Home
ಸುದ್ದಿಜಾಲ

ಈ ಜನಪ್ರಿಯ ವಿವೋ ಫೋನಿನ ಬೆಲೆಯಲ್ಲಿ ಇಳಿಕೆ!..ತಡ ಮಾಡಬೇಡಿ!

ಜನಪ್ರಿಯ ವಿವೋ ಮೊಬೈಲ್‌ ಸಂಸ್ಥೆಯು Y ಸರಣಿಯಲ್ಲಿ ಹಲವು ಬಜೆಟ್‌ ದರದ ಫೋನ್‌ಗಳನ್ನು ಪರಿಚಯಿಸಿದೆ. ಆ ಪೈಕಿ ವಿವೋ Y16 (Vivo Y16) ಫೀಚರ್ಸ್‌ ಹಾಗೂ ಪ್ರೈಸ್ ಟ್ಯಾಗ್‌ನಿಂದ ಗ್ರಾಹಕರನ್ನು ಆಕರ್ಷಿಸಿದೆ. ಆದರೆ ಈ ಫೋನ್‌ ಇದೀಗ ಅಮೆಜಾನ್‌ ಇ ಕಾಮರ್ಸ್‌ ತಾಣದಲ್ಲಿ ಭರ್ಜರಿ ರಿಯಾಯಿತಿ ಪಡೆದಿದ್ದು, ಗ್ರಾಹಕರು ಖುಷಿ ಪಡುವಂತೆ ಮಾಡಿದೆ.

ಹೌದು, ವಿವೋ ತನ್ನ ಸ್ಯಾಮ್‌ಸಂಗ್‌ ವಿವೋ Y16 (Vivo Y16) ಸ್ಮಾರ್ಟ್‌ಫೋನ್‌ ಅಮೆಜಾನ್‌ ಇ ಕಾಮರ್ಸ್‌ ಮಾರುಕಟ್ಟೆಯಲ್ಲಿ ಈಗ 30% ರಷ್ಟು ಡಿಸ್ಕೌಂಟ್‌ ಬೆಲೆಯಲ್ಲಿ ಕಾಣಿಸಿಕೊಂಡಿದೆ. ಈ ಸ್ಮಾರ್ಟ್‌ಫೋನ್ 64 GB ಸ್ಟೋರೇಜ್‌ನ ವೇರಿಯಂಟ್‌ 14,999 ರೂ. ಗಳ ಬೆಲೆಯನ್ನು ಹೊಂದಿದ್ದು, ಈಗ ಗ್ರಾಹಕರು 10,499 ರೂ. ಗಳ ರಿಯಾಯಿತಿ ಬೆಲೆಯಲ್ಲಿ ಖರೀದಿಗೆ ಖರೀದಿಸಬಹುದಾಗಿದೆ.

ಈ ಜನಪ್ರಿಯ ವಿವೋ ಫೋನಿನ ಬೆಲೆಯಲ್ಲಿ ಇಳಿಕೆ!..ತಡ ಮಾಡಬೇಡಿ!

ಈ ಸ್ಮಾರ್ಟ್‌ಫೋನ್‌ 5,000 mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 10W ಫಾಸ್ಟ್‌ ಚಾರ್ಜಿಂಗ್ ಸೌಲಭ್ಯವನ್ನು ಬೆಂಬಲಿಸುತ್ತದೆ. ಇನ್ನು ಈ ಸ್ಮಾರ್ಟ್‌ಫೋನ್‌ ಡ್ರಿಜ್ಲಿಂಗ್ ಗೋಲ್ಡ್ ಮತ್ತು ಸ್ಟೆಲ್ಲರ್ ಬ್ಲ್ಯಾಕ್ ಕಲರ್‌ ಆಯ್ಕೆಗಳಲ್ಲಿ ಬರಲಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್‌ ವಿಶೇಷತೆ ಪಡೆದಿದೆ ಎಂಬುದನ್ನು ಮುಂದೆ ತಿಳಿಯೋಣ ಬನ್ನಿರಿ.

ಈ ಜನಪ್ರಿಯ ವಿವೋ ಫೋನಿನ ಬೆಲೆಯಲ್ಲಿ ಇಳಿಕೆ!..ತಡ ಮಾಡಬೇಡಿ!

ವಿವೋ Y16 ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ : ವಿವೋ Y16 ಸ್ಮಾರ್ಟ್‌ಫೋನ್‌ 6.51ಇಂಚಿನ IPS LCD HD+ ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ 720x1,600 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯವನ್ನು ಪಡೆದಿದೆ. ಇದು 82.5% ಸ್ಕ್ರೀನ್-ಟು-ಬಾಡಿ ಅನುಪಾತವನ್ನು ಪಡೆದುಕೊಂಡಿದೆ. ಜೊತೆಗೆ ಡಿಸ್‌ಪ್ಲೇ 20:9 ರಚನೆಯ ಅನುಪಾತವನ್ನು ಹೊಂದಿದೆ.

