ಶೀಘ್ರದಲ್ಲೇ ಬಜೆಟ್‌ ಬೆಲೆಯ ವಿವೋ Y20 ಸ್ಮಾರ್ಟ್‌ಫೋನ್‌ ಬಿಡುಗಡೆ!

|

ಜನಪ್ರಿಯ ಸ್ಮಾರ್ಟ್‌ಫೋನ್‌ ತಯಾರಕ ವಿವೋ ಕಂಪೆನಿ ತನ್ನ ಹೊಸ ಮಾದರಿಯ ಫೀಚರ್ಸ್‌ ಫೋನ್‌ಗಳಿಂದ ಗುರುತಿಸಿಕೊಂಡಿದೆ. ಹೊಸತನದ ಫೀಚರ್ಸ್‌ಗಳನ್ನ ಪರಿಚಯಿಸುವಲ್ಲಿ ಸೈ ಎನಿಸಿಕೊಂಡಿರುವ ವಿವೋ ಮಾರುಕಟ್ಟೆಯಲ್ಲಿ ತನ್ನದೇ ಆದ ಸ್ಥಾನವನ್ನ ಗಟ್ಟಿ ಪಡಿಸಿಕೊಂಡಿದೆ. ಸದ್ಯ ಇದೀಗ ತನ್ನ ಮತ್ತೊಂದು ಬಜೆಟ್‌ ಬೆಲೆಯ ಸ್ಮಾರ್ಟ್‌ಫೋನ್‌ ಅನ್ನು ಬಿಡುಗಡೆ ಮಾಡಲು ಸಿದ್ದತೆ ನಡೆಸಿದ್ದು, ಸ್ಮಾರ್ಟ್‌ಫೋನ್‌ ಪ್ರಿಯರಲ್ಲಿ ಸಾಕಷ್ಟು ನಿರೀಕ್ಷೆಯನ್ನ ಹುಟ್ಟುಹಾಕಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಕ್ವಾಲ್ಕಾಮ್‌ ಸ್ನಾಪ್‌ಡ್ರಾಗನ್‌ ಪ್ರೊಸೆಸರ್‌ ಅನ್ನು ಹೊಂದಿರಲಿದೆ ಎಂದು ಹೇಳಲಾಗ್ತಿದೆ.

ವಿವೋ

ಹೌದು, ವಿವೋ ಕಂಪೆನಿ ತನ್ನ ಮತ್ತೊಂದು ಹೊಸ ಬಜೆಟ್‌ ಸ್ಮಾರ್ಟ್‌ಫೋನ್‌ ಅನ್ನು ಬಿಡುಗಡೆ ಮಾಡಲು ತಯಾರಿ ನಡೆಸಿದೆ. ಈ ಸ್ಮಾರ್ಟ್‌ಫೋನ್‌ ಅನ್ನು ವಿವೋ Y20 ಎಂದು ಹೆಸರಿಸಲಾಗಿದ್ದು, ಇದರ ಸ್ಪೋರ್ಟಿಂಗ್ ಮಾಡೆಲ್ ಸಂಖ್ಯೆ V207 ಎಂದು ಹೇಳಲಾಗ್ತಿದೆ. ಸದ್ಯ ಈ ಸ್ಮಾರ್ಟ್‌ಫೋನ್‌ ಕುರಿತು ಮಾದರಿ ಸಂಖ್ಯೆ ಮತ್ತು ವಿವೋ Y20 ಅನ್ನುವ ಹೆಸರನ್ನು ಹೊರತುಪಡಿಸಿ, ಹೆಚ್ಚಿನ ಮಾಹಿತಿ ಲಭ್ಯವಾಗಿಲ್ಲ. ಸದ್ಯ ಲಭ್ಯ ಮಾಹಿತಿಯ ಪ್ರಕಾರ ವಿವೋ Y20 ಸ್ಮಾರ್ಟ್‌ಫೋನ್‌ ವಿನ್ಯಾಸ ಏನು ಅನ್ನೊದನ್ನ ಈ ಲೇಖನದಲ್ಲಿ ತಿಳಿದುಕೊಳ್ಳೋಣ ಬನ್ನಿರಿ.

