Home
ಸುದ್ದಿಜಾಲ

ಭಾರತದಲ್ಲಿ ಬಿಡುಗಡೆಗೂ ಮುನ್ನವೇ ಸಂಚಲನ ಸೃಷ್ಟಿಸಿದ ವಿವೋ Y200 5G! ಕಾರಣ ಏನ್‌ ಗೊತ್ತಾ?

ಭಾರತದ ಮಾರುಕಟ್ಟೆಗೆ ವಿವೋ Y200 5G ಸ್ಮಾರ್ಟ್‌ಫೋನ್‌ ಎಂಟ್ರಿ ನೀಡಲು ದಿನಾಂಕ ನಿಗದಿಯಾಗಿದೆ. ಅಕ್ಟೋಬರ್‌ 23 ರಂದು ಭಾರತಕ್ಕೆ ಕಾಲಿಡಲು ವಿವೋ Y200 5G ಸಿದ್ಧವಾಗಿದೆ. ಈ ನಡುವೆ ಇ-ಕಾಮರ್ಸ್‌ ತಾಣ ಫ್ಲಿಪ್‌ಕಾರ್ಟ್‌ನಲ್ಲಿ ವಿವೋ Y200 5G ಸ್ಮಾರ್ಟ್‌ಫೋನ್‌ನ ಸಂಪೂರ್ಣ ಫೀಚರ್ಸ್‌ ಬಹಿರಂಗವಾಗಿದ್ದು, ಭಾರಿ ಸಂಚಲನ ಸೃಷ್ಟಿಸಿದೆ.

ಹೌದು, ವಿವೋ Y200 5G ಸ್ಮಾರ್ಟ್‌ಫೋನ್‌ ಬಿಡುಗಡೆಗೂ ಮುನ್ನವೇ ಫೀಚರ್ಸ್‌ ಬಹಿರಂಗವಾಗಿದೆ. ಸ್ಮಾರ್ಟ್‌ಫೋನ್‌ ಫೀಚರ್ಸ್‌, ಡಿಸೈನ್‌ ಮಾತ್ರವಲ್ಲದೆ ಅದರ ಬೆಲೆ ವಿವರಗಳು ಕೂಡ ಬಹಿರಂಗಗೊಂಡಿದೆ. ಅದರಂತೆ ಈ ಸ್ಮಾರ್ಟ್‌ಫೋನ್‌ ಡ್ಯುಯಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ನಲ್ಲಿ ಬರಲಿದೆ. ಜೊತೆಗೆ 5000mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿದೆ ಎಂದು ವರದಿಯಾಗಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್‌ ಯಾವೆಲ್ಲಾ ಫೀಚರ್ಸ್‌ ಹೊಂದಿರಲಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಭಾರತದಲ್ಲಿ ಬಿಡುಗಡೆಗೂ ಮುನ್ನವೇ ಸಂಚಲನ ಸೃಷ್ಟಿಸಿದ ವಿವೋ Y200 5G! ಕಾರಣ ಏನು?

ವಿವೋ Y200 5G ಡಿಸ್‌ಪ್ಲೇ ರಚನೆ

ವಿವೋ Y200 5G ಸ್ಮಾರ್ಟ್‌ಫೋನ್‌ 6.67 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಅಮೋಲೆಡ್‌ ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ 90Hz ರಿಫ್ರೆಶ್ ರೇಟ್‌ ಬೆಂಬಲದೊಂದಿಗೆ ಬರಲಿದ್ದು, 1300 ನೀಟ್ಸ್‌ ಗರಿಷ್ಠ ಬ್ರೈಟ್‌ನೆಸ್‌ ಬೆಂಬಲಿಸಲಿದೆ. ಈ ಡಿಸ್‌ಪ್ಲೇ 180Hz ಟಚ್‌ ಸ್ಯಾಪ್ಲಿಂಗ್‌ ರೇಟ್‌ ಅನ್ನು ಕೂಡ ಬೆಂಬಲಿಸಲಿದೆ ಎನ್ನಲಾಗಿದೆ.

ವಿವೋ Y200 5G ಪ್ರೊಸೆಸರ್‌ ಯಾವುದು?
ವಿವೋ Y200 5G ಸ್ಮಾರ್ಟ್‌ಫೋನ್‌ ಕ್ವಾಲ್ಕಾಮ್‌ ಸ್ನಾಪ್‌ಡ್ರಾಗನ್ 4 ಜನ್ 1SoC ಪ್ರೊಸೆಸರ್ ವೇಗವನ್ನು ಹೊಂದಿರಲಿದೆ. ಇದು ಆಂಡ್ರಾಯ್ಡ್‌ 14 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 8GB RAM ಮತ್ತು 128GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯದಲ್ಲಿ ಬರಲಿದೆ ಎನ್ನಲಾಗಿದೆ. ಈ ಸ್ಮಾರ್ಟ್‌ಫೋನ್‌ 3GB ವರ್ಚುವಲ್‌ RAM ಅನ್ನು ಸಹ ಬೆಂಬಲಿಸಲಿದೆ ಎಂದು ವರದಿಯಾಗಿದೆ.

