Vivo: ವಿವೋದ ಈ ಫೋನ್ ಮೇಲೆ ಬರೋಬ್ಬರಿ 38% ಡಿಸ್ಕೌಂಟ್! ಬಿಗ್ ಬ್ಯಾಟರಿ ಬ್ಯಾಕಪ್ ಸಾಮರ್ಥ್ಯ!
ವಿವೋ Y16 ಸ್ಮಾರ್ಟ್‌ಫೋನ್ ಅಮೆಜಾನ್ ತಾಣದಲ್ಲಿ ಭರ್ಜರಿ ಡಿಸ್ಕೌಂಟ್ ಪಡೆದುಕೊಂಡಿದೆ. ಈ ಮೂಲಕ ಸ್ಮಾರ್ಟ್‌ಫೋನ್ ಖರೀದಿಸುವ ಗ್ರಾಹಕರಿಗೆ ಸಿಹಿಸುದ್ದಿಯನ್ನು ನೀಡಿದೆ. ಬಿಡುಗಡೆ ಆಗ ಬಹಳ ದಿನಗಳೇ ಕಳೆದರೂ ಕೂಡ ಈ ಫೋನ್‌ಗಿರುವ ಡಿಮ್ಯಾಂಡ್ ಕಡಿಮೆ ಆಗದಿರುವುದು ಇದರ ಪ್ರಸಿದ್ಧಿಗೆ ಹಿಡಿದ ಕೈಗನ್ನಡಿಯಾಗಿದೆ.
ಹೌದು, ವಿವೋ Y16 ಸ್ಮಾರ್ಟ್‌ಫೋನ್ ಇ-ಕಾಮರ್ಸ್ ದೈತ್ಯ ಅಮೆಜಾನ್‌ನಲ್ಲಿ ಬರೊಬ್ಬರಿ 38% ಡಿಸ್ಕೌಂಟ್ ಪಡೆದಿದೆ. ಇದರಿಂದ ಸ್ಮಾರ್ಟ್‌ಫೋನ್ ಬೆಲೆ ತುಂಬಾ ಕಡಿಮೆಯಾಗಿದೆ. ಇನ್ನು ಈ ಸ್ಮಾರ್ಟ್‌ಫೋನ್ ಮೀಡಿಯಾಟೆಕ್ ಹೆಲಿಯೋ P35 SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಹಾಗಾದ್ರೆ ವಿವೋ Y16 ಸ್ಮಾರ್ಟ್‌ಫೋನ್ ಡಿಸ್ಕೌಂಟ್ ನಂತರದ ಬೆಲೆ ಎಷ್ಟಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

Vivo Y16 ಡಿಸ್ಕೌಂಟ್ ನಂತರದ ಬೆಲೆ ಎಷ್ಟು?
ವಿವೋ Y16 ಸ್ಮಾರ್ಟ್‌ಫೋನಿನ 4GB RAM ಮತ್ತು 64GB ಸ್ಟೋರೇಜ್ ಆಯ್ಕೆಯ ಅಮೆಜಾನ್ ತಾಣದಲ್ಲಿ 15,999ರೂ ಬೆಲೆಗೆ ಪಟ್ಟಿಮಾಡಲಾಗಿದೆ. ಆದರೆ ಈ ಸ್ಮಾರ್ಟ್‌ಫೋನ್ ಮೇಲೆ 38% ಡಿಸ್ಕೌಂಟ್ ಪಡೆದುಕೊಂಡಿರುವುದರಿಂದ ಇದನ್ನು ಕೇವಲ 9,999ರೂ ಬೆಲೆಗೆ ಲಭ್ಯವಾಗಲಿದೆ. ಇದಲ್ಲದೆ ವಿವಿಧ ಬ್ಯಾಂಕ್ ಕಾರ್ಡ್‌ಗಳ ಮೂಲಕ ಖರೀದಿಸಿದರೆ ಹೆಚ್ಚುವರಿ ರಿಯಾಯಿತಿ ಕೂಡ ದೊರೆಯಲಿದೆ.
ವಿವೋ Y16 ಸ್ಮಾರ್ಟ್‌ಫೋನ್ ಡಿಸ್‌ಪ್ಲೇ ರಚನೆ
ವಿವೋ Y16 ಸ್ಮಾರ್ಟ್‌ಫೋನ್ 6.51ಇಂಚಿನ IPS LCD HD+ ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನು ಡಿಸ್‌ಪ್ಲೇ 720x1,600 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದಲ್ಲಿದೆ. ಈ ಡಿಸ್‌ಪ್ಲೇ 82.5% ಸ್ಕ್ರೀನ್-ಟು-ಬಾಡಿ ಅನುಪಾತದಲ್ಲಿದ್ದು, 20:9 ರಚನೆಯ ಅನುಪಾತವನ್ನು ಹೊಂದಿದೆ.

