Just In
Don't Miss
- Sports
ಟಿ20 ವಿಶ್ವಕಪ್ ಗೆದ್ದ ಶಫಾಲಿ ವರ್ಮಾ ಪಡೆಗೆ ಬಿಸಿಸಿಐ ಸನ್ಮಾನ: 5 ಕೋಟಿ ರುಪಾಯಿ ಬಹುಮಾನ
- News
ತಂಬಾಕು ನಿಯಂತ್ರಣಕ್ಕೆ ಮೈಸೂರು ಜಿಲ್ಲಾಧಿಕಾರಿ ತೆಗೆದುಕೊಂಡ ಕ್ರಮಗಳು, ಇಲ್ಲಿದೆ ವಿವರ
- Movies
Muddumanigalu:ಮಗಳ ಕಷ್ಟಕ್ಕೆ ಹೆಗಲಾಗಿ ಬಂದೇ ಬಿಟ್ಟಳು ಮುದ್ದುಲಕ್ಷ್ಮೀ.. ಮುಂದೇನು?
- Lifestyle
ಬಜೆಟ್ನಲ್ಲಿ ಪ್ರಸ್ತಾಪವಾದ ಸಿಕಲ್ ಸೆಲ್ ಅನಿಮಿಯಾ ಕಾಯಿಲೆ ಎಷ್ಟು ಡೇಂಜರಸ್ ಗೊತ್ತೆ?
- Automobiles
ಹೊಸ ಇನೋವಾ ಹೈಕ್ರಾಸ್ ಬಲದೊಂದಿಗೆ ಮಾರಾಟದಲ್ಲಿ ದಾಖಲೆ ಮಟ್ಟದ ಬೆಳವಣಿಗೆ ಸಾಧಿಸಿದ ಟೊಯೊಟಾ
- Finance
Union Budget 2023: ಹೊಸ ತೆರಿಗೆ ಪದ್ಧತಿಯಡಿಯಲ್ಲಿ ತೆರಿಗೆ ಲೆಕ್ಕಾಚಾರ ಹೇಗೆ?
- Education
KVS Recruitment 2022 : ಕೇಂದ್ರೀಯ ವಿದ್ಯಾಲಯ ಸಂಗತನ್ ದಲ್ಲಿ 13404 ಹುದ್ದೆಗಳ ನೇಮಕಾತಿ
- Travel
ಯಾವುದೇ ಚಿಂತೆ ಇಲ್ಲದೆ ಸುಖಕರ ಪ್ರಯಾಣ ಅನುಭವಿಸಲು ಇಲ್ಲಿದೆ ಸಲಹೆಗಳು
ಭಾರತದಲ್ಲಿ ವಿವೋ Y16 ಸ್ಮಾರ್ಟ್‌ಫೋನ್ ಬಿಡುಗಡೆ! ಬೆಲೆ ಎಷ್ಟು?
ಭಾರತದ ಮೊಬೈಲ್ ಮಾರುಕಟ್ಟೆಯಲ್ಲಿ ವಿವೋ ಕಂಪೆನಿ ತನ್ನ ವೈವಿಧ್ಯಮಯ ಸ್ಮಾರ್ಟ್‌ಫೋನ್‌ಗಳಿಗೆ ಪ್ರಸಿದ್ಧಿ ಪಡೆದುಕೊಂಡಿದೆ. ಈಗಾಗಲೇ ಹಲವು ಆಕರ್ಷಕ ಸ್ಮಾರ್ಟ್‌ಫೋನ್‌ಗಳನ್ನು ಪರಿಚಯಿಸಿ ಸೈ ಎನಿಸಿಕೊಂಡಿದೆ. ಸದ್ಯ ಇದೀಗ ಭಾರತದ ಮಾರುಕಟ್ಟೆಯಲ್ಲಿ ತನ್ನ ಹೊಸ ವಿವೋ Y16 ಸ್ಮಾರ್ಟ್‌ಫೋನ್ ಬಿಡುಗಡೆ ಮಾಡಿದೆ. ಇದು ಮೀಡಿಯಾಟೆಕ್ ಹೆಲಿಯೋ P35 SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಇನ್ನು ಈ ಸ್ಮಾರ್ಟ್‌ಫೋನ್ ಡ್ಯುಯಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಹೊಂದಿದೆ.

