ಬಹಿರಂಗವಾಯ್ತು ವಿವೋ Y17s ಸ್ಮಾರ್ಟ್‌ಫೋನ್ ಫೀಚರ್ಸ್.. ಬಿಡುಗಡೆ ಯಾವಾಗ?
ಕ್ಯಾಮೆರಾ ಕೇಂದ್ರಿತ ಸ್ಮಾರ್ಟ್‌ಫೋನ್‌ಗಳಿಗೆ ವಿವೋ ಕಂಪೆನಿ ಹೆಸರುವಾಸಿಯಾಗಿದೆ. ತನ್ನ ಭಿನ್ನ ಮಾದರಿಯ ಸ್ಮಾರ್ಟ್‌ಫೋನ್‌ಗಳ ಮೂಲಕ ಸೈ ಎನಿಸಿಕೊಂಡಿದೆ. ಇದೀಗ ಹೊಸ ವಿವೋ Y17s ಸ್ಮಾರ್ಟ್‌ಫೋನ್ ಪರಿಚಯಿಸುವುದಕ್ಕೆ ತಯಾರಿ ನಡೆಸಿದೆ. ಈ ಸ್ಮಾರ್ಟ್‌ಫೋನ್ ಭಾರತಕ್ಕೆ ಶೀಘ್ರದಲ್ಲೇ ಎಂಟ್ರಿ ನೀಡಲಿದೆ ಎಂದು ಹೇಳಲಾಗಿದೆ.
ಹೌದು, ವಿವೋ Y17s ಸ್ಮಾರ್ಟ್‌ಫೋನ್ ಶೀಘ್ರದಲ್ಲೇ ಬಿಡುಗಡೆ ಆಗಲಿದೆ ಎಂದು ಅಂದಾಜಿಸಲಾಗಿದೆ. ಈ ಸ್ಮಾರ್ಟ್‌ಫೋನ್ ಮಾಡೆಲ್ ನಂಬರ್ ಬ್ಯೂರೋ ಆಫ್ ಇಂಡಿಯನ್ ಸ್ಟ್ಯಾಂಡರ್ಡ್ಸ್ (BIS) ನಿಂದ ಪ್ರಮಾಣೀಕರಿಸಲ್ಪಟ್ಟಿದೆ. ಅದರಂತೆ ಈ ಡಿವೈಸ್ ಬ್ಲೂಟೂತ್ ಆವೃತ್ತಿ 5.0 ಹೊಂದಿದೆ ಎಂದು ಹೇಳಲಾಗಿದೆ. ಇದಲ್ಲದೆ ಸ್ಮಾರ್ಟ್‌ಫೋನ್ ಯಾವೆಲ್ಲಾ ಫೀಚರ್ಸ್ ಒಳಗೊಂಡಿರಲಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ವಿವೋ Y17s ಡಿಸ್‌ಪ್ಲೇ ರಚನೆ
ವಿವೋ Y17s ಸ್ಮಾರ್ಟ್‌ಫೋನ್ 6.51 ಇಂಚಿನ ಫುಲ್ ಹೆಚ್‌ಡಿ ಪ್ಲಸ್ ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ 720 x 1600 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದೊಂದಿಗೆ ಬರಲಿದೆ. ಇದು 90Hz ರಿಫ್ರೆಶ್ ರೇಟ್ ಬೆಂಬಲದೊಂದಿಗೆ ಬರಬಹುದು ಎಂದು ನಿರೀಕ್ಷಿಸಲಾಗಿದೆ. ಇನ್ನು ಸ್ಮಾರ್ಟ್‌ಫೋನ್ ಡಿಸ್‌ಪ್ಲೇ ವೀಡಿಯೊ ವೀಕ್ಷಣೆಗೆ ಯೋಗ್ಯವಾದ ಮಾದರಿಯನ್ನು ಹೊಂದಿರಲಿದೆ ಎಂದು ಅಂದಾಜಿಸಲಾಗಿದೆ.
ವಿವೋ Y17s ಪ್ರೊಸೆಸರ್ ಯಾವುದು?
ವಿವೋ Y17s ಸ್ಮಾರ್ಟ್‌ಫೋನ್ ಮೀಡಿಯಾ ಟೆಕ್ ಹೆಲಿಯೊ G35 SoC ಪ್ರೊಸೆಸರ್ ವೇಗವನ್ನು ಹೊಂದಿರಲಿದೆ. ಆಂಡ್ರಾಯ್ಡ್ 13 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 4 GB RAM ಮತ್ತು 64 GB ಇಂಟರ್ ಸ್ಟೋರೇಜ್ ಸಾಮರ್ಥ್ಯದ ಆಯ್ಕೆಯಲ್ಲಿ ಬರಲಿದೆ. ಇದಲ್ಲದೆ ಮೆಮೊರಿ ಕಾರ್ಡ್ ಬೆಂಬಲಿಸುವ ಆಯ್ಕೆ ನೀಡಲಿದೆಯಾ ಅನ್ನೊದರ ಬಗ್ಗೆ ಯಾವುದೇ ಮಾಹಿತಿ ಇನ್ನು ಬಹಿರಂಗವಾಗಿಲ್ಲ.