ವಿವೋ Y16 ಸ್ಮಾರ್ಟ್‌ಫೋನ್ ಪ್ರೊಸೆಸರ್ ಯಾವುದು?
ವಿವೋ Y16 ಸ್ಮಾರ್ಟ್‌ಫೋನ್ ಮೀಡಿಯಾಟೆಕ್ ಹೆಲಿಯೋ P35 SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಇದು ಆಂಡ್ರಾಯ್ಡ್ 12 ಬೆಂಬಲದೊಂದಿಗೆ ರನ್ ಆಗಲಿದೆ. ಹಾಗೆಯೇ 4GB RAM ಮತ್ತು 128GB ಇಂಟರ್ ಸ್ಟೋರೇಜ್ ಸಾಮರ್ಥ್ಯವನ್ನು ಒಳಗೊಂಡಿದೆ. ಇದಲ್ಲದೆ ಮೆಮೊರಿ ಕಾರ್ಡ್ ಬೆಂಬಲವನ್ನು ಹೊಂದಿದ್ದು, ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಿಕೊಳ್ಳಬಹುದಾಗಿದೆ.
ವಿವೋ Y16 ಸ್ಮಾರ್ಟ್‌ಫೋನ್ ಕ್ಯಾಮೆರಾ ಸೆಟಪ್
ವಿವೋ Y16 ಸ್ಮಾರ್ಟ್‌ಫೋನ್ ಡ್ಯುಯಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಹೊಂದಿದೆ. ಮೊದಲನೇ ಕ್ಯಾಮೆರಾ 13 ಮೆಗಾಪಿಕ್ಸೆಲ್ ಸೆನ್ಸಾರ್ ಮತ್ತು ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಸೆನ್ಸಾರ್ ಪಡೆದುಕೊಂಡಿದೆ. ಇದಲ್ಲದೆ 5 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿದೆ. ಕ್ಯಾಮೆರಾ ಫೀಚರ್ಸ್‌ಗಳಲ್ಲಿ ಪನೋರಮಾ, ಫೇಸ್ ಬ್ಯೂಟಿ, ಲೈವ್ ಫೋಟೋ, ಟೈಮ್-ಲ್ಯಾಪ್ಸ್ ಅನ್ನು ನೀಡಲಾಗಿದೆ.

ವಿವೋ Y16 ಸ್ಮಾರ್ಟ್‌ಫೋನ್ ಬ್ಯಾಟರಿ ಮತ್ತು ಇತರೆ ಸೌಲಭ್ಯ
ವಿವೋ Y16 ಸ್ಮಾರ್ಟ್‌ಫೋನ್ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 10W ವೈರ್ಡ್ ಚಾರ್ಜಿಂಗ್ ಅನ್ನು ಸಹ ಬೆಂಬಲಿಸುತ್ತದೆ. ಇದು 18 ಗಂಟೆಗಳವರೆಗೆ ವೀಡಿಯೊ ಸ್ಟ್ರೀಮಿಂಗ್ ಅನ್ನು ಬೆಂಬಲಿಸುತ್ತದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಹಾಟ್‌ಸ್ಪಾಟ್, ಬ್ಲೂಟೂತ್, ವೈಫೈ ಅನ್ನು ಬೆಂಬಲಿಸಲಿದೆ. ಇದಲ್ಲದೆ ಸೈಡ್-ಮೌಂಟೆಡ್ ಫಿಂಗರ್‌ಪ್ರಿಂಟ್ ಸೆನ್ಸಾರ್ ಮತ್ತು ಸ್ಕ್ರಾಚ್-ರೆಸಿಸ್ಟೆಂಟ್ ರಿಯರ್ ಪ್ಯಾನಲ್ ಅನ್ನು ಅಳವಡಿಸಲಾಗಿದೆ.
ಇನ್ನು ಇದೆ ಸಮಯದಲ್ಲಿ ವಿವೋ Y56 5G ಸ್ಮಾರ್ಟ್‌ಫೋನ್ ಕೂಡ ಅಮೆಜಾನ್ ತಾಣದಲ್ಲಿ ಬರೋಬ್ಬರಿ 28% ಡಿಸ್ಕೌಂಟ್ ಪಡೆದುಕೊಂಡಿದೆ. ಪ್ರಸ್ತುತ ಈ ಸ್ಮಾರ್ಟ್‌ಫೋನಿನ 8GB+128GB ಸ್ಟೋರೇಜ್ ಆಯ್ಕೆಗೆ ಅಮೆಜಾನ್ ತಾಣದಲ್ಲಿ 24,999ರೂ ಬೆಲೆಗೆ ಪಟ್ಟಿ ಮಾಡಲಾಗಿದೆ. ಆದರೆ ಈ ಸ್ಮಾರ್ಟ್‌ಫೋನ್ ಮೇಲೆ 28% ಡಿಸ್ಕೌಂಟ್ ನೀಡಲಾಗುತ್ತಿರುವುದರಿಂದ 17,999ರೂ ಬೆಲೆಗೆ ಖರೀದಿಸಬಹುದಾಗಿದೆ. ಇದರಿಂದಾಗಿ ಸ್ಮಾರ್ಟ್‌ಫೋನ್ ಇದೀಗ ಬಿಸಿ ದೋಸೆಯಂತೆ ಮಾರಾಟವಾಗುತ್ತಿದ್ದು, ನೀವು ಕೂಡ ಈ ಆಫರ್ ಮಿಸ್ ಮಾಡಿಕೊಳ್ಳಬೇಡಿ. ಈ ಸ್ಮಾರ್ಟ್‌ಫೋನ್ ಮೀಡಿಯಾಟೆಕ್ ಡೈಮೆನ್ಸಿಟಿ 700SoC ಪ್ರೊಸೆಸರ್ ನಲ್ಲಿ ಕಾರ್ಯನಿರ್ವಹಿಸಲಿದೆ.


Click it and Unblock the Notifications








