Home
ಸುದ್ದಿಜಾಲ

Vivo: ಕಡಿಮೆ ಬೆಲೆಯಲ್ಲಿ ಹೊಸ ವಿವೋ ಫೋನ್‌ ಖರೀದಿಸಬೇಕೆ?..ಇಲ್ಲಿ ನೋಡಿ

ಅಗ್ಗದ ಬೆಲೆಯಲ್ಲಿ ಹೊಸ ವಿವೋ ಮೊಬೈಲ್‌ ಖರೀದಿಸುವ ಪ್ಲ್ಯಾನ್ ಇದೆಯಾ? ಹಾಗಿದ್ದರೆ, ವಿವೋ ಸಂಸ್ಥೆಯು ನೂತನವಾಗಿ ಬಿಡುಗಡೆ ಮಾಡಿರುವ ವಿವೋ Y18t (Vivo Y18t) ಎಂಟ್ರಿ ಲೆವೆಲ್‌ ವಿಭಾಗದಲ್ಲಿ ಗಮನ ಸೆಳೆಯಲಿದೆ. ಅಂದಹಾಗೆ ಈ ಮೊಬೈಲ್‌ ಆರಂಭಿಕ 4GB RAM + 128GB ಸ್ಟೋರೇಜ್‌ ವೇರಿಯಂಟ್‌ ಬೆಲೆಯು 9,499ರೂ. ಗಳು ಆಗಿದೆ. ಹಾಗೆಯೇ ಈ ಫೋನ್‌ ಹಿಂಭಾಗದಲ್ಲಿ 50 ಮೆಗಾ ಪಿಕ್ಸಲ್‌ ಕ್ಯಾಮೆರಾ ಒಳಗೊಂಡಿದೆ.

ಹೌದು, ವಿವೋ ಸಂಸ್ಥೆಯು ಭಾರತದಲ್ಲಿ ಹೊಸದಾಗಿ ವಿವೋ Y18t (Vivo Y18t) ಸ್ಮಾರ್ಟ್‌ಫೋನ್‌ ಅನ್ನು ಲಾಂಚ್‌ ಮಾಡಿದ್ದು, ಈ ಸ್ಮಾರ್ಟ್‌ಫೋನ್‌ ಅಗ್ಗದ ಪ್ರೈಸ್‌ಟ್ಯಾಗ್‌ನಿಂದ ವಿವೋ ಪ್ರಿಯರನ್ನು ಆಕರ್ಷಿಸಿದೆ. ಅಂದಹಾಗೆ ಈ ಮೊಬೈಲ್‌ ಡ್ಯುಯಲ್‌ ರಿಯರ್‌ ಕ್ಯಾಮೆರಾ ರಚನೆ ಅನ್ನು ಪಡೆದಿದ್ದು, ಇದರೊಂದಿಗೆ 5,000 mAh ಸಾಮರ್ಥ್ಯದ ಬ್ಯಾಟರಿ ಪವರ್ ಸೌಲಭ್ಯ ಸಹ ಪಡೆದುಕೊಂಡಿದೆ.

Vivo: ಕಡಿಮೆ ಬೆಲೆಯಲ್ಲಿ ಹೊಸ ವಿವೋ ಫೋನ್‌ ಖರೀದಿಸಬೇಕೆ?..ಇಲ್ಲಿ ನೋಡಿ

ಹಾಗೆಯೇ ಈ ಮೊಬೈಲ್‌ Unisoc T612 SoC ಪ್ರೊಸೆಸರ್‌ ಸಾಮರ್ಥ್ಯ ಹೊಂದಿದ್ದು, ಆಂಡ್ರಾಯ್ಡ್‌ 14 ಓಎಸ್‌ ಸಪೋರ್ಟ್‌ ಒಳಗೊಂಡಿದೆ. ಇದರ ಜೊತೆಗೆ 8 ಮೆಗಾ ಪಿಕ್ಸಲ್‌ ಸೆಲ್ಫಿ ಕ್ಯಾಮೆರಾ ಪಡೆದುಕೊಂಡಿದೆ. ಹಾಗಾದರೇ ವಿವೋ Y18t (Vivo Y18t) ಸ್ಮಾರ್ಟ್‌ಫೋನ್‌ ಇತರೆ ಯಾವೆಲ್ಲಾ ಫೀಚರ್ಸ್‌ ಒಳಗೊಂಡಿದೆ ಎನ್ನುವುದನ್ನು ಮುಂದೆ ತಿಳಿಯೋಣ ಬನ್ನಿರಿ.

ಡಿಸ್‌ಪ್ಲೇ ರಚನೆ ಹಾಗೂ ವಿನ್ಯಾಸ

ವಿವೋ Y18t ಮೊಬೈಲ್‌ 6.56 ಇಂಚಿನ LCD ಡಿಸ್‌ಪ್ಲೇಯನ್ನು ಪಡೆದಿದ್ದು, ಈ ಡಿಸ್‌ಪ್ಲೇ ಉತ್ತಮ ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಇದು 90Hz ರಿಫ್ರೆಶ್ ರೇಟ್‌ ಹಾಗೂ 840 nits ಬ್ರೈಟ್ನೆಸ್‌ ಅನ್ನು ಸಪೋರ್ಟ್ ಮಾಡುತ್ತದೆ. ಇನ್ನು ಡಿಸ್‌ಪ್ಲೇಯು NTSC ಕಲರ್‌ gamut ಹೊಂದಿದ್ದು, 269 PPI ಪಿಕ್ಸಲ್‌ ಸಾಂದ್ರತೆ ಅನ್ನು ಪಡೆದುಕೊಂಡಿದೆ.

