Home
ಸುದ್ದಿಜಾಲ

ಶೀಘ್ರದಲ್ಲೇ ಭಾರತಕ್ಕೆ ಎಂಟ್ರಿ ನೀಡಲಿದೆ ವಿವೋ Y200 5G! ಕ್ಯಾಮೆರಾ ಹೇಗಿರಲಿದೆ ಗೊತ್ತಾ?

ವಿವೋ ಕಂಪೆನಿಯ ಸ್ಮಾರ್ಟ್‌ಫೋನ್‌ಗಳಿಗೆ ಭಾರತದಲ್ಲಿ ಉತ್ತಮ ಮಾರುಕಟ್ಟೆಯಿದೆ. ಕ್ಯಾಮೆರಾ ಕೇಂದ್ರಿತ ಫೀಚರ್ಸ್‌ಗಳಿಂದಾಗಿ ವಿವೋ ಸ್ಮಾರ್ಟ್‌ಫೋನ್‌ಗಳು ಸಾಕಷ್ಟು ಡಿಮ್ಯಾಂಡ್‌ ಪಡೆದುಕೊಂಡಿವೆ. ಇದರ ಮುಂದುವರೆದ ಭಾಗವೆಂಬಂತೆ ವಿವೋ Y200 5G ಸ್ಮಾರ್ಟ್‌ಫೋನ್‌ ಪರಿಚಯಿಸಲು ತಯಾರಿ ನಡೆಸಿದೆ. ಈ ಸ್ಮಾರ್ಟ್‌ಫೋನ್‌ ಶೀಘ್ರದಲ್ಲೇ ಲಾಂಚ್‌ ಆಗಲಿದೆ.

ಹೌದು, ವಿವೋ Y200 5G ಸ್ಮಾರ್ಟ್‌ಫೋನ್‌ ಮುಂದಿನ ತಿಂಗಳು ಭಾರತದಲ್ಲಿ ಬಿಡುಗಡೆ ಆಗಲಿದೆ ಎನ್ನಲಾಗಿದೆ. ಈ ಸ್ಮಾರ್ಟ್‌ಫೋನ್‌ ಡ್ಯುಯಲ್‌ ಕ್ಯಾಮೆರಾ ಸೆಟ್‌ಅಪ್‌ ನೊಂದಿಗೆ ಬರಲಿದೆ. ಇದು 16 ಮೆಗಾಪಿಕ್ಸೆಲ್‌ ಸೆನ್ಸಾರ್‌ ಸೆಲ್ಫಿ ಕ್ಯಾಮೆರಾದೊಂದಿಗೆ ಬರುವುದು ಕನ್ಫರ್ಮ್‌ ಆಗಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್‌ ಯಾವೆಲ್ಲ ಫೀಚರ್ಸ್‌ನಲ್ಲಿ ಬರಲಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಶೀಘ್ರದಲ್ಲೇ ಭಾರತಕ್ಕೆ ಎಂಟ್ರಿ ನೀಡಲಿದೆ ವಿವೋ Y200 5G! ಕ್ಯಾಮೆರಾ ಹೇಗಿದೆ?

ವಿವೋ Y200 5G ಡಿಸ್‌ಪ್ಲೇ ರಚನೆ ಸಾಧ್ಯತೆ

ವಿವೋ Y200 5G ಸ್ಮಾರ್ಟ್‌ಫೋನ್‌ 6.67 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇಯನ್ನು ಹೊಂದಿರಲಿದೆ. ಈ ಡಿಸ್‌ಪ್ಲೇ 2400 x 1080 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದಲ್ಲಿ ಬರಲಿದೆ. ಇನ್ನು ಡಿಸ್‌ಪ್ಲೇ 120Hz ರಿಫ್ರೆಶ್ ರೇಟ್‌ ಬೆಂಬಲದೊಂದಿಗೆ ಬರಲಿದೆ.

ವಿವೋ Y200 5G ಪ್ರೊಸೆಸರ್‌ ಯಾವುದು?
ವಿವೋ Y200 5G ಸ್ಮಾರ್ಟ್‌ಫೋನ್‌ ಕ್ವಾಲ್ಕಾಮ್‌ ಸ್ನಾಪ್‌ಡ್ರಾಗನ್‌ 4 Gen 1 SoC ಪ್ರೊಸೆಸರ್‌ ವೇಗದೊಂದಿಗೆ ಬರಲಿದೆ. ಇದು ಆಂಡ್ರಾಯ್ಡ್‌ 13 ಬೆಂಬಲದೊಂದಿಗೆ ಬರಲಿದೆ. ಹಾಗೆಯೇ 8GB RAM ಮತ್ತು 128GB ಇಂಟರ್‌ ಸ್ಟೋರೇಜ್‌ನೊಂದಿಗೆ ಬರಲಿದೆ ಎಂದು ಅಂದಾಜಿಸಲಾಗಿದೆ. ಜೊತೆಗೆ ಇದು 8GB ವರ್ಚುವಲ್ RAM ಬೆಂಬಲವನ್ನು ಸಹ ಹೊಂದಿರುತ್ತದೆ. ಇದಲ್ಲದೆ ಮೆಮೊರಿ ಕಾರ್ಡ್‌ ಮೂಲಕ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸುವುದಕ್ಕೆ ಅವಕಾಶವನ್ನು ನೀಡುವ ಸಾಧ್ಯತೆಯಿದೆ.

