ಹೊಸ ಆವೃತ್ತಿಯಲ್ಲಿ ಅಗ್ಗದ ವಿವೋ Y12s ಸ್ಮಾರ್ಟ್‌ಫೋನ್ ಬಿಡುಗಡೆ!
ಜನಪ್ರಿಯ ಮೊಬೈಲ್ ತಯಾರಿಕಾ ಕಂಪನಿಯ ವಿವೋ ಅಗ್ಗದ ಪ್ರೈಸ್‌ಟ್ಯಾಗ್ನಲ್ಲಿ ಕೆಲವು ಜನಪ್ರಿಯ ಫೋನ್‌ಗಳನ್ನು ಪರಿಚಯಿಸಿದೆ. ಆ ಪೈಕಿ ವಿವೋ Y12s ಸ್ಮಾರ್ಟ್‌ಫೋನ್ ಒಂದಾಗಿದೆ. ಇದೀಗ ಕಂಪನಿಯು ವಿವೋ Y12s (2021) ಸ್ಮಾರ್ಟ್‌ಫೋನ್ ಅಪ್‌ಗ್ರೇಡ್ ಆವೃತ್ತಿಯಲ್ಲಿ ಮತ್ತೆ ಬಿಡುಗಡೆ ಮಾಡಿದೆ. ಈ ಫೋನ್ ಎಂಟ್ರಿ ಲೆವೆಲ್ ಮಾದರಿಯದ್ದಾಗಿದ್ದು, ಆದರೆ ಕೆಲವು ಆಕರ್ಷಕ ಫೀಚರ್ಸ್‌ಗಳ ಮೂಲಕ ಗ್ರಾಹಕರನ್ನು ಸೆಳೆದಿದೆ.

ಹೌದು, ವಿವೋ ಸಂಸ್ಥೆ ನೂತನವಾಗಿ ವಿವೋ Y12s ಅಪ್‌ಗ್ರೇಡ್ ಆವೃತ್ತಿಯ ಸ್ಮಾರ್ಟ್‌ಫೋನ್ ಅನ್ನು ವಿಯೆಟ್ನಾಂನಲ್ಲಿ ಅನಾವರಣ ಮಾಡಿದೆ. ಈ ಫೋನ್ ಡ್ಯುಯೆಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಹೊಂದಿದೆ. ಹಾಗೆಯೇ ಸ್ನ್ಯಾಪ್‌ಡ್ರಾಗನ್ 439 SoC ಪ್ರೊಸೆಸರ್ ಸಪೋರ್ಟ್ ಅನ್ನು ಒಳಗೊಂಡಿದ್ದು, ಇದಕ್ಕೆ ಪೂರಕವಾಗಿ 3GB RAM ಮತ್ತು 32GB ಸ್ಟೋರೇಜ್ ವೇರಿಯಂಟ್ ಆಯ್ಕೆಯನ್ನು ಒಳಗೊಂಡಿದೆ. ಈ ಸ್ಮಾರ್ಟ್‌ಫೋನ್ ಬ್ಲ್ಯಾಕ್ ಮತ್ತು ಬ್ಲೂ ಕಲರ್ ಆಯ್ಕೆಗಳಲ್ಲಿ ಸಿಗಲಿದೆ. ಇನ್ನುಳಿದಂತೆ ಈ ಫೋನಿನ ಇತರೆ ಫೀಚರ್ಸ್‌ಗಳು ಯಾವುವು ಎಂಬುದನ್ನು ಮುಂದೆ ನೋಡೋಣ ಬನ್ನಿರಿ.

