ಈ ಆಕರ್ಷಕ ವಿವೋ ಫೋನ್ ಬೆಲೆಯಲ್ಲಿ ಸಖತ್ ಇಳಿಕೆ!..ಗ್ರಾಹಕರು ಖುಷಿ!
ವಿವೋ ಸ್ಮಾರ್ಟ್‌ಫೋನ್ ಭಿನ್ನ ಶ್ರೇಣಿಯ ಬೆಲೆಯಲ್ಲಿ ಹಲವು ಮಾದರಿಯ ಫೋನ್‌ಗಳನ್ನು ಪರಿಚಯಿಸಿ ಸೈ ಎನಿಸಿಕೊಂಡೊಂಡಿದೆ. ಆ ಪೈಕಿ Y ಸರಣಿಯ ಫೋನ್‌ಗಳು ಗಮನ ಸೆಳೆದಿದ್ದು, ಸಂಸ್ಥೆಯ ವಿವೋ Y16 ಫೋನ್ ಇದೀಗ ಫ್ಲಿಪ್‌ಕಾರ್ಟ್ ತಾಣದಲ್ಲಿ ಜಬರ್ದಸ್ತ್ ಡಿಸ್ಕೌಂಟ್ ಬೆಲೆಗೆ ಕಾಣಿಸಿಕೊಂಡಿದೆ.
ಹೌದು, ಫ್ಲಿಪ್‌ಕಾರ್ಟ್ ತಾಣದಲ್ಲಿ ವಿವೋ ಮೊಬೈಲ್ ಕಂಪನಿಯ ವಿವೋ Y16 ಮೊಬೈಲ್ ಬೆಲೆಯಲ್ಲಿ ಶೇ. 36% ರಷ್ಟು ನೇರ ರಿಯಾಯಿತಿ ಪಡೆದಿದೆ. ಈ ಫೋನಿನ 4GB RAM + 64GB ಸ್ಟೋರೇಜ್ ವೇರಿಯಂಟ್ 10,198ರೂ. ಗಳ ಆಫರ್ ಪ್ರೈಸ್‌ಟ್ಯಾಗ್‌ನಲ್ಲಿ ಖರೀದಿಗೆ ಲಭ್ಯ. ಇದರೊಂದಿಗೆ ಆಯ್ದ ಕೆಲವು ಬ್ಯಾಂಕ್‌ಗಳಿಂದ ಮತ್ತಷ್ಟು ಡಿಸ್ಕೌಂಟ್ ಕೊಡುಗೆ ಸಹ ಪಡೆಯಬಹುದು.

ಇನ್ನು ವಿವೋ Y16 ಫೋನ್ ಡ್ರಿಜ್ಲಿಂಗ್ ಗೋಲ್ಡ್ ಮತ್ತು ಸ್ಟೆಲ್ಲರ್ ಬ್ಲ್ಯಾಕ್ ಬಣ್ಣದ ಆಯ್ಕೆಗಳನ್ನು ಪಡೆದುಕೊಂಡಿದೆ. ಅಂದಹಾಗೆ ಈ ಫೋನಿನ ಪ್ರಾಥಮಿಕ ಕ್ಯಾಮೆರಾ13 ಮೆಗಾ ಪಿಕ್ಸೆಲ್ ಸೆನ್ಸಾರ್‌ನಲ್ಲಿ ಇದೆ. ಹಾಗೆಯೇ ಈ ಮೊಬೈಲ್ 5,000 mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಸೌಲಭ್ಯ ಪಡೆದಿದೆ. ಹಾಗಾದರೆ ವಿವೋ Y16 ಫೋನಿನ ಇತರ ಫೀಚರ್ಸ್ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ವಿವೋ Y16 ಮೊಬೈಲ್ - ಫೀಚರ್ಸ್
ವಿವೋ Y16 ಮೊಬೈಲ್ 6.51 ಇಂಚಿನ IPS LCD HD+ ಡಿಸ್‌ಪ್ಲೇ ರಚನೆ ಅನ್ನು ಹೊಂದಿದೆ. ಈ ಡಿಸ್‌ಪ್ಲೇ 720 x 1,600 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯವನ್ನು ಪಡೆದಿದೆ. ಇದು 82.5% ಸ್ಕ್ರೀನ್ ಟು ಬಾಡಿ ಅನುಪಾತವನ್ನು ಪಡೆದುಕೊಂಡಿದೆ. ಜೊತೆಗೆ ಡಿಸ್‌ಪ್ಲೇ 20:9 ರಚನೆಯ ಅನುಪಾತವನ್ನು ಹೊಂದಿದೆ.
ವಿವೋ Y16 ಮೊಬೈಲ್ ಮೀಡಿಯಾ ಟೆಕ್ ಹೆಲಿಯೋ P35 SoC ಪ್ರೊಸೆಸರ್‌ನಲ್ಲಿ ಕೆಲಸ ನಿರ್ವಹಿಸಲಿದೆ. ಇದು ಆಂಡ್ರಾಯ್ಡ್ 12 ಓಎಸ್ ಸಪೋರ್ಟ್ ಜೊತೆಗೆ ರನ್ ಆಗಲಿದೆ. ಹಾಗೆಯೇ 4 GB RAM ಮತ್ತು 128 GB ಆಂತರೀಕ ಸ್ಟೋರೇಜ್ ಸಾಮರ್ಥ್ಯವನ್ನು ಒಳಗೊಂಡಿದೆ. ಇದಲ್ಲದೆ ಮೆಮೊರಿ ಕಾರ್ಡ್ ಬೆಂಬಲವನ್ನು ಹೊಂದಿದ್ದು, ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಿಕೊಳ್ಳಬಹುದಾಗಿದೆ.