ವಿವೋ Y16 ಪ್ರೊಸೆಸರ್‌ ಯಾವುದು : ವಿವೋ Y16 ಸ್ಮಾರ್ಟ್‌ಫೋನ್‌ ಮೀಡಿಯಾಟೆಕ್‌ ಹೆಲಿಯೋ P35 SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಇದು ಆಂಡ್ರಾಯ್ಡ್‌ 12 ಬೆಂಬಲದೊಂದಿಗೆ ರನ್‌ ಆಗಲಿದೆ. ಹಾಗೆಯೇ 4GB RAM ಮತ್ತು 128GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯವನ್ನು ಒಳಗೊಂಡಿದೆ. ಇದಲ್ಲದೆ ಮೆಮೊರಿ ಕಾರ್ಡ್‌ ಬೆಂಬಲವನ್ನು ಹೊಂದಿದ್ದು, ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಿಕೊಳ್ಳಬಹುದಾಗಿದೆ.

ಈ ಜನಪ್ರಿಯ ವಿವೋ ಫೋನಿನ ಬೆಲೆಯಲ್ಲಿ ಇಳಿಕೆ!..ತಡ ಮಾಡಬೇಡಿ!

ವಿವೋ Y16 ಕ್ಯಾಮೆರಾ ಸೆಟ್‌ಅಪ್‌ ಯಾವುದು : ವಿವೋ Y16 ಸ್ಮಾರ್ಟ್‌ಫೋನ್‌ ಡ್ಯುಯಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿದೆ. ಇದರಲ್ಲಿ ಮೊದಲನೇ ಕ್ಯಾಮೆರಾ 13 ಮೆಗಾಪಿಕ್ಸೆಲ್ ಸೆನ್ಸಾರ್‌ ಮತ್ತು ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಸೆನ್ಸಾರ್‌ ಅನ್ನು ಹೊಂದಿದೆ. ಇದಲ್ಲದೆ 5 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಸಹ ಹೊಂದಿದೆ. ಇನ್ನು ಈ ಕ್ಯಾಮೆರಾ ಪನೋರಮಾ, ಫೇಸ್ ಬ್ಯೂಟಿ, ಲೈವ್ ಫೋಟೋ, ಟೈಮ್-ಲ್ಯಾಪ್ಸ್ ಫೀಚರ್ಸ್‌ಗಳನ್ನು ಒಳಗೊಂಡಿದೆ.

ವಿವೋ Y16 ಬ್ಯಾಟರಿ ಮತ್ತು ಇತರೆ : ವಿವೋ Y16 ಸ್ಮಾರ್ಟ್‌ಫೋನ್‌ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 10W ವೈರ್ಡ್ ಚಾರ್ಜಿಂಗ್ ಅನ್ನು ಸಹ ಬೆಂಬಲಿಸುತ್ತದೆ. ಇದು 18 ಗಂಟೆಗಳವರೆಗೆ ವೀಡಿಯೊ ಸ್ಟ್ರೀಮಿಂಗ್ ಅನ್ನು ಬೆಂಬಲಿಸುತ್ತದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಹಾಟ್‌ಸ್ಪಾಟ್‌, ಬ್ಲೂಟೂತ್‌, ವೈಫೈ ಅನ್ನು ಬೆಂಬಲಿಸಲಿದೆ. ಇದಲ್ಲದೆ ಸೈಡ್-ಮೌಂಟೆಡ್ ಫಿಂಗರ್‌ಪ್ರಿಂಟ್ ಸೆನ್ಸಾರ್‌ ಮತ್ತು ಸ್ಕ್ರಾಚ್-ರೆಸಿಸ್ಟೆಂಟ್ ರಿಯರ್‌ ಪ್ಯಾನಲ್‌ ಅನ್ನು ಅಳವಡಿಸಲಾಗಿದೆ.

ವಿವೋ Y16 ಮೆಮೊರಿ ಮತ್ತು ಕಲರ್ : ವಿವೋ Y16 ಸ್ಮಾರ್ಟ್‌ಫೋನ್‌ ಭಾರತದಲ್ಲಿ 4GB RAM ಮತ್ತು 128GB ಸ್ಟೋರೇಜ್‌ ವೇರಿಯಂಟ್‌ ಆಯ್ಕೆ ಹೊಂದಿದೆ. ಇದು ಡ್ರಿಜ್ಲಿಂಗ್ ಗೋಲ್ಡ್ ಮತ್ತು ಸ್ಟೆಲ್ಲರ್ ಬ್ಲ್ಯಾಕ್ ಬಣ್ಣದ ಆಯ್ಕೆಗಳಲ್ಲಿ ಬರುತ್ತದೆ.

Best Mobiles in India

English summary
Vivo Y16 available at Huge Discount price on amazon: Check offer Price, Specifications and more details in kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+