ಯಾವ ಪ್ರೊಸೆಸರ್‌ ಸೌಲಭ್ಯ ಇದೆ

ವಿವೋ Y18t ಸ್ಮಾರ್ಟ್‌ಫೋನ್‌ Unisoc T612 SoC ಪ್ರೊಸೆಸರ್‌ ಬಲವನ್ನು ಹೊಂದಿದ್ದು, ದಕ್ಷತೆಗಾಗಿ 6 ​​× 1.8 GHz ಕೋರ್‌ಗಳನ್ನು ಹೊಂದಿದೆ. ಹಾಗೆಯೇ ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್‌ 14 OS ನಲ್ಲಿ ಕೆಲಸ ನಿರ್ವಹಿಸಲಿದೆ. ಹಾಗೆಯೇ 4GB RAM + 128GB ಸ್ಟೋರೇಜ್‌ ವೇರಿಯಂಟ್‌ ಅನ್ನು ಹೊಂದಿದ್ದು, ಇದಲ್ಲದೆ ಎಸ್‌ಡಿ ಮೆಮೊರಿ ಕಾರ್ಡ್‌ ಮೂಲಕ 1 TB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸುವ ಆಯ್ಕೆ ಲಭ್ಯ.

ಡ್ಯುಯಲ್ ಕ್ಯಾಮೆರಾ ಸೆನ್ಸಾರ್‌ ಸೌಲಭ್ಯ

ವಿವೋ Y18t ಸ್ಮಾರ್ಟ್‌ಫೋನ್‌ ಡ್ಯುಯಲ್ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಪಡೆದಿದ್ದು, ಇದರಲ್ಲಿ ಪ್ರಾಥಮಿಕ ಕ್ಯಾಮೆರಾ 50ಮೆಗಾ ಪಿಕ್ಸೆಲ್ ಸೆನ್ಸಾರ್‌ ಅನ್ನು ಹೊಂದಿದೆ. ಇನ್ನು ಇದರ ದ್ವಿತೀಯ ಕ್ಯಾಮೆರಾ 0.08 ಮೆಗಾ ಪಿಕ್ಸೆಲ್ ಸೆನ್ಸಾರ್‌ ಅನ್ನು ಹೊಂದಿದೆ. ಇದಲ್ಲದೆ 8 ಮೆಗಾ ಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಒದಗಿಸಲಾಗಿದೆ.

ಬ್ಯಾಟರಿ ಬಲ ಎಷ್ಟಿದೆ

ವಿವೋ Y18t ಫೋನ್ 5,000 mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಪವರ್‌ ಅನ್ನು ಪಡೆದಿದ್ದು, ಇದಕ್ಕೆ ಪೂರಕವಾಗಿ 15W ಫಾಸ್ಟ್‌ ಚಾರ್ಜಿಂಗ್‌ ಸೌಲಭ್ಯ ಸಹ ಪಡೆದುಕೊಂಡಿದೆ. ಇನ್ನು ಕನೆಕ್ಟಿವಿಟಿ ಸೌಲಭ್ಯಗಳಲ್ಲಿ ಡ್ಯುಯಲ್ ಸಿಮ್, ಡ್ಯುಯಲ್-ಬ್ಯಾಂಡ್ ವೈಫೈ, ಬ್ಲೂಟೂತ್ 5.2, ಯುಎಸ್‌ಬಿ ಟೈಪ್ ಸಿ, ಜಿಪಿಎಸ್, FuntouchOS 14, IP54 ಧೂಳು ಮತ್ತು ನೀರಿನ ಪ್ರತಿರೋಧ ಆಯ್ಕೆಗಳನ್ನು ಒಳಗೊಂಡಿದೆ.

ಬೆಲೆ ಮಾಹಿತಿ ಹಾಗೂ ಲಭ್ಯತೆ ವಿವರ

ವಿವೋ Y18t ಫೋನ್ ದೇಶಿಯ ಮಾರುಕಟ್ಟೆಯಲ್ಲಿ 4GB RAM + 128GB ಸ್ಟೋರೇಜ್‌ ವೇರಿಯಂಟ್‌ ಬೆಲೆಯು 9,499ರೂ. ಆಗಿದೆ. ಅಂದಹಾಗೆ ಈ ಫೋನ್‌ ಜೆಮ್ ಗ್ರೀನ್ ಮತ್ತು ಸ್ಪೇಸ್ ಬ್ಲ್ಯಾಕ್ ಕಲರ್‌ ಆಯ್ಕೆಗಳಲ್ಲಿ ಖರೀದಿಗೆ ಲಭ್ಯ ಇದೆ.

Best Mobiles in India

English summary
Vivo Y18t Launched Under Rs 10,000 in India. Check out offer, camera, battery and more. ಅಗ್ಗದ ಬೆಲೆಯಲ್ಲಿ ಹೊಸ ವಿವೋ ಮೊಬೈಲ್‌ ಖರೀದಿಸುವ ಪ್ಲ್ಯಾನ್ ಇದೆಯಾ? ಹಾಗಿದ್ದರೆ, ವಿವೋ ಸಂಸ್ಥೆಯು ನೂತನವಾಗಿ ಬಿಡುಗಡೆ ಮಾಡಿರುವ ವಿವೋ Y18t (Vivo Y18t) ಎಂಟ್ರಿ ಲೆವೆಲ್‌ ವಿಭಾಗದಲ್ಲಿ ಗಮನ ಸೆಳೆಯಲಿದೆ. ಅಂದಹಾಗೆ ಈ ಮೊಬೈಲ್‌ ಆರಂಭಿಕ 4GB RAM + 128GB ಸ್ಟೋರೇಜ್‌ ವೇರಿಯಂಟ್‌ ಬೆಲೆಯು 9,499ರೂ. ಗಳು ಆಗಿದೆ.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+