ವಿವೋ Y200 5G ಕ್ಯಾಮೆರಾ ಸೆಟ್‌ಅಪ್‌
ವಿವೋ Y200 5G ಸ್ಮಾರ್ಟ್‌ಫೋನ್‌ ಡ್ಯುಯಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ನೊಂದಿಗೆ ಬರಲಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾಪಿಕ್ಸೆಲ್‌ ಸೆನ್ಸಾರ್‌ನಲ್ಲಿ ಬರಲಿದೆ. ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್‌ ಪೋರ್ಟ್ರೇಟ್ ಸೆನ್ಸರ್ ಇರುತ್ತದೆ. ಇದಲ್ಲದೆ 16 ಮೆಗಾಪಿಕ್ಸೆಲ್‌ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಅವಲಂಬಿಸಿದೆ.

ವಿವೋ Y200 5G ಬ್ಯಾಟರಿ ಸಾಮರ್ಥ್ಯ
ವಿವೋ Y200 5G ಸ್ಮಾರ್ಟ್‌ಫೋನ್‌ 4,800mAh ಸಾಮರ್ಥ್ಯದ ಬ್ಯಾಟರಿಯಿಂದ ಬೆಂಬಲಿತವಾಗಿದೆ. ಇದು 44W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಹಾಟ್‌ಸ್ಪಾಟ್‌, ಬ್ಲೂಟೂತ್, ವೈಫೈ, ಯುಎಸ್‌ಬಿ ಸಿ ಪೋರ್ಟ್‌, ಹೆಡ್‌ಫೋನ್‌ ಜ್ಯಾಕ್‌ ಅನ್ನು ಬೆಂಬಲಿಸಲಿದೆ.

ವಿವೋ Y200 5G ಬೆಲೆ ಮತ್ತು ಲಭ್ಯತೆ
ವಿವೋ Y200 5G ಸ್ಮಾರ್ಟ್‌ಫೋನ್‌ ಮಿಡ್‌ ರೇಂಜ್‌ ಪ್ರೈಸ್‌ಟ್ಯಾಗ್‌ನಲ್ಲಿ ಬರಲಿದೆ ಎಂದು ಅಂದಾಜಿಸಲಾಗಿದೆ. ಇದರ ನಿಖರವಾದ ಬೆಲೆ ಬಿಡುಗಡೆ ದಿನಾಂಕ ಹತ್ತಿರವಾಗ್ತಿದ್ದ ಬಹಿರಂಗವಾಗುವ ನಿರೀಕ್ಷೆಯಿದೆ. ಇದಲ್ಲದೆ ಪ್ರಾಕ್ಸಿಮಿಟಿ ಸೆನ್ಸಾರ್‌, ಅಕ್ಸಿಲೆರೋಮೀಟರ್‌, ಆಂಬಿಯೆಂಟ್‌ ಲೈಟ್‌ ಸೆನ್ಸಾರ್‌ ಅನ್ನು ಹೊಂದಿರಲಿದೆ ಎಂದು ಹೇಳಲಾಗಿದೆ.

ಇದಲ್ಲದೆ ವಿವೋ ಕಂಪೆನಿ ಇತ್ತೀಚಿಗೆ ವಿವೋ T2 ಪ್ರೊ ಸ್ಮಾರ್ಟ್‌ಫೋನ್ ಬಿಡುಗಡೆ ಮಾಡಿದೆ. ಈ ಸ್ಮಾರ್ಟ್‌ಫೋನ್‌ 6.78 ಇಂಚಿನ ಫುಲ್‌ಹೆಚ್‌ಡಿ+ ಅಮೋಲೆಡ್‌ ಡಿಸ್‌ಪ್ಲೇ ಆಯ್ಕೆ ಪಡೆದುಕೊಂಡಿದೆ. ಇದು ಮೀಡಿಯಾಟೆಕ್‌ ಡೈಮೆನ್ಸಿಟಿ 7200 ಚಿಪ್‌ಸೆಟ್ ಮೂಲಕ ಕಾರ್ಯನಿರ್ವಹಿಸಲಿದೆ. ಜೊತೆಗೆ ಆಂಡ್ರಾಯ್ಡ್ 13 ಅನ್ನು ಆಧರಿಸಿ ಫನ್‌ಟಚ್‌ ಓಎಸ್ 13 ಅನ್ನು ರನ್ ಈ ಫೋನ್‌ ರನ್‌ ಮಾಡಲಿದೆ. ಉಳಿದಂತೆ ಈ ಫೋನ್ 8GB + 128GB ಮತ್ತು 8GB +256GB ಯ ಎರಡು ವೇರಿಯಂಟ್‌ನಲ್ಲಿ ಲಭ್ಯ ಇದೆ. ಈ ಫೋನ್ ಡ್ಯುಯಲ್‌ ಕ್ಯಾಮೆರಾ ರಚನೆ ಹೊಂದಿದೆ. ಇದು 64 ಮೆಗಾಪಿಕ್ಸೆಲ್ ಪ್ರಾಥಮಿಕ ಕ್ಯಾಮರಾವನ್ನು ಒಳಗೊಂಡಿದೆ.

Best Mobiles in India

English summary
Vivo Y200 With 44W Fast Charging Tipped To Launch in India Next Month
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+