ಭಾರತದಲ್ಲಿ ಅಗ್ಗದ ಬೆಲೆಯ ವಿವೋ Y12s ಸ್ಮಾರ್ಟ್‌ಫೋನ್ ಬಿಡುಗಡೆ!
ಬಹುನಿರೀಕ್ಷಿತ ವಿವೋ Y12s ಸ್ಮಾರ್ಟ್‌ಫೋನ್ ಭಾರತದಲ್ಲಿ ಬಿಡುಗಡೆ ಆಗಿದೆ. ಡ್ಯುಯಲ್ ರಿಯರ್ ಕ್ಯಾಮೆರಾ ಸೆಟಪ್ ಹಾಗೂ 5,000mAh ಸಾಮರ್ಥ್ಯದ ಬ್ಯಾಟರಿಯೊಂದಿಗೆ ಭಾರತದಲ್ಲಿ ಅನಾವರಣಗೊಳಿಸಲಾಗಿದೆ. ಇನ್ನು ಈ ಹೊಸ ವಿವೋ ಫೋನ್ ವಾಟರ್‌ಡ್ರಾಪ್ ಶೈಲಿಯ ಡಿಸ್‌ಪ್ಲೇ ನಾಚ್‌ನೊಂದಿಗೆ ಬರುತ್ತದೆ. ಇನ್ನು ವಿವೊ Y12s ಸ್ಮಾರ್ಟ್‌ಫೋನ್ 3GB RAM ಮತ್ತು 32GB ಇಂಟರ್ ಸ್ಟೋರೇಜ್ ಸಾಮರ್ಥ್ಯವನ್ನು ಹೊಂದಿದೆ.

ಹೌದು, ವಿವೋ ಸಂಸ್ಥೆ ತನ್ನ ಹೊಸ ವಿವೋ Y12s ಸ್ಮಾರ್ಟ್‌ಫೋನ್ ಅನ್ನು ಭಾರತದಲ್ಲಿ ಬಿಡುಗಡೆ ಮಾಡಿದೆ. ಇದು ಡ್ಯುಯೆಲ್ ರಿಯರ್ ಕ್ಯಾಮೆರಾ ಸೆಟಪ್ ಹೊಂದಿದೆ. ಇನ್ನು ಕಳೆದ ವರ್ಷ ಜೂನ್‌ನಲ್ಲಿ ಭಾರತದಲ್ಲಿ ಪಾದಾರ್ಪಣೆ ಮಾಡಿದ ವಿವೊ Y12 ಗಿಂತ ಇದು ಸ್ವಲ್ಪ ಅಪ್‌ಗ್ರೇಡ್ ಆಗಿ ಬರುತ್ತದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್ ವಿಶೇಷತೆ ಏನು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತಿವಿ ಓದಿರಿ.

ಡಿಸ್‌ಪ್ಲೇ
ವಿವೊ Y12s ಸ್ಮಾರ್ಟ್‌ಫೋನ್ 720x1,600 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.51 ಇಂಚಿನ ಹೆಚ್‌ಡಿ ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ ವಾಟರ್ ಡ್ರಾಪ್ ನಾಚ್ ಶೈಲಿಯನ್ನು ಹೊಂದಿದೆ. ಇದು 20: 9 ರಚನೆಯ ಅನುಪಾತವನ್ನು ಹೊಂದಿದೆ. ವಿಡಿಯೋ ಕರೆ ಹಾಗೂ ವಿಡಿಯೋ ವೀಕ್ಷಣೆಗೆ ಯೋಗ್ಯವಾದ ಡಿಸ್‌ಪ್ಲೇ ಮಾದರಿಯನ್ನು ಇದು ಹೊಂದಿದೆ.

ಪ್ರೊಸೆಸರ್
ಇದು ಆಕ್ಟಾ-ಕೋರ್ ಮೀಡಿಯಾ ಟೆಕ್ ಹಿಲಿಯೊ P 35 SoC ಪ್ರೊಸೆಸರ್ ಅನ್ನು ಹೊಂದಿದ್ದು, ಆಂಡ್ರಾಯ್ಡ್ 10 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಜೊತೆಗೆ 3GB RAM ಮತ್ತು 32GB ಇಂಟರ್ ಸ್ಟೋರೇಜ್ ಸಾಮರ್ಥ್ಯವನ್ನು ಹೊಂದಿದೆ. ಇದಲ್ಲದೆ ಮೈಕ್ರೋ ಎಸ್‌ಡಿ ಕಾರ್ಡ್ ಮೂಲಕ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಬಹುದಾಗಿದೆ.

ಕ್ಯಾಮೆರಾ
ವಿವೊ Y12s ಸ್ಮಾರ್ಟ್‌ಫೋನ್ ಡ್ಯುಯಲ್ ರಿಯರ್ ಕ್ಯಾಮೆರಾ ಸೆಟಪ್ ಹೊಂದಿದೆ. ಇದು 13 ಮೆಗಾಪಿಕ್ಸೆಲ್ ಪ್ರೈಮರಿ ಸೆನ್ಸಾರ್ ,2 ಮೆಗಾಪಿಕ್ಸೆಲ್ ಸೆಕೆಂಡರಿ ಸೆನ್ಸಾರ್ ಕ್ಯಾಮೆರಾಗಳನ್ನು ಹೊಂದಿದೆ. ಇದಲ್ಲದೆ 8 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿದೆ.

ಬ್ಯಾಟರಿ ಮತ್ತು ಇತರೆ
ಈ ಸ್ಮಾರ್ಟ್‌ಫೋನ್ 5,000mAh ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ಅಪ್ ಅನ್ನು ಹೊಂದಿದೆ. ಇದು 10W ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 4G LTE, ವೈ-ಫೈ, ಬ್ಲೂಟೂತ್ 5.0, GPS, FM ರೇಡಿಯೋ ಮತ್ತು ಮೈಕ್ರೋ-USB ಪೋರ್ಟ್ ಅನ್ನು ಬೆಂಬಲಿಸಲಿದೆ.

ಬೆಲೆ ಮತ್ತು ಲಭ್ಯತೆ
ಭಾರತದಲ್ಲಿ ವಿವೋ Y12s ಸ್ಮಾರ್ಟ್‌ಫೋನ್ ಬೆಲೆ 9,990 ರೂ.ಆಗಿದೆ. ಈ ಸ್ಮಾರ್ಟ್‌ಫೋನ್ ಫ್ಯಾಂಟಮ್ ಬ್ಲ್ಯಾಕ್ ಮತ್ತು ಗ್ಲೇಸಿಯರ್ ಬ್ಲೂ ಕಲರ್ ಆಯ್ಕೆಗಳಲ್ಲಿ ಲಭ್ಯವಾಗಲಿದೆ. ಇದು ವಿವೋ ಇಂಡಿಯಾ ಆನ್‌ಲೈನ್ ಸ್ಟೋರ್, ಅಮೆಜಾನ್, ಫ್ಲಿಪ್‌ಕಾರ್ಟ್, ಪೇಟಿಎಂ, ಟಾಟಾ ಕ್ಲಿಕ್, ಮತ್ತು ದೇಶದ ಎಲ್ಲಾ ಪಾಲುದಾರ ಚಿಲ್ಲರೆ ಅಂಗಡಿಗಳ ಮೂಲಕ ಖರೀದಿಗೆ ಲಭ್ಯವಿರುತ್ತದೆ.


Click it and Unblock the Notifications




