ಭಾರತದಲ್ಲಿ ಅಗ್ಗದ ಬೆಲೆಯ ವಿವೋ Y12G ಸ್ಮಾರ್ಟ್‌ಫೋನ್ ಬಿಡುಗಡೆ!
ಸ್ಮಾರ್ಟ್‌ಫೋನ್ ಮಾರುಕಟ್ಟೆಯಲ್ಲಿ ವಿವೋ ಕಂಪೆನಿ ತನ್ನದೇ ಆದ ಪ್ರಾಬಲ್ಯವನ್ನು ಹೊಂದಿದೆ. ಈಗಾಗಲೇ ಹಲವು ಆಕರ್ಷಕ ಸ್ಮಾರ್ಟ್‌ಫೋನ್‌ಗಳನ್ನು ಪರಿಚಯಿಸಿ ಸೈ ಎನಿಸಿಕೊಂಡಿದೆ. ಸದ್ಯ ಇದೀಗ ವಿವೋ ಹೊಸ ವಿವೋ Y12G ಸ್ಮಾರ್ಟ್‌ಫೋನ್ ಅನ್ನು ಭಾರತದಲ್ಲಿ ಲಾಂಚ್ ಮಾಡಿದೆ. ಇನ್ನು ಈ ಹೊಸ ಸ್ಮಾರ್ಟ್‌ಫೋನ್ ಡ್ಯುಯಲ್ ರಿಯರ್ ಕ್ಯಾಮೆರಾ ಸೆಟಪ್ ಹೊಂದಿದ್ದು, ವಾಟರ್ ಡ್ರಾಪ್ ಶೈಲಿಯ ಡಿಸ್‌ಪ್ಲೇ ನೋಚ್ ವಿನ್ಯಾಸವನ್ನು ಪಡೆದುಕೊಂಡಿದೆ.

ಹೌದು, ವಿವೋ ಕಂಪೆನಿ ಹೊಸ ವಿವೋ Y12G ಸ್ಮಾರ್ಟ್‌ಫೋನ್ ಅನ್ನು ಭಾರತದ ಮಾರುಕಟ್ಟೆಯಲ್ಲಿ ಪರಿಚಯಿಸಿದೆ. ಇದು ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 439 SoC ಪ್ರೊಸೆಸರ್ ಸಾಮರ್ಥ್ಯವನ್ನು ಪಡೆದಿದೆ. ಇನ್ನು ಈ ಸ್ಮಾರ್ಟ್‌ಫೋನ್ 6.51 ಇಂಚಿನ ಹೆಚ್‌ಡಿ ಪ್ಲಸ್ ಡಿಸ್‌ಪ್ಲೇ ಹೊಂದಿದೆ. ಜೊತೆಗೆ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿದೆ. ಇನ್ನುಳಿದಂತೆ ಈ ಹೊಸ ಸ್ಮಾರ್ಟ್‌ಫೋನ್ ಏನೆಲ್ಲಾ ವಿಶೇಷತೆ ಒಳಗೊಂಡಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಡಿಸ್‌ಪ್ಲೇ ವಿಶೇಷ
ವಿವೋ Y12G ಸ್ಮಾರ್ಟ್‌ಫೋನ್ 720x1,600 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.51-ಇಂಚಿನ ಹೆಚ್‌ಡಿ+ ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನು ಈ ಡಿಸ್‌ಪ್ಲೇ 20:9 ರಚನೆಯ ಅನುಪಾತವನ್ನು ಒಳಗೊಂಡಿದೆ.

ಪ್ರೊಸೆಸರ್
ಇದು ಆಕ್ಟಾ-ಕೋರ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 439 SoC ಪ್ರೊಸೆಸರ್ ಬಲವನ್ನು ಪಡೆದುಕೊಂಡಿದ್ದು, ಆಂಡ್ರಾಯ್ಡ್ 11 ನಲ್ಲಿ ಫೌಂಟಚ್ ಓಎಸ್ 11 ನೊಂದಿಗೆ ಕಾರ್ಯನಿರ್ವಹಿಸುತ್ತದೆ. ಹಾಗೆಯೇ 3GB RAM ಮತ್ತು 32GB ಇಂಟರ್ ಸ್ಟೋರೇಜ್ ಅನ್ನು ಒಳಗೊಂಡಿದೆ. ಇದಲ್ಲದೆ ಮೈಕ್ರೋ ಎಸ್‌ಡಿ ಕಾರ್ಡ್ ಮೂಲಕ 256GB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಬಹುದಾಗಿದೆ.

ಡ್ಯುಯೆಲ್ ಕ್ಯಾಮೆರಾ
ಇನ್ನು ಈ ಸ್ಮಾರ್ಟ್‌ಫೋನ್ ಡ್ಯುಯಲ್ ರಿಯರ್ ಕ್ಯಾಮೆರಾ ಸೆಟಪ್ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 13 ಮೆಗಾಪಿಕ್ಸೆಲ್ ಸೆನ್ಸಾರ್ ಮತ್ತು ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಸೆನ್ಸಾರ್ f/2.4 ಲೆನ್ಸ್ ಹೊಂದಿದೆ. ಇದಲ್ಲದೆ 8 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾ ಹೊಂದಿದೆ. ಇನ್ನು ಕ್ಯಾಮೆರಾ ಫೀಚರ್ಸ್‌ಗಳಲ್ಲಿ ಡಿಜಿಟಲ್ ಜೂಮ್, ಆಟೋ ಫ್ಲ್ಯಾಶ್, ಫೇಸ್ ಡಿಟೆಕ್ಷನ್, ಟಚ್ ಟು ಫೋಕಸ್ ಅನ್ನು ಒಳಗೊಂಡಿದೆ.

ಬ್ಯಾಟರಿ ಮತ್ತು ಇತರೆ
ವಿವೋ Y12G ಸ್ಮಾರ್ಟ್‌ಫೋನ್ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 10W ಚಾರ್ಜಿಂಗ್ ಬೆಂಬಲವನ್ನು ಹೊಂದಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 4G LTE, ವೈಫೈ, ಬ್ಲೂಟೂತ್ v5.0, GPS/ A-GPS, FM ರೇಡಿಯೋ, ಮೈಕ್ರೋ- USB ಮತ್ತು 3.5mm ಹೆಡ್‌ಫೋನ್ ಜ್ಯಾಕ್ ಅನ್ನು ಬೆಂಬಲಿಸಲಿದೆ.

ಬೆಲೆ ಮತ್ತು ಲಭ್ಯತೆ
ಭಾರತದಲ್ಲಿ ವಿವೋ Y12G ಸ್ಮಾರ್ಟ್‌ಫೋನ್ ಏಕೈಕ 3GB RAM + 32GB ಸ್ಟೋರೇಜ್ ರೂಪಾಂತರಕ್ಕೆ 10,990.ರೂ ಬೆಲೆಯನ್ನು ಹೊಂದಿದೆ. ಪ್ರಸ್ತುತ ಈ ಸ್ಮಾರ್ಟ್‌ಫೋನ್ ಗ್ಲೇಸಿಯರ್ ಬ್ಲೂ ಮತ್ತು ಫ್ಯಾಂಟಮ್ ಬ್ಲಾಕ್ ಬಣ್ಣಗಳ ಆಯ್ಕೆಯಲ್ಲಿ ಲಭ್ಯವಾಗಲಿದೆ. ಇದು ವಿವೋ ಇಂಡಿಯಾ ವೆಬ್‌ಸೈಟ್ ಮೂಲಕ ಖರೀದಿಗೆ ಲಭ್ಯವಿದೆ.


Click it and Unblock the Notifications




