Home
ಸುದ್ದಿಜಾಲ

ವಿವೋ Y16 ಸ್ಮಾರ್ಟ್‌ಫೋನ್‌ ಬೆಲೆಯಲ್ಲಿ ಈಗ ದಿಢೀರ್‌ ಇಳಿಕೆ!

ವಿವೋ ಕಂಪೆನಿ ಇತ್ತೀಚಿಗಷ್ಟೆ ಬಿಡುಗಡೆ ಮಾಡಿರುವ ವಿವೋ Y16 ಸ್ಮಾರ್ಟ್‌ಫೋನ್‌ ಆಕರ್ಷಕ ಫೀಚರ್ಸ್‌ಗಳಿಂದ ಗ್ರಾಹಕರನ್ನು ಸೆಳೆದಿದೆ. ಇದೀಗ ಈ ಸ್ಮಾರ್ಟ್‌ಫೋನ್ ಬೆಲೆಯಲ್ಲಿ ಇಳಿಕೆ ಆಗಿದೆ. ಸ್ಮಾರ್ಟ್‌ಫೋನ್‌ ಕ್ವಾಡ್ ರಿಯರ್‌ ಕ್ಯಾಮೆರಾ ಸೆಟ್‌ಅಪ್ ಹೊಂದಿದ್ದು, ಮುಖ್ಯ ಕ್ಯಾಮೆರಾವು 13 ಎಂಪಿ ಸೆನ್ಸಾರ್‌ನಲ್ಲಿದೆ. ಹಾಗೆಯೇ ಮೀಡಿಯಾ ಟೆಕ್‌ ಹೆಲಿಯೋ P35 SoC ‌ಪ್ರೊಸೆಸರ್‌ ನಲ್ಲಿ ಕಾರ್ಯನಿರ್ವಹಿಸಲಿದೆ.

ಹೌದು, ವಿವೋ ಸ್ಮಾರ್ಟ್‌ಫೋನ್‌ ಕಂಪೆನಿ ತನ್ನ ವಿವೋ Y16 ಸ್ಮಾರ್ಟ್‌ಫೋನ್‌ ಬೆಲೆಯಲ್ಲಿ ಈಗ ಭರ್ಜರಿ ಕಡಿತವಾಗಿದೆ. ಈ ಪೋನಿನ 4 GB RAM ಮತ್ತು 128 GB ವೇರಿಯಂಟ್‌ ಬೆಲೆಯಲ್ಲಿ ಇದೀಗ 500ರೂ.ಗಳಿಗೆ ಕಡಿತವಾಗಿದ್ದು, 11,999ರೂ. ಗಳಿಗೆ ಲಭ್ಯ. ಇದು 5,000 mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 10W ವೈರ್ಡ್ ಚಾರ್ಜಿಂಗ್ ಅನ್ನು ಸಹ ಬೆಂಬಲಿಸುತ್ತದೆ.

ವಿವೋ Y16 ಸ್ಮಾರ್ಟ್‌ಫೋನ್‌ ಬೆಲೆಯಲ್ಲಿ ಈಗ ದಿಢೀರ್‌ ಇಳಿಕೆ!

ಹಾಗೆಯೇ ವಿವೋ Y16 ಸ್ಮಾರ್ಟ್‌ಫೋನ್‌ ಡ್ಯುಯಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಒಳಗೊಂಡಿದ್ದು, ಮುಂಭಗಾದಲ್ಲಿ ಸೆಲ್ಫಿ ಕ್ಯಾಮೆರಾವು 5 ಮೆಗಾ ಪಿಕ್ಸಲ್‌ ಸೆನ್ಸಾರ್‌ನಲ್ಲಿದೆ. ಹಾಗಾದರೇ ಈ ಫೋನಿನ ಇತರೆ ಫೀಚರ್ಸ್‌ಗಳೆನು ಎಂಬುದನ್ನು ಮುಂದೆ ನೋಡೋಣ ಬನ್ನಿರಿ.

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ : ವಿವೋ Y16 ಸ್ಮಾರ್ಟ್‌ಫೋನ್‌ 6.51 ಇಂಚಿನ IPS LCD HD+ ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ 720 x 1,600 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯವನ್ನು ಪಡೆದಿದೆ. ಇದು 82.5% ಸ್ಕ್ರೀನ್ ಟು ಬಾಡಿ ಅನುಪಾತವನ್ನು ಪಡೆದುಕೊಂಡಿದೆ. ಜೊತೆಗೆ ಡಿಸ್‌ಪ್ಲೇ 20:9 ರಚನೆಯ ಅನುಪಾತವನ್ನು ಹೊಂದಿದೆ.

