ದೇಶಿಯ ಮಾರುಕಟ್ಟೆಗೆ ಎಂಟ್ರಿ ಕೊಟ್ಟಿದೆ ವಿವೋ Y200 ಪ್ರೊ 5G!..3D ಕರ್ವ್ಡ ಡಿಸ್‌ಪ್ಲೇ!
ವಿವೋ ಮೊಬೈಲ್ ಕಂಪೆನಿಯು ಭಾರತದ ಮಾರುಕಟ್ಟೆಯಲ್ಲಿ ಇತ್ತೀಚಿಗೆ ಹೊಸದಾಗಿ Y100 5G ಸ್ಮಾರ್ಟ್‌ಫೋನ್ ಅನ್ನು ಬಿಡುಗಡೆ ಮಾಡಿದ್ದು, ಅದು ಮಾರುಕಟ್ಟೆಯಲ್ಲಿ ಸಖತ್ ಸೌಂಡ್ ಮಾಡುತ್ತಿದೆ. ಅದರ ಯಶಸ್ಸಿನ ಮುಂದುವರಿದ ಆವೃತ್ತಿಯಾಗಿ ವಿವೋ ಸಂಸ್ಥೆಯು ಈಗ ಮತ್ತೇ ಹೊಸದಾಗಿ ವಿವೋ Y200 ಪ್ರೊ 5G ಸ್ಮಾರ್ಟ್‌ಫೋನ್ ಅನ್ನು ಬಿಡುಗಡೆ ಮಾಡಿದೆ. ಈ ಫೋನ್ ಸ್ನ್ಯಾಪ್‌ಡ್ರಾಗನ್ 695 SoC ಪ್ರೊಸೆಸರ್ ಸಾಮರ್ಥ್ಯ ಪಡೆದಿದೆ.
ಹೌದು, ವಿವೋ ಕಂಪೆನಿ ಭಾರತದಲ್ಲಿ ಹೊಸ ವಿವೋ Y200 ಪ್ರೊ 5G ಸ್ಮಾರ್ಟ್‌ಫೋನ್ ಬಿಡುಗಡೆ ಮಾಡಿದೆ. ಈ ಮೊಬೈಲ್ ಡ್ಯುಯಲ್ ರಿಯರ್ ಕ್ಯಾಮೆರಾ ರಚನೆ ಅನ್ನು ಪಡೆದಿದ್ದು, 3D ಕರ್ವ್ಡ್ ಡಿಸ್‌ಪ್ಲೇ ರಚನೆ ಅನ್ನು ಪಡೆದುಕೊಂಡು ಸ್ಟೈಲಿಶ್ ಆಗಿ ಕಾಣಿಸಿಕೊಂಡಿದೆ. ಹಾಗೆಯೇ ಇದು 5000mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿದೆ.

ಇನ್ನು ಈ ಫೋನ್ 8GB + 128GB ಸ್ಟೋರೇಜ್ ವೇರಿಯಂಟ್ ಆಯ್ಕೆ ಪಡೆದಿದ್ದು, ಸಿಲ್ಕ್ ವೈಟ್ ಹಾಗೂ ಸಿಲ್ಕ್ ಗ್ರೀನ್ ಕಲರ್ ಆಯ್ಕೆಗಳನ್ನು ಪಡೆದಿದೆ. ಅಲ್ಲದೇ ಇದು 16 ಮೆಗಾ ಪಿಕ್ಸಲ್ ಸೆಲ್ಫಿ ಕ್ಯಾಮೆರಾ ರಚನೆ ಅನ್ನು ಪಡೆದುಕೊಂಡಿದೆ. ಹಾಗಾದರೇ ವಿವೋ Y200 ಪ್ರೊ 5G ಸ್ಮಾರ್ಟ್‌ಫೋನ್ ಇತರೆ ಯಾವೆಲ್ಲಾ ಫೀಚರ್ಸ್ ಒಳಗೊಂಡಿದೆ ಎನ್ನುವುದನ್ನು ಮುಂದೆ ತಿಳಿಯೋಣ ಬನ್ನಿರಿ.
ವಿವೋ Y200 ಪ್ರೊ 5G ಫೀಚರ್ಸ್
ವಿವೋ Y200 ಪ್ರೊ 5G ಸ್ಮಾರ್ಟ್‌ಫೋನ್ 6.78 ಇಂಚಿನ ಅಮೋಲೆಡ್ ಡಿಸ್‌ಪ್ಲೇ ಅನ್ನು ಹೊಂದಿದೆ. ಈ ಡಿಸ್‌ಪ್ಲೇ 1080 x 2400 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಇದು 120Hz ರಿಫ್ರೆಶ್ ರೇಟ್ ಅನ್ನು ಬೆಂಬಲಿಸುತ್ತದೆ ಹಾಗೂ 1300 ನಿಟ್ಸ್ ಗರಿಷ್ಠ ಬ್ರೈಟ್‌ನೆಸ್ ಅನ್ನು ಒಳಗೊಂಡಿದೆ.
