Home
ಸುದ್ದಿಜಾಲ

ಈ ವಿವೋ ಫೋನ್‌ ಖರೀದಿಸಿದ್ರೆ, ನಿಮಗೆ ಭಾರೀ ಬೆಲೆ ಇಳಿಕೆ ಖಚಿತ!

ಅನೇಕ ಆನ್‌ಲೈನ್‌ ಶಾಪಿಂಗ್‌ ಪ್ರಿಯರಿಗೆ ಅಮೆಜಾನ್‌ ಪ್ಲಾಟ್‌ಫಾರ್ಮ್ ಎಂದರೆ ಅಚ್ಚುಮೆಚ್ಚು. ಅದರಲ್ಲಿಯೂ ಅಮೆಜಾನ್‌ ಆಯೋಜಿಸುವ ವಿಶೇಷ ಮಾರಾಟ ಮೇಳಗಳು ಎಂದರೆ ಮತ್ತಷ್ಟು ಹಿಗ್ಗು. ಇದೀಗ ಅಮೆಜಾನ್‌ ತಾಣವು ದಸರಾ ಪ್ರಯುಕ್ತ ಅಂಗವಾಗಿ ಅಮೆಜಾನ್ ಗ್ರೇಟ್‌ ಇಂಡಿಯನ್ ಫೆಸ್ಟಿವಲ್ ಸೇಲ್‌ ಪ್ರಾರಂಭಿಸಿದೆ. ಈ ಮೇಳದಲ್ಲಿ ವಿವೋ Y16 ಸ್ಮಾರ್ಟ್‌ಫೋನ್‌ ಇದೀಗ ಗ್ರಾಹಕರು ಹಿಂದಿರುಗಿ ನೋಡುವಂತಹ ರಿಯಾಯಿತಿ ಪಡೆದುಕೊಂಡಿದೆ.

ಹೌದು, ಅಮೆಜಾನ್‌ ತಾಣದ ಗ್ರೇಟ್‌ ಇಂಡಿಯನ್ ಫೆಸ್ಟಿವಲ್ ಮಾರಾಟದಲ್ಲಿ ವಿವೋ Y16 ಮೊಬೈಲ್‌ ಶೇ. 29% ರಷ್ಟು ವಿನಾಯ್ತಿ ಪಡೆದಿದ್ದು, 4GB + 128GB ವೇರಿಯಂಟ್‌ ಫೋನ್‌ 11,999 ರೂ. ಗಳ ದರದಲ್ಲಿ ಖರೀದಿಗೆ ಲಭ್ಯ ಇದೆ. ಇದಲ್ಲದೇ ಆಯ್ದ ಬ್ಯಾಂಕ್ ಆಫರ್‌, ಎಕ್ಸ್‌ಚೇಂಜ್ ಕೊಡುಗೆ ಹಾಗೂ ಇತರೆ ಆಫರ್‌ ಸೇರಿ ಈ ಫೋನ್‌ ಮತ್ತಷ್ಟು ರಿಯಾಯಿತಿ ಬೆಲೆಗೆ ಖರೀದಿಸಬಹುದು.

ಈ ವಿವೋ ಫೋನ್‌ ಖರೀದಿಸಿದ್ರೆ, ನಿಮಗೆ ಭಾರೀ ಬೆಲೆ ಇಳಿಕೆ ಖಚಿತ!

ಅಂದಹಾಗೆ ವಿವೋ Y16 ಮೊಬೈಲ್‌ ಮೀಡಿಯಾ ಟೆಕ್‌ ಹೆಲಿಯೋ P35 SoC ಪ್ರೊಸೆಸರ್‌ ಸಾಮರ್ಥ್ಯದಲ್ಲಿ ಕೆಲಸ ನಿರ್ವಹಿಸಲಿದೆ. ಹಾಗೆಯೇ ಈ ಮೊಬೈಲ್‌ 4GB + 128GB ಆಂತರೀಕ ಸ್ಟೋರೇಜ್‌ ಆಯ್ಕೆ ಸಹ ಪಡೆದುಕೊಂಡಿದೆ. ಹಾಗಾದರೇ ಇನ್ನುಳಿದಂತೆ ವಿವೋ Y16 ಮೊಬೈಲ್‌ನ ಇತರೆ ಫೀಚರ್ಸ್‌ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ ಮಾಹಿತಿ

ವಿವೋ Y16 ಮೊಬೈಲ್‌ 6.51 ಇಂಚಿನ IPS LCD HD+ ಡಿಸ್‌ಪ್ಲೇ ಅನ್ನು ಕೂಡಾ ಹೊಂದಿದೆ. ಈ ಡಿಸ್‌ಪ್ಲೇ 720 x 1,600 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯವನ್ನು ಪಡೆದಿದೆ. ಇದು 82.5% ಸ್ಕ್ರೀನ್ ಟು ಬಾಡಿ ಅನುಪಾತವನ್ನು ಪಡೆದುಕೊಂಡಿದೆ. ಇದರ ಜೊತೆಗೆ ಡಿಸ್‌ಪ್ಲೇ 20:9 ರಚನೆಯ ಅನುಪಾತವನ್ನು ಒಳಗೊಂಡಿದೆ.

