Home
ಸುದ್ದಿಜಾಲ

ದೇಶಿ ಮಾರುಕಟ್ಟೆಯಲ್ಲಿ ವಿವೋ Y15s ಸ್ಮಾರ್ಟ್‌ಫೋನ್‌ ಬಿಡುಗಡೆ! ಬೆಲೆ ಎಷ್ಟು?

ವಿವೋ ಕಂಪೆನಿ ತನ್ನ ಆಕರ್ಷಕ ಸ್ಮಾರ್ಟ್‌ಫೋನ್‌ಗಳಿಂದ ಮಾರುಕಟ್ಟೆಯಲ್ಲಿ ಸಾಕಷ್ಟು ಜನಪ್ರಿಯತೆ ಪಡೆದಿದೆ. ಭಾರತದಲ್ಲಿ ಈಗಾಗಲೇ ಅನೇಕ ಸ್ಮಾರ್ಟ್‌ಫೋನ್‌ಗಳನ್ನು ಪರಿಚಯಿಸಿ ತನ್ನ ಸ್ಥಾನ ಭದ್ರಪಡಿಸಿಕೊಂಡಿದೆ. ಸದ್ಯ ಇದೀಗ ತನ್ನ ಹೊಸ ವಿವೋ Y15s (2021) ಸ್ಮಾರ್ಟ್‌ಫೋನ್‌ ಲಾಂಚ್‌ ಮಾಡಿದೆ. ಈ ಸ್ಮಾರ್ಟ್‌ಫೋನ್‌ ಡ್ಯುಯಲ್ ರಿಯರ್ ಕ್ಯಾಮೆರಾ ಸೆಟಪ್‌ ಅನ್ನು ಹೊಂದಿದೆ. ಇದು ಆಕ್ಟಾ-ಕೋರ್ ಮೀಡಿಯಾಟೆಕ್‌ ಹಿಲಿಯೋ P35 SoC ಪ್ರೊಸೆಸರ್‌ ಬಲವನ್ನು ಪಡೆದಿದೆ.

ವಿವೋ Y15s (2021)

ಹೌದು, ವಿವೋ ಕಂಪೆನಿ ಭಾರತದಲ್ಲಿ ಹೊಸ ವಿವೋ Y15s (2021) ಸ್ಮಾರ್ಟ್‌ಫೋನ್‌ ಬಿಡುಗಡೆ ಮಾಡಿದೆ. ವಿವೋ Y15s (2021) ಸ್ಮಾರ್ಟ್‌ಫೋನ್‌ 6.51 ಇಂಚಿನ HD+ ಡಿಸ್‌ಪ್ಲೇಯನ್ನು ಒಳಗೊಂಡಿದೆ. ಜೊತೆಗೆ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇನ್ನು ಈ ಸ್ಮಾರ್ಟ್‌ಫೋನ್‌ 3GB RAM + 32GB ಸ್ಟೋರೇಜ್‌ ಆಯ್ಕೆಯಲ್ಲಿ ಬರಲಿದೆ. ಇದು ಮಿಸ್ಟಿಕ್ ಬ್ಲೂ ಮತ್ತು ವೇವ್ ಗ್ರೀನ್ ಬಣ್ಣಗಳಲ್ಲಿ ಲಭ್ಯವಾಗಲಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್‌ ಯಾವೆಲ್ಲಾ ವಿಶೇಷತೆ ಏನು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತಿವಿ ಓದಿರಿ.

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ

ವಿವೋ Y15s ಸ್ಮಾರ್ಟ್‌ಫೋನ್‌ 720x1,600 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.51 ಇಂಚಿನ HD+ IPS ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನು ಈ ಡಿಸ್‌ಪ್ಲೇ 20:9 ರಚನೆಯ ಅನುಪಾತವನ್ನು ಹೊಂದಿದೆ. ಇದು 83.0% ಸ್ಕ್ರೀನ್-ಟು-ಬಾಡಿ ಅನುಪಾತವನ್ನು ಒಳಗೊಂಡಿದೆ. ಜೊತೆಗೆ 270 ಪಿಪಿಐ ಪಿಕ್ಸೆಲ್‌ ಸಾಂದ್ರತೆಯನ್ನು ಪಡೆದುಕೊಂಡಿದೆ.

ಪ್ರೊಸೆಸರ್‌ ಹೇಗಿದೆ?

ಪ್ರೊಸೆಸರ್‌ ಹೇಗಿದೆ?

