ವಿವೋ ಫೋನ್ ಖರೀದಿಸೋರಿಗೆ ಇಲ್ಲಿದೆ ಶುಭಸುದ್ದಿ! ಈ ಫೋನ್ ಮೇಲೆ ಭಾರಿ ಡಿಸ್ಕೌಂಟ್!
ದೀಪಾವಳಿ ಸಂಭ್ರಮದಲ್ಲಿ ಹೊಸ ಸ್ಮಾರ್ಟ್‌ಫೋನ್ ಖರೀದಿಸಬೇಕೆ? ಕೂಡಲೇ ಅಮೆಜಾನ್ ತಾಣಕ್ಕೆ ಬೇಟಿ ನೀಡುವುದು ಸೂಕ್ತ, ಅದರಲ್ಲೂ ವಿವೋ ಸ್ಮಾರ್ಟ್‌ಫೋನ್‌ಗಳ ಮೇಲೆ ಅಮೆಜಾನ್‌ನಲ್ಲಿ ನಿರೀಕ್ಷೆಗೂ ಮೀರಿದ ರಿಯಾಯಿತಿ ಲಭ್ಯವಾಗ್ತಿದೆ. ಇದರಲ್ಲಿ ಇತ್ತೀಚಿಗೆ ಬಿಡುಗಡೆ ಆದ ಹಲವು ಸ್ಮಾರ್ಟ್‌ಫೋನ್‌ಗಳು ಭರ್ಜರಿ ಡಿಸ್ಕೌಂಟ್ ಪಡೆದಿವೆ.
ಹೌದು, ಅಮೆಜಾನ್‌ನಲ್ಲಿ ವಿವೋ ಫೋನ್‌ಗಳ ಮೇಲೆ ವಿಶೇಷ ರಿಯಾಯಿತಿ ನೀಡಲಾಗ್ತಿದೆ. ಇದರಲ್ಲಿ ವಿವೋ Y16 ಸ್ಮಾರ್ಟ್‌ಫೋನ್ ಮೇಲೆ 29% ಡಿಸ್ಕೌಂಟ್ ನೀಡುತ್ತಿದೆ. ಇದರಿಂದ ಈ ಸ್ಮಾರ್ಟ್‌ಫೋನ್ ಮೂಲಬೆಲೆಗಿಂತ ಕಡಿಮೆ ಬೆಲೆಯಲ್ಲಿ ದೊರೆಯುತ್ತಿದೆ. ಇದು ಸ್ಮಾರ್ಟ್‌ಫೋನ್‌ನ 4GB + 128GB ಸ್ಟೋರೇಜ್ ವೇರಿಯೆಂಟ್ ಆಯ್ಕೆಗೆ ಅನ್ವಯವಾಗಲಿದೆ. ಹಾಗಾದ್ರೆ ವಿವೋ Y16 ಸ್ಮಾರ್ಟ್‌ಫೋನ್ ಇದೀಗ ಅಮೆಜಾನ್‌ನಲ್ಲಿ ಯಾವ ಬೆಲೆಯಲ್ಲಿ ಲಭ್ಯವಾಗಲಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ವಿವೋ Y16 ಸ್ಮಾರ್ಟ್‌ಫೋನ್‌ಗೆ ಬಿಗ್ ಆಫರ್
ಅಮೆಜಾನ್‌ನಲ್ಲಿ ವಿವೋ Y16 ಸ್ಮಾರ್ಟ್‌ಫೋನ್ ಅನ್ನು 16,999ರೂ ಬೆಲೆಗೆ ಪಟ್ಟಿ ಮಾಡಲಾಗಿದೆ. ಆದರೆ ಈ ಸ್ಮಾರ್ಟ್‌ಫೋನ್ ಮೇಲೆ 29% ರಿಯಾಯಿತಿ ನೀಡಲಾಗುತ್ತಿದೆ, ಆದರಿಂದ ಸ್ಮಾರ್ಟ್‌ಫೋನ್ 11,999ರೂ ಬೆಲೆಯಲ್ಲಿ ಲಭ್ಯವಾಗುತ್ತಿದೆ. ಇದಲ್ಲದೇ ಆಯ್ದ ಬ್ಯಾಂಕ್ ಆಫರ್, ಎಕ್ಸ್‌ಚೇಂಜ್ ಕೊಡುಗೆ ಹಾಗೂ ಇತರೆ ಆಫರ್ ಸೇರಿ ಇನ್ನಷ್ಟು ಕಡಿಮೆ ಬೆಲೆಗೆ ಸ್ಮಾರ್ಟ್‌ಫೋನ್ ಖರೀದಿಸುವುದಕ್ಕೆ ಸಾಧ್ಯವಾಗಲಿದೆ.
ವಿವೋ Y16 ಸ್ಮಾರ್ಟ್‌ಫೋನ್ ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ
ವಿವೋ Y16 ಸ್ಮಾರ್ಟ್‌ಫೋನ್ 6.51 ಇಂಚಿನ IPS LCD HD+ ಡಿಸ್‌ಪ್ಲೇ ಹೊಂದಿದೆ. ಇನ್ನು ಡಿಸ್‌ಪ್ಲೇ 720 x 1,600 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯ ಪಡೆದಿದೆ. ಈ ಡಿಸ್‌ಪ್ಲೇ 82.5% ಸ್ಕ್ರೀನ್ ಟು ಬಾಡಿ ಅನುಪಾತವನ್ನು ಪಡೆದುಕೊಂಡಿದೆ. ಜೊತೆಗೆ ಡಿಸ್‌ಪ್ಲೇಯು 20:9 ರಚನೆಯ ಅನುಪಾತವನ್ನು ಒಳಗೊಂಡಿದೆ.