ವಿವೋ Y17s ಕ್ಯಾಮೆರಾ ಸೆಟ್‌ಅಪ್
ವಿವೋ Y17s ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟ್‌ಅಪ್‌ನೊಂದಿಗೆ ಬರಲಿದೆ. ಇದರ ಮುಖ್ಯ ಕ್ಯಾಮೆರಾ 13 ಮೆಗಾಪಿಕ್ಸೆಲ್ ಸೆನ್ಸಾರ್, ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಸೆನ್ಸಾರ್ ಮತ್ತು ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಸೆನ್ಸಾರ್ ಹೊಂದಿರಲಿದೆ ಎಂದು ಅಂದಾಜಿಸಲಾಗಿದೆ. ಇನ್ನು ಕ್ಯಾಮೆರಾ ಫೀಚರ್ಸ್‌ಗಳಲ್ಲಿ ಡಿಜಿಟಲ್ ಜೂಮ್, ಆಟೋ ಫ್ಲ್ಯಾಶ್, ಫೇಸ್ ಡಿಟೆಕ್ಷನ್, ಟಚ್ ದಿ ಫೋಕಸ್ ಅನ್ನು ಒಳಗೊಂಡಿರಬಹುದು. ಇದು 8 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾದೊಂದಿಗೆ ಬರುವ ನಿರೀಕ್ಷೆಯಿದೆ.
ವಿವೋ Y17s ಸ್ಮಾರ್ಟ್‌ಫೋನ್ ಬ್ಯಾಟರಿ ಮತ್ತು ಇತರೆ
ವಿವೋ Y17s ಸ್ಮಾರ್ಟ್‌ಫೋನ್ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿರಲಿದೆ. ಇದು ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ ಎಂದು ವರದಿಯಾಗಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ವೈಫೈ,ಬ್ಲೂಟೂತ್, ಹಾಟ್‌ಸ್ಪಾಟ್, ಆಯ್ಕೆಗಳೊಂದಿಗೆ ಬರುವ ನಿರೀಕ್ಷೆಯಿದೆ. ಇದಲ್ಲದೆ, ಸ್ಮಾರ್ಟ್‌ಫೋನ್ ಅಕ್ಸಿಲೆರೊಮೀಟರ್, ಪ್ರಾಕ್ಸಿಮಿಟಿ ಸೆನ್ಸಾರ್ ಅನ್ನು ಒಳಗೊಂಡಿರಬಹುದು ಎಂದು ಅಂದಾಜಿಸಲಾಗಿದೆ.
ವಿವೋ Y17s ಸ್ಮಾರ್ಟ್‌ಫೋನ್ ಬೆಲೆ ಮತ್ತು ಲಭ್ಯತೆ
ವಿವೋ Y17s ಸ್ಮಾರ್ಟ್‌ಫೋನ್ ಅಕ್ಟೋಬರ್ 25, 2023 ರಂದು ಭಾರತದಲ್ಲಿ ಬಿಡುಗಡೆಯಾಗುವ ನಿರೀಕ್ಷೆಯಿದೆ. ಇದು 20,773ರೂ. ಆರಂಭಿಕ ಬೆಲೆಯಲ್ಲಿ ಲಭ್ಯವಿರುತ್ತದೆ ಎಂದು ಅಂದಾಜಿಸಲಾಗಿದೆ.
ಇದಲ್ಲದೆ ವಿವೋ ಕಂಪೆನಿಯ ವಿವೋ V29e ಸ್ಮಾರ್ಟ್‌ಫೋನ್ ಫೀಚರ್ಸ್ ಕೂಡ ಬಹಿರಂಗವಾಗಿದೆ. ಅದರಂತೆ ಈ ಸ್ಮಾರ್ಟ್‌ಫೋನ್ ಡ್ಯುಯಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ನೊಂದಿಗೆ ಬರಲಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾಪಿಕ್ಸೆಲ್ ಸೆನ್ಸಾರ್ ಇರಲಿದೆ. ಇದರ ಎರಡನೇ ಕ್ಯಾಮೆರಾ ಸೆನ್ಸಾರ್ ಬಗ್ಗೆ ಮಾಹಿತಿಯಿಲ್ಲ. ಆದರೆ ಇದು ಮ್ಯಾಕ್ರೋ ಲೆನ್ಸ್ ನೊಂದಿಗೆ ಬರಲಿದೆ ಎಂದು ಹೇಳಲಾಗಿದೆ. ಇನ್ನು ಈ ಸ್ಮಾರ್ಟ್‌ಫೋನ್‌ನ ಮೇನ್ ಹೈಲೈಟ್ ಅಂದರೆ ಇದರ ಸೆಲ್ಫಿ ಕ್ಯಾಮೆರಾ. ಈ ಸ್ಮಾರ್ಟ್‌ಫೋನ್ 50 ಮೆಗಾಪಿಕ್ಸೆಲ್ ಸೆಲ್ಫಿ ಕ್ಯಾಮೆರಾದೊಂದಿಗೆ ಬರಲಿದೆ ಎನ್ನಲಾಗಿದೆ.


Click it and Unblock the Notifications








