ವಿವೋದಿಂದ ಮತ್ತೆ ಹೊಸ ಫೋನ್ ಲಾಂಚ್!..ಬಿಗ್ ಬ್ಯಾಟರಿ ಜೊತೆಗೆ ಫಾಸ್ಟ್ ಚಾರ್ಜಿಂಗ್!
ವಿವೋ ಮೊಬೈಲ್ ಸಂಸ್ಥೆಯು ಚೀನಾ ಮಾರುಕಟ್ಟೆಯಲ್ಲಿ ಹೊಸದಾಗಿ ವಿವೋ Y100t 5G ಸ್ಮಾರ್ಟ್‌ಫೋನ್ ಅನ್ನು ಬಿಡುಗಡೆ ಮಾಡಿದೆ. ಈ ಫೋನ್ ಮೀಡಿಯಾ ಟೆಕ್ ಡೈಮೆನ್ಸಿಟಿ 8200 ಪ್ರೊಸೆಸರ್ ಸಾಮರ್ಥ್ಯ ಪಡೆದಿದೆ. ಹಾಗೆಯೇ 16 ಮೆಗಾ ಪಿಕ್ಸೆಲ್ ಸೆನ್ಸಾರ್ ಕ್ಯಾಮೆರಾವನ್ನು ಪಡೆದುಕೊಂಡಿದೆ.
ಹೌದು, ವಿವೋ ಕಂಪೆನಿಯ ಹೊಸ ವಿವೋ Y100t 5G ಸ್ಮಾರ್ಟ್‌ಫೋನ್ ಬಿಡುಗಡೆ ಮಾಡಿದೆ. ಈ ಸ್ಮಾರ್ಟ್‌ಫೋನ್ ಡ್ಯುಯಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾ ಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯವನ್ನು ಪಡೆದಿದೆ.

ಇನ್ನು ಈ ಫೋನ್ 5000 mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿದೆ. ಹಾಗೆಯೇ 8GB + 256GB 12GB + 512GB ಆಂತರೀಕ ಸ್ಟೋರೇಜ್ ಅನ್ನು ಒಳಗೊಂಡಿದೆ. ಹಾಗಾದರೇ ವಿವೋ Y100t 5G ಮೊಬೈಲ್ ಇತರೆ ಯಾವೆಲ್ಲಾ ಫೀಚರ್ಸ್ ಒಳಗೊಂಡಿದೆ ಎನ್ನುವುದನ್ನು ಮುಂದೆ ತಿಳಿಯೋಣ ಬನ್ನಿರಿ.
ವಿವೋ Y100t 5G ಫೀಚರ್ಸ್
ವಿವೋ Y100t 5G ಮೊಬೈಲ್ 6.4 ಇಂಚಿನ LCD ಡಿಸ್‌ಪ್ಲೇ ಅನ್ನು ಪಡೆದಿದ್ದು, ಈ ಡಿಸ್‌ಪ್ಲೇ 2388 × 1080 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಇದು 90Hz ರಿಫ್ರೆಶ್ ರೇಟ್ ಮತ್ತು 240Hz ಟಚ್ ಸ್ಯಾಂಪ್ಲಿಂಗ್ ರೇಟ್ ಅನ್ನು ಬೆಂಬಲಿಸಲಿದೆ. ಇನ್ನು ಡಿಸ್‌ಪ್ಲೇ HDR10+ ಪ್ರಮಾಣೀಕರಣವನ್ನು ಹೊಂದಿದ್ದು, 1300 ನಿಟ್ಸ್ ಗರಿಷ್ಠ ಬ್ರೈಟ್‌ನೆಸ್ ಅನ್ನು ಒಳಗೊಂಡಿದೆ.

