Home
ಸುದ್ದಿಜಾಲ

Vivo: ವಿವೋ Y200 5G ಫೋನ್‌ ಮೇಲೆ 21% ಡಿಸ್ಕೌಂಟ್‌! 128GB ಸ್ಟೋರೇಜ್‌ ಆಯ್ಕೆ!

ಕಳೆದ ವರ್ಷ ಮಾರುಕಟ್ಟೆಗೆ ಎಂಟ್ರಿ ನೀಡಿ ಧೂಳೆಬ್ಬಿಸಿದ್ದ ವಿವೋ Y200 5G ಇದೀಗ ಬಿಗ್‌ ಡಿಸ್ಕೌಂಟ್‌ ಪಡೆದುಕೊಂಡಿದೆ. ಈ ಸ್ಮಾರ್ಟ್‌ಫೋನ್‌ ಅಮೆಜಾನ್‌ ತಾಣದಲ್ಲಿ 21% ರಿಯಾಯಿತಿ ಪಡೆದಿದೆ. ಇದರಿಂದ ಸ್ಮಾರ್ಟ್‌ಫೋನ್‌ ಪ್ರಿಯರ ಮುಗಿಬಿದ್ದು ಖರೀದಿಸುತ್ತಿದ್ದಾರೆ. ಇನ್ನು ಸ್ಮಾರ್ಟ್‌ಫೋನ್‌ ಡ್ಯುಯಲ್‌ ರಿಯರ್‌ ಕ್ಯಾಮೆರಾ ಸೆಟಪ್‌ ಅನ್ನು ಒಳಗೊಂಡಿದೆ.

ಹೌದು, ವಿವೋ Y200 5G ಸ್ಮಾರ್ಟ್‌ಫೋನ್‌ ಅಮೆಜಾನ್‌ನಲ್ಲಿ ಡಿಸ್ಕೌಂಟ್‌ನಲ್ಲಿ ಸೇಲ್‌ ಆಗುತ್ತಿದೆ. ಸ್ಮಾರ್ಟ್‌ಫೋನ್‌ ಸೆಲ್ಫಿ ಪ್ರಿಯರಿಗೆ ಹೇಳಿ ಮಾಡಿಸಿದಂತಿದ್ದು, 16ಮೆಗಾಪಿಕ್ಸೆಲ್‌ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿದೆ. ಜೊತೆಗೆ 5,000 mAh ಸಾಮರ್ಥ್ಯದ ಬ್ಯಾಟರಿಯನ್ನು ಪಡೆದುಕೊಂಡಿದೆ. ಹಾಗಾದ್ರೆ ಸ್ಮಾರ್ಟ್‌ಫೋನ್‌ ಡಿಸ್ಕೌಂಟ್‌ ನಂತರದ ಬೆಲೆ ಏನಿದೆ? ಇದರ ಫೀಚರ್ಸ್‌ ಏನು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

Vivo: ವಿವೋ Y200 5G ಫೋನ್‌ ಮೇಲೆ 21% ಡಿಸ್ಕೌಂಟ್‌! 128GB ಸ್ಟೋರೇಜ್‌ ಆಯ್ಕೆ!

ವಿವೋ Y200 5G ಡಿಸ್ಕೌಂಟ್‌ ಎಷ್ಟಿದೆ?
ವಿವೋ Y200 5G ಸ್ಮಾರ್ಟ್‌ಫೋನ್‌ ಅನ್ನು ಅಮೆಜಾನ್‌ ತಾಣದಲ್ಲಿ 27,999ರೂ ಬೆಲೆಗೆ ಪಟ್ಟಿ ಮಾಡಲಾಗಿದೆ. ಈ ಸ್ಮಾರ್ಟ್‌ಫೋನ್‌ 21% ಡಿಸ್ಕೌಂಟ್‌ ಪಡೆದುಕೊಂಡಿರುವುದರಿಂದ 21,999ರೂ ಬೆಲೆಗೆ ಲಭ್ಯವಾಗುತ್ತಿದೆ. ಇದಲ್ಲದೆ ವಿವಿಧ ಬ್ಯಾಂಕ್‌ ಕಾರ್ಡ್‌ಗಳ ಮೂಲಕ ಖರೀದಿಸಿದರೆ ಹೆಚ್ಚುವರಿ ರಿಯಾಯಿತಿಯನ್ನು ಸಹ ಪಡೆದುಕೊಳ್ಳಬಹುದಾಗಿದೆ.

ವಿವೋ Y200 5G ಫೀಚರ್ಸ್‌ ಹೇಗಿದೆ?
ವಿವೋ Y200 5G ಸ್ಮಾರ್ಟ್‌ಫೋನ್‌ 6.67 ಇಂಚಿನ ಅಮೋಲೆಡ್‌ ಡಿಸ್‌ಪ್ಲೇಯನ್ನು ಪಡೆದಿದೆ. ಇನ್ನು ಡಿಸ್‌ಪ್ಲೇ 1080 x 2400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದಲ್ಲಿದೆ. ಇದು 120Hz ರಿಫ್ರೆಶ್ ರೇಟ್‌ ಹಾಗೂ 800 nits ಬ್ರೈಟ್‌ನೆಸ್‌ ಸಪೋರ್ಟ್ ಮಾಡಲಿದೆ. ಜೊತೆಗೆ ಡಿಸ್‌ಪ್ಲೇ HDR10+ ಪ್ರಮಾಣೀಕರಣವನ್ನು ಹೊಂದಿದ್ದು, 394 PPI ಪಿಕ್ಸಲ್‌ ಸಾಂದ್ರತೆ ಅನ್ನು ಪಡೆದುಕೊಂಡಿದೆ.