3GB RAM ಜೊತೆಗೆ ಆಕ್ಟಾ-ಕೋರ್ ಮೀಡಿಯಾಟೆಕ್‌ ಹಿಲಿಯೋ P35 SoC ಪ್ರೊಸೆಸರ್‌ ಬಲವನ್ನು ಹೊಂದಿದೆ. ಇದು ಆಂಡ್ರಾಯ್ಡ್‌ 11 (Go ಆವೃತ್ತಿ) ನಲ್ಲಿ ಫನ್‌ಟಚ್‌ OS 11.1 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 3GB RAM + 32GB ಸ್ಟೋರೇಜ್‌ ಆಯ್ಕೆಯಲ್ಲಿ ಬರಲಿದೆ. ಇದಲ್ಲದೆ ಮೈಕ್ರೋ SD ಕಾರ್ಡ್ ಮೂಲಕ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸುವುದಕ್ಕೆ ಅವಕಾಶ ಕೂಡ ನೀಡಲಾಗಿದೆ.

ಕ್ಯಾಮೆರಾ ವಿಶೇಷ

ಕ್ಯಾಮೆರಾ ವಿಶೇಷ

ವಿವೋ Y15s ಸ್ಮಾರ್ಟ್‌ಫೋನ್‌ ಡ್ಯುಯಲ್ ರಿಯರ್‌ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಪ್ರೈಮೆರಿ ಕ್ಯಾಮೆರಾ 13 ಮೆಗಾಪಿಕ್ಸೆಲ್ ಸೆನ್ಸಾರ್‌ f/2.2 ಲೆನ್ಸ್ ಹೊಂದಿದೆ. ಎರಡನೇ ಕ್ಯಾಮರಾ 2 ಮೆಗಾಪಿಕ್ಸೆಲ್ ಮ್ಯಾಕ್ರೋ ಲೆನ್ಸ್‌ ಒಳಗೊಂಡಿದೆ. ಇದಲ್ಲದೆ 8 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾ ಕೂಡ ನೀಡಲಾಗಿದೆ. ಇದು f/2.0 ಲೆನ್ಸ್‌ನೊಂದಿಗೆ ಬರುತ್ತದೆ.

ಬ್ಯಾಟರಿ ಮತ್ತು ಇತರೆ

ಬ್ಯಾಟರಿ ಮತ್ತು ಇತರೆ

ಇನ್ನು ಈ ಸ್ಮಾರ್ಟ್‌ಫೋನ್‌ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 10W ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 4G LTE, ಡ್ಯುಯಲ್-ಬ್ಯಾಂಡ್ Wi-Fi, ಬ್ಲೂಟೂತ್ v5.0, GPS/ A-GPS, FM ರೇಡಿಯೋ, ಮೈಕ್ರೋ-USB ಪೋರ್ಟ್ ಬೆಂಬಲಿಸಲಿದೆ. ಇದಲ್ಲದೆ ಆಂಬಿಯೆಂಟ್‌ ಲೈಟ್‌ ಸೆನ್ಸಾರ್‌, ಪ್ರಾಕ್ಸಿಮಿಟಿ ಸೆನ್ಸಾರ್‌ ಅನ್ನು ಒಳಗೊಂಡಿರುತ್ತದೆ. ಈ ಫೋನ್ ಸೈಡ್-ಮೌಂಟೆಡ್ ಫಿಂಗರ್‌ಪ್ರಿಂಟ್ ಸೆನ್ಸಾರ್‌ನೊಂದಿಗೆ ಬರುತ್ತದೆ.

ಬೆಲೆ ಮತ್ತು ಲಭ್ಯತೆ

ಬೆಲೆ ಮತ್ತು ಲಭ್ಯತೆ

ಭಾರತದಲ್ಲಿ ವಿವೋ Y15s ಸ್ಮಾರ್ಟ್‌ಫೋನ್‌ ಬೆಲೆ 3GB RAM + 32GB ಸ್ಟೋರೇಜ್ ರೂಪಾಂತರಕ್ಕಾಗಿ 10,990ರೂ ಆಗಿದೆ. ಇನ್ನು ಈ ಫೋನ್ ಮಿಸ್ಟಿಕ್ ಬ್ಲೂ ಮತ್ತು ವೇವ್ ಗ್ರೀನ್ ಬಣ್ಣಗಳಲ್ಲಿ ಬರುತ್ತದೆ. ಈ ಫೋನ್‌ ವಿವೋ ಇಂಡಿಯಾ ಇ-ಸ್ಟೋರ್ ಮತ್ತು ದೇಶದ ವಿವಿಧ ಚಿಲ್ಲರೆ ಅಂಗಡಿಗಳ ಮೂಲಕ ಖರೀದಿಗೆ ಲಭ್ಯವಿದೆ.

Best Mobiles in India

English summary
Vivo Y15s includes 32GB of onboard storage that supports expansion through a dedicated microSD card.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+