ಭಾರತದಲ್ಲಿ ವಿವೋ Y15c ಸ್ಮಾರ್ಟ್‌ಫೋನ್‌ ಲಾಂಚ್‌! ವಿಶೇಷತೆ ಏನು?

|

ವಿವೋ ಕಂಪೆನಿ ಭಾರತದ ಮಾರುಕಟ್ಟೆಯಲ್ಲಿ ವಿಶೇಷ ಸ್ಮಾರ್ಟ್‌ಫೋನ್‌ಗಳಿಗೆ ಪ್ರಸಿದ್ಧಿ ಪಡೆದುಕೊಂಡಿದೆ. ಈಗಾಗಲೇ ಹಲವು ಆಕರ್ಷಕ ಸ್ಮಾರ್ಟ್‌ಫೋನ್‌ಗಳನ್ನು ಪರಿಚಯಿಸಿ ಸೈ ಎನಿಸಿಕೊಂಡಿದೆ. ಸದ್ಯ ಇದೀಗ ಭಾರತದಲ್ಲಿ ತನ್ನ ಹೊಸ ವಿವೋ Y15c ಸ್ಮಾರ್ಟ್‌ಫೋನ್‌ ಲಾಂಚ್‌ ಮಾಡಿದೆ. ಈ ಸ್ಮಾರ್ಟ್‌ಫೋನ್‌ ಎಂಟ್ರಿ ಲೆವೆಲ್‌ ಸ್ಮಾರ್ಟ್‌ಫೋನ್‌ ಆಗಿದ್ದು, ಡ್ಯುಯಲ್‌ ರಿಯರ್‌ ಕ್ಯಾಮೆರಾ ಸೆಟಪ್‌ ಅನ್ನು ಒಳಗೊಂಡಿದೆ.

ವಿವೋ

ಹೌದು, ವಿವೋ ಕಂಪೆನಿ ಭಾರತದಲ್ಲಿ Y15c ಸ್ಮಾರ್ಟ್‌ಫೋನ್‌ ಬಿಡುಗಡೆ ಮಾಡಿದೆ. ಈ ಸ್ಮಾರ್ಟ್‌ಫೋನ್‌ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿದೆ. ಇದು ಮಿಡಿಯಾಟೆಕ್‌ ಹಿಲಿಯೋ P35 SoC ಪ್ರೊಸೆಸರ್‌ ಬಲವನ್ನು ಪಡೆದುಕೊಂಡಿದೆ. ಇನ್ನು ಈ ಫೋನ್‌ ಮಿಸ್ಟಿಕ್ ಬ್ಲೂ ಮತ್ತು ವೇವ್ ಗ್ರೀನ್ ಬಣ್ಣದ ಆಯ್ಕೆಗಳನ್ನು ಹೊಂದಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್‌ ಯಾವೆಲ್ಲಾ ವಿಶೇಷತೆ ಒಳಗೊಂಡಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ

ವಿವೋ Y15c ಸ್ಮಾರ್ಟ್‌ಫೋನ್‌ 720 x 1600 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.55 ಇಂಚಿನ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇ ಹೊಂದಿದೆ. ಇನ್ನು ಈ ಡಿಸ್‌ಪ್ಲೇ ವಾಟರ್-ಡ್ರಾಪ್ ನಾಚ್ ಡಿಸ್‌ಪ್ಲೇ ಆಗಿದೆ. ಇದು 60Hz ಸ್ಕ್ರೀನ್ ರಿಫ್ರೆಶ್ ರೇಟ್‌ ಹೊಂದಿದ್ದು, IPS LCD ಸ್ಕ್ರೀನ್‌ ಹೊಂದಿದೆ. ಜೊತೆಗೆ ಈ ಡಿಸ್‌ಪ್ಲೇ ಐ ಪ್ರೊಟೆಕ್ಷನ್ ಮೋಡ್ ಅನ್ನು ಹೊಂದಿದ್ದು, ಹಾನಿಕಾರಕ ನೀಲಿ ಬೆಳಕನ್ನು ಫಿಲ್ಟರ್ ಮಾಡುತ್ತದೆ.

ಪ್ರೊಸೆಸರ್‌ ಯಾವುದು?

ಪ್ರೊಸೆಸರ್‌ ಯಾವುದು?

ವಿವೋ Y15c ಸ್ಮಾರ್ಟ್‌ಫೋನ್‌ ಮಿಡಿಯಾಟೆಕ್‌ ಹಿಲಿಯೋ P35 SoC ಪ್ರೊಸೆಸರ್‌ ಬಲವನ್ನು ಪಡೆದುಕೊಂಡಿದೆ. ಇದು ಆಂಡ್ರಾಯ್ಡ್‌ 12 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 3GB RAM ಮತ್ತು 32 GB ಹಾಗೂ 64GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯವನ್ನು ಹೊಂದಿದೆ. ಇದಲ್ಲದೆ ಮೈಕ್ರೋ SD ಕಾರ್ಡ್ ಬೆಂಬಲದೊಂದಿಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಬಹುದಾಗಿದೆ.

ಕ್ಯಾಮೆರಾ ವಿಶೇಷ

ಕ್ಯಾಮೆರಾ ವಿಶೇಷ

ವಿವೋ Y15c ಸ್ಮಾರ್ಟ್‌ಫೋನ್‌ ಡ್ಯುಯಲ್‌ ರಯರ್‌ ಕ್ಯಾಮೆರಾ ಸೆಟಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 13ಮೆಗಾಪಿಕ್ಸೆಲ್‌ ಸೆನ್ಸಾರ್‌ F/2.2 ಲೆನ್ಸ್‌ ಅನ್ನು ಹೊಂದಿದೆ. ಎರಡನೇ ಕ್ಯಾಮೆರಾ 2ಮೆಗಾಪಿಕ್ಸೆಲ್‌ ಸೆನ್ಸಾರ್‌ F/2.4 ಮ್ಯಾಕ್ರೋ ಲೆನ್ಸ್‌ ಅನ್ನು ಒಳಗೊಂಡಿದೆ. ಇದಲ್ಲದೆ 8ಮೆಗಾಪಿಕ್ಸೆಲ್‌ ಸೆನ್ಸಾರ್‌ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ. ಇದು ಪನೋ, ಫೇಸ್ ಬ್ಯೂಟಿ, ಟೈಮ್-ಲ್ಯಾಪ್ಸ್, ಲೈವ್ ಫೋಟೋ, ಪ್ರೊ ಮತ್ತು ಇತರ ಹಲವು ಕ್ಯಾಮೆರಾ ಮೋಡ್‌ಗಳನ್ನು ಹೊಂದಿದೆ.

ಬ್ಯಾಟರಿ ಮತ್ತು ಇತರೆ

ಬ್ಯಾಟರಿ ಮತ್ತು ಇತರೆ

ವಿವೋ Y15c ಸ್ಮಾರ್ಟ್‌ಫೋನ್‌ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 10W ಚಾರ್ಜಿಂಗ್ ವೇಗವನ್ನು ಬೆಂಬಲಿಸಲಿದೆ. ಇದು 18.74 ಗಂಟೆಗಳ ಆನ್‌ಲೈನ್ HD ಚಲನಚಿತ್ರ ಸ್ಟ್ರೀಮಿಂಗ್ ಮತ್ತು 7.89 ಗಂಟೆಗಳ ಗೇಮ್‌ಪ್ಲೇಯನ್ನು ನೀಡಬಲ್ಲದು ಎಂದು ವಿವೋ ಹೇಳಿಕೊಂಡಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಬ್ಲೂಟೂತ್ 5.0, 2.4GHz/5GHz Wi-Fi, GPS ಹೊಂದಿದೆ. ಜೊತೆಗೆ ಇದು ಆಡಿಯೊಗಾಗಿ 3.5mm ಹೆಡ್‌ಫೋನ್ ಜ್ಯಾಕ್ ಮತ್ತು ಚಾರ್ಜಿಂಗ್ ಮತ್ತು ಡೇಟಾ ವರ್ಗಾವಣೆಗಾಗಿ ಮೈಕ್ರೋ ಯುಎಸ್‌ಬಿ ಪೋರ್ಟ್ ಅನ್ನು ಸಹ ಹೊಂದಿದೆ. ಈ ಫೋನ್‌ ಸೈಡ್-ಮೌಂಟೆಡ್ ಫಿಂಗರ್‌ಪ್ರಿಂಟ್ ಸ್ಕ್ಯಾನರ್ ಅನ್ನು ಹೊಂದಿದೆ.

ಬೆಲೆ ಮತ್ತು ಲಭ್ಯತೆ

ಬೆಲೆ ಮತ್ತು ಲಭ್ಯತೆ

ಇನ್ನು ಈ ಸ್ಮಾರ್ಟ್‌ಫೋನ್‌ನ ಬೆಲೆ ಮತ್ತು ಲಭ್ಯತೆಯ ವಿವರಗಳು ಇನ್ನೂ ಬಹಿರಂಗವಾಗಿಲ್ಲ. ಆದರೆ ಈ ಸ್ಮಾರ್ಟ್‌ಫೋನ್‌ ಫೋನ್ ಮಿಸ್ಟಿಕ್ ಬ್ಲೂ ಮತ್ತು ವೇವ್ ಗ್ರೀನ್ ಬಣ್ಣದ ಆಯ್ಕೆಗಳಲ್ಲಿ ಬರಲಿದೆ.

Best Mobiles in India

English summary
Vivo Y15c has silently made its way to India and is listed on the company's website as a new smartphone in the lineup.

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X