ಡಿಸ್‌ಪ್ಲೇ ವಿನ್ಯಾಸ
ವಿವೊ Y12s (2021) ಸ್ಮಾರ್ಟ್‌ಫೋನ್ 720x1,600 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.51 ಇಂಚಿನ ಹೆಚ್‌ಡಿ ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ ವಾಟರ್ ಡ್ರಾಪ್ ನಾಚ್ ಶೈಲಿಯನ್ನು ಹೊಂದಿದೆ. ಇದು 20: 9 ರಚನೆಯ ಅನುಪಾತವನ್ನು ಹೊಂದಿದೆ. ವಿಡಿಯೋ ಕರೆ ಹಾಗೂ ವಿಡಿಯೋ ವೀಕ್ಷಣೆಗೆ ಯೋಗ್ಯವಾದ ಡಿಸ್‌ಪ್ಲೇ ಮಾದರಿಯನ್ನು ಇದು ಹೊಂದಿದೆ.

ಪ್ರೊಸೆಸರ್ ಕಾರ್ಯ
ವಿವೊ Y12s (2021) ಸ್ಮಾರ್ಟ್‌ಫೋನ್ ಆಕ್ಟಾ-ಕೋರ್ ಮೀಡಿಯಾ ಟೆಕ್ ಹಿಲಿಯೊ P 35 SoC ಪ್ರೊಸೆಸರ್ ಅನ್ನು ಹೊಂದಿದ್ದು, ಆಂಡ್ರಾಯ್ಡ್ 10 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಜೊತೆಗೆ 3GB RAM ಮತ್ತು 32GB ಇಂಟರ್ ಸ್ಟೋರೇಜ್ ಸಾಮರ್ಥ್ಯವನ್ನು ಹೊಂದಿದೆ. ಇದಲ್ಲದೆ ಮೈಕ್ರೋ ಎಸ್‌ಡಿ ಕಾರ್ಡ್ ಮೂಲಕ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಬಹುದಾಗಿದೆ.

ಕ್ಯಾಮೆರಾ ರಚನೆ
ವಿವೊ Y12s ಸ್ಮಾರ್ಟ್‌ಫೋನ್ ಡ್ಯುಯಲ್ ರಿಯರ್ ಕ್ಯಾಮೆರಾ ಸೆಟಪ್ ಹೊಂದಿದೆ. ಇದು 13 ಮೆಗಾಪಿಕ್ಸೆಲ್ ಪ್ರೈಮರಿ ಸೆನ್ಸಾರ್ ,2 ಮೆಗಾಪಿಕ್ಸೆಲ್ ಸೆಕೆಂಡರಿ ಸೆನ್ಸಾರ್ ಕ್ಯಾಮೆರಾಗಳನ್ನು ಹೊಂದಿದೆ. ಇದಲ್ಲದೆ 8 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿದೆ.

ಬ್ಯಾಟರಿ ಮತ್ತು ಇತರೆ
ವಿವೊ Y12s (2021) ಸ್ಮಾರ್ಟ್‌ಫೋನ್ 5,000mAh ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ಅಪ್ ಅನ್ನು ಹೊಂದಿದೆ. ಇದು 10W ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 4G LTE, ವೈ-ಫೈ, ಬ್ಲೂಟೂತ್ 5.0, GPS, FM ರೇಡಿಯೋ ಮತ್ತು ಮೈಕ್ರೋ-USB ಪೋರ್ಟ್ ಅನ್ನು ಬೆಂಬಲಿಸಲಿದೆ.

ಬೆಲೆ ಮತ್ತು ಲಭ್ಯತೆ
ವಿವೋ Y12s ಸ್ಮಾರ್ಟ್‌ಫೋನ್ ಬೆಲೆ ವಿಯೆಟ್ನಾಂನಲ್ಲಿ VND 3,290,000 (ಭಾರತದಲ್ಲಿ ಅಂದಾಜು 10,500ರೂ. ಎನ್ನಲಾಗಿದೆ). ಈ ಸ್ಮಾರ್ಟ್‌ಫೋನ್ ಬ್ಲ್ಯಾಕ್ ಮತ್ತು ಬ್ಲೂ ಕಲರ್ ಆಯ್ಕೆಗಳಲ್ಲಿ ಲಭ್ಯವಾಗಲಿದೆ.


Click it and Unblock the Notifications