ಪ್ರೊಸೆಸರ್‌ ಯಾವುದು : ವಿವೋ Y16 ಸ್ಮಾರ್ಟ್‌ಫೋನ್‌ ಮೀಡಿಯಾ ಟೆಕ್‌ ಹೆಲಿಯೋ P35 SoC ಪ್ರೊಸೆಸರ್‌ನಲ್ಲಿ ಕಾರ್ಯ ನಿರ್ವಹಿಸಲಿದೆ. ಇದು ಆಂಡ್ರಾಯ್ಡ್‌ 12 ಬೆಂಬಲದೊಂದಿಗೆ ರನ್‌ ಆಗಲಿದೆ. ಹಾಗೆಯೇ 4 GB RAM ಮತ್ತು 128 GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯವನ್ನು ಒಳಗೊಂಡಿದೆ. ಇದಲ್ಲದೆ ಮೆಮೊರಿ ಕಾರ್ಡ್‌ ಬೆಂಬಲವನ್ನು ಹೊಂದಿದ್ದು, ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಿಕೊಳ್ಳಬಹುದಾಗಿದೆ.

ವಿವೋ Y16 ಸ್ಮಾರ್ಟ್‌ಫೋನ್‌ ಬೆಲೆಯಲ್ಲಿ ಈಗ ದಿಢೀರ್‌ ಇಳಿಕೆ!

ಕ್ಯಾಮೆರಾ ಸೆಟ್‌ಅಪ್‌ ಯಾವುದು : ವಿವೋ Y16 ಸ್ಮಾರ್ಟ್‌ಫೋನ್‌ ಡ್ಯುಯಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿದೆ. ಇದರಲ್ಲಿ ಮೊದಲನೇ ಕ್ಯಾಮೆರಾ 13 ಮೆಗಾ ಪಿಕ್ಸೆಲ್ ಸೆನ್ಸಾರ್‌ ಮತ್ತು ಎರಡನೇ ಕ್ಯಾಮೆರಾ 2 ಮೆಗಾ ಪಿಕ್ಸೆಲ್ ಸೆನ್ಸಾರ್‌ ಅನ್ನು ಹೊಂದಿದೆ. ಇದಲ್ಲದೆ 5 ಮೆಗಾ ಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಸಹ ಹೊಂದಿದೆ. ಇನ್ನು ಈ ಕ್ಯಾಮೆರಾ ಪನೋರಮಾ, ಫೇಸ್ ಬ್ಯೂಟಿ, ಲೈವ್ ಫೋಟೋ, ಟೈಮ್-ಲ್ಯಾಪ್ಸ್ ಫೀಚರ್ಸ್‌ಗಳನ್ನು ಒಳಗೊಂಡಿದೆ.

ಬ್ಯಾಟರಿ ಮತ್ತು ಇತರೆ ಸೌಲಭ್ಯಗಳು : ವಿವೋ Y16 ಸ್ಮಾರ್ಟ್‌ಫೋನ್‌ 5,000 mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 10W ವೈರ್ಡ್ ಚಾರ್ಜಿಂಗ್ ಅನ್ನು ಸಹ ಬೆಂಬಲಿಸುತ್ತದೆ. ಇದು 18 ಗಂಟೆಗಳವರೆಗೆ ವೀಡಿಯೊ ಸ್ಟ್ರೀಮಿಂಗ್ ಅನ್ನು ಬೆಂಬಲಿಸುತ್ತದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಹಾಟ್‌ಸ್ಪಾಟ್‌, ಬ್ಲೂಟೂತ್‌, ವೈಫೈ ಅನ್ನು ಬೆಂಬಲಿಸಲಿದೆ. ಇದಲ್ಲದೆ ಸೈಡ್-ಮೌಂಟೆಡ್ ಫಿಂಗರ್‌ಪ್ರಿಂಟ್ ಸೆನ್ಸಾರ್‌ ಮತ್ತು ಸ್ಕ್ರಾಚ್-ರೆಸಿಸ್ಟೆಂಟ್ ರಿಯರ್‌ ಪ್ಯಾನಲ್‌ ಅನ್ನು ಅಳವಡಿಸಲಾಗಿದೆ.

ಮೆಮೊರಿ ಮತ್ತು ಲಭ್ಯತೆ : ಭಾರತದಲ್ಲಿ ವಿವೋ Y16 ಸ್ಮಾರ್ಟ್‌ಫೋನ್‌ 4 GB RAM ಮತ್ತು 128 GB ವೇರಿಯಂಟ್‌ ಆಯ್ಕೆಯನ್ನು ಹೊಂದಿದೆ. ಈ ಫೋನ್‌ ಡ್ರಿಜ್ಲಿಂಗ್ ಗೋಲ್ಡ್ ಮತ್ತು ಸ್ಟೆಲ್ಲರ್ ಬ್ಲ್ಯಾಕ್ ಬಣ್ಣದ ಆಯ್ಕೆಗಳಲ್ಲಿ ಖರೀದಿಗೆ ಲಭ್ಯವಾಗಲಿದೆ.

Best Mobiles in India

English summary
Vivo Y16 With 5000mAh Battery Gets a Price Drop in India. check offer price.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+