Vivo: ವಿವೋ Y200 5G ಫೋನ್‌ ಮೇಲೆ 21% ಡಿಸ್ಕೌಂಟ್‌! 128GB ಸ್ಟೋರೇಜ್‌ ಆಯ್ಕೆ!

ವಿವೋ Y200 5G ಪ್ರೊಸೆಸರ್‌ ಯಾವುದು?
ವಿವೋ Y200 5G ಸ್ಮಾರ್ಟ್‌ಫೋನ್‌ ಆಕ್ಟಾ-ಕೋರ್ ಸ್ನಾಪ್‌ಡ್ರಾಗನ್ 4 ಜೆನ್‌ 1 SoC ಪ್ರೊಸೆಸರ್‌ ವೇಗವನ್ನು ಹೊಂದಿದೆ. ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್‌ 13 ಆಧಾರಿತ ಫನ್‌ಟಚ್‌ OS 13 ನಲ್ಲಿ ಕೆಲಸ ನಿರ್ವಹಿಸಲಿದೆ. ಹಾಗೆಯೇ 8GB RAM + 128GB ಇಂಟರ್‌ ಸ್ಟೋರೇಜ್‌ ಅನ್ನು ಹೊಂದಿದೆ. ಇದರೊಂದಿಗೆ ಮೆಮೊರಿ ಕಾರ್ಡ್‌ ಮೂಲಕ 1 TB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸುವ ಆಯ್ಕೆಯನ್ನು ಸಹ ನೀಡಲಾಗಿದೆ.

ವಿವೋ Y200 5G ಕ್ಯಾಮೆರಾ ಸೆಟಪ್‌ ಏನಿದೆ?
ವಿವೋ Y200 5G ಸ್ಮಾರ್ಟ್‌ಫೋನ್‌ ಡ್ಯುಯಲ್ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಪಡೆದಿದೆ. ಇದರಲ್ಲಿ ಮೊದಲ ಕ್ಯಾಮೆರಾ 64 ಮೆಗಾ ಪಿಕ್ಸೆಲ್ ಸೆನ್ಸಾರ್‌ ಅನ್ನು ಹೊಂದಿದೆ. ದ್ವಿತೀಯ ಕ್ಯಾಮೆರಾ 2 ಮೆಗಾ ಪಿಕ್ಸೆಲ್ ಸೆನ್ಸಾರ್‌ ಅನ್ನು ಹೊಂದಿದೆ. ಇದಲ್ಲದೆ 16 ಮೆಗಾ ಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಒದಗಿಸಲಾಗಿದೆ.

Vivo: ವಿವೋ Y200 5G ಫೋನ್‌ ಮೇಲೆ 21% ಡಿಸ್ಕೌಂಟ್‌! 128GB ಸ್ಟೋರೇಜ್‌ ಆಯ್ಕೆ!

ವಿವೋ Y200 5G ಬ್ಯಾಟರಿ ಮತ್ತು ಇತರೆ ಸೌಲಭ್ಯ
ವಿವೋ Y200 5G ಸ್ಮಾರ್ಟ್‌ಫೋನ್‌ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 44W ಫಾಸ್ಟ್‌ ಚಾರ್ಜಿಂಗ್‌ ಸಪೋರ್ಟ್‌ನೊಂದಿಗೆ ಬರಲಿದೆ. ಇನ್ನು ಕನೆಕ್ಟಿವಿಟಿ ಸೌಲಭ್ಯಗಳಲ್ಲಿ ಡ್ಯುಯಲ್ ಸಿಮ್, 5G, ಡ್ಯುಯಲ್-ಬ್ಯಾಂಡ್ ವೈಫೈ, ಬ್ಲೂಟೂತ್ 5.2, ಯುಎಸ್‌ಬಿ ಟೈಪ್ ಸಿ, ಜಿಪಿಎಸ್ ಮತ್ತು ಒಟಿಜಿ ಆಯ್ಕೆಗಳನ್ನು ಒಳಗೊಂಡಿದೆ.

ವಿವೋ Y200 5G ಬೆಲೆ ಮತ್ತು ಕಲರ್‌ ಆಯ್ಕೆ
ವಿವೋ Y200 5G ಸ್ಮಾರ್ಟ್‌ಫೋನ್‌ ಅಮೆಜಾನ್‌ನಲ್ಲಿ 21% ಡಿಸ್ಕೌಂಟ್‌ ಪಡೆದಿರುವುದರಿಂದ 21,999ರೂ ಬೆಲೆಗೆ ಸೇಲ್‌ ಆಗುತ್ತಿದೆ. ಇದನ್ನು ಗೋಲ್ಡ್‌ ಹಾಗೂ ಗ್ರೀನ್‌ ಕಲರ್‌ ಆಯ್ಕೆಯಲ್ಲಿ ಲಭ್ಯವಾಗಲಿದೆ.

Best Mobiles in India

English summary
Vivo Y200 5G Smartphone Got 21% Discount in amazon: Details in kannada
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+