ಪ್ರೊಸೆಸರ್‌ ಪವರ್ ಎಷ್ಟಿದೆ

ವಿವೋದ ಈ ಸ್ಮಾರ್ಟ್‌ಫೋನ್‌ ಮೀಡಿಯಾ ಟೆಕ್‌ ಹೆಲಿಯೋ P35 SoC ಪ್ರೊಸೆಸರ್‌ನಲ್ಲಿ ಕಾರ್ಯ ನಿರ್ವಹಿಸಲಿದೆ. ಇದು ಆಂಡ್ರಾಯ್ಡ್‌ 12 ಬೆಂಬಲದೊಂದಿಗೆ ರನ್‌ ಆಗಲಿದೆ. ಹಾಗೆಯೇ 4 GB RAM ಮತ್ತು 128 GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯವನ್ನು ಪಡೆದುಕೊಂಡದೆ. ಇದಲ್ಲದೆ ಮೆಮೊರಿ ಕಾರ್ಡ್‌ ಬೆಂಬಲವನ್ನು ಹೊಂದಿದ್ದು, ಸಂಗ್ರಹ ಸಾಮರ್ಥ್ಯವನ್ನು ಹೆಚ್ಚಿಸಿ ಕೊಳ್ಳಬಹುದಾಗಿದೆ.

ಕ್ಯಾಮೆರಾ ಸೆನ್ಸಾರ್ ರಚನೆ ಮಾಹಿತಿ

ಈ ಸ್ಮಾರ್ಟ್‌ಫೋನ್‌ ಡ್ಯುಯಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿದೆ. ಇದರಲ್ಲಿ ಫಸ್ಟ್‌ ಕ್ಯಾಮೆರಾ 13 ಮೆಗಾ ಪಿಕ್ಸೆಲ್ ಸೆನ್ಸಾರ್‌ ಮತ್ತು ಎರಡನೇ ಕ್ಯಾಮೆರಾ 2 ಮೆಗಾ ಪಿಕ್ಸೆಲ್ ಸೆನ್ಸಾರ್‌ ಅನ್ನು ಹೊಂದಿದೆ. ಇದಲ್ಲದೆ 5 ಮೆಗಾ ಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಸಹ ಹೊಂದಿದೆ. ಅಲ್ಲದೇ ಈ ಕ್ಯಾಮೆರಾ ಪನೋರಮಾ, ಫೇಸ್ ಬ್ಯೂಟಿ, ಲೈವ್ ಫೋಟೋ, ಟೈಮ್-ಲ್ಯಾಪ್ಸ್ ಫೀಚರ್ಸ್‌ಗಳನ್ನು ಪಡೆದುಕೊಂಡಿದೆ.

ಬ್ಯಾಟರಿ ಮತ್ತು ಇತರೆ ಸೌಲಭ್ಯಗಳ ಮಾಹಿತಿ

ವಿವೋ Y16 ಸ್ಮಾರ್ಟ್‌ಫೋನ್‌ 5,000 mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಅನ್ನು ಹೊಂದಿದ್ದು, 10W ವೈರ್ಡ್ ಚಾರ್ಜಿಂಗ್ ಅನ್ನು ಸಹ ಸಪೋರ್ಟ್‌ ಮಾಡುತ್ತದೆ. ಇದು 18 ಗಂಟೆಗಳವರೆಗೆ ವೀಡಿಯೊ ಸ್ಟ್ರೀಮಿಂಗ್ ಸಪೋರ್ಟ್‌ ಇದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಹಾಟ್‌ಸ್ಪಾಟ್‌, ಬ್ಲೂಟೂತ್‌, ವೈಫೈ ಅನ್ನು ಸಪೋರ್ಟ್‌ ಮಾಡುತ್ತದೆ. ಇದಲ್ಲದೆ ಸೈಡ್-ಮೌಂಟೆಡ್ ಫಿಂಗರ್‌ಪ್ರಿಂಟ್ ಸೆನ್ಸಾರ್‌ ಮತ್ತು ಸ್ಕ್ರಾಚ್-ರೆಸಿಸ್ಟೆಂಟ್ ರಿಯರ್‌ ಪ್ಯಾನಲ್‌ ಸೌಲಭ್ಯ ಇದೆ.

ಮೆಮೊರಿ, ಕಲರ್ ಆಯ್ಕೆ ಮತ್ತು ಲಭ್ಯತೆ

ವಿವೋ Y16 ಸ್ಮಾರ್ಟ್‌ಫೋನ್‌ 4 GB RAM ಮತ್ತು 128 GB ವೇರಿಯಂಟ್‌ ಆಯ್ಕೆಯನ್ನು ಪಡೆದುಕೊಂಡಿದೆ. ಈ ಫೋನ್‌ ಡ್ರಿಜ್ಲಿಂಗ್ ಗೋಲ್ಡ್ ಮತ್ತು ಸ್ಟೆಲ್ಲರ್ ಬ್ಲ್ಯಾಕ್ ಬಣ್ಣದ ಆಯ್ಕೆಗಳಲ್ಲಿ ಖರೀದಿಗೆ ಲಭ್ಯ ಇದ್ದು, ಅಮೆಜಾನ್‌ ತಾಣದಲ್ಲಿ ಖರೀದಿ ಮಾಡಬಹುದು.

Best Mobiles in India

English summary
Vivo Y16 available at an unbelievable offer price on amazon check out offer price, specifications and more.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+