ಸ್ಮಾರ್ಟ್‌ಫೋನ್‌

ಇನ್ನು ವಿವೋ Y20 ಸ್ಮಾರ್ಟ್‌ಫೋನ್‌ ಬಜೆಟ್‌ ಬೆಲೆಯಲ್ಲಿ ಲಭ್ಯವಾಗಲಿದೆ. ಈ ಸ್ಮಾರ್ಟ್‌ಫೋನ್‌ ಬಗ್ಗೆ ಗೀಕ್‌ಬೆಂಚ್ ಬೆಂಚ್‌ಮಾರ್ಕಿಂಗ್ ವೆಬ್‌ಸೈಟ್‌ನಲ್ಲಿ ಗುರುತಿಸಲಾಗಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಆಂಡ್ರಾಯ್ಡ್ 10 ಔಟ್‌- ಆಫ್-ದಿ-ಬಾಕ್ಸ್‌ನೊಂದಿಗೆ ಫೋನ್ ಪ್ರಾರಂಭವಾಗಲಿದೆ ಎಂದು ಪಟ್ಟಿಯು ಬಹಿರಂಗಪಡಿಸಿದೆ. ಇದಲ್ಲದೆ ಕ್ವಾಲ್ಕಾಮ್‌ ಸ್ನಾಪ್‌ಡ್ರಾಗನ್ ಪ್ರೊಸೆಸರ್ ಮತ್ತು 1.8GHz ಗಡಿಯಾರದಲ್ಲಿ ಫೋನ್ ಕಾರ್ಯನಿರ್ವಹಿಸುತ್ತದೆ ಎಂದು ಹೇಳಲಾಗಿದೆ. ಹಾಗೇಯೇ ಈ ಸ್ಮಾರ್ಟ್‌ಫೋನ್‌ 4GB RAM ಅನ್ನು ಹೊಂದಿದೆ.

ವಿವೋ Y20

ಇದಲ್ಲದೆ ವಿವೋ Y20 ಕಳೆದ ವರ್ಷ ಬಿಡುಗಡೆಯಾಗಿದ್ದ, ವಿವೊ Y19 ಸ್ಮಾರ್ಟ್‌ಫೋನ್‌ ಮುಂದುವರೆದ ಆವೃತ್ತಿಯಾಗಿದೆ. ಹಾಗೇ ನೋಡುವುದಾದರೆ ವಿವೋ Y19 ಸ್ಮಾರ್ಟ್‌ಫೋನ್‌ 6.53 ಇಂಚಿನ ಪೂರ್ಣ ಎಚ್‌ಡಿ + ಡಿಸ್‌ಪ್ಲೇಯನ್ನು ಹೊಂದಿದೆ. ಅಲ್ಲದೆ ಇದು ಮೀಡಿಯಾ ಟೆಕ್ ಹಿಲಿಯೊ P65 ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸುತ್ತದೆ. ಜೊತೆಗೆ ಇದು ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 16 ಮೆಗಾಪಿಕ್ಸೆಲ್ ಸೆನ್ಸಾರ್‌, ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಮತ್ತು ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಸೆನ್ಸಾರ್‌ ಅನ್ನು ಹೊಂದಿದೆ. ಅಲ್ಲದೆ ಇದು 16 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ.

ಸ್ಮಾರ್ಟ್‌ಫೋನ್‌

ಇನ್ನು ವಿವೋ y19 ಸ್ಮಾರ್ಟ್‌ಫೋನ್‌ 5,000mAh ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ಅಪ್‌ ಅನ್ನು ಹೊಂದಿದೆ. ಇದರಿಂದ ವಿವೋ Y19 ಸ್ಮಾರ್ಟ್‌ಫೋನ್‌ ಕೂಡ ಇದೇ ಬ್ಯಾಟರಿ ಸಾಮರ್ಥ್ಯ ಹೊಂದಿರುವ ಸಾಧ್ಯತೆ ಇದೆ. ಇದಲ್ಲದೆ ವಿವೋ Y20 ಸ್ಮಾರ್ಟ್‌ಫೋನ್‌ ಕ್ಯಾಮೆರಾ ಫೀಚರ್ಸ್‌ ಹೊಸತನದಿಂದ ಕೂಡಿರುವ ಸಾಧ್ಯತೆ ಇದೆ. ಇನ್ನು ವಿವೋ Y19 ಸ್ಮಾರ್ಟ್‌ಫೋನ್‌ ಪ್ರಸ್ತುತ 14,990 ರೂ, ಆರಂಭಿಕ ಬೆಲೆಗೆ ಆನ್‌ಲೈನ್‌ನಲ್ಲಿ ಲಭ್ಯವಿದೆ. ಇನ್ನು ವಿವೋ Y20 ಸ್ಮಾರ್ಟ್‌ಫೋನ್‌ ಬಜೆಟ್‌ ಬೆಲೆಯನ್ನ ಹೊಂದಿದೆ ಎಂದಿರುವುದರಿಂದ ಹೆಚ್ಚು ಕಡಿಮೆ Y19 ಗಿಂತ ಕಡಿಮೆ ಬೆಲೆಗೆ ಲಬ್ಯವಾಗುವ ಸಾಧ್ಯತೆ ಇದೆ.

Most Read Articles
Best Mobiles in India

English summary
Vivo Y20 is expected to come with Android 10, 4GB of RAM and a 1.8GHz Qualcomm processor. Here’s what we know about the Vivo Y19 successor.to know more visit to kannada.gizbot.com

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X