ಕೆಯಲ್ಲಿ ದೊರೆಯಲಿದೆ. ಈ ಸ್ಮಾರ್ಟ್‌ಫೋನ್ ಬೆಲೆ ಹಾಗೂ ಲಭ್ಯತೆ ಬಗ್ಗೆ ಇನ್ನ ಮಾಹಿತಿ ಇಲ್ಲ.


Click it and Unblock the Notifications