ಹೌದು, ವಿವೋ ಕಂಪೆನಿ ಭಾರತದಲ್ಲಿ ಹೊಸ ವಿವೋ Y16 ಸ್ಮಾರ್ಟ್‌ಫೋನ್ ಲಾಂಚ್ ಮಾಡಿದೆ. ಈ ಸ್ಮಾರ್ಟ್‌ಫೋನ್ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 18 ಗಂಟೆಗಳವರೆಗೆ ವೀಡಿಯೊ ಸ್ಟ್ರೀಮಿಂಗ್ ಅನ್ನು ಬೆಂಬಲಿಸುತ್ತದೆ ಎಂದು ವಿವೋ ಕಂಪನಿ ಹೇಳಿದೆ. ಇನ್ನು ಈ ಸ್ಮಾರ್ಟ್‌ಫೋನ್ ಡ್ರಿಜ್ಲಿಂಗ್ ಗೋಲ್ಡ್ ಮತ್ತು ಸ್ಟೆಲ್ಲರ್ ಬ್ಲ್ಯಾಕ್ ಕಲರ್ ಆಯ್ಕೆಗಳಲ್ಲಿ ಬರಲಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್ ವಿಶೇಷತೆ ಏನು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತವಿ ಓದಿರಿ.

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ
ವಿವೋ Y16 ಸ್ಮಾರ್ಟ್‌ಫೋನ್ 6.51ಇಂಚಿನ IPS LCD HD+ ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ 720x1,600 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯವನ್ನು ಪಡೆದಿದೆ. ಇದು 82.5% ಸ್ಕ್ರೀನ್-ಟು-ಬಾಡಿ ಅನುಪಾತವನ್ನು ಪಡೆದುಕೊಂಡಿದೆ. ಜೊತೆಗೆ ಡಿಸ್‌ಪ್ಲೇ 20:9 ರಚನೆಯ ಅನುಪಾತವನ್ನು ಹೊಂದಿದೆ.

ಪ್ರೊಸೆಸರ್ ಯಾವುದು?
ವಿವೋ Y16 ಸ್ಮಾರ್ಟ್‌ಫೋನ್ ಮೀಡಿಯಾಟೆಕ್ ಹೆಲಿಯೋ P35 SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಇದು ಆಂಡ್ರಾಯ್ಡ್ 12 ಬೆಂಬಲದೊಂದಿಗೆ ರನ್ ಆಗಲಿದೆ. ಹಾಗೆಯೇ 4GB RAM ಮತ್ತು 128GB ಇಂಟರ್ ಸ್ಟೋರೇಜ್ ಸಾಮರ್ಥ್ಯವನ್ನು ಒಳಗೊಂಡಿದೆ. ಇದಲ್ಲದೆ ಮೆಮೊರಿ ಕಾರ್ಡ್ ಬೆಂಬಲವನ್ನು ಹೊಂದಿದ್ದು, ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಿಕೊಳ್ಳಬಹುದಾಗಿದೆ.

ಕ್ಯಾಮೆರಾ ಸೆಟ್‌ಅಪ್ ಯಾವುದು?
ವಿವೋ Y16 ಸ್ಮಾರ್ಟ್‌ಫೋನ್ ಡ್ಯುಯಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಹೊಂದಿದೆ. ಇದರಲ್ಲಿ ಮೊದಲನೇ ಕ್ಯಾಮೆರಾ 13 ಮೆಗಾಪಿಕ್ಸೆಲ್ ಸೆನ್ಸಾರ್ ಮತ್ತು ಎರಡನೇ ಕ್ಯಾಮೆರಾ 2
ಮೆಗಾಪಿಕ್ಸೆಲ್ ಸೆನ್ಸಾರ್ ಅನ್ನು ಹೊಂದಿದೆ. ಇದಲ್ಲದೆ 5 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಸಹ ಹೊಂದಿದೆ. ಇನ್ನು ಈ ಕ್ಯಾಮೆರಾ ಪನೋರಮಾ, ಫೇಸ್ ಬ್ಯೂಟಿ, ಲೈವ್ ಫೋಟೋ, ಟೈಮ್-ಲ್ಯಾಪ್ಸ್ ಫೀಚರ್ಸ್‌ಗಳನ್ನು ಒಳಗೊಂಡಿದೆ.

