Just In
Don't Miss
- News
ಮೈಲಾನ್ ಫಾರ್ಮಾ ಕಂಪನಿಯಿಂದ ರಾಜ್ಯಕ್ಕೆ ಹೆಚ್ಚುವರಿ ರೆಮ್ಡೆಸಿವಿರ್
- Sports
ಡೆಲ್ಲಿ ಕ್ಯಾಪಿಟಲ್ಸ್ ಕೈಬಿಟ್ಟಿದ್ದಕ್ಕೆ ಕಾರಣ ಹೇಳಿದ ಸಂದೀಪ್ ಲಮಿಚಾನೆ
- Finance
ಭಾರತದಲ್ಲಿ 18 ರಿಂದ 44 ವರ್ಷದೊಳಗಿನ ಒಟ್ಟಾರೆ ಜನಸಂಖ್ಯೆಗೆ, ಕೊರೊನಾ ಲಸಿಕೆಯ ವೆಚ್ಚವೆಷ್ಟು?
- Automobiles
ಐಷಾರಾಮಿ ಕಾರಿನಂತೆ ಮಾಡಿಫೈಗೊಂಡ ಟಾಟಾ ನೆಕ್ಸಾನ್
- Lifestyle
ಶನಿ ಪ್ರದೋಷ ವ್ರತ 2021: ಈ ದಿನದ ಮಹತ್ವವೇನು? ಕಷ್ಟಗಳ ನಿವಾರಣೆಗೆ ಏನು ಮಾಡಬೇಕು?
- Movies
ಶಾಶ್ವತವಾಗಿ ಬಾಗಿಲು ಹಾಕಿದ ಮೈಸೂರಿನ ಹಳೆಯ ಚಿತ್ರಮಂದಿರ
- Education
Sachin Tendulkar Birthday: ಸಚಿನ್ ತೆಂಡೂಲ್ಕರ್ ಬಗ್ಗೆ ನಿಮಗೆಷ್ಟು ಗೊತ್ತು ಅಂತಾ ನೋಡೋಣ ಬನ್ನಿ
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಭಾರತದಲ್ಲಿ ಬಜೆಟ್ ಬೆಲೆಯ ವಿವೋ Y1s ಸ್ಮಾರ್ಟ್‌ಫೋನ್ ಲಾಂಚ್!
ವಿವೋ ಕಂಪೆನಿ ಹೊಸ ಮಾದರಿಯ ಕ್ಯಾಮೆರಾ ಫೀಚರ್ಸ್‌ಗಳನ್ನು ಒಳಗೊಂಡಿರುವ ಸ್ಮಾರ್ಟ್‌ಫೋನ್‌ಗಳಿಗೆ ಹೆಸರುವಾಸಿಯಾಗಿದೆ. ಈಗಾಗಲೇ ಹಲವು ಆಕರ್ಷಕ ಫೀಚರ್ಸ್‌ಗಳನ್ನ ಒಳಗೊಂಡಿರುವ ಸ್ಮಾರ್ಟ್‌ಫೊನ್ ಪರಿಚಯಿಸಿ ಗ್ರಾಹಕರಿಂದ ಸೈ ಎನಿಸಿಕೊಂಡಿದೆ. ಸದ್ಯ ಇದೀಗ ತನ್ನ ಹೊಸ ವಿವೋ Y1s ಸ್ಮಾರ್ಟ್‌ಫೋನ್ ಅನ್ನು ಭಾರತದಲ್ಲಿ ಅಧಿಕೃತವಾಗಿ ಬಿಡುಗಡೆ ಮಾಡಿದೆ. ಇನ್ನು ಈ ಫೋನ್ ಮೀಡಿಯಾ ಟೆಕ್ ಹಿಲಿಯೊ P35 SoC ಪ್ರೊಸೆಸರ್ ಬಲವನ್ನು ಪಡೆದುಕೊಂಡಿದ್ದು, ಆಂಡ್ರಾಯ್ಡ್ 10 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ.

ಹೌದು, ವಿವೋ ಕಂಪೆನಿ ತನ್ನ ಹೊಸ ವಿವೋ Y1s ಸ್ಮಾರ್ಟ್‌ಫೋನ್ ಭಾರತದಲ್ಲಿ ಪರಿಚಯಿಸಿದೆ. ಈ ಸ್ಮಾರ್ಟ್‌ಫೋ ನ್ ಬಜೆಟ್ ಸ್ನೇಹಿ ಸ್ಮಾರ್ಟ್‌ಫೋನ್ ಆಗಿದ್ದು, 10,000 ರೂ ಒಳಗೆ ಲಭ್ಯವಾಗಲಿದೆ. ಇನ್ನು ಈ ಸ್ಮಾರ್ಟ್‌ಫೋನ್ 13 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸಿಂಗಲ್ ರಿಯರ್ ಕ್ಯಾಮೆರಾ ಮತ್ತು 5 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ. ಹಾಗೇಯೇ ಇದು 4,030mAh ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ಅಪ್ ಅನ್ನು ಒಳಗೊಂಡಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್ ವಿಶೇಷತೆ ಏನು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಡಿಸ್‌ಪ್ಲೇ ವಿಶೇಷತೆ
ವಿವೋ Y1s ಸ್ಮಾರ್ಟ್‌ಫೋನ್ 720x1,520 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.22 ಇಂಚಿನ ಹೆಚ್‌ಡಿ + ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇಯು ಎಲ್‌ಸಿಡಿ ವಿನ್ಯಾಸವನ್ನು ಹೊಂದಿದೆ. ಇನ್ನು ಈ ಡಿಸ್‌ಪ್ಲೇ 88.6 % ಸ್ಕ್ರೀನ್-ಟು-ಬಾಡಿ ಅನುಪಾತವನ್ನು ಹೊಂದಿದೆ.