ವಿವೋ Y16 ಸ್ಮಾರ್ಟ್‌ಫೋನ್ ಪ್ರೊಸೆಸರ್ ಪವರ್ ಏನಿದೆ?
ವಿವೋ Y16 ಸ್ಮಾರ್ಟ್‌ಫೋನ್ ಮೀಡಿಯಾ ಟೆಕ್ ಹಿಲಿಯೋ P35 SoC ಪ್ರೊಸೆಸರ್ ವೇಗವನ್ನು ಹೊಂದಿದೆ. ಇದು ಆಂಡ್ರಾಯ್ಡ್ 12 ಬೆಂಬಲದೊಂದಿಗೆ ರನ್ ಆಗಲಿದೆ. ಹಾಗೆಯೇ 4 GB RAM ಮತ್ತು 128 GB ಇಂಟರ್ ಸ್ಟೋರೇಜ್ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಇದಲ್ಲದೆ ಮೆಮೊರಿ ಕಾರ್ಡ್ ಮೂಲಕ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸುವುದಕ್ಕೆ ಅವಕಾಸವನ್ನು ಸಹ ನೀಡಲಿದೆ.
ವಿವೋ Y16 ಸ್ಮಾರ್ಟ್‌ಫೋನ್ ಕ್ಯಾಮೆರಾ ಸೆಟ್‌ಅಪ್ ಏನಿದೆ?
ವಿವೋ Y16 ಸ್ಮಾರ್ಟ್‌ಫೋನ್ ಡ್ಯುಯಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 13 ಮೆಗಾಪಿಕ್ಸೆಲ್ ಸೆನ್ಸಾರ್ ಹೊಂದಿದೆ. ಇನ್ನು ಎರಡನೇ ಕ್ಯಾಮೆರಾ 2 ಮೆಗಾ ಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದಲ್ಲಿ ಬರಲಿದೆ. ಇದಲ್ಲದೆ 5 ಮೆಗಾ ಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಸಹ ಹೊಂದಿದೆ. ಕ್ಯಾಮೆರಾ ಫೀಚರ್ಸ್‌ಗಳಲ್ಲಿ ಪನೋರಮಾ, ಫೇಸ್ ಬ್ಯೂಟಿ, ಲೈವ್ ಫೋಟೋ, ಟೈಮ್-ಲ್ಯಾಪ್ಸ್ ಫೀಚರ್ಸ್‌ಗಳನ್ನು ಪಡೆದುಕೊಂಡಿದೆ.

ವಿವೋ Y16 ಸ್ಮಾರ್ಟ್‌ಫೋನ್ ಬ್ಯಾಟರಿ ಮತ್ತು ಇತರೆ
ವಿವೋ Y16 ಸ್ಮಾರ್ಟ್‌ಫೋನ್ 5,000 mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಹೊಂದಿದೆ. ಇದು 10W ವೈರ್ಡ್ ಚಾರ್ಜಿಂಗ್ ಅನ್ನು ಬೆಂಬಲಿಸಲಿದ್ದು, 18 ಗಂಟೆಗಳವರೆಗೆ ವೀಡಿಯೊ ಸ್ಟ್ರೀಮಿಂಗ್ ಅನ್ನು ಬೆಂಬಲಿಸಲಿದೆ.
ವಿವೋ Y16 ಸ್ಮಾರ್ಟ್‌ಫೋನ್ ಬೆಲೆ ಮತ್ತು ಲಭ್ಯತೆ
ವಿವೋ Y16 ಸ್ಮಾರ್ಟ್‌ಫೋನ್ 4GB RAM ಮತ್ತು 128 GB ವೇರಿಯಂಟ್ ಆಯ್ಕೆಯಗೆ ಈ ರಿಯಾಯಿತಿ ಅನ್ವಯವಾಗುತ್ತಿದೆ. ಆದರಿಂದ ಇದು ನಿಮಗೆ 11,999ರೂ ಬೆಲೆಯಲ್ಲಿ ಲಭ್ಯವಾಗುತ್ತಿದೆ. ಇನ್ನು ಸ್ಮಾರ್ಟ್‌ಫೋನ್ ಅನ್ನು ಡ್ರಿಜ್ಲಿಂಗ್ ಗೋಲ್ಡ್ ಮತ್ತು ಸ್ಟೆಲ್ಲರ್ ಬ್ಲ್ಯಾಕ್ ಬಣ್ಣದ ಆಯ್ಕೆಗಳಲ್ಲಿ ಖರೀದಿಸಬಹುದಾಗಿದೆ.


Click it and Unblock the Notifications