ಬ್ಯಾಟರಿ ಮತ್ತು ಇತರೆ
ವಿವೋ Y16 ಸ್ಮಾರ್ಟ್‌ಫೋನ್ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 10W ವೈರ್ಡ್ ಚಾರ್ಜಿಂಗ್ ಅನ್ನು ಸಹ ಬೆಂಬಲಿಸುತ್ತದೆ. ಇದು 18 ಗಂಟೆಗಳವರೆಗೆ ವೀಡಿಯೊ ಸ್ಟ್ರೀಮಿಂಗ್ ಅನ್ನು ಬೆಂಬಲಿಸುತ್ತದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಹಾಟ್‌ಸ್ಪಾಟ್, ಬ್ಲೂಟೂತ್, ವೈಫೈ ಅನ್ನು ಬೆಂಬಲಿಸಲಿದೆ. ಇದಲ್ಲದೆ ಸೈಡ್-ಮೌಂಟೆಡ್ ಫಿಂಗರ್‌ಪ್ರಿಂಟ್ ಸೆನ್ಸಾರ್ ಮತ್ತು ಸ್ಕ್ರಾಚ್-ರೆಸಿಸ್ಟೆಂಟ್ ರಿಯರ್ ಪ್ಯಾನಲ್ ಅನ್ನು ಅಳವಡಿಸಲಾಗಿದೆ.

ಬೆಲೆ ಮತ್ತು ಲಭ್ಯತೆ
ಭಾರತದಲ್ಲಿ ವಿವೋ Y16 ಸ್ಮಾರ್ಟ್‌ಫೋನ್ ಭಾರತದಲ್ಲಿ 12,499ರೂ. ಆರಂಭಿಕ ಬೆಲೆಯನ್ನು ಹೊಂದಿದೆ. ಇದು ಡ್ರಿಜ್ಲಿಂಗ್ ಗೋಲ್ಡ್ ಮತ್ತು ಸ್ಟೆಲ್ಲರ್ ಬ್ಲ್ಯಾಕ್ ಬಣ್ಣದ ಆಯ್ಕೆಗಳಲ್ಲಿ ಬರುತ್ತದೆ.

ಇದಲ್ಲದೆ ವಿವೋ ಕಂಪೆನಿ ಇತ್ತೀಚಿಗೆ ವಿವೋ ಕಂಪೆನಿ ಭಾರತದಲ್ಲಿ ತನ್ನ ಹೊಸ ವಿವೋ V25 ಸ್ಮಾರ್ಟ್‌ಫೋನ್ ಲಾಂಚ್ ಮಾಡಿದೆ. ಇದು 6.44 ಇಂಚಿನ ಫುಲ್ ಹೆಚ್‌ಡಿ ಪ್ಲಸ್ ಅಮೋಲೆಡ್ ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ 1080 x 2404 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯವನ್ನು ಪಡೆದಿದೆ. ಇದು 20:9 ರಚನೆಯ ಅನುಪಾತವನ್ನು ಹೊಂದಿದ್ದು, 409 ಪಿಪಿಐ ಪಿಕ್ಸೆಲ್ ಸಾಂದ್ರತೆಯನ್ನು ಒಳಗೊಂಡಿದೆ. ಇನ್ನು ಡಿಸ್‌ಪ್ಲೇ 90Hz ರಿಫ್ರೆಶ್ ರೇಟ್ ಬೆಂಬಲಿಸಲಿದೆ.

ಇದು ಮೀಡಿಯಾ ಟೆಕ್ ಡೈಮೆನ್ಸಿಟಿ 900 SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದ್ದು, ಆಂಡ್ರಾಯ್ಡ್ 12 ಬೆಂಬಲದೊಂದಿಗೆ ರನ್ ಆಗಲಿದೆ. ಹಾಗೆಯೇ 8GB RAM + 128GB ಮತ್ತು 12GB RAM + 256GB ಸ್ಟೋರೇಜ್ ಸಾಮರ್ಥ್ಯ ಎರಡು ವೇರಿಯೆಂಟ್ ಆಯ್ಕೆಗಳಲ್ಲಿ ಬರಲಿದೆ. ಇನ್ನು ಈ ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಹೊಂದಿದೆ. ಜೊತೆಗೆ 4,500mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿದೆ. ಈ ಸ್ಮಾರ್ಟ್‌ಫೋನ್ ಇನ್-ಡಿಸ್‌ಪ್ಲೇ ಫಿಂಗರ್‌ಪ್ರಿಂಟ್ ಸೆನ್ಸಾರ್ ಅನ್ನು ಹೊಂದಿದೆ.
-
54,999
-
36,599
-
39,999
-
38,990
-
1,29,900
-
79,990
-
38,900
-
18,999
-
19,300
-
69,999
-
79,900
-
1,09,999
-
1,19,900
-
21,999
-
1,29,900
-
12,999
-
44,999
-
15,999
-
7,332
-
17,091
-
29,999
-
7,999
-
8,999
-
45,835
-
77,935
-
48,030
-
29,616
-
57,999
-
12,670
-
79,470