ಪ್ರೊಸೆಸರ್
ಇದು ಮೀಡಿಯಾ ಟೆಕ್ ಹಿಲಿಯೊ P35 SoC ಪ್ರೊಸೆಸರ್ ಬಲವನ್ನು ಪಡೆದುಕೊಂಡಿದ್ದು, ಆಂಡ್ರಾಯ್ಡ್ 10 ಆಧಾರಿತ ಫನ್‌ಟಚ್ ಓಎಸ್ 10.5 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೇಯೇ 2GB RAM+32GB ಸಂಗ್ರಹ ಸಾಮರ್ಥ್ಯವನ್ನು ಹೊಂದಿದೆ. ಇದಲ್ಲದೆ ಮೆಮೊರಿ ಕಾರ್ಡ್ ಬಳಸಿ 256GB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಬಹುದಾಗಿದೆ.

ಕ್ಯಾಮೆರಾ ವಿನ್ಯಾಸ
ವಿವೋ Y1s ಸ್ಮಾರ್ಟ್‌ಫೋನ್ 13 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸಿಂಗಲ್ ರಿಯರ್ ಕ್ಯಾಮೆರಾ ಮತ್ತು 5 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ. ಇನ್ನು ಕ್ಯಾಮೆರಾ ಫೀಚರ್ಸ್‌ನಲ್ಲಿ ರಿಯರ್ ಕ್ಯಾಮೆರಾ ಫ್ಲ್ಯಾಷ್ ಅನ್ನು ಬೆಂಬಲಿಸುತ್ತದೆ. ಅಲ್ಲದೆ ಬ್ಯೂಟಿ ಮತ್ತು ಟೈಮ್ ಲ್ಯಾಪ್ಸ್ ಫೀಚರ್ಸ್ ಅನ್ನು ಸಹ ಹೊಂದಿದೆ.

ಬ್ಯಾಟರಿ ಮತ್ತು ಇತರೆ
ಇದು 4,030mAh ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ಅಪ್ ಅನ್ನು ಹೊಂದಿದೆ. ಇದು ಫಾಸ್ಟ್ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 4G, ವೈ-ಫೈ, ಬ್ಲೂಟೂತ್ V5, ಮೈಕ್ರೋ ಯುಎಸ್‌ಬಿ ಪೋರ್ಟ್, ಜಿಪಿಎಸ್, ಯುಎಸ್‌ಬಿ ಒಟಿಜಿ, ಎಫ್ಎಂ, 3.5mm ಆಡಿಯೊ ಜ್ಯಾಕ್ ಅನ್ನು ಬೆಂಬಲಿಸಲಿದೆ.

ಬೆಲೆ ಮತ್ತು ಲಭ್ಯತೆ
ಇನ್ನು ಈ ಸ್ಮಾರ್ಟ್‌ಫೋನ್ 2GB RAM + 32 GB ಶೇಖರಣಾ ಆಯ್ಕೆಗೆ 7,990 ರೂ. ಬೆಲೆಯನ್ನು ಹೊಂದಿರುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಇದು ಅರೋರಾ ಬ್ಲೂ ಮತ್ತು ಆಲಿವ್ ಬ್ಲ್ಯಾಕ್ ಎಂಬ ಎರಡು ಬಣ್ಣಗಳಲ್ಲಿ ಲಭ್ಯವಾಗಲಿದೆ. ಒನ್‌ಆಸಿಸ್ಟ್ ಮೂಲಕ ಒನ್-ಟೈಮ್ ಸ್ಕ್ರೀನ್ ರಿಪ್ಲೇಸ್‌ಮೆಂಟ್ ಅನ್ನು ಸಹ ನೀಡಲಾಗಿದೆ.
-
54,535
-
1,19,900
-
54,999
-
86,999
-
49,975
-
49,990
-
20,999
-
1,04,999
-
44,999
-
64,999
-
20,699
-
49,999
-
11,499
-
54,999
-
7,999
-
8,980
-
17,091
-
10,999
-
34,999
-
39,600
-
25,750
-
33,590
-
27,760
-
44,425
-
13,780
-
1,25,000
-
45,990
-
1,35,000
-
82,999
-
17,999