ವಿವೋ Y12A ಸ್ಮಾರ್ಟ್‌ಫೋನ್ ಬಿಡುಗಡೆ! ಪ್ರೊಸೆಸರ್ ಯಾವುದು?
ಜನಪ್ರಿಯ ವಿವೋ ಕಂಪೆನಿ ವೈವಿಧ್ಯಮಯ ಸ್ಮಾರ್ಟ್‌ಫೋನ್‌ಗಳಿಗೆ ಹೆಸರುವಾಸಿಯಾಗಿದೆ. ಈಗಾಗಲೇ ಹಲವು ಆಕರ್ಷಕ ಸ್ಮಾರ್ಟ್‌ಫೋನ್‌ಗಳನ್ನು ಪರಿಚಯಿಸಿ ಗ್ರಾಹಕರ ಗಮನ ಸೆಳೆದಿದೆ. ಸದ್ಯ ಇದೀಗ ಹೊಸ ವಿವೋ Y12A ಸ್ಮಾರ್ಟ್‌ಫೋನ್ ಅನ್ನು ಬಿಡುಗಡೆ ಮಾಡಿದೆ. ಇದು ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 439 SoC ಪ್ರೊಸೆಸರ್ ಬಲವನ್ನು ಪಡೆದುಕೊಂಡಿದೆ. ಜೊತೆಗೆ ಈ ಸ್ಮಾರ್ಟ್‌ಫೋನ್ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಸಹ ಒಳಗೊಂಡಿದೆ.

ಹೌದು, ವಿವೋ ಕಂಪೆನಿ ಹೊಸ ವಿವೋ Y12A ಸ್ಮಾರ್ಟ್‌ಫೋನ್ ಅನ್ನು ಥೈಲ್ಯಾಂಡ್ ಮಾರುಕಟ್ಟೆಯಲ್ಲಿ ಲಾಂಚ್ ಮಾಡಿದೆ. ಈ ಸ್ಮಾರ್ಟ್‌ಫೋನ್ 6.5-ಇಂಚಿನ ಹೆಚ್‌ಡಿ + ಡಿಸ್‌ಪ್ಲೇ ಹೊಂದಿದ್ದು, ಡ್ಯುಯೆಲ್ ರಿಯರ್ ಕ್ಯಾಮೆರಾ ಒಳಗೊಂಡಿದೆ. ಇದು ವಾಟರ್‌ಡ್ರಾಪ್-ಶೈಲಿಯ ನಾಚ್ ಅಪ್ ಫ್ರಂಟ್ ಮತ್ತು ಸೈಡ್-ಮೌಂಟೆಡ್ ಫಿಂಗರ್‌ಪ್ರಿಂಟ್ ಸೆನ್ಸಾರ್ ಅನ್ನು ಹೊಂದಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್ ಯಾವೆಲ್ಲಾ ಫೀಚರ್ಸ್‌ಗಳನ್ನು ಒಳಗೊಂಡಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಡಿಸ್‌ಪ್ಲೇ
ವಿವೋ Y12A ಸ್ಮಾರ್ಟ್‌ಫೋನ್ 720x1,600 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.5-ಇಂಚಿನ ಹೆಚ್‌ಡಿ + ಡಿಸ್‌ಪ್ಲೇ ಹೊಂದಿದೆ. ಇನ್ನು ಈ ಡಿಸ್‌ಪ್ಲೇ 20:9 ರಚನೆಯ ಅನುಪಾತವನ್ನು ಪಡೆದುಕೊಂಡಿದೆ. ಇದು ವಾಟರ್ ಡ್ರಾಪ್ ನಾಚ್ ವಿನ್ಯಾಸವನ್ನು ಹೊಂದಿದೆ.

ಪ್ರೊಸೆಸರ್
ಇದು ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 439 SoC ಪ್ರೊಸೆಸರ್ ಬಲವನ್ನು ಪಡೆದುಕೊಂಡಿದ್ದು, ಆಂಡ್ರಾಯ್ಡ್ 11 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 3GB RAM ಮತ್ತು 32GB ಇಂಟರ್ ಸ್ಟೋರೇಜ್ ಅನ್ನು ಒಳಗೊಂಡಿದೆ. ಇದಲ್ಲದೆ ಮೆಮೊರಿ ಕಾರ್ಡ್ ಬೆಂಬಲದೊಂದಿಗೆ 256 GB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಿಕೊಳ್ಳಬಹುದಾಗಿದೆ.

ಕ್ಯಾಮೆರಾ
ವಿವೋ Y12A ಸ್ಮಾರ್ಟ್‌ಫೋನ್ ಡ್ಯುಯಲ್ ರಿಯರ್ ಕ್ಯಾಮೆರಾ ಸೆಟಪ್ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 13 ಮೆಗಾಪಿಕ್ಸೆಲ್ ಸೆನ್ಸಾರ್, ಮತ್ತು ಎರಡನೇ ಕ್ಯಾಮೆರಾ 2ಮೆಗಾಫಿಕ್ಸೆಲ್ ಸೆನ್ಸಾರ್ ಅನ್ನು ಹೊಂದಿದೆ. ಜೊತೆಗೆ 8 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಸಹ ಒಳಗೊಂಡಿದೆ.

ಬ್ಯಾಟರಿ ಮತ್ತು ಇತರೆ
ಇನ್ನು ಈ ಸ್ಮಾರ್ಟ್‌ಫೋನ್ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 16.3 ಗಂಟೆಗಳ ಹೆಚ್‌ಡಿ ಮೂವಿ ಪ್ಲೇಬ್ಯಾಕ್ ವರೆಗೆ ಇರುತ್ತದೆ ಎಂದು ಹೇಳುತ್ತದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಮೈಕ್ರೋ-ಯುಎಸ್‌ಬಿ ಪೋರ್ಟ್, 3.5 ಎಂಎಂ ಆಡಿಯೊ ಜ್ಯಾಕ್, ವೈ-ಫೈ, ಬ್ಲೂಟೂತ್ ಮತ್ತು ಸೈಡ್-ಮೌಂಟೆಡ್ ಫಿಂಗರ್‌ಪ್ರಿಂಟ್ ಸೆನ್ಸಾರ್ ಅನ್ನು ಬೆಂಬಬಲಿಸಲಿದೆ.

ಬೆಲೆ ಮತ್ತು ಲಭ್ಯತೆ
ವಿವೊ Y12A ಸ್ಮಾರ್ಟ್‌ಫೋನ್ ಥಾಯ್ಲೆಂಡ್‌ನಲ್ಲಿ ಏಕೈಕ 3GB RAM + 32GB ಇಂಟರ್ ಸ್ಟೋರೇಜ್ ಮಾದರಿಗಾಗಿ ಟಿಎಚ್‌ಬಿ 4,499 (ಸರಿಸುಮಾರು 10557ರೂ.) ಬೆಲೆಯಿದೆ. ಇದು ನೀಲಿ ಮತ್ತು ಹಸಿರು ಬಣ್ಣದ ಆಯ್ಕೆಗಳಲ್ಲಿ ಲಭ್ಯವಿದೆ. ಈ ಪ್ರದೇಶದ ಎಲ್ಲಾ ವಿವೋ-ಬ್ರಾಂಡ್ ಸ್ಟೋರ್ ಮತ್ತು ವಿತರಕರ ಮೂಲಕ ಸಿದ್ಧವಾಗಿದೆ ಎಂದು ಕಂಪನಿ ಹೇಳಿದೆ.


Click it and Unblock the Notifications