ವಿವೋ Y200 ಪ್ರೊ 5G ಸ್ಮಾರ್ಟ್‌ಫೋನ್ ಆಕ್ಟಾ-ಕೋರ್ ಸ್ನ್ಯಾಪ್‌ಡ್ರಾಗನ್ 695 SoC ಪ್ರೊಸೆಸರ್ ಬಲದಲ್ಲಿ ಕೆಲಸ ಮಾಡಲಿದ್ದು, ಜೊತೆಗೆ ಆಂಡ್ರಾಯ್ಡ್ 14 ಓಎಸ್ ಸಪೋರ್ಟ್ ಪಡೆದುಕೊಂಡಿದೆ. ಹಾಗೆಯೇ 8GB RAM + 128GB ಸ್ಟೋರೇಜ್ ವೇರಿಯಂಟ್ ಆಯ್ಕೆ ಒಳಗೊಂಡಿದ್ದು, ಹಾಗೆಯೇ ವಿಸ್ತರಿಸಬಹುದಾದ RAM ಫೀಚರ್ಸ್ ಅನ್ನು ಕೂಡ ಒಳಗೊಂಡಿದೆ.
ವಿವೋ Y200 ಪ್ರೊ 5G ಸ್ಮಾರ್ಟ್‌ಫೋನ್ ಡ್ಯುಯಲ್ ರಿಯರ್ ಕ್ಯಾಮೆರಾ ರಚನೆ ಅನ್ನು ಹೊಂದಿದೆ. ಇದರಲ್ಲಿ ಪ್ರಾಥಮಿಕ ಕ್ಯಾಮೆರಾ 64 ಮೆಗಾ ಪಿಕ್ಸೆಲ್ ಸೆನ್ಸಾರ್ ಅನ್ನು ಹೊಂದಿದೆ. ದ್ವಿತೀಯ ಕ್ಯಾಮೆರಾ 2 ಮೆಗಾ ಪಿಕ್ಸೆಲ್ ಡೆಪ್ತ್ ಸೆನ್ಸಾರ್ ಸೌಲಭ್ಯವನ್ನು ಹೊಂದಿದೆ. ಇದರೊಂದಿಗೆ ಮುಂಭಾಗದಲ್ಲಿ 16 ಮೆಗಾ ಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ನೀಡಲಾಗಿದೆ.
ವಿವೋ Y200 ಪ್ರೊ 5G ಸ್ಮಾರ್ಟ್‌ಫೋನ್ 44W ಫಾಸ್ಟ್ ಚಾರ್ಜಿಂಗ್ ಸಪೋರ್ಟ್ ಒಳಗೊಂಡಿದ್ದು, ಜೊತೆಗೆ 5000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಅನ್ನು ನೀಡಲಾಗಿದೆ. ಇನ್ನು ಕನೆಕ್ಟಿವಿಟಿ ಸೌಲಭ್ಯಗಳಲ್ಲಿ ಡ್ಯುಯಲ್-ಬ್ಯಾಂಡ್ Wi-Fi, ಬ್ಲೂಟೂತ್ 5.1, ಯುಎಸ್‌ಬಿ ಟೈಪ್-ಸಿ, ಜಿಪಿಎಸ್ ಹಾಗೂ ಒಟಿಜಿ ಆಯ್ಕೆಗಳನ್ನು ಸಪೋರ್ಟ್ ಮಾಡುತ್ತದೆ. ಇದರೊಂದಿಗೆ ಇನ್-ಡಿಸ್‌ಪ್ಲೇ ಫಿಂಗರ್‌ಪ್ರಿಂಟ್ ಸೆನ್ಸಾರ್ ಸೌಲಭ್ಯ ಸಹ ಇದೆ.
ವಿವೋ Y200 ಪ್ರೊ 5G ಮೊಬೈಲ್‌ನ 8GB + 128GB ಸ್ಟೋರೇಜ್ ವೇರಿಯಂಟ್ ಬೆಲೆಯು 24,999ರೂ. ಗಳು ಆಗಿದೆ. ಈ ಫೋನ್ ಸಿಲ್ಕ್ ವೈಟ್ ಹಾಗೂ ಸಿಲ್ಕ್ ಗ್ರೀನ್ ಕಲರ್ ಆಯ್ಕೆಯಲ್ಲಿ ಖರೀದಿಗೆ ಲಭ್ಯವಾಗಲಿದೆ. ಗ್ರಾಹಕರು ಈ ಫೋನ್ ಅನ್ನು ಫ್ಲಿಪ್‌ಕಾರ್ಟ್, ವಿವೋ ಸ್ಟೋರ್ ಹಾಗೂ ಇತರೆ ಪ್ರಮುಖ ಆಫ್‌ಲೈನ್ ಸ್ಟೋರ್‌ಗಳ ಮೂಲಕ ಖರೀದಿಸಬಹುದು.


Click it and Unblock the Notifications