ವಿವೋ Y16 ಮೊಬೈಲ್ ಡ್ಯುಯಲ್ ರಿಯರ್ ಕ್ಯಾಮೆರಾ ರಚನೆ ಅನ್ನು ಹೊಂದಿದೆ. ಇದರಲ್ಲಿ ಪ್ರಾಥಮಿಕ ಕ್ಯಾಮೆರಾ 13 ಮೆಗಾ ಪಿಕ್ಸೆಲ್ ಸೆನ್ಸಾರ್ ಮತ್ತು ಎರಡನೇ ಕ್ಯಾಮೆರಾ 2 ಮೆಗಾ ಪಿಕ್ಸೆಲ್ ಸೆನ್ಸಾರ್ ಅನ್ನು ಹೊಂದಿದೆ. ಇದಲ್ಲದೆ 5 ಮೆಗಾ ಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಸಹ ಪಡೆದಿದೆ. ಇನ್ನು ಈ ಕ್ಯಾಮೆರಾ ಪನೋರಮಾ, ಫೇಸ್ ಬ್ಯೂಟಿ, ಲೈವ್ ಫೋಟೋ, ಟೈಮ್-ಲ್ಯಾಪ್ಸ್ ಫೀಚರ್ಸ್‌ಗಳನ್ನು ಒಳಗೊಂಡಿದೆ.
ವಿವೋ Y16 ಮೊಬೈಲ್ 5,000 mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಅನ್ನು ಹೊಂದಿದ್ದು, 10W ವೈರ್ಡ್ ಚಾರ್ಜಿಂಗ್ ಅನ್ನು ಸಹ ಬೆಂಬಲಿಸುತ್ತದೆ. ಇದು 18 ಗಂಟೆಗಳವರೆಗೆ ವೀಡಿಯೊ ಸ್ಟ್ರೀಮಿಂಗ್ ಅನ್ನು ಬೆಂಬಲಿಸುತ್ತದೆ. ಇನ್ನು ಕನೆಕ್ಟಿವಿಟಿ ಸೌಲಭ್ಯಗಳಲ್ಲಿ ಹಾಟ್‌ಸ್ಪಾಟ್, ಬ್ಲೂಟೂತ್, ವೈಫೈ ಅನ್ನು ಸಪೋರ್ಟ್ ಮಾಡುತ್ತದೆ. ಇದಲ್ಲದೆ ಸೈಡ್-ಮೌಂಟೆಡ್ ಫಿಂಗರ್‌ಪ್ರಿಂಟ್ ಸೆನ್ಸಾರ್ ಮತ್ತು ಸ್ಕ್ರಾಚ್-ರೆಸಿಸ್ಟೆಂಟ್ ರಿಯರ್ ಪ್ಯಾನಲ್ ಅನ್ನು ಅಳವಡಿಸಲಾಗಿದೆ.
ದೇಶಿಯ ಮೊಬೈಲ್ ಮಾರುಕಟ್ಟೆಯಲ್ಲಿ ವಿವೋ Y16 ಮೊಬೈಲ್ 4 GB RAM ಮತ್ತು 128 GB ಸ್ಟೋರೇಜ್ ವೇರಿಯಂಟ್ ಆಯ್ಕೆಯನ್ನು ಪಡೆದಿದೆ. ಹಾಗೆಯೇ ಈ ಫೋನ್ ಡ್ರಿಜ್ಲಿಂಗ್ ಗೋಲ್ಡ್ ಮತ್ತು ಸ್ಟೆಲ್ಲರ್ ಬ್ಲ್ಯಾಕ್ ಬಣ್ಣದ ಆಯ್ಕೆಗಳಲ್ಲಿ ಖರೀದಿಗೆ ಲಭ್ಯ ಇದೆ. ಗ್ರಾಹಕರು ಫ್ಲಿಪ್‌ಕಾರ್ಟ್ ಇ ಕಾಮರ್ಸ್ ತಾಣದಲ್ಲಿ ಖರೀದಿ ಮಾಡಬಹುದು.


Click it and Unblock the Notifications