ವಿವೋ Y200 5G ಕ್ಯಾಮೆರಾ ಸೆಟ್‌ಅಪ್‌ ನಿರೀಕ್ಷೆ?
ವಿವೋ Y200 5G ಸ್ಮಾರ್ಟ್‌ಫೋನ್‌ ಡ್ಯುಯಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾಪಿಕ್ಸೆಲ್‌ ಸೆನ್ಸಾರ್‌ ಹೊಂದಿರಲಿದೆ. ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್‌ ಡೆಪ್ತ್ ಸೆನ್ಸಾರ್ ಅನ್ನು ಹೊಂದಿರುತ್ತದೆ. ಇದಲ್ಲದೆ 16 ಮೆಗಾಪಿಕ್ಸೆಲ್‌ ಸೆನ್ಸಾರ್‌ ಸೆಲ್ಫಿ ಕ್ಯಾಮೆರಾದೊಂದಿಗೆ ಬರಲಿದೆ ಎನ್ನಲಾಗಿದೆ.

ವಿವೋ Y200 5G ಬ್ಯಾಟರಿ ಮತ್ತು ಇತರೆ
ವಿವೋ Y200 5G ಸ್ಮಾರ್ಟ್‌ಫೋನ್‌ 5000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 44W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಹಾಟ್‌ಸ್ಪಾಟ್‌, ಬ್ಲೂಟೂತ್‌, ವೈಫೈ, ಯುಎಸ್‌ಬಿ ಸಿ ಪೋರ್ಟ್‌, ಹೆಡ್‌ಫೋನ್‌ ಜ್ಯಾಕ್‌ ಅನ್ನು ಹೊಂದಿರಲಿದೆ ಎನ್ನಲಾಗಿದೆ. ಇದು ಭದ್ರತೆಗಾಗಿ ಇನ್-ಡಿಸ್‌ಪ್ಲೇ ಫಿಂಗರ್‌ಪ್ರಿಂಟ್ ಸ್ಕ್ಯಾನರ್ ಅನ್ನು ಸಹ ಹೊಂದಿರುತ್ತದೆ.

ವಿವೋ Y200 5G ಬೆಲೆ ಮತ್ತು ಲಭ್ಯತೆ
ವಿವೋ Y200 5G ಸ್ಮಾರ್ಟ್‌ಫೋನ್‌ 8GB RAM ಮತ್ತು 128GB ಸ್ಟೋರೇಜ್‌ ಸಾಮರ್ಥ್ಯದ ಆಯ್ಕೆಗೆ ಭಾರತದಲ್ಲಿ 21,999ರೂ ಇರಲಿದೆ ಎಂದು ಫ್ಲಿಪ್‌ಕಾರ್ಟ್‌ ಹೇಳಿದೆ. ಈ ಸ್ಮಾರ್ಟ್‌ಫೋನ್‌ ಡೆಸರ್ಟ್ ಗೋಲ್ಡ್ ಮತ್ತು ಡಸರ್ಟ್ ಗ್ರೀನ್ ಎಂಬ ಎರಡು ಬಣ್ಣಗಳಲ್ಲಿ ಬರಲಿದೆ ಎಂದು ವರದಿಯಾಗಿದೆ.

ಇದಲ್ಲದೆ ವಿವೋ ಕಂಪೆನಿ ಇತ್ತೀಚಿಗೆ ವಿವೋ T2 ಪ್ರೊ ಸ್ಮಾರ್ಟ್‌ಫೋನ್‌ ಬಿಡುಗಡೆ ಮಾಡಿದೆ. ಈ ಸ್ಮಾರ್ಟ್‌ಫೋನ್ 6.78 ಇಂಚಿನ ಫುಲ್‌ಹೆಚ್‌ಡಿ+ ಅಮೋಲೆಡ್‌ ಡಿಸ್‌ಪ್ಲೇ ಆಯ್ಕೆ ಪಡೆದುಕೊಂಡಿದೆ. ಇದು ಮೀಡಿಯಾಟೆಕ್‌ ಡೈಮೆನ್ಸಿಟಿ 7200 ಚಿಪ್‌ಸೆಟ್ ಮೂಲಕ ಕಾರ್ಯನಿರ್ವಹಿಸಲಿದೆ. ಇನ್ನು ಫೋನ್ ಡ್ಯುಯಲ್‌ ಕ್ಯಾಮೆರಾ ರಚನೆ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾಪಿಕ್ಸೆಲ್ ಸೆನ್ಸಾರ್‌ ಮತ್ತು ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್‌ ಸೆನ್ಸಾರ್‌ ಪಡೆದಿದೆ.

Best Mobiles in India

English summary
Vivo Y200 5G Smartphone full specifications revealed by Flipkart ahead of launch
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+