ಈ ಮೊಬೈಲ್ ಆಕ್ಟಾ-ಕೋರ್ ಮೀಡಿಯಾ ಟೆಕ್ ಡೈಮೆನ್ಸಿಟಿ 8200 ಪ್ರೊಸೆಸರ್ ಪವರ್ ಅನ್ನು ಹೊಂದಿದೆ. ಇದು ಆಂಡ್ರಾಯ್ಡ್ 13 ಆಧಾರಿತ OriginOS 3 ನ ಬೆಂಬಲದೊಂದಿಗೆ ಕೆಲಸ ನಿರ್ವಹಿಸಲಿದೆ. ಹಾಗೆಯೇ 8GB + 256GB 12GB + 512GB ಆಂತರೀಕ ಸ್ಟೋರೇಜ್ ಅನ್ನು ಒಳಗೊಂಡಿದೆ. ಇದಲ್ಲದೆ ವಿಸ್ತರಿಸಬಹುದಾದ RAM ಫೀಚರ್ಸ್ ಅನ್ನು ಕೂಡ ಒಳಗೊಂಡಿದೆ. ಇದರೊಂದಿಗೆ ಮೆಮೊರಿ ಕಾರ್ಡ್ ಮೂಲಕ 1 TB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಬಹುದಾಗಿದೆ.
ಈ ವಿವೋ Y100t 5G ಮೊಬೈಲ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾ ಪಿಕ್ಸೆಲ್ ಸೆನ್ಸಾರ್ ಅನ್ನು ಹೊಂದಿದೆ. ಎರಡನೇ ಕ್ಯಾಮೆರಾ 2 ಮೆಗಾ ಪಿಕ್ಸೆಲ್ ಸೆನ್ಸಾರ್ ಸೌಲಭ್ಯ ಅನ್ನು ಹೊಂದಿದೆ. ಇದಲ್ಲದೆ 16 ಮೆಗಾ ಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿದೆ.
ವಿವೋ Y100A 5G ಸ್ಮಾರ್ಟ್‌ಫೋನ್ 120W ಫಾಸ್ಟ್ ಚಾರ್ಜಿಂಗ್ ಸಪೋರ್ಟ್ ಜೊತೆಗೆ 5000 mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಅನ್ನು ಹೊಂದಿದೆ. ಇನ್ನು ಕನೆಕ್ಟಿವಿಟಿ ಸೌಲಭ್ಯ ಗಳಲ್ಲಿ ಡ್ಯುಯಲ್ ಸಿಮ್, 5G, ಡ್ಯುಯಲ್-ಬ್ಯಾಂಡ್ ವೈಫೈ, ಬ್ಲೂಟೂತ್ 5.2, ಯುಎಸ್‌ಬಿ ಟೈಪ್-ಸಿ, ಜಿಪಿಎಸ್ ಮತ್ತು ಒಟಿಜಿಯನ್ನು ಸಪೋರ್ಟ್ ಪಡೆದಿದೆ. ಇದರ ಜೊತೆಗೆ ಹೈ-ರೆಸ್ ಆಡಿಯೊ ಪ್ರಮಾಣೀಕರಣದೊಂದಿಗೆ 3.5mm ಆಡಿಯೊ ಜ್ಯಾಕ್ ಅನ್ನು ಸಪೋರ್ಟ್ ಮಾಡುತ್ತದೆ.
ವೇರಿಯಂಟ್ ಮಾಹಿತಿ
ವಿವೋ Y100A 5G ಸ್ಮಾರ್ಟ್‌ಫೋನ್ ಚೀನಾದಲ್ಲಿ ಬಿಡುಗಡೆ ಆಗಿದ್ದು, ಇದು ಮೂರು ವೇರಿಯಂಟ್ ಆಯ್ಕೆಗಳನ್ನು ಹೊಂದಿದೆ. ಅವುಗಳು ಕ್ರಮವಾಗಿ 8GB + 256 GB ಸ್ಟೋರೇಜ್, 12 GB + 256 GB ಸ್ಟೋರೇಜ್ ಮತ್ತು 12 GB + 512 GB ಸ್ಟೋರೇಜ್ ಆಗಿವೆ.


Click it and Unblock the Notifications








